Author: admin
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಐಡಿಎಲ್) ಸಂಸ್ಥೆಯ ಇಂಜಿನಿಯರ್‌ಗಳು ಉಸ್ತುವಾರಿ ಸಚಿವರ ಹೆಸರಿನಲ್ಲಿ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಆರೋಪವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಉಸ್ತುವಾರಿ ಸಚಿವರು ಅಥವಾ ಇಲಾಖೆಯ ಸಚಿವರ ಹೆಸರಿನಲ್ಲಿ ಇಲಾಖೆಯ ಸಿಬ್ಬಂದಿ ಅಥವಾ ಅಧಿಕಾರಿಗಳು ಹಣ ವಸೂಲಿ ಮಾಡಿರುವುದು ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಕೆಆರ್‌ಐಡಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ವಿರುದ್ಧದ ಭ್ರಷ್ಟಾಚಾರ ಆರೋಪಗಳಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ಪರಿಶೀಲಿಸಲು ಸೂಪರಿಂಟೆಂಡೆಂಟ್ ಇಂಜಿನಿಯರ್ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ತ್ರಿಸದಸ್ಯ ತನಿಖಾ ತಂಡ ರಚಿಸಲಾಗಿದೆ. ಆರೋಪ ಸತ್ಯವೆಂದು ಕಂಡುಬಂದರೆ ಶಿಸ್ತು ಕ್ರಮಕ್ಕೆ ಶಿಫಾರಸು ಸೇರಿದಂತೆ ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ, ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಕಮಿಷನ್…
ನವದೆಹಲಿ:ಇತ್ತೀಚೆಗೆ ನಡೆದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ವಿದ್ಯಾರ್ಥಿಗಳಿಗೆ ಪರಿಹಾರ ನೀಡಲು ಸಂವಿಧಾನದ ವಿಧಿ 142ರ ಅಡಿಯಲ್ಲಿ ತನಗಿರುವ ವಿಶೇಷ ಅಧಿಕಾರವನ್ನು ಬಳಸಿದ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ದೆಹಲಿ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ರದ್ದುಗೊಳಿಸಿ ಆದೇಶಿಸಿದೆ.ಆದರೆ, ಸಾಮಾನ್ಯ ವಿದ್ಯಾರ್ಥಿಗಳಿಗೆ ಈ ಆದೇಶದಿಂದ ರಕ್ಷಣೆ ಸಿಕ್ಕಿದ್ದರೂ, ಈ ಹಿಂದೆ ಕ್ರಿಮಿನಲ್ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಪ್ರತ್ಯೇಕವಾಗಿ ಹೊಸ ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಹಾಗೇ, ನೀಟ್ (NEET) 2026ರ ಗೊಂದಲಗಳಿಂದಾಗಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮುಂದಿನ 3 ತಿಂಗಳೊಳಗೆ ಸೂಕ್ತ ನೀತಿಯನ್ನು ರೂಪಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.…
ಕೌಶಂಬಿ: ಉತ್ತರ ಪ್ರದೇಶದಲ್ಲಿ ನಿನ್ನೆ ನಡೆದ ಪಟಾಕಿ ಕಾರ್ಖಾನೆಯ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಿಪ್ರಿ ಗ್ರಾಮದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ನಡೆದ ಸ್ಫೋಟ ಪ್ರಕರಣದ ಆರೋಪಿ ನೌಶಾದ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಘಟನೆಯಲ್ಲಿ ಆತನ ಕಾಲಿಗೆ ಗುಂಡು ತಗುಲಿತ್ತು. ನಂತರ ಪೊಲೀಸರು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆತನನ್ನು ಬಂಧಿಸಿದ್ದಾರೆ. ಪಟಾಕಿ ಕಾರ್ಖಾನೆ ಸ್ಫೋಟದ ನಂತರ ಪೊಲೀಸರು ತಮ್ಮ ಕ್ಷಿಪ್ರ ಕಾರ್ಯಾಚರಣೆಯನ್ನು ಮುಂದುವರೆಸಿದರು. ಗಾಯಗೊಂಡ ನೌಶಾದ್ ಅಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೌಶಾದ್ ಅಲಿ ಮೊಹಮ್ಮದ್ ಆದಿಲ್ ಅವರ ತಂದೆ. ಆರೋಪಿಯಿಂದ ಪಿಸ್ತೂಲ್ ಮತ್ತು ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಒ ಶಿವಾಂಗ್ ಸಿಂಗ್, ‘ಕೌಶಾಂಬಿ ಜಿಲ್ಲೆಯ ಪಿಪ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮೊಹಮ್ಮದ್‌ಪುರ ಮನೌರಿಯಲ್ಲಿ ಇದ್ದ ಪಟಾಕಿ ಕಾರ್ಖಾನೆಯಲ್ಲಿ ಆಗಸ್ಟ್ 31, 2026ರಂದು ಸ್ಫೋಟವಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ಘಟನೆಯ ನಂತರ ಪೊಲೀಸ್ ಸೂಪರಿಂಟೆಂಡೆಂಟ್…
ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ ಗಲಾಟೆ ನಡೆದು ಯುವಕನ ಬರ್ಬರ ಹತ್ಯೆಗೈದ 8 ಮಂದಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯಲ್ಲಿ 2017ರಲ್ಲಿ ಸಿಗರೇಟ್ ಸೇದುವ ವಿಚಾರವಾಗಿ ಹರೀಶ್ ಎಂಬ ಯುವಕನೊಂದಿಗೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಆರೋಪಿಗಳ ಗುಂಪು ಹರೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿತ್ತು. ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ 59ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಗಳ ಮೇಲಿನ ಕೊಲೆ ಕೃತ್ಯ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿದ್ದ ಮೂವರು ಅಪ್ರಾಪ್ತರನ್ನು ಹೊರತುಪಡಿಸಿ, ಪ್ರಮುಖ 8 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ. ವೆಂಕಟೇಶ್, ವಿಜಯ್, ವಿನೋದ್, ಜೆರಾಲ್ಡ್ ಆರೋಗ್ಯ ರಾಜ್, ಜೇಮ್ಸ್…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಾಫಿ ಸಾಕ್ಷಿಯ ವಿಚಾರ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಆರೋಪಿ ಪ್ರದೋಷ್ಅವರಿಗೆ ಸಾಕ್ಷಿಯಾಗಿ ಹೇಳಿಕೆ ನೀಡುವಂತೆ ಕೆಳ ನ್ಯಾಯಾಲಯ ನೀಡಿರುವ ಸಮನ್ಸ್‌ನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರದೋಷ್ ಅವರನ್ನು ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರಿಸಿಕೊಂಡು ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಲು ಅವರಿಗೆ ನೀಡಿರುವ ಸಮನ್ಸ್ ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಬೇಕು ಎಂಬುದು ಅರ್ಜಿಯಲ್ಲಿನ ಪ್ರಮುಖ ಮನವಿಯಾಗಿದೆ. ಪ್ರದೋಷ್ ಅವರ ಸಾಕ್ಷ್ಯ ಮುಂದಿನ ವಿಚಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇರುವುದರಿಂದ, ಕೆಳ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಇಂದು ನಡೆಯುವ ಸಾಧ್ಯತೆ ಇದ್ದು, ನ್ಯಾಯಾಲಯದ ಮುಂದಿನ ನಡೆ ಪ್ರಕರಣದ ವಿಚಾರಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ವಿಚಾರಣೆ ಮುಂದುವರಿದಿದೆ. ಪ್ರಕರಣದಲ್ಲಿ ಆರೋಪಿಗಳ ಪೈಕಿ ಒಬ್ಬರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಅವರ…
