Author: admin

ಮಂಡ್ಯ: ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕಾಗಿ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ (PSI) ಸವಿತಾ ಅವರು ನೀಡಿದ ದೂರಿನನ್ವಯ ಐಶ್ವರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆ.12ರಂದು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ವೇಳೆ ಶಾಸಕರ ಪುತ್ರಿ ಐಶ್ವರ್ಯ ಅವರು ತಮ್ಮ ಪ್ರಭಾವ ಬಳಸಿ ವಿಐಪಿ ಪ್ರವೇಶ ಪಡೆದಿದ್ದರು. ಗರ್ಭಗುಡಿ ಬಳಿ ಬಂದು ನಿಂತು ಒಳಗೆ ಬಿಡಿ ಎಂದು ಕೇಳಿದರು. ಅದಕ್ಕೆ ಇಂದು ಆಗಲ್ಲ. ಹೆಚ್ಚಿನ ಜನರಿದ್ದಾರೆ. ನಿಮ್ಮನ್ನು ಬಿಟ್ಟರೆ ಸಾಲಿನಲ್ಲಿ ನಿಂತ ಭಕ್ತರು ಗಲಾಟೆ ಮಾಡುತ್ತಾರೆ. ಹೀಗಾಗಿ ಸ್ವಲ್ಪ ಹೊತ್ತು ಕಾಯಿರಿ ಎಂದು ಪಿಎಸ್‌ಐ ಸವಿತಾ ಹೇಳಿದ್ದರು. ಇದೇ ಸಂದರ್ಭದಲ್ಲಿ ಮಫ್ತಿಯಲ್ಲಿದ್ದ ಸರ್ಕಲ್ ಇನ್ಸ್‌ಪೆಕ್ಟರ್‌ ಲಕ್ಷ್ಮಿ ಅವರು ಗರ್ಭಗುಡಿಗೆ ತೆರಳಿದಾಗ, ಅದನ್ನು ಐಶ್ವರ್ಯ ಪ್ರಶ್ನಿಸಿದರು. ಆಗ…

Read More

ಕೊಚ್ಚಿ: ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥವಾಗಿ ಮದುವೆಯಾಗಲು ಒಪ್ಪಿಕೊಂಡಿದ್ದಕ್ಕೆ ಆಕ್ರೋಶಗೊಂಡ ಮಾಜಿ ಪ್ರಿಯಕರನೊಬ್ಬ, ಮಾತುಕತೆ ನೆಪದಲ್ಲಿ ಪ್ರೇಯಸಿಯನ್ನು ತನ್ನ ಮನೆಗೆ ಕರೆಸಿಕೊಂಡು ಅಡುಗೆಮನೆಯ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆಗೈದಿರುವ ದಾರುಣ ಘಟನೆ ಕೇರಳದ ಉತ್ತರ ಪರವೂರಿನಲ್ಲಿ ಗುರುವಾರ ನಡೆದಿದೆ. ಚೂಂಡಿ ಮೂಲದ ಸುರಮ್ಯಾ (24) ಹತ್ಯೆಗೊಳಗಾದ ಯುವತಿ. ಘಟನೆಗೆ ಸಂಬಂಧಿಸಿದಂತೆ ತುರುತಿಪ್ಪುರಂ ಮೂಲದ ಶಿಬಿನ್ (34) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸುರಮ್ಯಾ ಹಾಗೂ ಶಿಬಿನ್ 2018ರಿಂದ ಅಂದರೆ ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚಿನ ಭಿನ್ನಾಭಿಪ್ರಾಯಗಳಿಂದ ಕಳೆದ ನಾಲ್ಕು ತಿಂಗಳುಗಳಿಂದ ಕೇವಲ ಇನ್‌ಸ್ಟಾಗ್ರಾಮ್ ಮೂಲಕ ಮಾತ್ರ ಸಂಪರ್ಕದಲ್ಲಿದ್ದರು. ಈ ನಡುವೆ ಸುರಮ್ಯಾ ಬೇರೊಬ್ಬ ಯುವಕನಿಗೆ ಹತ್ತಿರವಾಗಿದ್ದು, ಆತನನ್ನೇ ಮದುವೆಯಾಗುವುದಾಗಿ ಹಾಗೂ ಶಿಬಿನ್ ಜೊತೆಗಿನ ಸಂಬಂಧ ಮುಂದುವರಿಸಲು ಆಸಕ್ತಿ ಇಲ್ಲವೆಂದು ಸ್ಪಷ್ಟಪಡಿಸಿದ್ದಳು. ಇದರಿಂದ ಶಿಬಿನ್ ತೀವ್ರ ಆಕ್ರೋಶಗೊಂಡಿದ್ದನು. ಗುರುವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಸುರಮ್ಯಾಳನ್ನು ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂದು ನಂಬಿಸಿದ ಶಿಬಿನ್, ಪರವೂರು ಬಸ್ ನಿಲ್ದಾಣದಲ್ಲಿ ಭೇಟಿಯಾಗಿ…

