Author: admin

ಕೋಲಾರ: ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಮಹಾಲಕ್ಷ್ಮೀ ಬಡಾವಣೆ ನಿವಾಸಿ ಮೊಹಮ್ಮದ್ ಪೀರ್ ಅಲಿಯಾಸ್ ಜಾವಾ ಎಂಬಾತನನ್ನು ಕೋಲಾರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧ್ವಜಾರೋಹಣದ ಸಂದರ್ಭದಲ್ಲಿ ಮುಸ್ತಫಾ ಎಂಬುವರಿಗೆ ಉಡುಗೊರೆಯಾಗಿ ನೀಡಲು ಆರೋಪಿ ಈ ಖಡ್ಗವನ್ನು ತಂದಿದ್ದ ಎನ್ನಲಾಗಿದ್ದು, ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿ ಧ್ವಜಕ್ಕೆ ಅಪಚಾರ ಎಸಗಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಡಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದ ಮೇಲೆ ಕಾರು ಚಾಲಕ ಶೈಕ್ ಮುಕ್ತಾರ್ (50) ವಿರುದ್ಧವೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆಯಲ್ಲೇ ಕಾರು ಅಡ್ಡಗಟ್ಟಿ ಹಲ್ಲೆ ಆಗಸ್ಟ್ 11ರ ರಾತ್ರಿ ಶೈಕ್ ಮುಕ್ತಾರ್ ಅವರು ತಮ್ಮ ಪರಿಚಯಸ್ಥರ ಅಪ್ರಾಪ್ತ ಮಗಳನ್ನು ಕಾರಿನಲ್ಲಿ ಕೂರಿಸಿಕೊಂಡು ಕೆಲಸದ ನಿಮಿತ್ತ ಹಾಸನದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಕಾರು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ತಲುಪಿದಾಗ, ರಸ್ತೆಯಲ್ಲಿ ಸೇರಿದ್ದ ಗುಂಪೊಂದು ಕಾರನ್ನು ಅಡ್ಡಗಟ್ಟಿದೆ. ಕಾರಿನಲ್ಲಿದ್ದ ಅಪ್ರಾಪ್ತ ಬಾಲಕಿಯ ಕುರಿತು ವಿಚಾರಿಸಿದ ಗುಂಪು, ಶೈಕ್ ಮುಕ್ತಾರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಐವರ ವಶಕ್ಕೆ ಪಡೆದು ವಿಚಾರಣೆ ಶೈಕ್ ಮುಕ್ತಾರ್ ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ BNSನ ವಿವಿಧ ಕಲಂಗಳಡಿ ಪ್ರಕರಣ…

Read More

ಚೆನ್ನೈ:ತಿರುವೊಟ್ಟಿಯೂರ್‌ನಲ್ಲಿ ಶುಕ್ರವಾರ ಸಂಜೆ ಶಾಲೆಯ ಹಿಂಭಾಗದ ಖಾಲಿ ಜಾಗದಲ್ಲಿ ತನ್ನದೇ ಶಾಲೆಯ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ 12ನೇ ತರಗತಿಯ 16 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ತಿರುವೊಟ್ಟಿಯೂರ್ ಪೊಲೀಸರು ತನಿಖೆ ನಡೆಸುತ್ತಿದ್ದು, ಎರಡು ದಿನಗಳ ಹಿಂದೆ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದಿದ್ದ ಜಗಳವೇ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 11ನೇ ತರಗತಿಯ 16 ವರ್ಷದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶುಕ್ರವಾರ ಮೃತ ವಿದ್ಯಾರ್ಥಿಯ ಆಪ್ತ ಸ್ನೇಹಿತ ಶಾಲೆಗೆ ಗೈರಾಗಿದ್ದ. ಸಂಜೆ 4.15ರ ಸುಮಾರಿಗೆ ಶಾಲಾ ಅವಧಿ ಮುಗಿದ ಬಳಿಕ ಆರೋಪಿತ ವಿದ್ಯಾರ್ಥಿ ಹಾಗೂ ಆತನ ಸ್ನೇಹಿತರು ಶಾಲೆಯ ಹಿಂಭಾಗದ ಖಾಲಿ ಜಾಗದಲ್ಲಿ ಮೃತ ವಿದ್ಯಾರ್ಥಿಯನ್ನು ಸುತ್ತುವರಿದಿದ್ದಾರೆ. ಬಳಿಕ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಗುಂಪು ವಿದ್ಯಾರ್ಥಿಯ ಮೇಲೆ ಸರಣಿ ಹಲ್ಲೆ ನಡೆಸಿದೆ. ಹಲ್ಲೆಯಿಂದ ವಿದ್ಯಾರ್ಥಿ ನೆಲಕ್ಕೆ ಕುಸಿದ ಬಳಿಕ ಸೆಳವು ಕಾಣಿಸಿಕೊಂಡಿದೆ.…