ಪುತ್ತೂರು : ಶಾಸಕ ಅಶೋಕ್ ರೈ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಬೆಂಬಲಿಗರ ನಡುವಿನ ಜಟಾಪಟಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪುತ್ತೂರಿನ ಪ್ರೆಸ್ ಕ್ಲಬ್ ಮುಂಭಾಗ ಭಾರಿ ಹೈಡ್ರಾಮಾ ಹಾಗೂ ಗಲಾಟೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಅವರು ಪುತ್ತೂರು ಶಾಸಕ ಅಶೋಕ್ ರೈ ಅವರ ಆಡಳಿತ ವೈಫಲ್ಯಗಳನ್ನು ಎತ್ತಿಹಿಡಿದು ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ಆಡಿಯೋ ಭಾರಿ ವೈರಲ್ ಆಗಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಆಡಿಯೋ ಕುರಿತು ಸ್ಪಷ್ಟನೆ ಹಾಗೂ ಹೆಚ್ಚಿನ ವಿವರ ನೀಡಲು ಹಕೀಂ ಕೂರ್ನಡ್ಕ ಅವರು ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಹಕೀಂ ಪ್ರೆಸ್ ಮೀಟ್‌ಗೆ ಆಗಮಿಸಿದ ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಅಶೋಕ್ ರೈ ಅವರ ಬೆಂಬಲಿಗರು ಶಾಸಕರ ಸಮ್ಮುಖದಲ್ಲೇ ಪ್ರೆಸ್ ಕ್ಲಬ್ ಮುಂಭಾಗ ಜಮಾಯಿಸಿ ಹಕೀಂ ವಿರುದ್ಧ ಕೆಂಡಾಮಂಡಲರಾದರು. ಹಕೀಂ ಕೂರ್ನಡ್ಕರನ್ನು ಪ್ರೆಸ್ ಕ್ಲಬ್‌ನಿಂದ ಹೊರಗಡೆ ಕಳುಹಿಸುವಂತೆ ಏರುಧ್ವನಿಯಲ್ಲಿ ಕೂಗಾಡಿದ ಬೆಂಬಲಿಗರು…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿಯ ಪುತ್ರಿ ಬೃಷ್ಟಿ ಮುಖರ್ಜಿ( ಅವರು ಬೀರ್‌ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿಯಾದ 28 ವರ್ಷದ ಬೃಷ್ಟಿ ಮುಖರ್ಜಿ, ತಮ್ಮ ಮನೆಯ ಎರಡನೇ ಮಹಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿಹಾರ್ ಮುಖರ್ಜಿ ಅವರು ಮಮತಾ ಬ್ಯಾನರ್ಜಿ ಅವರ ತಾಯಿಯ ಸೋದರ ಸಂಬಂಧಿಯಾಗಿದ್ದು ತೃಣಮೂಲ ಕಾಂಗ್ರೆಸ್ ನಾಯಕರಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಸಾವಿನ ಕುರಿತು ತನಿಖೆ ಆರಂಭಿಸಲಾಗಿದೆ. ಯುವತಿಯು ಕಳೆದ ಕೆಲ ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ
ಚಿಕ್ಕೋಡಿ: ತಪ್ಪು ಮಾಡಿದ ಆರೋಪಿಗೆ ದಂಡ ಅಥವಾ ಸಾಂಪ್ರದಾಯಿಕ ಶಿಕ್ಷೆ ವಿಧಿಸುವ ಬದಲು 50 ಸಸಿಗಳನ್ನು ನೆಡುವಂತೆ ಕೋರ್ಟ್ ಆದೇಶ ನೀಡಿರುವುದು ಗಮನ ಸೆಳೆದಿದೆ. ಕುಡಿದು ಗಲಾಟೆ ಮಾಡಿದ ಆರೋಪಿಗೆ ಚಿಕ್ಕೋಡಿ JMFC ನ್ಯಾಯಾಲಯ ವಿಭಿನ್ನ ರೀತಿಯ ಶಿಕ್ಷೆ ಪ್ರಕಟಿಸಿದೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಅನಿಲ ನಿಂಗಪ್ಪ ಪೂಜಾರಿ ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಕುಡಿದು ಗಲಾಟೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿ ತನ್ನ ತಪ್ಪನ್ನು ಸ್ವಯಂಪ್ರೇರಿತವಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಸಸಿ ನೆಡಲು ಆದೇಶ ನ್ಯಾಯಾಲಯದ ಆದೇಶದಂತೆ ಆರೋಪಿ ಚಿಕ್ಕೋಡಿ ನ್ಯಾಯಾಲಯದ ಆವರಣದಲ್ಲಿ 25 ಸಸಿಗಳು ಹಾಗೂ ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ 25 ಸಸಿಗಳು ಸೇರಿದಂತೆ ಒಟ್ಟು 50 ಸಸಿಗಳನ್ನು ನೆಟ್ಟಿದ್ದಾನೆ. ವಿಶೇಷವೆಂದರೆ, ಆರೋಪಿ ತನ್ನ ಪತ್ನಿಯೊಂದಿಗೆ ಸೇರಿ ಕೋರ್ಟ್ ಆವರಣ ಹಾಗೂ ಪೊಲೀಸ್ ಠಾಣೆ ಆವರಣದಲ್ಲಿ ಸಸಿ ನೆಡುವ ಮೂಲಕ ನ್ಯಾಯಾಲಯದ ಆದೇಶವನ್ನು ಪಾಲಿಸಿದ್ದಾನೆ. ತಪ್ಪಿಗೆ ಶಿಕ್ಷೆಯಾಗಿ ಪರಿಸರ ಬೆಳೆಸುವಂತಹ ಕ್ರಮಕ್ಕೆ ನ್ಯಾಯಾಲಯ ಮುಂದಾಗಿರುವುದು ಸಾರ್ವಜನಿಕರ…
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಲಕ್ನೋದಲ್ಲಿ ವಾಸಿಸುತ್ತಿದ್ದ ಶ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64 ವರ್ಷ) ಎಂದು ಗುರತಿಸಲಾಗಿದೆ. ಪ್ರಕರಣದ ಹಿನ್ನೆಲೆ: ಆರೋಪಿ ಶ್ಯಾಮ್ ಪೀಟರ್ ಅಲಿಯಾಸ್ ಟಿ. ಸ್ಯಾಮ್ ಪೀಟರ್/ರಾಹುಲ್ ಪೀಟರ್ ತನ್ನದೇ ಗ್ಯಾಂಗ್ ರಚಿಸಿಕೊಂಡು, ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ, ಹಣಕಾಸು ವಿವಾದಗಳು, ಬ್ಯಾಂಕ್ ವಂಚನೆಗಳು ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ತಾನು ಅಧಿಕಾರಿಯೆಂದು ನಂಬಿಸಿ ಹಣ ಪಡೆದು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ. ಈ ಸಂಬಂಧ ಮಂಗಳೂರು ಕದ್ರಿ ಪೊಲೀಸರು ಅಗಸ್ಟ್ 16, 2019 ರಂದು ಪಂಪ್ವೆಲ್ನಲ್ಲಿರುವ ಲಾಡ್ಜ್ನಲ್ಲಿ ಕಾರ್ಯಾಚರಣೆ ನಡೆಸಿ, ಶ್ಯಾಮ್…
ಪಣಜಿ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಮಂಗಳವಾರ (ಇಂದು) ಗೋವಾದ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಗೋವಾದಿಂದ (Goa) ಟೇಕಾಫ್ ಆಗಿದ್ದ ವಿಮಾನದ ಒಂದು ಇಂಜಿನ್ ಕೆಲವೇ ಕ್ಷಣಗಳಲ್ಲಿ ಆಫ್ ಆಗಿದೆ. ತಕ್ಷಣ ಎಚ್ಚೆತ್ತ ಪೈಲಟ್ ಮತ್ತೆ ಗೋವಾಗೆ ಯೂಟರ್ನ್ ತೆಗೆದುಕೊಂಡಿದ್ದಾರೆ. ಇದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಇಂಡಿಗೋ ವಿಮಾನ 6E 2102 ಟೇಕಾಫ್ ಆದ ಬಳಿಕ ತಾಂತ್ರಿಕ ಸಮಸ್ಯೆ ಪತ್ತೆಯಾದ ಹಿನ್ನೆಲೆ ಪೈಲಟ್‌ಗಳು ತಕ್ಷಣವೇ ಪ್ರಮಾಣಿತ ಕಾರ್ಯಾಚರಣಾ ಕ್ರಮವನ್ನು ಅನುಸರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಮಾನವನ್ನ ಹಿಂದಕ್ಕೆ ತಿರುಗಿಸಿ ಗೋವಾದ ಮೋಪಾ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ಈ ಕುರಿತು ಇಂಡಿಗೋ ಅಧಿಕೃತ ಹೇಳಿಕೆಯಲ್ಲಿ, `ಸೆಪ್ಟೆಂಬರ್ 1ರಂದು (ಇಂದು) ಉತ್ತರ ಗೋವಾದಿಂದ ದೆಹಲಿಗೆ ತೆರಳುತ್ತಿದ್ದ 6E 2102 ವಿಮಾನದಲ್ಲಿ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದೆ.…



