Author: admin
ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಶನಿವಾರ (ಆಗಸ್ಟ್ 15) ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಡಾವು ಕೊಯಿಲ ಕಡೆಯಿಂದ ಸವಣೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಭೀಕರ ಅಪಘಾತದ ರಭಸಕ್ಕೆ ಬೈಕ್ ಸವಾರ ಅಭಿಲಾಷ್ ಎಂಬುವವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ. ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಂಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಶಿವಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಅವರು ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಹಣದ ದುರುಪಯೋಗದ ವಿಚಾರ ಬೆಳಕಿಗೆ ಬಂದ ಬಳಿಕ ಪಂಚಾಯಿತಿ ವತಿಯಿಂದ ಮಂಜುನಾಥ್ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ವೇಳೆ ಅವರು ಸುಮಾರು ₹3 ಲಕ್ಷವನ್ನು ಪಂಚಾಯಿತಿಗೆ ಮರುಪಾವತಿಸಿದ್ದು, ಉಳಿದ…
ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ದಶಕದಲ್ಲಿ ಭಾರತವು ಕೊರೊನಾ ಸಾಂಕ್ರಾಮಿಕ ರೋಗ, ಅಂತಾರಾಷ್ಟ್ರೀಯ ಯುದ್ಧಗಳು ಮತ್ತು ಅಗತ್ಯ ವಸ್ತುಗಳ ಅಭಾವದಂತಹ ಸಾಲು ಸಾಲು ಸವಾಲುಗಳನ್ನು ಎದುರಿಸಿದ್ದರೂ, ಮುನ್ನೆಚ್ಚರಿಕೆ ಹಾಗೂ ನಿಖರ ಯೋಜನೆಯಿಂದ ಅವುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತಿದೆ ಎಂದು ಹೇಳಿದರು. ಇತ್ತೀಚಿನ ವರ್ಷಗಳಲ್ಲೇ ಪ್ರಧಾನಿ ಮೋದಿ ಸುದೀರ್ಘ ಭಾಷಣಕ್ಕೆ ಬ್ರೇಕ್: ಕೆಂಪುಕೋಟೆಯಲ್ಲಿ 78 ನಿಮಿಷಗಳಲ್ಲೇ ಮುಗಿದ ಮಾತು! ಕೊರೊನಾ ಸಾಂಕ್ರಾಮಿಕವು ಇಡೀ ಜಗತ್ತನ್ನು ಅನಿಶ್ಚಿತತೆಗೆ ತಳ್ಳಿ, ಜಾಗತಿಕ ವ್ಯವಸ್ಥೆಗಳನ್ನೇ ಬುಡಮೇಲು ಮಾಡಿತ್ತು. ವಿಶ್ವದ ದೇಶಗಳು ಆ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳುತ್ತಿದ್ದಂತೆಯೇ ಉಕ್ರೇನ್ ಹಾಗೂ ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿದ ಯುದ್ಧಗಳು ಮತ್ತಷ್ಟು ಹೊಸ ಸವಾಲುಗಳನ್ನು ತಂದೊಡ್ಡಿದವು ಎಂದು ಪ್ರಧಾನಿ ಸ್ಮರಿಸಿದರು. ಇಂತಹ ಬಿಕ್ಕಟ್ಟಿನ ಸಮಯದಲ್ಲೂ ಕೆಲವರು ಭಾರತೀಯರಲ್ಲಿ ಭಯ ಮತ್ತು ಆತಂಕವನ್ನು ಸೃಷ್ಟಿಸಿ, ದುರಂತದ ಭವಿಷ್ಯ ನುಡಿಯುವ ಮೂಲಕ ಆನಂದಪಡುತ್ತಿದ್ದರು ಎಂದು ಪ್ರಧಾನಿ ಮೋದಿ ವಿರೋಧಿಗಳ ವಿರುದ್ಧ…
ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಸರಕಾರ ಆದೇಶ ಹೊರಡಸಿದೆ. ರಾಜ್ಯಪಾಲರ ಆದೇಶಾನುಸಾರ, ಮುಖ್ಯಮಂತ್ರಿಗಳಿಂದ ಅನುಮೋದಿಸಲ್ಪಟ್ಟು, ಸರಕಾರದ ಅಧೀನ ಕಾರ್ಯದರ್ಶಿಯವರು ಪ್ರಕಟಿಸಿದ ಪಟ್ಟಿಯಂತೆ ಉಡುಪಿಗೆ ರಿಜ್ವಾನ್ ಅರ್ಷದ್, ದಕ್ಷಿಣ ಕನ್ನಡಕ್ಕೆ ಯು.ಟಿ. ಖಾದರ್, ಬೆಂಗಳೂರು ನಗರಕ್ಕೆ ಕೃಷ್ಣಬೈರೇಗೌಡ, ಚಿಕ್ಕಮಗಳೂರಿಗೆ ಕೆ.ಜೆ. ಜಾರ್ಜ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ತುಮಕೂರಿಗೆ ಜಿ. ಪರಮೇಶ್ವರ್, ಶಿವಮೊಗ್ಗಕ್ಕೆ ಮಧು ಬಂಗಾರಪ್ಪ, ಮಂಡ್ಯಕ್ಕೆ ಎನ್. ಚೆಲುವರಾಯಸ್ವಾಮಿ, ಉತ್ತರ ಕನ್ನಡಕ್ಕೆ ಲಕ್ಷ್ಮಣ ಸವದಿ, ಬಳ್ಳಾರಿಗೆ ಬಿ. ನಾಗೇಂದ್ರ, ಕೊಡಗು ಜಿಲ್ಲೆಗೆ ನರೇಂದ್ರಸ್ವಾಮಿ ಅವರನ್ನು ಉಸ್ತುವಾರಿ ಸಚಿವರುಗಳನ್ನಾಗಿ ನೇಮಕ ಮಾಡಲಾಗಿದೆ.
ಬೆಳಗಾವಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಶಿವಾನಂದ ಸಿದ್ದಪ್ಪ ನೀಲಣ್ಣವರ್ ಅವರನ್ನು ಮಂಗಳೂರು ವಿಭಾಗದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 12 ದಿನಗಳ ಕಸ್ಟಡಿಗೆ ಪಡೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿಯಲ್ಲಿ ಶಿವಾನಂದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಇಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ‘ಶಿವಂ ಅಸೋಸಿಯೇಟ್ಸ್’ ಹೆಸರಿನಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಿನ ಬಡ್ಡಿ ನೀಡುವುದಾಗಿ ಜನರನ್ನು ನಂಬಿಸಿ ಹಣ ಸಂಗ್ರಹಿಸಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ 2019ರ BUDS ಕಾಯ್ದೆ ಹಾಗೂ ಠೇವಣಿದಾರರ ಸುರಕ್ಷತಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆಯ ಪ್ರಕಾರ, ಶಿವಾನಂದ ನೀಲಣ್ಣವರ್ ‘ಎಂ.ಎಸ್. ಶಿವಂ ಅಸೋಸಿಯೇಟ್ಸ್’ ಹೆಸರಿನಲ್ಲಿ ಸಾವಿರಾರು ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದ ಎನ್ನಲಾಗಿದೆ. ತಿಂಗಳಿಗೆ ಶೇ.3ರಷ್ಟು ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಸುಮಾರು ₹2,110 ಕೋಟಿ ಹಣವನ್ನು ಅಕ್ರಮವಾಗಿ ಸಂಗ್ರಹಿಸಿದ್ದಾನೆ ಎಂಬ ಆರೋಪವಿದೆ. ಈತನ ವಹಿವಾಟು ಕರ್ನಾಟಕ, ಮಹಾರಾಷ್ಟ್ರ, ಗೋವಾ…
