Author: admin

ಕಾಪು: ಎಲ್ಲೂರಿನ ರೇವತಿ ಕುಂದರ್ ಅವರಿಗೆ ಸೇರಿದ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಹೆಂಚಿನ ಮೇಲ್ಛಾವಣಿಯ ಮರದ ತೊಲೆಗಳು ಮುರಿದು ನೇರವಾಗಿ ರೇವತಿ ಅವರು ಮಲಗಿದ್ದ ಕೊಠಡಿಗೆ ಕುಸಿದು ಬಿದ್ದಿವೆ. ಘಟನೆಯಲ್ಲಿ ರೇವತಿ ಅವರು ಪವಾಡಸದೃಶವಾಗಿ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಮನೆಯ ಇತರ ಕೊಠಡಿಗಳಲ್ಲಿ ಮಲಗಿದ್ದ ಕುಟುಂಬದ ಸದಸ್ಯರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೇಲ್ಛಾವಣಿ ಕುಸಿದ ಪರಿಣಾಮ ಮನೆಯ ಸುಮಾರು ಶೇ.75ರಷ್ಟು ಭಾಗ ಸಂಪೂರ್ಣ ಹಾನಿಗೊಳಗಾಗಿದೆ. ಒಟ್ಟು ಸುಮಾರು 3 ಲಕ್ಷ ರೂ. ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ. ಘಟನೆಯ ಬಳಿಕ ಎಲ್ಲೂರು ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಯ ಪ್ರಮಾಣವನ್ನು ಅಂದಾಜಿಸಿದ್ದಾರೆ.

Read More

ಟೆಲ್ ಅವಿವ್: ಗಾಜಾದಲ್ಲಿ ಶಾಂತಿ ನೆಲಸುವಂತೆ ಮಾಡಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೂಪಿಸಿರುವ 15 ಅಂಶಗಳ ಯೋಜನೆಯನ್ನು  ಇಸ್ರೇಲ್ ತಿರಸ್ಕರಿಸಿದೆ. ಹಮಾಸ್ ಸಂಪೂರ್ಣ ಶಸ್ತ್ರ ತ್ಯಜಿಸುವವರೆಗೂ ಗಾಜಾದಿಂದ ತನ್ನ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಹಾಗೆಯೇ, ತನ್ನ ಸೈನಿಕರ ಎಲ್ಲಾ ರಜೆಗಳನ್ನು ರದ್ದುಗೊಳಿಸಿ ತೀವ್ರ ಕಟ್ಟೆಚ್ಚರ ವಹಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ಮತ್ತೊಮ್ಮೆ ಯುದ್ಧದ ಭೀತಿ ಎದುರಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಹಾಗೂ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು  ಇರಾನ್ ಮೇಲಿನ ಹೊಸ ದಾಳಿಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ವರದಿಗಳು ಬಂದಿವೆ. ಸೈನಿಕರ ರಜೆ ರದ್ದು: ಇಸ್ರೇಲ್ ರಕ್ಷಣಾ ಪಡೆಗಳು ತಮ್ಮ ಸೈನಿಕರು ಹಾಗೂ ಅಧಿಕಾರಿಗಳ ಎಲ್ಲಾ ರಜೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿವೆ. ಯಾವುದೇ ಕ್ಷಣದಲ್ಲಾದರೂ ಎದುರಾಗಬಹುದಾದ ತುರ್ತು ಪರಿಸ್ಥಿತಿಗೆ ಸಿದ್ಧವಾಗಿರಲು ಸೇನೆಗೆ ಸೂಚಿಸಲಾಗಿದೆ. ನೆತನ್ಯಾಹು ಎಚ್ಚರಿಕೆ: ಅಮೆರಿಕವು ಇರಾನ್ ಜೊತೆ ರಾಜತಾಂತ್ರಿಕ ಸಂಧಾನಕ್ಕೆ ಯತ್ನಿಸುತ್ತಿದ್ದರೂ,…

