Author: admin

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟೂಡಿಯೋ ಬಳಿ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು. ಇಂದು ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡಿದ್ದಾರೆ. ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ದುರದೃಷ್ಟವಶಾತ್ ಇನ್ನಿಬ್ಬರು ಕಾರ್ಮಿಕ ಮಣ್ಣಿನ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅಂಡರ್ ಪಾಸ್ ಕಾಮಗಾರಿಗಾಗಿ 20 ಅಡಿಯಷ್ಟು ಮಣ್ಣು ತೋಡಲಾಗಿತ್ತು. ಆದ್ರೆ, ಕೆಲಸ ಮಾಡುವಾಗ ಏಕಾಏಕಿ ಮಣ್ಣು ಕುಸಿದಿದೆ. ಈ ವೇಳೆ ಅವರನ್ನು ರಕ್ಷಿಸಲು ಕಾರ್ಯಾಚರಣೆ ಮಾಡುವ ಸಂದರ್ಭದಲ್ಲೇ ಒಬ್ಬ ಕಾರ್ಮಿಕ ಅಸುನೀಗಿದ್ದ, ಇನ್ನೊಬ್ಬ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳೀಯರ ನೆರವಿನಿಂದ ಕಾರ್ಮಿಕನ ರಕ್ಷಣೆ ಕಾರ್ಯಾಚರಣೆ ನಡೆಸಲಾಗಿತ್ತು. ಕೆಲವರನ್ನು ಖಾಸಗಿ…

Read More

ತಿರುವನಂತಪುರಂ : ಮಲಯಾಳಂನ ಜನಪ್ರಿಯ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್ ಆರ್ ಡಿ  ಮತ್ತು ಅವರ ಪತ್ನಿ ಮೇಘಾ ನಡುವಿನ ವೈವಾಹಿಕ ಜೀವನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹಾಗೂ ವದಂತಿಗಳು ಹರಿದಾಡುತ್ತಿವೆ. ಮೇಘಾ ಮನೆಯಿಂದ ಹೊರನಡೆದಿದ್ದಾರೆ ಎಂಬ ಸುದ್ದಿಯ ಜೊತೆಗೆ, ವಿವಿಧ ಆರೋಪಗಳು ನೆಟಿಜನ್‌ಗಳ ನಡುವೆ ವೈರಲ್ ಆಗುತ್ತಿವೆ. ಕೆಲವು ಇಂಟರ್ನೆಟ್ ಪೋಸ್ಟ್‌ಗಳು ಮೇಘಾ ಬಸ್ ಉದ್ಯೋಗಿಯೊಂದಿಗೆ ಓಡಿಹೋಗಿದ್ದಾರೆ ಎಂದು ಆರೋಪಿಸುತ್ತಿವೆ. ಆದರೆ, ಈ ಆರೋಪಗಳಿಗೆ ಯಾವುದೇ ಅಧಿಕೃತ ಸಾಕ್ಷ್ಯಗಳಾಗಲಿ ಅಥವಾ ಸ್ವತಂತ್ರ ದೃಢೀಕರಣವಾಗಲಿ ಸಿಕ್ಕಿಲ್ಲ. ಅಖಿಲ್ ಅಥವಾ ಮೇಘಾ ಇಬ್ಬರೂ ಈ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಅಖಿಲ್ ಸ್ನೇಹಿತ ವಿಡಿಯೋ ಒಂದನ್ನು ಮಾಡಿ ಹೇಳಿಕೆ ನೀಡಿದ್ದು, “ಅಖಿಲ್ ಪರಿಸ್ಥಿತಿಯನ್ನು ಒಪ್ಪಿಕೊಂಡು ಜೀವನದಲ್ಲಿ ಮುಂದುವರಿಯಲು ಯತ್ನಿಸುತ್ತಿದ್ದಾರೆ. ಯಾರೂ ಮೇಘಾ ಅವರನ್ನು ದೂಷಿಸಬೇಡಿ ಅಥವಾ ಕಿರುಕುಳ ನೀಡಬೇಡಿ.” ಎಂದಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಮೇಘಾ ಅವರ ಪ್ರೊಫೈಲ್‌ನಲ್ಲಾದ ಬದಲಾವಣೆಗಳನ್ನು ಇಟ್ಟುಕೊಂಡು ಜನರು…

