Author: admin

ಬಂಟ್ವಾಳ: ಬಂಟ್ವಾಳ ತಾಲೂಕಿನ ಎನ್. ಜಿ. ಸರ್ಕಲ್  ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ ಸಹಸವಾರ  ಮೃತಪಟ್ಟಿದ್ದಾರೆ. ಮೃತರನ್ನು ಯಶವಂತ್ ಕುಲಾಲ್ ಎಂದು ಗುರುತಿಸಲಾಗಿದ್ದು, ತೀವ್ರವಾಗಿ ಗಾಯಗೊಂಡ ಸವಾರ ದಯಾನಂದ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,  ಅಗಸ್ಟ್‌ 6 ರಂದು ಸಂಜೆ 6:30 ರ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಸಾಗುತ್ತಿದ್ದ ಟಿಪ್ಪರ್‌ ಲಾರಿ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಸವಾರ ದಯಾನಂದ ಹಾಗೂ ಸಹ ಸವಾರ ಯಶ್ವಂತ್‌ ಕುಲಾಲ್‌ ಎಂಬವರುಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್‌ ಲಾಕ್‌ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಗಾಯಾಳುಗಳ ಪೈಕಿ ಸಹಸವಾರ ಯಶ್ವಂತ್‌ ಕುಲಾಲ್‌ ರವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದು, ದಯಾನಂದ…

Read More

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಪ್ರಮುಖ ಬಾರ್ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಐಡಿ ಕಾರ್ಡ್ ಪರಿಶೀಲನೆ – ಕಟ್ಟುನಿಟ್ಟಿನ ಸೂಚನೆ: ದಾಳಿಯ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು  ಅಧಿಕಾರಿಗಳು ತಪಾಸಣೆಗೊಳಪಡಿಸಿದರು. ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಕರಿಗೆ  ಮದ್ಯ ಪೂರೈಸಬಾರದು ಎಂದು ಸನ್ನದುದಾರರಿಗೆ (Bar Licensees) ಸ್ಪಷ್ಟ ನಿರ್ದೇಶನ ನೀಡಲಾಯಿತು. ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡುವುದು ಕಂಡುಬಂದಲ್ಲಿ ಸನ್ನದು ರದ್ದುಗೊಳಿಸುವುದು ಸೇರಿದಂತೆ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ನಿರ್ದೇಶನದಂತೆ ದಾಳಿಯಲ್ಲಿ ಮಂಗಳೂರು ಉಪವಿಭಾಗ 1 ರ ಉಪ ಅಧೀಕ್ಷಕಿ ಗಾಯತ್ರಿ ಸಿ ಹೆಚ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್, ಜಯಪ್ಪ…

Read More

ಪಣಜಿ: ಸುಮಾರು 13 ವರ್ಷಗಳ ಹಿಂದೆ ಗೋವಾದ ರೆಸಾರ್ಟ್‌ ಒಂದರಲ್ಲಿ ನಡೆದ ತೆಹೆಲ್ಕಾ ಥಿಂಕ್​ಫೆಸ್ಟ್ ಕಾರ್ಯಕ್ರಮದಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ‘ತೆಹಲ್ಕಾ’ ನಿಯತಕಾಲಿಕೆಯ ಸ್ಥಾಪಕ ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು, ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. 2021ರಲ್ಲಿ ವಿಚಾರಣಾ ನ್ಯಾಯಾಲಯವು ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ವಜಾಗೊಳಿಸಿದ ಹೈಕೋರ್ಟ್, 2 ವಾರಗಳ ಒಳಗೆ ಗೋವಾ ಪೊಲೀಸರ ಮುಂದೆ ಶರಣಾಗುವಂತೆ ತೇಜ್‌ಪಾಲ್‌ಗೆ ಆದೇಶ ನೀಡಿದೆ. ಈ ಪ್ರಕರಣವು 2013 ರ ನವೆಂಬರ್​ನದ್ದಾಗಿದ್ದು, ಗೋವಾದ ರೆಸಾರ್ಟ್‌ ಒಂದರಲ್ಲಿ ‘ತೆಹಲ್ಕಾ’ ಆಯೋಜಿಸಿದ್ದ ವಾರ್ಷಿಕ ‘ಥಿಂಕ್‌ಫೆಸ್ಟ್’ ಕಾರ್ಯಕ್ರಮದ ವೇಳೆ ಲಿಫ್ಟ್‌ನಲ್ಲಿ ತೇಜ್‌ಪಾಲ್ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಉದ್ಯೋಗಿ ಆರೋಪಿಸಿದ್ದರು. ಆದರೆ, ತರುಣ್ ತೇಜ್​ಪಾಲ್ ಇದನ್ನು ನಿರಾಕರಿಸಿದ್ದರು. ಇಂದು ಬೆಳಿಗ್ಗೆ ಹೈಕೋರ್ಟ್‌ ತಮಗೆ ಶಿಕ್ಷೆಯನ್ನು ಖಚಿತಪಡಿಸುತ್ತಿದ್ದಂತೆಯೇ ತೇಜ್‌ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ…