Read More

ಉಡುಪಿ:ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳಾದ ಉತ್ತರಾಖಂಡದ  ಅಜಯ್  ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಈ ಹಿಂದೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು, ಅವರನ್ನು ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಧೀಶ ಪುರುಷೋತ್ತಮ್ ಅವರನ್ನು ಕೋರಿದ್ದರು. ಮನವಿಗೆ ಸಮ್ಮತಿಸಿದ ನ್ಯಾಯಾಧೀಶರು ಇಬ್ಬರನ್ನೂ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Read More

ತಮಿಳುನಾಡು: ತಮಿಳುನಾಡಿನ ಪ್ರಮುಖ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 1ರಿಂದ ಪ್ರಸಿದ್ಧ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಸಚಿವ ಎಸ್. ರಮೇಶ್ ತಿಳಿಸಿದ್ದಾರೆ. ತಿರುಚಿಯ ಶ್ರೀರಂಗಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಕ್ತರು ದೇವಸ್ಥಾನ ಪ್ರವೇಶಿಸುವ ಮುನ್ನ ತಮ್ಮ ಮೊಬೈಲ್ ಫೋನ್‌ಗಳನ್ನು ಸುರಕ್ಷಿತವಾಗಿ ಇಡಲು ಪ್ರವೇಶ ದ್ವಾರ ಅಥವಾ ದೇವಸ್ಥಾನದ ಹೊರಭಾಗದಲ್ಲಿ ಪ್ರತ್ಯೇಕ ಡೆಪಾಸಿಟ್ ಕೌಂಟರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇವಸ್ಥಾನಗಳ ಗರ್ಭಗುಡಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಅಲ್ಲದೆ, ದೇವಸ್ಥಾನದ ಆವರಣದಲ್ಲೇ ರೀಲ್ಸ್ ಮತ್ತು ಶಾರ್ಟ್ಸ್ ವಿಡಿಯೋಗಳನ್ನು ಮಾಡುವ ಪ್ರವೃತ್ತಿಯೂ ಹೆಚ್ಚುತ್ತಿದೆ. ದೇವಸ್ಥಾನಗಳ ಪಾವಿತ್ರ್ಯ ಮತ್ತು ಧಾರ್ಮಿಕ ವಾತಾವರಣವನ್ನು ಕಾಪಾಡುವುದು, ಅನಧಿಕೃತ ಚಿತ್ರೀಕರಣಕ್ಕೆ ಕಡಿವಾಣ ಹಾಕುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯದ…

Read More

ನೆಲಮಂಗಲ: ಬೆಂಗಳೂರಿನ ಹಣಕಾಸು ಕಂಪನಿ ಉದ್ಯೋಗಿ ಅದ್ವೈತ್ ಉಪಾಧ್ಯಾಯ ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದೆ. ಅದ್ವೈತ್‌ರ ಕಾಡುಗೋಡಿ ಮನೆಯಲ್ಲಿ ಪತ್ತೆಯಾದ ಲ್ಯಾಪ್‌ಟಾಪ್ ಪರಿಶೀಲನೆಯ ವೇಳೆ ಸ್ಪೋಟಕ ಸಂಗತಿಗಳು ಬಯಲಾಗಿವೆ. ಕೃತಕ ಬುದ್ಧಿಮತ್ತೆ (AI) ಮೂಲಕ ಆತ್ಮಹತ್ಯೆ ಹೇಗೆ ಮಾಡಿಕೊಳ್ಳಬಹುದು ಮತ್ತು ಶಿವಗಂಗೆಯ ಶಾಂತಲಾ ಡ್ರಾಪ್‌ನಿಂದ ಬಿದ್ದರೆ ಎಷ್ಟು ಸಮಯಕ್ಕೆ ಸಾವು ಸಂಭವಿಸಬಹುದು ಎಂಬ ಬಗ್ಗೆ ಅದ್ವೈತ್ ಮಾಹಿತಿ ಹುಡುಕಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ನಿಶ್ಚಿತಾರ್ಥವಾಗಿದ್ದ ಹುಡುಗಿಗೆ ಬೆಟ್ಟ ಹತ್ತುವಾಗ ಅದ್ವೈತ್ ಫೋಟೋ ಕಳುಹಿಸಿದ್ದರು. ಇದು ಅವರು ಕಳುಹಿಸಿದ ಕೊನೆಯ ಫೋಟೋ ಎಂದು ಹೇಳಲಾಗಿದೆ. ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ, ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ 60ಕ್ಕೂ ಹೆಚ್ಚು ಅಧಿಕಾರಿಗಳು ಮೂರು ದಿನಗಳಿಂದ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಇದುವರೆಗೂ ಅದ್ವೈತ್‌ರ ಯಾವುದೇ ಕುರುಹು ಪತ್ತೆಯಾಗಿಲ್ಲ. ಪೊಲೀಸರು ಈಗ ಆತ್ಮಹತ್ಯೆಯ ಆಯಾಮದಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