ಬೆಂಗಳೂರು : ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧಿಸಿ ಹೊರಡಿಸಲಾದ ಆದೇಶವನ್ನು ಹಿಂಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪಾನ್ ಮಸಾಲದಲ್ಲಿ ನಿಕೋಟಿನ್ ಇರಬಾರದು ಎಂದು ನೀಡಲಾದ ಆದೇಶ ಜನರ ಆರೋಗ್ಯದ ಹಿತದೃಷ್ಟಿಯಿಂದ ಕೈಗೊಂಡಿರುವ ನಿರ್ಧಾರವಾಗಿದೆ. ಇದರಿಂದ ಕರಾವಳಿ ಹಾಗೂ ಮಲೆನಾಡಿನ ಅಡಿಕೆ ಬೆಳೆಗಾರರಿಗೆ ಅಥವಾ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ” ಎಂದು ಅಭಯ ನೀಡಿದರು. ಗುಟ್ಕಾ ತಯಾರಿಕೆಗೆ ನಮ್ಮ ದೇಶದ ಅಡಿಕೆಯನ್ನು ಯಾರೂ ಬಳಕೆ ಮಾಡುವುದಿಲ್ಲ. ಬದಲಿಗೆ ನೇಪಾಳ ಮತ್ತು ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳುವ ಅಡಿಕೆಯನ್ನು ಬಳಸಲಾಗುತ್ತದೆ. ಈ ಹಿಂದೆ ಗುಟ್ಕಾ ನಿಷೇಧಿಸಿದಾಗಲೂ ಅಡಿಕೆ ಬೆಲೆ ಕುಸಿಯುತ್ತದೆ ಎಂಬ ಆತಂಕವಿತ್ತು. ಆದರೆ ನಿಷೇಧದ ಮೂರು ತಿಂಗಳ ಬಳಿಕ ಅಡಿಕೆ ಬೆಲೆ ಗಣನೀಯವಾಗಿ ಹೆಚ್ಚಾಗಿತ್ತು. ಪ್ರಸ್ತುತ ನಿಕೋಟಿನ್ ನಿಷೇಧದ ನಿರ್ಧಾರದಿಂದಲೂ ಅಡಿಕೆ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆಯೇ ವಿನಃ ಕುಸಿಯುವುದಿಲ್ಲ” ಎಂದು ಸಚಿವರು ಸಮರ್ಥಿಸಿಕೊಂಡರು. ಮುಖ್ಯಮಂತ್ರಿಗಳೊಂದಿಗೂ ಈ ವಿಚಾರವಾಗಿ ಚರ್ಚಿಸಿ ಸ್ಪಷ್ಟನೆ ನೀಡಿರುವುದಾಗಿ…
ಕಾಪು : ಖಾಸಗಿ ಬಸ್ಸೊಂದರಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಅಪಾಯಕಾರಿಯಾಗಿ ನೇತಾಡಿ ಕೊಂಡು ಪ್ರಯಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಪ್ರಯಾಣಿಕರ ಸುರಕ್ಷತೆಯನ್ನು ಕಡೆಗಣಿಸಿ, ಬಸ್ಸಿನ್ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಮಿತಿಮೀರಿ ಪ್ರಯಾಣಿಕರನ್ನು ತುಂಬಿಸಿಕೊಂಡು ಅಪಾಯಕಾರಿಯಾಗಿ ಚಲಾಯಿಸಿದ ಆರೋಪದ ಮೇಲೆ ‘ಆನಂದ್’ ಖಾಸಗಿ ಬಸ್‌ನ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಆಗಸ್ಟ್ 14ರಂದು ಬೆಳಿಗ್ಗೆ ಕಾಪು ಕಡೆಯಿಂದ ಉಡುಪಿ ಕಡೆಗೆ ಹೊರಟಿದ್ದ ‘ಆನಂದ್’ ಹೆಸರಿನ ಖಾಸಗಿ ವೇಗದೂತ ಬಸ್ಸಿನಲ್ಲಿ ಈ ನಿಯಮ ಉಲ್ಲಂಘನೆ ಕಂಡುಬಂದಿದೆ. ಬಸ್ಸಿನ ಚಾಲಕ ಹಾಗೂ ನಿರ್ವಾಹಕನು ಪರವಾನಗಿ ಅಭಿಯಾನದ ನಿಯಮಗಳನ್ನು ಗಾಳಿಗೆ ತೂರಿ, ನಿಗದಿತ ಮಿತಿಗಿಂತಲೂ ಅಧಿಕ ಪ್ರಯಾಣಿಕರನ್ನು ಬಸ್ಸಿನೊಳಗೆ ತುಂಬಿಸಿಕೊಂಡಿದ್ದರು.