Read More

ಕೋಲ್ಕತ್ತ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಹಾಕಿದ ಆರೋಪದ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟಿಗ ಹಾಗೂ ಪಶ್ಚಿಮಬಂಗಾಳ ರಣಜಿ ಆಟಗಾರ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ಗಂಭೀರ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಅಭಿಷೇಕ್ ಪೊರೆಲ್ ಹಾಗೂ ಸಂತ್ರಸ್ತೆ ಪ್ರೀತಿಯಲ್ಲಿದ್ದರು. ಆದರೆ ಕಳೆದ ವರ್ಷ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡು ಪೊರೆಲ್ ಸಂತ್ರಸ್ತೆಯಿಂದ ದೂರವಾಗಲು ಪ್ರಾರಂಭಿಸಿದ್ದರು. ಜೂನ್ ಆರಂಭದಲ್ಲಿ ಸಂತ್ರಸ್ತೆ ಹೂಗ್ಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಬಂಧ ಬೆಳೆಸಿದ್ದು, ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಕ್ರಿಕೆಟಿಗನನ್ನು ಬಂಧಿಸುವಂತೆ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಹೂಗ್ಲಿ ಗ್ರಾಮೀಣ ಪೊಲೀಸ್ ಎಸ್ಪಿ ಕುನ್ವರ್ ಭೂಷಣ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಬಂಧನ…

Read More

ಬೆಳ್ತಂಗಡಿ: ಧರ್ಮಸ್ಥಳ – ಉಜಿರೆ ರಾಷ್ಟ್ರೀಯ ಹೆದ್ದಾರಿಯ ನೀರಚಿಲುಮೆ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ (ಆಗಸ್ಟ್ 11) ಬೆಳಿಗ್ಗೆ ಸಂಭವಿಸಿದೆ. ಮಡಂತ್ಯಾರು ಸಮೀಪದ ಪಾರೆಂಕಿ ಪಂಗಳ ನಿವಾಸಿ ಸೋಮನಾಥ (27) ಮೃತ ದುರ್ದೈವಿ. ಬೈಕ್‌ನಲ್ಲಿದ್ದ ಸಹಸವಾರ ಬಳ್ಳಮಂಜ ನಿವಾಸಿ ಭರತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾರೆ ಕೆಲಸದವರಾದ ಸೋಮನಾಥ ಹಾಗೂ ಭರತ್ ಅವರು ಬೆಳಿಗ್ಗೆ ಬೈಕ್‌ನಲ್ಲಿ ಧರ್ಮಸ್ಥಳಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎದುರಿನಿಂದ ಬಂದ ಬೈಕ್ ನಡುವೆ ನೀರಚಿಲುಮೆಯ ಅಪಾಯಕಾರಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸೋಮನಾಥ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ…

Read More

ಮೂಡುಬಿದಿರೆ: ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಪತಿ, ಪತ್ನಿ ಹಾಗೂ ಮಗನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಆ. 11 ರಂದು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರ್ ಬಳಿ ನಡೆದಿದೆ. ಶಿವರಾಮ (31) ಅವರ ಪತ್ನಿ ಗಂಗಾ (25) ಹಾಗೂ ಅವರ ಮಗ ಆದರ್ಶ್ (6) ಎಂಬುವವರಿಗೆ ಸುಟ್ಟ ಗಾಯಗಳಾಗಿರುತ್ತವೆ. ಮಂಗಳವಾರ ಬೆಳಗ್ಗೆ ಸುಮಾರು 6:30 ಗಂಟೆಗೆ ಈ ಘಟನೆ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಶಿವರಾಮ ಅವರು ಪತ್ನಿ ಹಾಗೂ ಮಗನೊಂದಿಗೆ ಮಿಜಾರು ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಖಾಸಗಿ ಕಾಲೇಜಿನಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯಲ್ಲಿ ಶಿವರಾಮ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿರುತ್ತವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಎಸ್‌ಐಆರ್ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್ ಹಾಗೂ ಬಹುಭಾಷಾ ಹಿರಿಯ ನಟ ಪ್ರಕಾಶ್ ರಾಜ್ ಅವರ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ರದ್ದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯ ನೆಪದಲ್ಲಿ ಬೆಂಗಳೂರು ನಗರ ಒಂದರಲ್ಲೇ ಸುಮಾರು 65 ಲಕ್ಷ ಜನರ ಮತದಾರರ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಹಂಚಿಕೊಂಡಿರುವ ವಿಡಿಯೋದಲ್ಲಿ ತಮ್ಮ ಅಸಮಾಧಾನ ಹೊರಹಾಕಿರುವ ಪ್ರಕಾಶ್ ರಾಜ್, “ನಾನು ಹುಟ್ಟಿ ಬೆಳೆದ ಸ್ವಕ್ಷೇತ್ರದಲ್ಲಿಯೇ ನನ್ನ ಮತದಾನದ ಹಕ್ಕನ್ನು ತೆಗೆದುಹಾಕಲಾಗಿದೆ. ಇದೇ ಕ್ಷೇತ್ರದಲ್ಲಿ ನಾನು ಈ ಹಿಂದೆ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಇಷ್ಟೆಲ್ಲಾ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರೂ ಸಹ ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಏಕಾಏಕಿ ಕೈಬಿಟ್ಟಿರುವುದು ಆಶ್ಚರ್ಯ ತಂದಿದೆ. ಇದು ಪ್ರಜಾಪ್ರಭುತ್ವದ…