Read More

ಮಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿಯ ಅಧ್ಯಕ್ಷರಾಗಿ ಪ್ರೊ. ಡಾ. ಅಖ್ತರ್ ಹುಸೇನ್, MDS, FDSRCPS (Glasgow) ಅವರನ್ನು ನೇಮಕ ಮಾಡಲಾಗಿದೆ. ಪ್ರೊ. ಡಾ. ಅಖ್ತರ್ ಹುಸೇನ್ ಅವರು ಕ್ರೇನಿಯೋಫೇಶಿಯಲ್ ಅನಾಮಲಿಸ್ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಯೆನೆಪೋಯ ದಂತ ವೈದ್ಯಕೀಯ ಕಾಲೇಜು ಹಾಗೂ ಯೆನೆಪೋಯ ವಿಶ್ವವಿದ್ಯಾಲಯದ ಮಾಜಿ ಡೀನ್ ಮತ್ತು ಪ್ರಾಂಶುಪಾಲರಾಗಿದ್ದಾರೆ. ಅಲ್ಲದೆ, ಅವರು ಇಂಡಿಯನ್ ಆರ್ಥೊಡಾಂಟಿಕ್ ಸೊಸೈಟಿಯ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಾದ್ಯಂತ ಬಾಯಿ ಆರೋಗ್ಯ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಲಪಡಿಸುವ ಉದ್ದೇಶದಿಂದ ವಿಷನ್ ಸಮಿತಿ ಸರ್ಕಾರಕ್ಕೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದೆ. ರಾಜ್ಯದಲ್ಲಿ ಬಾಯಿ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಗಳ ಗುಣಮಟ್ಟ ಮತ್ತು ವ್ಯಾಪ್ತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಸಮಿತಿ ಪ್ರಮುಖ ಪಾತ್ರ ವಹಿಸಲಿದೆ. ವಿಶೇಷವಾಗಿ ಬಾಯಿ ಹಾಗೂ ದಂತ ರೋಗಗಳ ತಡೆಗಟ್ಟುವಿಕೆ, ಆರಂಭಿಕ ಹಂತದಲ್ಲೇ ಪತ್ತೆಹಚ್ಚುವಿಕೆ…

Read More

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್ ಕಸದ ರಾಶಿ ಕೆಳಭಾಗಕ್ಕೆ ಕೊಚ್ಚಿಹೋಗಿದೆ. ಬೆಟ್ಟದ ತುದಿಯಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆಟ್ಟದ ತಪ್ಪಲಿನಲ್ಲಿಯೇ ಪೊಲೀಸ್ ವಸತಿ ಗೃಹಗಳಿದ್ದು, ಕಸದ ರಾಶಿ ಹಾಗೂ ಮಣ್ಣು ವಸತಿ ಸಮುಚ್ಚಯದತ್ತ ಧಾವಿಸುತ್ತಿರುವುದರಿಂದ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ. ಸ್ಥಳೀಯ ನಗರಸಭೆ ಸದಸ್ಯ ಅಪ್ಪಣ್ಣ ಈ ಕುರಿತು ಮಾತನಾಡಿ, ತಕ್ಷಣವೇ ಕಸ ತೆರವುಗೊಳಿಸಿ ಸುರಕ್ಷಿತ ಕ್ರಮ ಕೈಗೊಳ್ಳದಿದ್ದರೆ ದೊಡ್ಡ ಅಪಾಯ ಸಂಭವಿಸಲಿದೆ ಎಂದು ಎಚ್ಚರಿಸಿದ್ದಾರೆ. ಘಟನೆಯ ಕುರಿತು ನಮ್ಮ ಪ್ರತಿನಿಧಿ ಗೋಪಾಲ್ ಸೋಮಯ್ಯ ಪ್ರತ್ಯಕ್ಷ ವರದಿ ನೀಡಿದ್ದಾರೆ.