Read More

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಗೆ ತೆರಳುವ ವೇಳೆ ಆರೋಪಿಯು ನಿರಂತರವಾಗಿ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿಯ ಮನೆಯವರು ಎಚ್ಚರಿಕೆ ನೀಡಿದರೂ ಆತ ತನ್ನ ವರ್ತನೆ ಮುಂದುವರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜುಲೈ 29ರಂದು ಯುವತಿ ಕಾಲೇಜಿನಿಂದ ಮನೆಗೆ ಬರುತ್ತಿದ್ದ ವೇಳೆ ಆರೋಪಿ ಮತ್ತೆ ಆಕೆಯನ್ನು ಹಿಂಬಾಲಿಸಿ, ಯುವತಿಯ ತಾಯಿ ಹಾಗೂ ಅಕ್ಕನಿಗೆ ಕೇಳಿಸುವಂತೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬಳಿಕ ಆಗಸ್ಟ್ 10ರಂದು ಮತ್ತೆ ಯುವತಿಯನ್ನು ಹಿಂಬಾಲಿಸಿ, ಆಕೆಯ ಅಕ್ಕನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.ಈ ಕುರಿತು ಯುವತಿ ಆಗಸ್ಟ್ 11ರಂದು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು BNS ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ…

Read More

ಕಲಬುರಗಿ: ಸಾಮಾಜಿಕ ಜಾಲತಾಣಗಳಲ್ಲಿ ದೇಶವಿರೋಧಿ ಪೇಜ್‌ಗಳು ಹಾಗೂ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಮಹಮ್ಮದ್ ಸಮೀರ್ (23) ಎಂಬಾತನನ್ನು ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದರು. ಮೂಲತಃ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯವನಾದ ಈತ, ಕಳೆದ ಕೆಲವು ತಿಂಗಳುಗಳಿಂದ ಕಲಬುರಗಿಯಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ ನಡೆಸಿದ ವೇಳೆ ಬೆಚ್ಚಿಬೀಳಿಸುವ ರೋಚಕ ಹಾಗೂ ಆಘಾತಕಾರಿ ಮಾಹಿತಿಗಳು ಬೆಳಕಿಗೆ ಬಂದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಆರೋಪಿ ಸಮೀರ್ ಭಾರತದಲ್ಲಿದ್ದುಕೊಂಡೇ ವಿದೇಶಿ ಮೂಲದ ಮೊಬೈಲ್ ಸಂಖ್ಯೆಗಳನ್ನು ಬಳಸಿಕೊಂಡು ವಾಟ್ಸಪ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳನ್ನು ನಿರ್ವಹಿಸುತ್ತಿದ್ದ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳಿಗೆ ಸೇರಿದ ಅಬೀದ್ ಜಟ್ ಹಾಗೂ ಶಹಜಾದ್ ಭಟ್ಟಿ ಎಂಬ ಹ್ಯಾಂಡ್ಲರ್‌ಗಳ ಜೊತೆ ಈತ ನಿರಂತರ ಸಂಪರ್ಕದಲ್ಲಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈತ ‘ವೆಮನ್ ಮತ್ತು ಜಟ್ 333’ ಹಾಗೂ ‘ರಾಣಾ ಭಾಯ್ 333’ ಸೇರಿದಂತೆ ಹಲವು…

Read More

ಹಾಸನ: ಪ್ರಕರಣವೊಂದರಲ್ಲಿ ನೆರವು ನೀಡಲು ದೂರುದಾರರಿಂದ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ (PSI) ಮಂಜುನಾಥ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ. ಘಟ್ಟದಹಳ್ಳಿ ಗ್ರಾಮದ ಸಂತೋಷ್ ಎಂಬುವರು ನೀಡಿದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಈ ಯಶಸ್ವಿ ದಾಳಿ ನಡೆಸಿದ್ದಾರೆ. ದೂರುದಾರರಾದ ಸಂತೋಷ್ ಅವರ ಬಳಿ ಪಿಎಸ್‌ಐ ಮಂಜುನಾಥ್ ಅವರು ಕೆಲಸ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸಂತೋಷ್ ಅವರು ತಕ್ಷಣವೇ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ಅಧಿಕೃತ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಿ, ಕಾರ್ಯಾಚರಣೆಗೆ ಇಳಿದಿದ್ದರು. ಅದರಂತೆ ಗುರುವಾರ ದೂರುದಾರರಿಂದ ₹20,000 ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲೇ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಪಿಎಸ್‌ಐ ಮಂಜುನಾಥ್ ಅವರನ್ನು ರಂಗೇರಂಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿಯ ವೇಳೆ ಲಂಚದ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ‘ಆರೋಪಿಯನ್ನು ತೀವ್ರ ವಿಚಾರಣೆಗೆ…

