Author: admin

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಗೆ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ದೂರಿನಲ್ಲೇನಿದೆ? ಬಂಧಿತ ರಾಘವೇಂದ್ರ ಹಾಗೂ ನಟಿಯ ಸಹೋದರಿಗೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಪರಿಚಯವಾಗಿ, ಬಳಿಕ ಸ್ನೇಹ ಬೆಳೆದಿತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಅಲ್ಲದೆ, ನಟಿಯ ಸಹೋದರಿಯ ಕ್ರೆಡಿಟ್ ಕಾರ್ಡ್ ಬಳಸಿ ಸಾಲವನ್ನೂ ಪಡೆದುಕೊಂಡಿದ್ದ. ಹಣಕಾಸಿನ ತೊಂದರೆ ಎದುರಾದಾಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ವಿಚಾರಿಸಿದಾಗ ರಾಘವೇಂದ್ರನಿಗೆ ಈಗಾಗಲೇ ಮದುವೆಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಇದನ್ನು ಪ್ರಶ್ನಿಸಿದಾಗ, ಆಕೆಯ ಖಾಸಗಿ ಫೋಟೋಗಳನ್ನು ತೋರಿಸಿ, “ನಾನು ಹೇಳಿದಂತೆ ಕೇಳಬೇಕು, ಇಲ್ಲದಿದ್ದರೆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತೇನೆ” ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಕುರಿತು ಚಂದ್ರಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದಾಗ, ಪೊಲೀಸರು ರಾಘವೇಂದ್ರನನ್ನು ಕರೆಸಿ ಖಾಸಗಿ ಫೋಟೋಗಳನ್ನು…

Read More

ಕಾಸರಗೋಡು: ಸುಮಾರು 20 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ಯೊಂದು ರಸ್ತೆಬದಿಯ ಪೊದೆಗಳನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಇಲ್ಲಿನ ಪಟ್ಟಣದ ನೆಲ್ಲಿಕ್ಕುನ್ನು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ಗಾಯಗಳಾಗಿಲ್ಲ, ಭಾರಿ ಅನಾಹುತವೊಂದು ತಪ್ಪಿದೆ. ಮಾಜಿ ಶಾಸಕ ಎನ್.ಎ. ನೆಲ್ಲಿಕ್ಕುನ್ನು ಅವರ ನಿವಾಸದ ಬಳಿಯ ಬಂಕಾರಕುನ್ನು-ಕುದೂರು ರಸ್ತೆಯಲ್ಲಿ ಬೆಳಿಗ್ಗೆ ಸುಮಾರು 9.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ ತಂಗಳ್ ಉಪ್ಪಪ್ಪ ಸಮಿತಿಯಿಂದ ನಿರ್ವಹಿಸಲ್ಪಡುವ ನೆಲ್ಲಿಕ್ಕುನ್ನುನಲ್ಲಿರುವ ಅನ್ವರುಲ್ ಉಲೂಮ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ (ಎಯು ಎಯುಪಿ ಶಾಲೆ) ಸೇರಿದ್ದಾಗಿದೆ. ಬಸ್‌ನಲ್ಲಿ ಇದೇ ಸಮಿತಿಯ ತಂಗಳ್ ಉಪ್ಪಪ್ಪ ಆಂಗ್ಲ ಮಾಧ್ಯಮ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅಪಘಾತ ನಡೆದ ಬಂಕಾರಕುನ್ನು-ಕುದೂರು ರಸ್ತೆ ಕೇವಲ 2.5 ಮೀಟರ್ ಅಗಲವಿದ್ದು, ಇಳಿಜಾರು, ತಗ್ಗು-ಗುಂಡಿಗಳು ಹಾಗೂ ಅಪಾಯಕಾರಿ ತಿರುವುಗಳಿಂದ ಕೂಡಿದೆ. ರಸ್ತೆಬದಿಯಲ್ಲಿ ಬೆಳೆದಿರುವ ಪೊದೆಗಳನ್ನು ತಪ್ಪಿಸಲು ಬಸ್ ಚಾಲಕ ಅಕ್ಬರ್ ಯತ್ನಿಸಿದಾಗ…