Read More

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಸಾಗರ್ ಅದಾನಿ ಅವರ ವಿರುದ್ಧದ ಎಲ್ಲಾ ಕ್ರಿಮಿನಲ್ ಮತ್ತು ವಂಚನೆ ಆರೋಪಗಳನ್ನು ಅಮೆರಿಕದ ನ್ಯಾಯಾಲಯವು ಅಧಿಕೃತವಾಗಿ ವಜಾಗೊಳಿಸಿದೆ. ಈ ಮಹತ್ವದ ತೀರ್ಪನ್ನು ಗೌತಮ್ ಅದಾನಿ ಅವರು ಸ್ವಾಗತಿಸಿದ್ದಾರೆ. ನ್ಯಾಯಾಲಯದ ಈ ಆದೇಶ ಹೊರಬೀಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಗೌತಮ್ ಅದಾನಿ, “ಅಮೆರಿಕ ನ್ಯಾಯಾಲಯದ ತೀರ್ಪನ್ನು ನಾನು ವಿನಮ್ರತೆಯಿಂದ ಸ್ವಾಗತಿಸುತ್ತೇನೆ. ಈ ಇಡೀ ಸವಾಲಿನ ಅವಧಿಯಲ್ಲಿ, ಸತ್ಯ, ನಿಷ್ಪಕ್ಷಪಾತ ಮತ್ತು ಕಾನೂನಿನ ಆಡಳಿತದ ಮೇಲಿನ ನಮ್ಮ ನಂಬಿಕೆ ಎಂದಿಗೂ ಅಲುಗಾಡಲಿಲ್ಲ” ಎಂದು ಬರೆದುಕೊಂಡಿದ್ದಾರೆ. “ನಮ್ಮ ಮೇಲೆ, ವ್ಯವಸ್ಥೆಯ ಮೇಲೆ ಮತ್ತು ಭಾರತದ ನ್ಯಾಯ ಒದಗಿಸುವ ಸಾಮರ್ಥ್ಯದ ಮೇಲೆ ನಂಬಿಕೆ ಕಳೆದುಕೊಳ್ಳದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ದೇಶದ ನಿರ್ಮಾಣ, ಮೌಲ್ಯವರ್ಧನೆ ಮತ್ತು ಸ್ವಾರ್ಥ ಮೀರಿದ ಸಾಮಾಜಿಕ ಸೇವೆಗಾಗಿ ನಮ್ಮ ಬದ್ಧತೆ ಎಂದಿನಂತೆ ಮುಂದುವರಿಯಲಿದೆ. ಜೈ ಹಿಂದ್” ಎಂದು ಪೋಸ್ಟ್ ಮಾಡಿದ್ದಾರೆ. “ಮುಂದೆಯೂ ಮಹತ್ವದ ಕೆಲಸವನ್ನೇ ಮುಂದುವರಿಸುತ್ತೇವೆ. ನಮ್ಮ ದೇಶಕ್ಕಾಗಿ…