Read More

ಉತ್ತರಾಖಂಡ : ಪಿಪಲ್ಕೋಟಿ ಸಮೀಪದ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಸುರಂಗದೊಳಗೆ ಭಾರಿ ಭೂಕುಸಿತ ಸಂಭವಿಸಿ, ನೀರು ನುಗ್ಗಿದ ಪರಿಣಾಮ ಕನಿಷ್ಠ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಅಲಕನಂದಾ ನದಿಯ ಮೇಲಿನ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್‌ನಲ್ಲಿ (TRT) ಗುರುವಾರ ಸಾಯಂಕಾಲ ಈ ದುರಂತ ಸಂಭವಿಸಿದೆ. ಕಾರ್ಮಿಕರು ಸುರಂಗದೊಳಗೆ ಬಲವರ್ಧಕ ಕಬ್ಬಿಣದ ಸರಳುಗಳನ್ನು ವೆಲ್ಡಿಂಗ್ ಮಾಡುತ್ತಿದ್ದ ವೇಳೆಯಲ್ಲಿ ದಿಢೀರ್ ಭೂಕುಸಿತ ಉಂಟಾಗಿ ಭಾರಿ ಪ್ರಮಾಣದ ಅವಶೇಷಗಳು ಮತ್ತು ನೀರು ನುಗ್ಗಿದೆ. ಅಪಘಾತ ಸಂಭವಿಸಿದಾಗ ಸುರಂಗದಲ್ಲಿದ್ದ 28 ಕಾರ್ಮಿಕರ ಪೈಕಿ ರಕ್ಷಣಾ ಪಡೆಗಳು ಇದುವರೆಗೆ 22 ಮಂದಿಯನ್ನು ಹೊರತೆಗೆದಿವೆ. ಅವರಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು, ರಕ್ಷಿಸಲ್ಪಟ್ಟ 11 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ ಇತರರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರಂಗದೊಳಗೆ ಇನ್ನೂ ಸಿಲುಕಿರುವ ಆರು ಕಾರ್ಮಿಕರನ್ನು ಪತ್ತೆಹಚ್ಚಲು ಎನ್‌ಡಿಆರ್‌ಎಫ್ (NDRF) ಮತ್ತು ಎಸ್‌ಡಿಆರ್‌ಎಫ್ (SDRF) ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ…

Read More

ಬೆಳ್ತಂಗಡಿ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಮಹಮ್ಮದ್ ಶರೀಪ್ (46) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ:457 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಸಿ.ಸಿ. ಸಂಖ್ಯೆ: 535/2016 ರಂತೆ ವಾರಂಟು ಆರೋಪಿಯನ್ನು ಬಂಧಿಸಲಾಯತು. ಅಗಸ್ಟ್‌ 13 2026 ರಂದು ವೇಣೂರು ಠಾಣಾ ಸಿಬ್ಬಂದಿಗಳಾದ ಎ ಎಸ್ ಐ ಬೆಣ್ಣಿಚನ್ ,ಪಿಸಿ ಬಸವರಾಜ್ ಮತ್ತು ಬೆಳ್ತಂಗಡಿ ಉಪ ವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಮ್ ರವರುಗಳ ತಂಡ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಬಂಟ್ವಾಳ: ನಿಷೇಧಿತ ಎಂಡಿಎಂಎ, ಗಾಂಜಾ ಹೊಂದಿದ ಆರೋಪದಲ್ಲಿ ಬುಧವಾರ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಒಟ್ಟು 4.90 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಮಂಗಳೂರ ಅಡ್ಯಾರ್‌ನ ನಾಸಿರ್ ಹುಸೇನ್(37), ಕಂಕನಾಡಿಯ ಅಫ್ರಿದಿ(24) ಮತ್ತು ಬಂಟ್ವಾಳ ಗೋಳ್ತಮಜಲುವಿನ ಜುನೈದ್(38) ಬಂಧಿತ ಆರೋಪಿಗಳು. ಇವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 225 ಲಕ್ಷ ರೂ. ಮೌಲ್ಯದ 22.57 ಗ್ರಾಂ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್ ಗಳು ಸೇರಿದಂತೆ ಒಟ್ಟು 4.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್‌ಐ ರನ್ನಗೌಡ ಎಸ್.ಪಾಟೀಲ್, ಪ್ರೊಬೇಷನರಿ…

