Author: admin
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಅಕ್ರಮವಾಗಿ ಮೊಬೈಲ್ ಹಾಗೂ ಸಿಮ್ ಕಾರ್ಡ್‌ಗಳನ್ನು ಪೂರೈಸುವ ಬೃಹತ್ ಮತ್ತು ವ್ಯವಸ್ಥಿತ ಜಾಲವೊಂದು ಸಕ್ರಿಯವಾಗಿರುವುದು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಜೈಲಿನ ಬ್ಯಾರಕ್ ಮೇಲೆ ಇತ್ತೀಚೆಗೆ ಸಿಸಿಬಿ ಮತ್ತು ಜೈಲಾಧಿಕಾರಿಗಳು ಜಂಟಿ ದಾಳಿ ನಡೆಸಿದಾಗ ಮೊಬೈಲ್‌ಗಳು ಪತ್ತೆಯಾಗಿದ್ದ ಪ್ರಕರಣದ ತನಿಖೆ ವೇಳೆ ಈಗ ಆಘಾತಕಾರಿ ಮುಖ್ಯಾಂಶಗಳು ಲಭ್ಯವಾಗಿವೆ. ಆಂಧ್ರಪ್ರದೇಶ ಮೂಲದ ಸಿಮ್ ಕಾರ್ಡ್ ಲಿಂಕ್ ಜೈಲಾಧಿಕಾರಿಗಳ ಜಂಟಿ ಕಾರ್ಯಾಚರಣೆ ವೇಳೆ ಪ್ರಜ್ವಲ್ ರೇವಣ್ಣ ಅವರ ಬಳಿ ಪತ್ತೆಯಾಗಿದ್ದ ಸಿಮ್ ಕಾರ್ಡ್ ನೆರೆರಾಜ್ಯ ಆಂಧ್ರಪ್ರದೇಶ ಮೂಲದ್ದು ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ. ಕೇವಲ ಪ್ರಜ್ವಲ್ ರೇವಣ್ಣ ಮಾತ್ರವಲ್ಲದೆ, ಈ ಹಿಂದೆ ಜೈಲಿನೊಳಗೆ ಸಿಕ್ಕಿಬಿದ್ದಿದ್ದ ಬಹುತೇಕ ಮೊಬೈಲ್‌ಗಳಲ್ಲಿದ್ದ ಸಿಮ್ ಕಾರ್ಡ್‌ಗಳು ಕೂಡ ಆಂಧ್ರಪ್ರದೇಶ ಮೂಲದ್ದೇ ಆಗಿದ್ದವು. ಹೀಗಾಗಿ ಜೈಲಿನೊಳಗೆ ಈ ನಿಷೇಧಿತ ವಸ್ತುಗಳನ್ನು ಸಾಗಿಸಲು ಆಂಧ್ರಪ್ರದೇಶದ ಲಿಂಕ್ ಇರುವ ನಿರ್ದಿಷ್ಟ ಜಾಲವೊಂದು ಕೆಲಸ ಮಾಡುತ್ತಿದ್ದು, ಪೊಲೀಸರು ಮತ್ತು ಜೈಲಾಧಿಕಾರಿಗಳು ಈಗ ಆ…
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಶುಕ್ರವಾರ ಸಾಲು ಸಾಲು ಬಾಂಬ್ ಬೆದರಿಕೆ ಕರೆಗಳಿಂದ ರಾಷ್ಟ್ರ ರಾಜಧಾನಿ ದೆಹಲಿ ಆತಂಕಕ್ಕೊಳಗಾಗಿದೆ. ದೆಹಲಿ ಕೆಂಪುಕೋಟೆ ಹಾಗೂ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (IGI) ಟರ್ಮಿನಲ್ 3 ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಸ್ಥಳದಲ್ಲೂ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. ಇಮೇಲ್‌ನಲ್ಲಿ ದೆಹಲಿ ಹೈಕೋರ್ಟ್, ಜಿಲ್ಲಾ ನ್ಯಾಯಾಲಯಗಳು, ಕೆಂಪುಕೋಟೆ ಹಾಗೂ ದೆಹಲಿಯ ರೈಲುಗಳನ್ನು ಗುರಿಯಾಗಿಸುವುದಾಗಿ ಬೆದರಿಕೆ ಹಾಕಲಾಗಿದೆ. ಅಲ್ಲದೆ, ದೆಹಲಿಯನ್ನು ‘ಖಾಲಿಸ್ತಾನ್’ನ ಭಾಗವಾಗಿ ಮಾಡುವುದಾಗಿಯೂ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. “ಮಧ್ಯಾಹ್ನ 2:11ಕ್ಕೆ ದೆಹಲಿ ಹೈಕೋರ್ಟ್‌ನಲ್ಲಿ ಬಾಂಬ್ ಸ್ಫೋಟ” ಎಂದು ಇ-ಮೇಲ್ನಲ್ಲಿ ಬರೆಯಲಾಗಿದ್ದು, 1984ರ ಸಿಖ್ ವಿರೋಧಿ ದಂಗೆ ಸೇರಿದಂತೆ ಸಿಖ್ಖರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ದೆಹಲಿ ಹೈಕೋರ್ಟ್ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ಕೂಡ ಆರೋಪಿಸಲಾಗಿದೆ. ಇದನ್ನೇ ದಾಳಿಯ ಬೆದರಿಕೆಗೆ ಕಾರಣವೆಂದು ಬಿಂಬಿಸಲು ಯತ್ನಿಸಲಾಗಿದೆ. ಬಾಂಬ್ ಬೆದರಿಕೆ ಬಂದ ಇತರ ಸ್ಥಳಗಳು: ಇಮೇಲ್‌ನಲ್ಲಿ…
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು ತ್ವರಿತವಾಗಿ ದೊರೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆ್ಯಂಬುಲೆನ್ಸ್ ಸೇವೆಗಳಿಗೆ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಸೇವೆಯಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಆ್ಯಂಬುಲೆನ್ಸ್ ನಿರ್ವಾಹಕರಿಗೆ ಭಾರೀ ದಂಡ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದರೆ, ಮಾಹಿತಿ ದೊರೆತ 10 ನಿಮಿಷದೊಳಗೆ ಆ್ಯಂಬುಲೆನ್ಸ್ ಸ್ಥಳಕ್ಕೆ ತಲುಪಬೇಕು. ವಿಳಂಬವಾದರೆ ಪ್ರತಿ ಪ್ರಕರಣಕ್ಕೆ ರೂ. 10,000 ದಂಡ ವಿಧಿಸಲಾಗುತ್ತದೆ. ಅಪಘಾತ ಸ್ಥಳಕ್ಕೆ ತಲುಪಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದ ಬಳಿಕ, ಒಂದು ಗಂಟೆಯೊಳಗೆ ಸಮೀಪದ ಆಸ್ಪತ್ರೆಗೆ ದಾಖಲಿಸುವುದು ಕಡ್ಡಾಯ. ಈ ಗಡುವು ಮೀರಿದರೂ ರೂ. 10,000 ದಂಡ ವಿಧಿಸಲಾಗುತ್ತದೆ. 10 ಕಿ.ಮೀ.ಗಿಂತ ಹೆಚ್ಚಿನ ದೂರದ ಪ್ರದೇಶಗಳಿಗೆ ದೂರಕ್ಕೆ ಅನುಗುಣವಾಗಿ ಹೆಚ್ಚುವರಿ ಸಮಯ ನೀಡಲಾಗುತ್ತದೆ. ತುರ್ತು ಕರೆ ಬಂದ ಕೂಡಲೇ ಸಿಬ್ಬಂದಿ ಕಾರ್ಯಪ್ರವೃತ್ತರಾಗಬೇಕು. ಕರೆ ಸ್ವೀಕರಿಸಿದ ಎರಡು ನಿಮಿಷದೊಳಗೆ ಆ್ಯಂಬುಲೆನ್ಸ್ ಸ್ಥಳದತ್ತ ಹೊರಡಬೇಕು. ಇದರಲ್ಲಿ ವಿಳಂಬವಾದರೆ ಪ್ರತಿ ಹೆಚ್ಚುವರಿ ನಿಮಿಷಕ್ಕೆ…