Read More

ಬಂಟ್ವಾಳ: ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ತಾಲೂಕಿನಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ. ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರ ಪ್ರಾಣಾಪಾಯವನ್ನು ತಪ್ಪಿಸಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಕೆಲಸ ನಡೆಯುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರಕ್ಕೆ ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಿದ್ದು, ಆ ಶಬ್ದವನ್ನು ಕೇಳಿದ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಾನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ, ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾನೆ. ಇದರಿಂದ ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಲು ಸಾಧ್ಯವಾಗಿದೆ. ಮಾನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಶಾಲೆಯ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋನಯ್ಯ ನಾಯಕ್ ಹಾಗೂ ಸಿಆರ್‌ಪಿ ಜ್ಯೋತಿ…

Read More

ಮುಂಬೈ : ಮುಂಬೈನಿಂದ ಛತ್ತೀಸ್‌ಗಢದ ಬಸ್ತಾರ್‌ಗೆ ಮಹಿಳಾ ಬೈಕರ್‌ಗಳ ತಂಡದೊಂದಿಗೆ ರೈಡ್ ತೆರಳಿದ್ದ 24 ವರ್ಷದ ಸಾಹಸಿ ಬೈಕರ್ ರಿದ್ಧಿ ಥಕ್ಕರ್ ರಸ್ತೆ ಅಪಘಾತದಲ್ಲಿ ಭೀಕರವಾಗಿ ಮೃತಪಟ್ಟಿದ್ದಾರೆ. ಛತ್ತೀಸ್‌ಗಢದ ಧಮ್ತಾರಿ ಜಿಲ್ಲೆಯ ಮಾರ್ಕಟೋಲಾ ಘಾಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ 30 ರಲ್ಲಿ ಅಪರಿಚಿತ ಟ್ರೈಲರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮುಂಬೈನ ಬೋರಿವಲಿ ಪಶ್ಚಿಮದ ನಿವಾಸಿಯಾಗಿದ್ದ ರಿದ್ಧಿ ಥಕ್ಕರ್, ದೇಶದ ವಿವಿಧ ಭಾಗಗಳಿಂದ ಬಂದಿದ್ದ 23 ಮಹಿಳಾ ಬೈಕರ್‌ಗಳ ತಂಡದೊಂದಿಗೆ ರಾಯ್‌ಪುರದಿಂದ ಬಸ್ತಾರ್‌ಗೆ ಪ್ರಯಾಣಿಸುತ್ತಿದ್ದರು. ಈ ಗುಂಪಿನಲ್ಲಿ 20 ಬೈಕ್‌ಗಳು ಮತ್ತು ಒಂದು ಕಾರು ಇತ್ತು. ಆಗಸ್ಟ್ 12, 2026 ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಗತ್ರಾ ಕಣಿವೆಯ ಅಪಾಯಕಾರಿ ತಿರುವಿನಲ್ಲಿ ವೇಗವಾಗಿ ಬಂದ ಟ್ರಕ್ ರಿದ್ಧಿ ಅವರ ಬೈಕಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಿದ್ಧಿ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಜೊತೆಯಲ್ಲಿದ್ದ ಸಹೋದ್ಯೋಗಿಗಳು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರಾದರೂ, ಪರೀಕ್ಷಿಸಿದ ವೈದ್ಯರು ಅವರು…