Read More

ಬ್ರಹ್ಮಾವರ: ಮಂಗಳೂರು ಮೂಲದ ಹಣಕಾಸು ಕಂಪನಿಯೊಂದು ಅಧಿಕ ಬಡ್ಡಿದರದಲ್ಲಿ ಸಾಲ ನೀಡಿ , ಸಾಲದ ಕಂತಿನ ಬಾಕಿ ಇರುವ ಹಣಗಳ ಮರುಪಾವತಿಗೆ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಬ್ರಹ್ಮಾವರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ರಾಜೇಶ್ ನಾಯಕ್ ನೀಡಿದ ದೂರಿನ ಆಧಾರದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರಿನ ಪ್ರಕಾರ, ಆರೋಪಿಗಳು ಕುಂಜಾಲ್‌ನ ಗಣೇಶ್ ಗಾಣಿಗ ಎಂಬುವವರಿಗೆ ಸೇರಿದ ಬೈಕ್‌ ಅನ್ನು ಅಧಿಕ ಬಡ್ಡಿ ಸಾಲಕ್ಕೆ ಸಂಬಂಧಿಸಿದಂತೆ ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಜಾಮೀನುದಾರನಾಗಿ ನಿಂತಿದ್ದ ರಾಜೇಶ್ ನಾಯಕ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಉಡುಪಿ ಉಪವಿಭಾಗೀಯ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಮತ್ತು ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಮತ್ತು ಬ್ರಹ್ಮಾವರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಶೋಕ್ ಮಲಬಾಗಿ, ಅಪರಾಧ ಸಿಬ್ಬಂದಿ ಕಿರಣ್ ಮತ್ತು ಸಿದ್ದಪ್ಪ ಸಾಕೇನಳ್ಳಿ ಅವರ ಸಹಾಯದಿಂದ ಆಗಸ್ಟ್ 6 ರಂದು ಮಂಗಳೂರಿನ ಕುಳಾಯಿಯ ಸಂದೀಪ್ ಶೆಟ್ಟಿ…

Read More

ನವದೆಹಲಿ : ಕೊಂಕಣ ರೈಲ್ವೆ ನಿಗಮದ (KRCL) ಮೂಲಸೌಕರ್ಯ ನವೀಕರಣ, ಸುರಕ್ಷತೆ ಹಾಗೂ ಸಾಮರ್ಥ್ಯ ವರ್ಧನೆಗಾಗಿ ಹಣಕಾಸು ನೆರವು ನೀಡುವ ಉದ್ದೇಶದಿಂದ ಸಂಸ್ಥೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಮತ್ತು ಶೇ 100ರಷ್ಟು ಸಂಪೂರ್ಣ ಕೇಂದ್ರ ಸರ್ಕಾರಿ ಸ್ವಾಮ್ಯಕ್ಕೆ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಷೇರುದಾರ ರಾಜ್ಯಗಳಿಂದ ಷೇರು ವರ್ಗಾವಣೆಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದ್ದಾರೆ. ಆಗಸ್ಟ್ 12ರಂದು ಲೋಕಸಭೆಯಲ್ಲಿ ಮಾಹಿತಿ ನೀಡಿದ ಸಚಿವರು, “ಗೋವಾ ಸರ್ಕಾರ ಮಾತ್ರ ತನ್ನ ಷೇರುಗಳನ್ನು ರೈಲ್ವೆ ಸಚಿವಾಲಯಕ್ಕೆ ವರ್ಗಾಯಿಸಲು ಒಪ್ಪಿಗೆ ಸೂಚಿಸಿದೆ. ಆದರೆ, ಮಹಾರಾಷ್ಟ್ರ ಸರ್ಕಾರವು ತನ್ನ ಇಕ್ವಿಟಿ ಬಂಡವಾಳ ಹೂಡಿಕೆಯನ್ನು ಮರುಪಾವತಿಸುವಂತೆ (Refund) ಒತ್ತಾಯಿಸಿದ್ದರೆ, ಕರ್ನಾಟಕ ಸರ್ಕಾರವು ವಿವಿಧ ರೀತಿಯ ನಿರ್ಗಮನ (Exit options) ಮಾರ್ಗಗಳನ್ನು ಪರಿಶೀಲಿಸುತ್ತಿದೆ” ಎಂದು ವಿವರಿಸಿದರು. 1990ರಲ್ಲಿ ಸ್ಥಾಪನೆಯಾದ ಕೆಆರ್‌ಸಿಎಲ್, ಮಹಾರಾಷ್ಟ್ರದ ರೋಹಾದಿಂದ ಕರ್ನಾಟಕದ ತೋಕೂರು (ಮಂಗಳೂರು) ವರೆಗಿನ 739 ಕಿ.ಮೀ ರೈಲು ಮಾರ್ಗವನ್ನು ನಿರ್ವಹಿಸುತ್ತಿದೆ. ಇದರಲ್ಲಿ ರೈಲ್ವೆ ಸಚಿವಾಲಯ…

Read More