Read More

ರಾಜಸ್ಥಾನ: ಮನೆಯವರಿಗೆ ತಿಳಿಸದೆ, ಕಷ್ಟಪಟ್ಟು ಸಂಪಾದಿಸಿದ 5 ಲಕ್ಷ ರೂಪಾಯಿ ಹಣವನ್ನು ಜಮೀನಿನಲ್ಲಿ ಹೂತುಹಾಕಿದ್ದ ರೈತನೊಬ್ಬನಿಗೆ ಈಗ ಭಾರೀ ಆಘಾತ ಎದುರಾಗಿದೆ. ಜಮೀನಿನ ಅಡಿಯಲ್ಲಿ ಮುಚ್ಚಿಟ್ಟಿದ್ದ ಸಂಪೂರ್ಣ ಹಣವನ್ನು ಗೆದ್ದಲುಗಳು ತಿಂದಿದ್ದು , ಹಣವೆಲ್ಲ ಸಂಪೂರ್ಣ ಹಾಳಾಗಿ ಹೋಗಿದೆ. ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರಾ ನಿವಾಸಿ ರಂಗು ಅಲಿಯಾಸ್ ಮಾಂಗಿಲಾಲ್ ಮೇಘವಾಲ್ ಎಂಬ ರೈತನ ಗದ್ದೆಯಲ್ಲಿ ನಡೆದಿದೆ. ಜಮೀನಿನಲ್ಲಿ ಶೆಡ್ ನಿರ್ಮಿಸಲು ಮಾಂಗಿಲಾಲ್ 5 ಲಕ್ಷ ರೂಪಾಯಿ ನಗದನ್ನು ಕಾಯ್ದಿರಿಸಿದ್ದರು. ಮನೆಯಲ್ಲಿಟ್ಟರೆ ಕಳುವಾಗಬಹುದು ಅಥವಾ ಮನೆಯವರು ಖರ್ಚು ಮಾಡಬಹುದು ಎಂಬ ಭಯದಿಂದ, ಯಾರಿಗೂ ತಿಳಿಸದೆ ರಾತ್ರೋರಾತ್ರಿ ಪ್ಲಾಸ್ಟಿಕ್ ಚೀಲದಲ್ಲಿ ಹಣ ಸುತ್ತಿ ಜಮೀನಿನಲ್ಲಿ ಹೂತುಹಾಕಿದ್ದರು. ಮಾಂಗಿಲಾಲ್ ಅವರಿಗೆ ಮರೆವಿನ ಕಾಯಿಲೆ ಇತ್ತು. ಹಣದ ಅಗತ್ಯ ಬಿದ್ದಾಗ, ಜಮೀನಿನಲ್ಲಿ ಎಲ್ಲಿ ಹೂತುಹಾಕಿದ್ದೇನೆ ಎಂಬುದನ್ನೇ ಅವರು ಮರೆತುಹೋದರು. 10 ಬಿಘಾ ಜಮೀನನ್ನು ಎಷ್ಟೇ ಅಗೆದು ಹುಡುಕಿದರೂ ಹಣ ಸಿಗಲಿಲ್ಲ. ನಂತರ ಕುಟುಂಬದವರಿಗೂ ವಿಷಯ ತಿಳಿಸಿ ಎಲ್ಲರೂ ಹುಡುಕಿದರೂ ಪತ್ತೆಯಾಗಲಿಲ್ಲ. ಇತ್ತೀಚೆಗೆ ಮಳೆಗಾಲದ ಹಿನ್ನೆಲೆಯಲ್ಲಿ ಜಮೀನನ್ನು…