Read More

ಮಂಗಳೂರು: ನಗರದ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದ ಧರ್ಮೇಂದ್ರ ಶೆಟ್ಟಿ ಅವರು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯುವಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಅಪಾರ ಸಂಖ್ಯೆಯ ಯುವಕರ ಪ್ರೀತಿಗೆ ಪಾತ್ರರಾಗಿದ್ದರು. ಧರ್ಮೇಂದ್ರ ಶೆಟ್ಟಿ ಅವರು ಈ ಹಿಂದೆ ದೂರದ ಬಹರೈನ್‌ನಲ್ಲಿ ಕೂಡ ವ್ಯವಹಾರ ನಡೆಸುತ್ತಿದ್ದರು. ಬಳಿಕ ಅನಾರೋಗ್ಯದ ಕಾರಣದಿಂದ ತಾಯ್ನಾಡಿಗೆ ಮರಳಿದ್ದರು ಎಂದು ತಿಳಿದುಬಂದಿದೆ. ಅವರ ನಿಧನದ ಸುದ್ದಿಗೆ ಸಚಿವರಾದ ಯು.ಟಿ. ಖಾದರ್ ಮತ್ತು ಇಫ್ತಿಕಾರ್ ಸಂತಾಪ ಸೂಚಿಸಿದ್ದಾರೆ.

Read More

ಮಂಗಳೂರು/ಉಳ್ಳಾಲ: ಕೋಟೆಕಾರು ಬೀರಿಯಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಲಸೆ ಕಾರ್ಮಿಕರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ. ಉಚ್ಚಿಲ ಅಜ್ಜಿನಡ್ಕದಲ್ಲಿ ಹೋಲ್‌ಸೇಲ್ ಬೇಕರಿ ಉತ್ಪನ್ನಗಳನ್ನು ತಯಾರಿಸುವ ವಿಜಿ ಸ್ವೀಟ್ಸ್ ಮಾಲೀಕ ಉದಯ ಕುಮಾರ್ ಅವರ ಮಾಲೀಕತ್ವದ ಬೀರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ದೆಹಲಿ ಮೂಲದ ಶಾಕೀರ್ (32) ಹಾಗೂ ಹೈದರ್ (33) ಗಾಯಗೊಂಡ ಕಾರ್ಮಿಕರು. ಐದು ಮಹಡಿಯ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಪರಿಣಾಮ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಕೀರ್ ಅವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ. ಘಟನೆಯ ಮಾಹಿತಿ ತಿಳಿದ ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Read More

ಬೆಂಗಳೂರು: ಖಾಸಗಿ ಐಷಾರಾಮಿ ಹೋಟೆಲ್‌ಗಳು ಹಾಗೂ ಪಬ್‌ಗಳ ಬಳಿಕ ಇದೀಗ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿರುವ ಕ್ಯಾಂಟೀನ್‌ಗಳು ಹಾಗೂ ಆಹಾರ ಮಳಿಗೆಗಳ ಮೇಲೂ ದಿಢೀರ್ ತಪಾಸಣೆ ನಡೆಸಿದ್ದಾರೆ. ಈ ವೇಳೆ ಅವಧಿ ಮೀರಿದ ಆಹಾರ ಪದಾರ್ಥಗಳು, ಅಸ್ವಚ್ಛತೆ ಹಾಗೂ ಆಹಾರದಲ್ಲಿ ಜಿರಳೆ ಪತ್ತೆಯಾಗಿವೆ. ಆಗಸ್ಟ್ 12ರಂದು ಆರೋಗ್ಯ ಸೌಧ, ವಿಧಾನಸೌಧ, ಶಾಸಕರ ಭವನ, ವಿಕಾಸಸೌಧ ಹಾಗೂ ಎಂ.ಎಸ್. ಕಟ್ಟಡದಲ್ಲಿರುವ ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಆಹಾರದ ಗುಣಮಟ್ಟ, ಲೇಬಲಿಂಗ್, ಸಂಗ್ರಹಣೆ, ಸ್ವಚ್ಛತೆ ಹಾಗೂ ಆಹಾರ ನಿರ್ವಹಣಾ ಕ್ರಮಗಳನ್ನು ಪರಿಶೀಲಿಸಲಾಯಿತು. ವಿಕಾಸಸೌಧ ಆವರಣದ ಕ್ಯಾಂಟೀನ್‌ವೊಂದರಲ್ಲಿ 500 ಗ್ರಾಂ ಅವಧಿ ಮೀರಿದ ರವಾ ಹಾಗೂ 500 ಗ್ರಾಂ ಅವಧಿ ಮೀರಿದ ಕೊಕೊಕಾಂಟ್ ಪೌಡರ್ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ವಶಪಡಿಸಿಕೊಂಡಿದ್ದಾರೆ. ಕ್ಯಾಂಟೀನ್‌ನಲ್ಲಿ ಅಸ್ವಚ್ಛ ಪರಿಸ್ಥಿತಿಯೂ ಕಂಡುಬಂದಿದೆ. ಇದೇ ವೇಳೆ, ಮಲ್ಲಿಗೆ ಹೋಟೆಲ್‌ನಲ್ಲಿ ಆಹಾರದಲ್ಲಿ ಜಿರಳೆಗಳು ಪತ್ತೆಯಾಗಿದ್ದು, ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಅಧಿಕಾರಿಗಳು ನೋಟಿಸ್…

