Author: admin

ಕೋಲ್ಕತ್ತಾ : ಚಾಲನೆ ಅಭ್ಯಾಸ ಮಾಡುತ್ತಿದ್ದಾಗ ಕಾರಿನ ನಿಯಂತ್ರಣ ತಪ್ಪಿ ಕೊಳಕ್ಕೆ ಉರುಳಿ 42 ವರ್ಷದ ಮಹಿಳೆಯೊಬ್ಬರು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲ್ಕತ್ತಾದ ಕೆಸ್ತೋಪುರದ ಪ್ರಫುಲ್ಲ ಕಾನನ್ (ಪಶ್ಚಿಮ) ಪ್ರದೇಶದಲ್ಲಿ ಬುಧವಾರ ನಡೆದಿದೆ. ಮೃತರನ್ನು ಕೆಸ್ತೋಪುರ ನಿವಾಸಿ ಸುಮಿತ್ರಾ ದಾಸ್ (42) ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ ಸುಮಿತ್ರಾ ಅವರು ತಮ್ಮ ಮಗಳನ್ನು ಸ್ಕೂಟರ್‌ನಲ್ಲಿ ಶಾಲೆಗೆ ಬಿಟ್ಟು ಮನೆಗೆ ಮರಳಿದ್ದರು. ಬಳಿಕ ಸ್ಕೂಟರ್ ನಿಲ್ಲಿಸಿ, ಗ್ಯಾರೇಜ್‌ನಲ್ಲಿದ್ದ ಹುಂಡೈ ಇಯಾನ್ ಕಾರನ್ನು ಹೊರತೆಗೆದು ಚಾಲನೆ ಅಭ್ಯಾಸ ಮಾಡಲು ಹೊರಟಿದ್ದರು. ಈ ವೇಳೆ ಆಕಸ್ಮಿಕವಾಗಿ ಬ್ರೇಕ್ ತುಳಿಯುವ ಬದಲು ಆಕ್ಸಿಲರೇಟರ್ ಒತ್ತಿದ್ದರಿಂದ, ಕಾರು ವೇಗವಾಗಿ ನಿಯಂತ್ರಣ ತಪ್ಪಿ ಸಮೀಪದ ಕೊಳದ ಮಧ್ಯಭಾಗಕ್ಕೆ ಉರುಳಿದೆ. ಕಾರು ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದರಿಂದ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ ಸುಮಿತ್ರಾ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಡೆಸಿ…

Read More

ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ನೌಕರರ ಭವಿಷ್ಯ ನಿಧಿ (ಇಪಿಎಫ್) ಕಚೇರಿಯ ಉದ್ಯೋಗಿ, ಕೇರಳ ಮೂಲದ ಮಹಿಳೆಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಮೇಥಾ ಪೃಥಿರಾಜ್ (30) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮೇಥಾ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಎದುರಿನಿಂದ ಬಂದ ಲಾರಿ ಆಕೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಮೇಥಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Read More

ಸುಳ್ಯ,: ನಗರದ ಹಳೇಗೇಟು ಬಳಿ ಅರಣ್ಯ ಇಲಾಖೆಗೆ ಸೇರಿದ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನದ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಅರಣ್ಯ ಇಲಾಖೆಯ ಬೊಲೆರೋ ವಾಹನವು ಸುಳ್ಯದಿಂದ ಪೈಚಾರ್ ಕಡೆಗೆ ತೆರಳುತ್ತಿತ್ತು. ಅದೇ ವೇಳೆ, ಮಹೀಂದ್ರ ಜೀತೋ ವಾಹನವು ಮಡಿಕೇರಿ ಕಡೆಗೆ ಸಂಚರಿಸುತ್ತಿತ್ತು. ಈ ಮಾರ್ಗಮಧ್ಯೆ ಹಳೇಗೇಟ್ ಬಳಿ ಎರಡು ವಾಹನಗಳ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆ ನಡೆದ ತಕ್ಷಣವೇ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ವಾಹನಗಳಿಗೆ ಹಾನಿಯಾಗಿದ್ದು, ಸುಗಮ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ವಳಚಿಲ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಅತೀ ವೇಗದಿಂದ ಚಲಿಸಿಕೊಂಡು ಬಂದ ಕಾರು ಬೈಕ್‌ಗೆ ಢಿಕ್ಕಿಯಾಗಿದೆ‌ ಎಂದು ಆರೋಪಿಸಲಾಗಿದೆ. ಇದರಿಂದ ಸವಾರ ಹಾರಿಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ

Read More

ಮಂಗಳೂರು: ಪಣಂಬೂರಿನಲ್ಲಿ ಜೂನ್ 29ರಂದು ನಡೆದ ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್ ಹಾಗೂ ಶ್ರೀರಾಗ್, ಮಡಿಕೇರಿ ಮೂಲದ ಉಬೇದ್ ಮತ್ತು ಜಿಯಾದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಶ್ರೀರಾಗ್ ಕಣ್ಣೂರು ಜಿಲ್ಲೆಯಲ್ಲಿ ಸಿಪಿಐ ಪಕ್ಷದ ಸ್ಥಳೀಯ ಮಟ್ಟದ ನಾಯಕನಾಗಿದ್ದು, ದರೋಡೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ತನಿಖೆ ಚುರುಕುಗೊಂಡ ಬೆನ್ನಲ್ಲೇ ಶ್ರೀರಾಗ್ ವಕೀಲರ ಮೂಲಕ ಮಂಗಳೂರಿಗೆ ಬಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಮಿಥುನ್, ಉಬೇದ್ ಮತ್ತು ಜಿಯಾದ್ ಕೂಡ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದರು. ಈ ವೇಳೆ ಮಿಥುನ್‌ನನ್ನು ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ಬಂಧಿಸಲಾಗಿದ್ದು, ಉಬೇದ್ ಮತ್ತು ಜಿಯಾದ್ ಪಡೀಲ್‌ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಇನೋವಾ ಹಾಗೂ ಸ್ವಿಫ್ಟ್ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ 10 ಗ್ರಾಂ…

Read More

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಪ್ರಮುಖ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃತ್ಯಕ್ಕೆ ಹಣಕಾಸಿನ ನೆರವು ಹಾಗೂ ವರ್ಗಾವಣೆಗೆ ಸಹಕರಿಸಿದ್ದ ಮತ್ತಿಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಎರ್ಮಾಳು ತೆಂಕ ಪಂಚಾಯತ್ ಕಚೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ (26) ಹಾಗೂ ಮೊಹಮ್ಮದ್ ಇರ್ಷಾದ್ (43) ಬಂಧಿತ ಆರೋಪಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಸುದೀರ್ಘ ತನಿಖೆಯ ವೇಳೆ, ಶೂಟೌಟ್ ಕೃತ್ಯವನ್ನು ಎಸಗಲು ಅಗತ್ಯವಿದ್ದ ಹಣವನ್ನು ವರ್ಗಾವಣೆ ಮಾಡಲು ಹಾಗೂ ಆರೋಪಿಗಳಿಗೆ ಆರ್ಥಿಕ ನೆರವು ನೀಡಲು ಚಿರಾಗ್ ಪೂಜಾರಿ ಮತ್ತು ಮೊಹಮ್ಮದ್ ಇರ್ಷಾದ್ ಸಹಾಯ ಮಾಡಿರುವುದು ಸಾಕ್ಷ್ಯಾಧಾರಗಳ ಸಹಿತ ದೃಢಪಟ್ಟಿದೆ. ಅದರಂತೆ ಅಗಸ್ಟ್ 12ರಂದು ಇಬ್ಬರನ್ನೂ ಬಂಧಿಸಲಾಗಿದ್ದು, ಈ ಹೈಪ್ರೊಫೈಲ್ ಶೂಟೌಟ್ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ ಇದೀಗ ಐದಕ್ಕೇರಿದೆ. ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದಾರೆ.