Read More

ತಿರುಮಲ ಶ್ರೀವಾರಿ ದರ್ಶನ, ಆರ್ಜಿತ ಸೇವೆಗಳು ಮತ್ತು ವಸತಿ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗಳು ಹೆಚ್ಚುತ್ತಿದ್ದು, ಭಕ್ತರು ಜಾಗರೂಕರಾಗಿರಬೇಕೆಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮನವಿ ಮಾಡಿದೆ. ನಕಲಿ ವೆಬ್‌ಸೈಟ್‌ಗಳು, ವಾಟ್ಸಾಪ್ ಗ್ರೂಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಭಕ್ತರನ್ನು ವಂಚಿಸಿ ಹಣ ಸಂಗ್ರಹಿಸುತ್ತಿರುವ ಕುರಿತು ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಟಿಟಿಡಿ ಈ ಎಚ್ಚರಿಕೆಯನ್ನು ನೀಡಿದೆ. ಟಿಟಿಡಿ ಹೆಸರಿನಲ್ಲಿ ನಡೆಯುತ್ತಿರುವ ನಕಲಿ ಬುಕಿಂಗ್ ವಂಚನೆ: ಕೆಲವು ವಂಚಕರು ಟಿಟಿಡಿಯ ಅಧಿಕೃತ ಹೆಸರು, ಲೋಗೋ, ಚಿತ್ರಗಳು ಹಾಗೂ ಟ್ರೇಡ್‌ಮಾರ್ಕ್‌ಗಳನ್ನು ಅಕ್ರಮವಾಗಿ ಬಳಸಿ ನಕಲಿ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ನಡೆಸುತ್ತಿದ್ದಾರೆ. ಶ್ರೀವಾರಿಯ ಶೀಘ್ರ ದರ್ಶನ, ಸೇವೆಗಳು ಮತ್ತು ವಸತಿ ಕೊಠಡಿಗಳನ್ನು ಕಾಯ್ದಿರಿಸಿಕೊಡುವುದಾಗಿ ನಂಬಿಸಿ ಭಕ್ತರಿಂದ ಬೃಹತ್ ಮೊತ್ತದ ಹಣ ವಸೂಲಿ ಮಾಡಲಾಗುತ್ತಿದೆ. ವಿಶೇಷವಾಗಿ ವಾಟ್ಸಾಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಅಪರಿಚಿತ ಬುಕಿಂಗ್ ಆಫರ್‌ಗಳು ಹಾಗೂ ಲಿಂಕ್‌ಗಳನ್ನು ನಂಬಿ ಹಣ ರವಾನಿಸಬಾರದು ಎಂದು ಟಿಟಿಡಿ ಸ್ಪಷ್ಟಪಡಿಸಿದೆ. ವಂಚಕರ ವಿರುದ್ಧ ಸೂಕ್ತ ಕ್ರಮ: 259 ನಕಲಿ…

Read More

ತಿರುಪತಿ: ಆಂಧ್ರಪ್ರದೇಶದ ಸಚಿವ ಆನಂ ರಾಮನಾರಾಯಣ ರೆಡ್ಡಿ ಅವರು 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡುವಾಗ ದಿಢೀರ್ ಅಸ್ವಸ್ಥಗೊಂಡ ಘಟನೆ ತಿರುಪತಿಯ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸತತ ಒಂದು ಗಂಟೆಯಿಂದ ನಿಂತುಕೊಂಡೇ ಭಾಷಣ ಮಾಡುತ್ತಿದ್ದ ಸಚಿವರಿಗೆ ರಕ್ತದೊತ್ತಡ (BP) ದಿಢೀರ್ ಕುಸಿದಿದ್ದರೆ. ಭಾಷಣ ಮುಂದುವರಿಸಲಾಗದೆ ಸಚಿವರು ಅಸ್ವಸ್ಥತೆಯನ್ನು ಅನುಭವಿಸಿದ ತಕ್ಷಣವೇ ವೇದಿಕೆಯಲ್ಲಿದ್ದ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಅವರ ನೆರವಿಗೆ ಧಾವಿಸಿದರು. ಸಚಿವರಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ಒದಗಿಸಲಾಗಿದ್ದು, ಸದ್ಯ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