Read More

ರಾಜಮಂಡ್ರಿ/ಹೈದರಾಬಾದ್: ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಮದ್ಯದ ಅಮಲಿನಲ್ಲಿದ್ದ ಯುವಕರು ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ 28 ವರ್ಷದ ಸ್ನಾತಕೋತ್ತರ ವೈದ್ಯಕೀಯ  ವಿದ್ಯಾರ್ಥಿನಿ ಡಾ. ಪ್ರಿಯಾಂಕಾ ಭಾನುವಾರ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ರಾಜಮಂಡ್ರಿಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಡಾ. ಪ್ರಿಯಾಂಕಾ ಅವರು ಆಗಸ್ಟ್ 3 ರಂದು ನಗರದ ಮಾಲ್ ಬಳಿ ತಮ್ಮ ಸ್ನೇಹಿತೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು ಮಾಲ್‌ನ ಭದ್ರತಾ ಸಿಬ್ಬಂದಿ ಜೊತೆ ಜಗಳವಾಡಿ ತಮ್ಮ ಟಾಟಾ ನೆಕ್ಸಾನ್ ಎಸ್‌ಯುವಿ ಕಾರಿನಲ್ಲಿ ವೇಗವಾಗಿ ಹೊರಟಿದ್ದಾರೆ. ಈ ವೇಳೆ ಮುಂಭಾಗದಲ್ಲಿ ತೆರಳುತ್ತಿದ್ದ ಪ್ರಿಯಾಂಕಾ ಅವರ ಸ್ಕೂಟರ್‌ಗೆ ಹಿಂದಿನಿಂದ ಭೀಕರವಾಗಿ ಡಿಕ್ಕಿ ಹೊಡೆದು ಅವರ ಮೇಲೆಯೇ ಕಾರು ಹರಿಸಿದ್ದಾರೆ. ಅಪಘಾತದಲ್ಲಿ ಪ್ರಿಯಾಂಕಾ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಮೆದುಳು ನಿಷ್ಕ್ರಿಯಗೊಂಡಿತ್ತು (Brain Dead). ಅವರ ಸ್ನೇಹಿತೆಯೂ ಗಾಯಗೊಂಡಿದ್ದರು. ಆರಂಭದಲ್ಲಿ ರಾಜಮಂಡ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪ್ರಿಯಾಂಕಾ ಅವರನ್ನು…

Read More

ಉಳ್ಳಾಲ: ಮದ್ಯದ ಅಮಲಿನಲ್ಲಿ ತಲವಾರು ಪ್ರದರ್ಶಿಸುತ್ತಾ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ರೌಡಿಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಹಾಗೂ ಮಂಚಿಲ ನಿವಾಸಿ ಅಶ್ಪಕ್ (28) ಬಂಧಿತ ಆರೋಪಿಗಳು. ಬಂಧಿತರಲ್ಲಿ ಮೊಹಮ್ಮದ್ ಶಾಕಿರ್ ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದರೆ, ಅಶ್ಪಕ್ ಆಟೋ ಚಾಲಕನಾಗಿದ್ದಾನೆ. ಅಶ್ಪಕ್ ವಿರುದ್ಧ ಈಗಾಗಲೇ ಪೊಲೀಸರು ರೌಡಿ ಶೀಟ್ ತೆರೆದಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ತಡರಾತ್ರಿ ಸುಮಾರು 12.15ರ ಸುಮಾರಿಗೆ ತೊಕ್ಕೊಟ್ಟಿನ ಬಾರ್ ಒಂದರ ಸಮೀಪ ಮದ್ಯದ ಅಮಲಿನಲ್ಲಿದ್ದ ಆರೋಪಿಗಳು ಸಾರ್ವಜನಿಕವಾಗಿ ತಲವಾರು ಹಿಡಿದು ಓಡಾಡುತ್ತಾ, ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಬೆದರಿಕೆ ಒಡ್ಡುತ್ತಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣ ಕಾರ್ಯಾಚರಣೆಗೆ ಇಳಿದ ಉಳ್ಳಾಲ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ  ಹಾಗೂ ಸಾರ್ವಜನಿಕ ಶಾಂತಿ ಭಂಗದ ವಿವಿಧ ಸೂಕ್ತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗಿದೆ.

Read More