Read More

ಕಾಸರಗೋಡು: ಡಿಸೆಂಬರ್ 26 ರಂದು ವಿವಾಹವಾಗಬೇಕಿದ್ದ ಬ್ಯಾಂಕ್ ಉದ್ಯೋಗಿಗಳಾಗಿರುವ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ವರದಿಯಾಗಿದೆ. ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ (25) ಮೈಸೂರು ಜಿಲ್ಲೆಯ ಹುಣಸೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಣಸೂರಿನ ಎಸ್‌ಬಿಐ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ, ಅಂದರೆ ಬೆಳಿಗ್ಗೆ 10 ಗಂಟೆಯ ಸುಮಾರಿಗೆ, ಅನುಶ್ರೀ ಅವರ ನಿಶ್ಚಿತಾರ್ಥವಾಗಿರುವ ಯುವಕ ಕಣ್ಣೂರು ಮೂಲದ ವಿ. ಅಮಲ್ (26) ಕೊಚ್ಚಿಯ ಎರ್ನಾಕುಲಂ ನಾರ್ತ್ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಅಮಲ್ ಅವರು ಎರ್ನಾಕುಲಂನ ಎಂ.ಜಿ. ರೋಡ್ ಎಸ್‌ಬಿಐ ಶಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಮೃತ ಅನುಶ್ರೀ ಅವರು ಪಳ್ಳಿಕ್ಕರದ ಕೆ. ಚಂದ್ರನ್ ಹಾಗೂ ರೀನಾ ದಂಪತಿಯ ಪುತ್ರಿಯಾಗಿದ್ದು, ಅಮಲ್ ಅವರು ಕಣ್ಣೂರಿನ ಅಂಬಲತಟ್ಟುವಿನ ಸುಧಾಕರನ್ ಮತ್ತು ಅನಿತಾ ದಂಪತಿಯ ಪುತ್ರನಾಗಿದ್ದಾರೆ. ಇತ್ತೀಚೆಗಷ್ಟೇ ಇಬ್ಬರ ನಿಶ್ಚಿತಾರ್ಥ ನೆರವೇರಿತ್ತು. ಕಳೆದ ಶನಿವಾರವಷ್ಟೇ ಇಬ್ಬರೂ…

Read More

ಬೆಂಗಳೂರು: ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಹಾಗೂ ಶಾಸಕ ಮಂಕಾಳ ವೈದ್ಯ ಅವರನ್ನು ವಿಧಾನಸಭೆಯ ಉಪ ಸಭಾಪತಿಯಾಗಿ ನೇಮಕ ಮಾಡಲಾಗಿದೆ. ಇದೇ ಹುದ್ದೆಗೆ ಆಯ್ಕೆಯಾಗಿದ್ದ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮುಂದುವರಿಸಲಾಗಿದೆ. ಮಂಕಾಳ ವೈದ್ಯ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಇದೀಗ ವಿಧಾನಸಭೆಯ ಉಪ ಸಭಾಪತಿ ಸ್ಥಾನ ನೀಡಲಾಗಿದೆ. ಮತ್ತೊಂದೆಡೆ, ಈ ಹಿಂದೆ ಉಪ ಸಭಾಪತಿ ಹುದ್ದೆಗೆ ಆಯ್ಕೆಯಾಗಿದ್ದ ಎ.ಎಸ್. ಪೊನ್ನಣ್ಣ ಅವರಿಗೆ ಆ ಸ್ಥಾನದಿಂದ ಬದಲಾವಣೆ ಮಾಡಿ, ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಿಎಂ ಕಾನೂನು ಸಲಹೆಗಾರರಾಗಿದ್ದ ಪೊನ್ನಣ್ಣ ಅವರು ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನಿರೀಕ್ಷಿಸಿದ್ದರು. ಆದರೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರನ್ನು ಉಪ ಸಭಾಪತಿ ಹುದ್ದೆಗೆ ನೇಮಕ ಮಾಡುವ ಪ್ರಸ್ತಾವನೆ ಮಾಡಲಾಗಿತ್ತು. ಇದೀಗ ಆ ನಿರ್ಧಾರದಲ್ಲಿ ಬದಲಾವಣೆ ಮಾಡಲಾಗಿದೆ.…