Read More

ಮಣಿಪಾಲ: ರಸ್ತೆ ಬದಿಯ ಮರಕ್ಕೆ ಬುಲೆಟ್‌ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಮೃತಪಟ್ಟ ದಾರುಣ ಘಟನೆ ಹೆರ್ಗ ಗ್ರಾಮದ ಕೆಳಪರ್ಕಳ ಇಳಿಜಾರಿನಲ್ಲಿರುವ ಗೋಪಾಲಕೃಷ್ಣ ದೇವಸ್ಥಾನದ ಬಳಿ ಮಂಗಳವಾರ ನಸುಕಿನ ಜಾವ 1.25ರ ಸುಮಾರಿಗೆ ನಡೆದಿದೆ. ಮೃತರನ್ನು ಆತ್ರಾಡಿ ನಿವಾಸಿ ಸನತ್ (21) ಎಂದು ಗುರುತಿಸಲಾಗಿದೆ. ಸನತ್ ಅವರು ಗೆಳೆಯರೊಂದಿಗೆ ಮಣಿಪಾಲದಲ್ಲಿ ರಾತ್ರಿ ಊಟ ಮುಗಿಸಿ, ಬಳಿಕ ಗೆಳೆಯ ಆಶಿಶ್ ಅವರ ಬುಲೆಟ್‌ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಕೆಳಪರ್ಕಳ ಇಳಿಜಾರಿನಲ್ಲಿ ಸಾಗುತ್ತಿದ್ದ ವೇಳೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಸವಾರನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸನತ್‌ ಅವರು ಬುಲೆಟ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಸನತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು…

Read More

ಮಂಗಳೂರು : ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಸಂಭವಿಸಿದೆ. ಕೇರಳದ ಬೇಕಲ್‌ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತ ದುರ್ದೈವಿ. ಕಳೆದ ಜೂನ್ ತಿಂಗಳಿನಲ್ಲಿ ಪಾಲಾದ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಅರ್ಜುನ್ ಅವರ ತಂಗಿ ಐಜಾ ಆರ್. ಮಹೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಗೊಂದಲದ ಬಳಿಕ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಐಜಾ, ತೀವ್ರ ಮಾನಸಿಕ ಒತ್ತಡದಿಂದ ಈ ಹಂತಕ್ಕೆ ತಲುಪಿದ್ದರು ಎನ್ನಲಾಗಿತ್ತು. ತಂಗಿಯ ಮರಣದ ಸುದ್ದಿ ತಿಳಿದು ಗಲ್ಫ್‌ನಿಂದ ಮನೆಗೆ ಬಂದಿದ್ದ ಅರ್ಜುನ್, ಬಳಿಕ ಮತ್ತೆ ಉದ್ಯೋಗಕ್ಕೆ ತೆರಳಿದ್ದರು. ಭಾನುವಾರ ಗಲ್ಫ್‌ನಿಂದ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಅರ್ಜುನ್, ಮನೆಗೆ ವಾಪಸಾಗುತ್ತಿರುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು.…

Read More

ರಾಂಚಿ: ರಾಂಚಿಯಲ್ಲಿ ವಿಧಾನಸಭೆ ಮುತ್ತಿಗೆಗೆ ಯತ್ನಿಸಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ, ಅಶ್ರುವಾಯು ಮತ್ತು ಜಲಫಿರಂಗಿ ಬಳಸಿದ ಕ್ರಮಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಪ್ರತಿಭಟನೆಯ ವೇಳೆ ನೂರಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಆದಿತ್ಯ ಸಾಹು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಹೇಮಂತ್ ಸೊರೇನ್ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಅವರು ದೂರಿದ್ದಾರೆ. ಬಿಜೆಪಿ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಕೂಡ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ. ಜಾರ್ಖಂಡ್‌ನಲ್ಲಿ ಹೇಮಂತ್ ಸೊರೇನ್ ಸರ್ಕಾರಕ್ಕೆ ಕಾಂಗ್ರೆಸ್ ನೀಡುತ್ತಿರುವ ಬೆಂಬಲವನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (JSSC) ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರ ಸಾವಿರಾರು ವಿದ್ಯಾರ್ಥಿಗಳು ರಾಂಚಿಯಲ್ಲಿ ವಿಧಾನಸಭೆಯತ್ತ ಮೆರವಣಿಗೆ ನಡೆಸಿದ್ದರು. ಈ ವೇಳೆ ಪೊಲೀಸರು…

Read More