Read More

ಇಸ್ಲಾಮಾಬಾದ್: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತಕ್ಕೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನಕ್ಕೆ ಸೇರಬೇಕಾದ ನೀರಿನ ಪ್ರತಿಯೊಂದು ಹನಿಯೂ ನಮಗೆ ‘ರೆಡ್ ಲೈನ್’ಇದ್ದಂತೆ. ನಮ್ಮ ನೀರಿನ ಹಕ್ಕನ್ನು ಕಸಿಯಲು ಯತ್ನಿಸಿದರೆ ನೇರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಗುರುವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಷರೀಫ್, ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ. ಆದರೆ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಯಾವುದೇ ಪ್ರಯತ್ನ ನಡೆದರೂ ಪ್ರತ್ಯುತ್ತರ ನೀಡಲಾಗುವುದು ಎಂದು ಹೇಳಿದ್ದಾರೆ. 2025ರ ಮೇ ತಿಂಗಳಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಸೀಜ್‌ಫೈರ್ (ಯುದ್ಧವಿರಾಮ) ಒಪ್ಪಂದದಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶೆಹಬಾಜ್ ಷರೀಫ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾಜತಾಂತ್ರಿಕ ಮಾತುಕತೆಗಳ ನಂತರ ಭಾರತ ಹಾಗೂ ಪಾಕಿಸ್ತಾನ ತಕ್ಷಣದ ಯುದ್ಧವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಮೇ 2025ರಲ್ಲಿ ಟ್ರಂಪ್ ಘೋಷಿಸಿದ್ದರು. ಅಮೆರಿಕದ ನಾಯಕತ್ವ ಮತ್ತು ಸಕ್ರಿಯ ಪಾತ್ರಕ್ಕೆ ಷರೀಫ್ ಧನ್ಯವಾದ ಅರ್ಪಿಸಿದ್ದರು.…

Read More

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದ್ದು, ಸದಾನಂದರು ಆ ಹಣವನ್ನು ಮೂವರು ಸುಪಾರಿ ಹಂತಕರಿಗೆ ವರ್ಗಾಯಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಇಬ್ಬರ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಂತಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ, ತಮ್ಮನ್ನು ಆಗಸ್ಟ್ 10ರಂದೇ ಪೊಲೀಸರು ವಶಕ್ಕೆ ಪಡೆದಿದ್ದರು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕಿಶೋರ್ ಪೂಜಾರಿ ಪರ ವಾದ ಮಂಡಿಸಿದ ವಕೀಲರು, ಕಿಶೋರ್ ಅವರು…

Read More

ನವದೆಹಲಿ:ದೆಹಲಿಯ ಸೋನಿಯಾ ವಿಹಾರ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸಂತ್ರಸ್ತನ ಮೊಬೈಲ್ ಫೋನ್, ಸುಮಾರು 24 ಗ್ರಾಂ ತೂಕದ ಚಿನ್ನದ ಸರ, ₹1.03 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಆಯುಧವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 12ರಂದು ಮಧ್ಯರಾತ್ರಿ 12.18ರ ಸುಮಾರಿಗೆ ಸೋನಿಯಾ ವಿಹಾರ್‌ನ 1ನೇ ಪುಷ್ತಾ ಬಳಿ ಗಾಯಗೊಂಡ ವ್ಯಕ್ತಿಯೊಬ್ಬರು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಗಾಯಾಳುವನ್ನು ಪ್ರಮೋದ್ ಯಾದವ್ (32) ಎಂದು ಗುರುತಿಸಲಾಗಿದ್ದು, ಮೊದಲು ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಕುಟುಂಬಸ್ಥರು ಅವರನ್ನು ಶಾಲಿಮಾರ್ ಬಾಗ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಪ್ರಮೋದ್ ಯಾದವ್ ಚಾಂದನಿ ಚೌಕ್‌ನ ಆಭರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಾರನ್ನು ಸೋನಿಯಾ ವಿಹಾರ್‌ನ 2.5ನೇ ಪುಷ್ತಾ ಬಳಿ ನಿಲ್ಲಿಸಿ ಮನೆಗೆ ತೆರಳುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಅವರನ್ನು ಅಡ್ಡಗಟ್ಟಿದ್ದರು.…

Read More

ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಭೇದಿಸಿದ್ದು, ಲಾರಿ ಹಾಗೂ ಮರದ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಅಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರ ಎಂಬಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾದ ಲಾರಿ ಮತ್ತು ಮರದ ಒಟ್ಟು ಮೌಲ್ಯ ಸುಮಾರು ₹5 ಲಕ್ಷ ಎಂದು ಅಂದಾಜಿಸಲಾಗಿದೆ. ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂತೋಷ್ ರೈ, ಉಪವಲಯ ಅರಣ್ಯಾಧಿಕಾರಿಗಳಾದ ಶಿವಾನಂದ, ಸೋಮನಾಥ್ ಹಾಗೂ ಚಾಲಕ ಜಯಪ್ರಕಾಶ್ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ರೋಶಿನಿ ಎ. ಜೆ. ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್…

Read More

ಚಾಮರಾಜನಗರ: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ, ಬೇಟೆಗಾರರು ಏಕಾಏಕಿ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಮೃತರನ್ನು ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆಯಲ್ಲಿ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹ ವಶಪಡಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮೈಸೂರಿನ…

Read More