Read More

ಚೆನ್ನೈ : ಅತಿಯಾದ ಮೊಬೈಲ್ ಫೋನ್ ಬಳಕೆ ಹಾಗೂ ಗಂಟೆಗಟ್ಟಲೆ ಗೇಮ್ಸ್ ಮತ್ತು ವೀಡಿಯೊಗಳನ್ನು ನೋಡುತ್ತಿದ್ದ ಪರಿಣಾಮ ಹಿರಿಯ ನಟಿ ಶಕೀಲಾ ಅವರು ತೀವ್ರ ಕುತ್ತಿಗೆ ನೋವಿಗೆ ತುತ್ತಾಗಿದ್ದು, ಇತ್ತೀಚೆಗೆ ₹3 ಲಕ್ಷ ವೆಚ್ಚದಲ್ಲಿ ಪ್ರಮುಖ ಕುತ್ತಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಆಸ್ಪತ್ರೆಯಿಂದ ಚೇತರಿಸಿಕೊಂಡು ಮನೆಗೆ ಮರಳಿದ ಬಳಿಕ ವೀಡಿಯೊ ಒಂದನ್ನು ಹಂಚಿಕೊಂಡಿರುವ ಅವರು, ಕುತ್ತಿಗೆಗೆ ‘ನೆಕ್ ಕಾಲರ್’ ಧರಿಸಿ ತಮ್ಮ ಆರೋಗ್ಯ ಸಮಸ್ಯೆಯ ಕುರಿತು ವಿವರ ನೀಡಿದ್ದಾರೆ. “ಫೋನ್‌ನಲ್ಲಿ ಯೂಟ್ಯೂಬ್, ಇನ್‌ಸ್ಟಾಗ್ರಾಮ್ ರೀಲ್ಸ್ ನೋಡುವುದು ಹಾಗೂ ನಿರಂತರವಾಗಿ 4 ಗಂಟೆಗಳ ಕಾಲ ಆಟಗಳನ್ನು ಆಡುವುದು ನನ್ನ ಅಭ್ಯಾಸವಾಗಿತ್ತು. ಒಂದು ಪಕ್ಕಕ್ಕೆ ಮಲಗಿ ಗಂಟೆಗಟ್ಟಲೆ ಫೋನ್ ಬಳಸುತ್ತಿದ್ದೆ. ಈ ತಪ್ಪಾದ ಭಂಗಿ ಹಾಗೂ ಸುದೀರ್ಘ ಬಳಕೆಯು ನನ್ನ ಕುತ್ತಿಗೆಯ ರಕ್ತನಾಳಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹೀಗಾಗಿ ದೊಡ್ಡ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾಯಿತು” ಎಂದು ಶಕೀಲಾ ಹೇಳಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ದೈನಂದಿನ ಕೆಲಸಗಳಿಗೂ ಇತರರ ಸಹಾಯ ಬೇಕಾಗಿದೆ ಎಂದಿರುವ ಅವರು, “ಫೋನ್ ಅತ್ಯಂತ ಉಪಯುಕ್ತ…

Read More