ಕುದುರೆಮುಖ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರಕ್ಕೆ ಅರಣ್ಯ ಒತ್ತುವರಿ, ಅಕ್ರಮ ಚಟುವಟಿಕೆಗಳ ಬೆನ್ನಲ್ಲೇ ಇದೀಗ ಆಫ್‌ರೋಡಿಂಗ್ ಕಾಟವೂ ಶುರುವಾಗಿದೆ. ಸಾಹಸ ಕ್ರೀಡೆ, ಪ್ರವಾಸೋದ್ಯಮದ ಹೆಸರಿನಲ್ಲಿ ಕಾಡಂಚಿನ ಪ್ರದೇಶಗಳಿಗೆ ನೂರಾರು ಜೀಪುಗಳನ್ನು ಕೊಂಡೊಯ್ದು ಭಾರೀ ಶಬ್ದದೊಂದಿಗೆ ಮೋಜು-ಮಸ್ತಿ ನಡೆಸುವ ಪ್ರವೃತ್ತಿ ಆತಂಕ ಮೂಡಿಸಿದೆ. ಇತ್ತೀಚೆಗಷ್ಟೇ ಸಕಲೇಶಪುರ ಭಾಗದಲ್ಲಿ ಅರಣ್ಯಾಧಿಕಾರಿಗಳು ಆಫ್‌ರೋಡಿಂಗ್ ನಡೆಸುತ್ತಿದ್ದ ಕೆಲವು ಜೀಪುಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಕುದುರೆಮುಖ ಭಾಗಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಫ್‌ರೋಡಿಂಗ್ ಚಟುವಟಿಕೆಗಳಿಗೆ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಈ ಭಾಗದಲ್ಲಿ ಕಾಡುಕೋಣಗಳ ಓಡಾಟವಿದ್ದು, ಇತ್ತೀಚಿನ ದಿನಗಳಲ್ಲಿ ಆನೆಗಳ ಸಂಚಾರದ ಮಾಹಿತಿಯೂ ಇದೆ. ಇಂತಹ ಪರಿಸರದಲ್ಲಿ ನೂರಾರು ವಾಹನಗಳು ಏಕಕಾಲದಲ್ಲಿ ಸಂಚರಿಸಿ ಗದ್ದಲ ಸೃಷ್ಟಿಸುವುದು ವನ್ಯಜೀವಿಗಳ ಸಹಜ ವರ್ತನೆಗೆ ಅಡ್ಡಿಪಡಿಸುವ ಸಾಧ್ಯತೆಯಿದೆ. ವಿಶೇಷವಾಗಿ ಆಫ್‌ರೋಡಿಂಗ್‌ಗಾಗಿ ಸೈಲೆನ್ಸರ್‌ಗಳನ್ನು ಮಾರ್ಪಡಿಸಿಕೊಂಡಿರುವ ಜೀಪುಗಳ ಕರ್ಕಶ ಶಬ್ದವು ಕಾಡಿನ ನೈಸರ್ಗಿಕ ಶಾಂತಿ ಕದಡುವ ಅಪಾಯವಿದೆ. ವಾಹನಗಳ ನಿರಂತರ ಓಡಾಟ ಮತ್ತು ಶಬ್ದದಿಂದ ಅವುಗಳ ಸಂಚಾರದ ಮಾರ್ಗ ಬದಲಾಗುವ ಸಾಧ್ಯತೆಯಿದ್ದು, ಇದರಿಂದ ಭವಿಷ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಮತ್ತಷ್ಟು…
ಹೆಬ್ರಿ: ಶಿವಪುರ ಗ್ರಾಮ ಪಂಚಾಯತ್‌ನಲ್ಲಿ ವಸೂಲಾದ ಲಕ್ಷಾಂತರ ರೂಪಾಯಿ ಮನೆ ತೆರಿಗೆ ಹಣವನ್ನು ಪಂಚಾಯತ್ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು ಸರ್ಕಾರದ ಹಣ ದುರ್ಬಳಕೆ ಮಾಡಿದ ಆರೋಪದ ಮೇಲೆ ಪಂಚಾಯತ್ ಬಿಲ್ಲು ವಸೂಲಿಗನ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಪುರ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಬಿಲ್ಲು ವಸೂಲಿಗ ಮಂಜುನಾಥ್ (40) ಆರೋಪ ಎದುರಿಸುತ್ತಿರುವ ವ್ಯಕ್ತಿ. ಶಿವಪುರ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ (PDO) ಅಶೋಕ್ (42) ಅವರು ಈ ಕುರಿತು ಹೆಬ್ರಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಮಂಜುನಾಥ್ 2023-24ನೇ ಸಾಲಿನಲ್ಲಿ ಮನೆ ತೆರಿಗೆಯಾಗಿ ವಸೂಲಿ ಮಾಡಿದ ₹1,18,367 ಹಾಗೂ 2024-25ನೇ ಸಾಲಿನಲ್ಲಿ ವಸೂಲಾದ ₹3,36,021 ಸೇರಿದಂತೆ ಒಟ್ಟು ₹4,54,388 ಹಣವನ್ನು ನಿಯಮಾನುಸಾರ ಗ್ರಾಮ ಪಂಚಾಯತ್‌ನ ಅಧಿಕೃತ ಬ್ಯಾಂಕ್ ಖಾತೆಗೆ ಜಮಾ ಮಾಡಿರಲಿಲ್ಲ. ಈ ತೆರಿಗೆ ಹಣವನ್ನು ತನ್ನ ಸ್ವಂತ ಬಳಕೆಗಾಗಿ ಉಪಯೋಗಿಸಿಕೊಂಡು, ಪಂಚಾಯತ್‌ಗೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿರುವುದು ತನಿಖೆ ವೇಳೆ…
ಬೆಂಗಳೂರು: ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ-ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ? ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ. ಹೀಗಾಗಿ, ಗುಟ್ಕಾ ನಿಷೇಧ ಆದೇಶವನ್ನು ಶೀಘ್ರದಲ್ಲೇ ಹಿಂಪಡೆಯುವಂತೆ ಅವರು ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ಗುರುವಾರ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಶೀಘ್ರದಲ್ಲೇ ಗುಟ್ಕಾ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಅವರು ತಿಳಿಸಿದ್ದಾರೆ. ಇನ್ನು ಈ ಆದೇಶ ಇಂದೋ ಅಥವಾ ನಾಳೆಯೋ ಹೊರಬೀಳುವ ಸಾಧ್ಯತೆಯಿದೆ. ತಂಬಾಕು ಮತ್ತು…
ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್ 15) ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ಸಿಸಿಬಿಯ ಸಹಾಯಕ ಪೊಲೀಸ್ ಕಮಿಷನರ್ಹೆಚ್.ಎನ್. ಧರ್ಮೇಂದ್ರ ಅವರಿಗೆ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವ ಒಲಿದುಬಂದಿದೆ. ಶ್ಲಾಘನೀಯ ಸೇವಾ ಪದಕ ಪುರಸ್ಕೃತರು : ರಾಜ್ಯದ ವಿವಿಧ ವಿಭಾಗಗಳು, ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಘೋಷಣೆಯಾಗಿದೆ. ಸಾರಾ ಫಾತಿಮಾ – ಎಸ್ಪಿ, ರೈಲ್ವೇಸ್, ಬೆಂಗಳೂರು ಥಾಮಸ್ ಮ್ಯಾಥ್ಯೂ – ಕಮಾಂಡೆಂಟ್, ಕೆ.ಎಸ್.ಆರ್.ಪಿ ಮಹಾದೇವ್ -…