Read More

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಭಾರಿ ಸದ್ದು ಮಾಡುತ್ತಿದೆ. ಇದರ ನಡುವೆಯೇ, ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಪುತ್ರಿ, ನಟಿ ರಿಷಿಕಾ ಸಿಂಗ್ ಅವರು ‘ಟಾಕ್ಸಿಕ್’ ಟ್ರೇಲರ್ ಹಾಗೂ ನಟ ಯಶ್ ವಿರುದ್ಧ ತೀವ್ರವಾಗಿ ಆಕ್ರೋಶ ಹೊರಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಹಂಚಿಕೊಂಡಿರುವ ವಿಡಿಯೋದಲ್ಲಿ ಮಾತನಾಡಿದ ರಿಷಿಕಾ ಸಿಂಗ್, “ಕನ್ನಡ ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಬೇಕೆಂಬ ಆಸೆ ನನಗೂ ಇದೆ. ಬಾಲಿವುಡ್‌ನಿಂದ ಕಿಯಾರಾ ಅಡ್ವಾಣಿ ಅವರಂತಹ ನಟಿಯರು ನಟಿಸಿರುವುದಕ್ಕೆ ಖುಷಿಯಿದೆ. ಆದರೆ, ಟ್ರೇಲರ್‌ನಲ್ಲಿ ನಟಿಯರನ್ನು ತೋರಿಸಿರುವ ರೀತಿ ತೀರಾ ಕಳಪೆಯಾಗಿದೆ. ಐದು ಜನ ಹೀರೋಯಿನ್‌ಗಳಿದ್ದರೂ ಒಬ್ಬರನ್ನೂ ಸುಂದರವಾಗಿ ಗೌರವಿಸುವ ರೀತಿಯಲ್ಲಿ ತೋರಿಸಿಲ್ಲ. ಪುರುಷರ ಅಹಂಕಾರವನ್ನು ತೋರಿಸಲು ಈ ಸಿನಿಮಾ ಮಾಡಿದ್ದೀರಾ? ಕಿಯಾರಾ ಅವರಂತಹ ನಟಿಯರನ್ನು ಕರೆಸಿ ‘ನಿನ್ನ ರೇಟ್ ಎಷ್ಟು’ ಎಂದು ಕೇಳುವ ಡೈಲಾಗ್ ಇಡಲಾಗಿದೆಯೇ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.…

Read More

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಮನೆಯೊಂದರಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ಸಮಧನ ಸಕಹರಿ ನರಳೆ (26) ಬಂಧಿತ ಆರೋಪಿ. ಆ. 4 ರಂದು ಮನೆಯಲ್ಲಿ ಯಾರು ಇಲ್ಲದೆ ವೇಳೆ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಆಯುಧದಿಂದ ಮುರಿದು ಒಳನುಗ್ಗಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕ ಇರುವ 2 ಉಂಗುರ ಹಾಗೂ 25,000ರೂ. ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 106/2026 ಕಲಂ  305(a),331(3) ಬಿ.ಎನ್.ಎಸ್ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಆ.11 ರಂದು ನಗರದ ತಲಪಾಡಿಯ ಬಳಿ ಬಸ್ ಸ್ಟ್ಯಾಂಡ್ ಬಳಿ ಆರೋಪಿ ಇರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಆತನನ್ನು ವಶಕ್ಕೆ ಪಡೆಯಲಾಯಿತು. ಜೊತೆಗೆ ಕಳವು ಮಾಡಿರುವ ಸೊತ್ತುಗಳನ್ನು, ಕೃತ್ಯಕ್ಕೆ…

Read More

ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ ನಿಯಮಾವಳಿಗಳು-2011 ರ ನಿಯಮ 2.3.4 ರ ಅಧಿಕಾರ ಬಳಸಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಜಾರಿಗೊಳಿಸಿದ್ದಾರೆ. ಇದರನ್ವಯ, ಯಾವುದೇ ಹೆಸರಿನಲ್ಲಿ ಅಥವಾ ಸ್ಯಾಚೆಟ್ ಹಾಗೂ ಪ್ಯಾಕೆಟ್‌ಗಳಲ್ಲಿ ತಂಬಾಕು ಅಥವಾ ನಿಕೋಟಿನ್ ಬೆರೆಸಿದ ಗುಟ್ಕಾ ಮತ್ತು ಪಾನ್ ಮಸಾಲಾಗಳನ್ನು ಮಾರಾಟ ಮಾಡುವುದು ಅಥವಾ ಸಾಗಿಸುವುದು ಸಂಪೂರ್ಣವಾಗಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುತ್ತದೆ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ…

Read More