ಅಲ್ಲದೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುವಂತೆ ಮಾಡಲಾಗಿತ್ತು. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರಮಕ್ಕೆ ಆಗ್ರಹಿಸಲಾಗಿತ್ತು. ಇದೀಗ ಪ್ರಯಾಣಿಕರ…
ಲಕ್ನೋ : ಸಂಬಂಧಗಳಿಗೆ ಕಳಂಕ ತರುವಂತಹ ದಾರುಣ ಘಟನೆಯೊಂದು ಉತ್ತರ ಪ್ರದೇಶದ ಲಕ್ನೋದ ರಹೀಮಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ತಂದೆ ಮೃತಪಟ್ಟ ಕೆಲವೇ ಕ್ಷಣಗಳಲ್ಲಿ, ಅಂತ್ಯಕ್ರಿಯೆಗೂ ಮುನ್ನವೇ ಮೃತ ದೇಹದ ಬೆರಳಚ್ಚು ಖಾಲಿ ಕಾಗದಗಳ ಮೇಲೆ ಪಡೆದು ಬರೋಬ್ಬರಿ ₹3 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಮಗನೊಬ್ಬ ಯತ್ನಿಸಿದ್ದಾನೆ. ಜುಲೈ 9 ರಂದು ನಡೆದ ಈ ಕೃತ್ಯದ ವೀಡಿಯೊವನ್ನು ಗ್ರಾಮಸ್ಥರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ರಹೀಮಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಖರೌಹಾ ಗ್ರಾಮದ 75 ವರ್ಷದ ಛತ್ರಪಾಲ್ ಎಂಬುವವರೇ ಮೃತ ದುರ್ದೈವಿ. ಛತ್ರಪಾಲ್ ಮತ್ತು ಅವರ ಪತ್ನಿ ಶಿವದೇವಿ ಅವರ ಮೇಲೆ ಮಗ ಮಹೇಂದ್ರ ಹಾಗೂ ಸೊಸೆ ಲಕ್ಷ್ಮಿ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದರು. 2023ರಲ್ಲಿ ಹೆತ್ತವರನ್ನು ಮನೆಯಿಂದ ಹೊರಹಾಕಿದ್ದರಿಂದ, ನೊಂದ ಛತ್ರಪಾಲ್ ಅವರು ತಮ್ಮ ಹಿರಿಯ ಮಗಳು ಸುಮನ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲದೆ, ಮಗನನ್ನು ಆಸ್ತಿಯಿಂದ ಹಕ್ಕುಚ್ಯುತಿಗೊಳಿಸಿ, ತಮ್ಮ ಆರುವರೆ ಬಿಘಾ…
ಬೆಂಗಳೂರು : ಪ್ರೀತಿಸಿ ಮದುವೆಯಾಗಿದ್ದ ಸಾಫ್ಟ್‌ವೇರ್ ಮತ್ತು ಸಿವಿಲ್ ಇಂಜಿನಿಯರ್ ಜೋಡಿಯೊಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾರುಣವಾಗಿ ಕೊನೆಯಾದ ಘಟನೆ ಶುಕ್ರವಾರ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಪತಿ, ತಾನೂ ನೇಣಿಗೆ ಶರಣಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಮೂಲದ ಸುಮಂತ್ ಜೈನ್ (32) ಹಾಗೂ ಹುಬ್ಬಳ್ಳಿ ಮೂಲದ ಪದ್ಮಾವತಿ (29) ಮೃತಪಟ್ಟ ದಂಪತಿ. ಕಳೆದ ರಾತ್ರಿ ಕೌಟುಂಬಿಕ ಕಲಹವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್ ಕೊಲೆ ಮಾಡಿದ್ದಾನೆ. ನಂತರ ತನ್ನ ತಾಯಿಗೆ ನಾನು ಸಾಯುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ತನ್ನ ಪಿಎಫ್ ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ವಾಯ್ಸ್ ಮೆಸೇಜ್ ಕಳುಹಿಸಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಂತ್ ಜೈನ್ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರೆ, ಪತ್ನಿ ಪದ್ಮಾವತಿ ವೈಟ್‌ಫೀಲ್ಡ್‌ನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿದ್ದರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇವರು, ಕಳೆದ ನಾಲ್ಕು ತಿಂಗಳ…
ಬೆಂಗಳೂರು: ನಗರದಲ್ಲಿ ಒಂಟಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಚೈನ್ ಸ್ನಾಚರ್‌ಗಳ ಹಾವಳಿ ಮಿತಿಮೀರಿದೆ. ಬೆಳ್ಳಂಬೆಳಿಗ್ಗೆ ವಾಕಿಂಗ್ ಹೋಗುವ ಹಾಗೂ ಕೆಲಸಕ್ಕೆ ಹೊರಡುವ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಮೃಗಗಳಂತೆ ಮುಗಿಬೀಳುತ್ತಿರುವ ದೃಶ್ಯಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ಇತ್ತೀಚೆಗೆ ನಗರದ ನೆಲಗದರನಹಳ್ಳಿಯಲ್ಲಿ ನಡೆದಿರುವ ಚೈನ್ ಸ್ನಾಚಿಂಗ್ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಎದೆ ಝಲ್ ಎನ್ನಿಸುವಂತಿವೆ. ಒಂಟಿ ಮಹಿಳೆ ಮೇಲೆ ಅಟ್ಯಾಕ್ ನೆಲಗದರನಹಳ್ಳಿಯಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿರುವ ರವಿಕುಮಾರ್ ಹಾಗೂ ಅವರ ಪತ್ನಿ ವಿಜಯಮ್ಮ ಎಂದಿನಂತೆ ಮುಂಜಾನೆ 4 ಗಂಟೆಗೆ ವ್ಯಾಪಾರಕ್ಕೆ ತೆರಳಿದ್ದರು. ಬೆಳಿಗ್ಗೆ ಸುಮಾರು 5:15ರ ವೇಳೆಗೆ ವಿಜಯಮ್ಮ ಅವರು ಒಬ್ಬರೇ ಮನೆಗೆ ವಾಪಸ್ ಆಗುತ್ತಿದ್ದಾಗ, ಬೈಕಿನಲ್ಲಿ ಬಂದ ಇಬ್ಬರು ಕಿರಾತಕರು ಆಕೆಯನ್ನು ಹಿಂಬಾಲಿಸಿದ್ದಾರೆ. ರಸ್ತೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿ, ಮುಖವಾಡ ಧರಿಸಿದ್ದ ಆರೋಪಿಯೊಬ್ಬ ಏಕಾಏಕಿ ವಿಜಯಮ್ಮ ಅವರ ಮೇಲೆ ಮೃಗದಂತೆ ಎರಗಿ ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ ಕ್ಷಣಾರ್ಧದಲ್ಲಿ ಬೈಕ್ ಹತ್ತಿ ಎಸ್ಕೇಪ್ ಮತ್ತೋರ್ವ ಆರೋಪಿ ಬೈಕ್ ಮೇಲಿಂದಲೇ ಆಕೆಗೆ ಕಾಲಿನಿಂದ ಒದ್ದು ಮೃಗೀಯವಾಗಿ ಹಲ್ಲೆ ನಡೆಸಿದ್ದಾನೆ.…