ನೋಯ್ಡಾ: GST ಅಧಿಕಾರಿಗಳೆಂದು ನಕಲಿ ಗುರುತಿಸಿಕೊಂಡು GST ಸಲಹೆಗಾರರೊಬ್ಬರನ್ನು ಅಪಹರಿಸಿ ರೂ.29 ಲಕ್ಷ ಸುಲಿಗೆ ಮಾಡಿದ ಆರೋಪದ ಮೇಲೆ ಐವರು ಸದಸ್ಯರ ಗ್ಯಾಂಗ್‌ನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಜುಲೈ 20ರಂದು GST ಸಲಹೆಗಾರ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆರೋಪಿಗಳು ಮತ್ತೊಂದು ಕಾರಿನಲ್ಲಿ ಅವರನ್ನು ಹಿಂಬಾಲಿಸಿ ಎಸ್ ಆಸ್ಪೈರ್ ಸೊಸೈಟಿ ಬಳಿ ವಾಹನವನ್ನು ಅಡ್ಡಗಟ್ಟಿದ್ದರು. ಬಳಿಕ ತಾವು GST ಅಧಿಕಾರಿಗಳೆಂದು ಪರಿಚಯಿಸಿಕೊಂಡು, ನಕಲಿ ಇ-ವೇ ಬಿಲ್ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಅವರನ್ನು ಅಪಹರಿಸಿದ್ದರು ಎನ್ನಲಾಗಿದೆ. ರೂ.29 ಲಕ್ಷ ನೀಡದಿದ್ದರೆ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ ಆರೋಪಿಗಳು, ಭಯಭೀತರಾದ ಸಲಹೆಗಾರರಿಂದ ಅವರ ಸಹೋದರನ ಮೂಲಕ ಹಣ ಪಡೆದುಕೊಂಡಿದ್ದರು. ಹಣ ಪಡೆದ ಬಳಿಕ ಆರೋಪಿಗಳು ಅವರನ್ನು ಹಾಗೂ ಕಾರನ್ನು ಬಿಟ್ಟು ಪರಾರಿಯಾಗಿದ್ದರು. ತನಿಖೆಯಲ್ಲಿ ಪ್ರಮುಖ ಆರೋಪಿ ಕಾಶಿಶ್ ಚೌಹಾಣ್ ದೂರುದಾರರಿಗೆ ಮೊದಲೇ ಪರಿಚಿತನಾಗಿದ್ದ ಎಂಬುದು ಬೆಳಕಿಗೆ ಬಂದಿದೆ. ಇಬ್ಬರೂ 2021ರಿಂದ ಪರಿಚಿತರಾಗಿದ್ದು, ಸಲಹೆಗಾರ GST ಸಂಬಂಧಿತ ಕೆಲಸ ಮಾಡುತ್ತಾರೆ ಎಂಬ ಮಾಹಿತಿ ಕಾಶಿಶ್‌ಗೆ ತಿಳಿದಿತ್ತು. ಇದೇ ಮಾಹಿತಿಯನ್ನು…
ವಾಷಿಂಗ್ಟನ್: ಇರಾನ್ ವಿರುದ್ಧ ಮತ್ತಷ್ಟು ಆಕ್ರಮಣಕಾರಿ ಹೆಜ್ಜೆ ಇಡಲು ಅಮೆರಿಕ ಸಜ್ಜಾಗಿದ್ದು, ಆ ದೇಶದ ಆರ್ಥಿಕತೆಯನ್ನು ಜಾಗತಿಕ ಮಟ್ಟದಲ್ಲಿ ಸಂಪೂರ್ಣವಾಗಿ ಪ್ರತ್ಯೇಕಿಸಲು ಇತಿಹಾಸದಲ್ಲೇ ಕಾಣದ ರೀತಿಯಲ್ಲಿ ಕಠಿಣ ಆರ್ಥಿಕ ಒತ್ತಡ ಹೇರಲಾಗುವುದು ಎಂದು ಅಮೆರಿಕ ಎಚ್ಚರಿಕೆ ನೀಡಿದೆ. ಖಾಸಗಿ ದೂರದರ್ಶನ ಜಾಲ ‘ನ್ಯೂಸ್‌ಮ್ಯಾಕ್ಸ್’ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಹಣಕಾಸು ಸಚಿವ ಸ್ಕಾಟ್ ಬೆಸೆಂಟ್ ಮಾತನಾಡಿ, “ಬರುವ ವಾರ ಇರಾನ್ ವಿರುದ್ಧ ಜಗತ್ತು ಇದುವರೆಗೆ ಕಂಡಿರದ ಕಠಿಣ ನಿರ್ಬಂಧಗಳನ್ನು ಘೋಷಿಸಲಾಗುವುದು” ಎಂದು ಸುಳಿವು ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಈ ಎಚ್ಚರಿಕೆ ಹೊರಬಿದ್ದಿದೆ. ಅಮೆರಿಕದ ಮುಂದಿನ ಕಾರ್ಯತಂತ್ರವು ಕೇವಲ ಆರ್ಥಿಕ ಒತ್ತಡಕ್ಕೆ ಸೀಮಿತವಾಗಿರದೆ, ಇರಾನ್‌ನ ಪ್ರಮುಖ ಬಂದರುಗಳಿಗೆ ಯಾವುದೇ ವಸ್ತುಗಳು ಒಳಗೆ ಹೋಗದಂತೆ ಹಾಗೂ ಹೊರಬರದಂತೆ ಭೌತಿಕ ನಿರ್ಬಂಧ ಹೇರುವುದನ್ನು ಒಳಗೊಂಡಿರುತ್ತದೆ ಎಂದು ಬೆಸೆಂಟ್ ವಿವರಿಸಿದ್ದಾರೆ. ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಣೆ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಅಡೆತಡೆ ಉಂಟಾದರೆ ಜಾಗತಿಕ ತೈಲ ಪೂರೈಕೆ ಹಾಗೂ…
ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಮುಂಭಾಗದ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ಗುರುವಾರ ಕುಂದಾಪುರದ ಬೊಬ್ಬರ್ಯನಕಟ್ಟೆಯಲ್ಲಿ ನಡೆದಿದೆ. ಬೊಬ್ಬರ್ಯನಕಟ್ಟೆಯ ಎದುರಿನ ಶಾರದಾ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರ ಮಗ ವಿಜಯ್ ನವೀನ್ ಕುಮಾರ್ ತನ್ನ ತಾಯಿಯನ್ನು ಕೋಟದಲ್ಲಿರುವ ತನ್ನ ಚಿಕ್ಕಮ್ಮನ ಮನೆಯಲ್ಲಿ ಬಿಟ್ಟು ಆಗಸ್ಟ್ 8 ರಂದು ಮುಂಬೈಗೆ ತೆರಳಿದ್ದರು. ಆಗಸ್ಟ್ 13 ರಂದು ಬೆಳಿಗ್ಗೆ ವಿಜಯ್ ಮನೆಗೆ ಹಿಂದಿರುಗಿದಾಗ, ಮನೆಯಲ್ಲಿ ಕಳ್ಳತನವಾಗಿರುವುದು ತಿಳಿದುಬಂದಿದೆ. ಕಳ್ಳರು ಆಯುಧ ಬಳಸಿ ಮುಂಭಾಗದ ಬಾಗಿಲಿನ ಚಿಲಕವನ್ನು ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ. ಅವರು ಕಪಾಟಿನಲ್ಲಿ ಇರಿಸಲಾಗಿದ್ದ ಸುಮಾರು 8 ಗ್ರಾಂ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿಯನ್ನು ಕದ್ದಿದ್ದಾರೆ. ಕದ್ದ ಚಿನ್ನ ಮತ್ತು ನಗದು ಒಟ್ಟು 95,000 ರೂ. ಎಂದು ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ ಗೌಡ, ನಗರ ಠಾಣೆ ಪಿಎಸ್ಐ ಪುಷ್ಪಾ…