Read More

ಆನೇಕಲ್: ಕುಡಿದ ಅಮಲಿನಲ್ಲಿ ಓರ್ವ ಟೆಕ್ಕಿ ತನ್ನ ಪ್ಲಾಟ್‌ನ ಬಾಲ್ಕನಿಯಿಂದ ಸೆಕ್ಯುರಿಟಿ ಗಾರ್ಡ್‌ಗಳು ಹಾಗೂ ಕಾರುಗಳ ಮೇಲೆ ಏರ್ ಗನ್‌ನಿಂದ ಫೈರಿಂಗ್  ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬಂಡಾಪುರ ಸಮೀಪದ ಸಿಪಾನಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಲಕ್ನೋ ಮೂಲದ ಅನುರಾಗ್ ತಿವಾರಿ (40) ಫೈರಿಂಗ್ ಮಾಡಿದ ವ್ಯಕ್ತಿ. ಅನುರಾಗ್ ತಿವಾರಿ ಐಟಿ ಉದ್ಯೋಗಿ ಆಗಿದ್ದು, ಸದ್ಯ ಪೊಲೀಸರು ಬಂಧಿಸಿದ್ದಾರೆ. ನಡೆದಿದ್ದೇನು? ಅನುರಾಗ್ ತಿವಾರಿ ವೈಟ್‌ಫೀಲ್ಡ್‌ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಎಂಟು ತಿಂಗಳಿನಿಂದ ಸಿಪಾನಿ ಅಪಾರ್ಟ್‌ಮೆಂಟ್‌ನ ಬ್ಲಿಸ್-1 ವಿಭಾಗದ B304 ಪ್ಲಾಟ್‌ನಲ್ಲಿ ವಾಸವಿದ್ದ. ಕಳೆದ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿದ್ದ ಅನುರಾಗ್, ತನ್ನ ಪ್ಲಾಟ್ ಒಳಗೆ ಫೋನ್‌ನಲ್ಲಿ ಮಾತನಾಡುತ್ತಾ ಜೋರಾಗಿ ಕೂಗಾಡುತ್ತಿದ್ದ. ಬಳಿಕ ಮಧ್ಯರಾತ್ರಿ ಸುಮಾರು 2:30ರ ಸುಮಾರಿಗೆ ಬಾಲ್ಕನಿಗೆ ಬಂದು ಏರ್ ಗನ್‌ನಿಂದ ಕೆಳಗಿದ್ದ ಕಾರುಗಳು ಹಾಗೂ ಪಾರ್ಕಿಂಗ್ ಶೇಡ್ ಮೇಲೆ ಶೂಟ್ ಮಾಡಲು ಪ್ರಾರಂಭಿಸಿದ್ದಾನೆ. ಫೈರಿಂಗ್ ಶಬ್ದ ಕೇಳುತ್ತಿದ್ದಂತೆ ಸ್ಥಳಕ್ಕೆ ಬಂದ ಸೆಕ್ಯುರಿಟಿ ಗಾರ್ಡ್‌ಗಳ ಮೇಲೆಯೂ…

Read More

ನಾಗ್ಪುರ : ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಬಾಡಿಗೆ ಫ್ಲ್ಯಾಟ್‌ನಲ್ಲಿ ಕೂಡಿಹಾಕಿ 2 ದಿನಗಳ ಕಾಲ ಭೀಕರವಾಗಿ ಅತ್ಯಾಚಾರವೆಸಗಿ, ಮಣಿಕಟ್ಟು ಕತ್ತರಿಸಿ ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಆನ್‌ಲೈನ್ ಫುಡ್ ಆರ್ಡರ್‌ನ ವಿಳಾಸ ಜಾಡು ಹಿಡಿದು ಹೋದ ಪೊಲೀಸರು, ಕೊಲೆಯಾಗುವ ಹಂತದಲ್ಲಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ. ಹಿರಿಯ ಅಧಿಕಾರಿಯೊಬ್ಬರ ಮಗಳಾಗಿದ್ದ 12ನೇ ತರಗತಿಯ ಬಾಲಕಿಗೆ ಇನ್‌ಸ್ಟಾಗ್ರಾಂ ಮತ್ತು ಗೇಮಿಂಗ್ ಆಪ್‌ಗಳ ಮೂಲಕ ಥಾಣೆ ನಿವಾಸಿ, ಬಿಬಿಎ ವಿದ್ಯಾರ್ಥಿ ನಿರ್ಭಯ್ ಅಲಿಯಾಸ್ ಆಕಾಶ್ ಮಾಧವ್ ಪಾಖ್ರೆ (20) ಪರಿಚಯವಾಗಿದ್ದ. ಭಾನುವಾರ ಫ್ರೆಂಡ್‌ಶಿಪ್ ಡೇ ನೆಪದಲ್ಲಿ ಮಾಲ್‌ಗೆ ಹೋಗುವುದಾಗಿ ಹೇಳಿ ಹೊರಟಿದ್ದ ಬಾಲಕಿಯನ್ನು ಆರೋಪಿ ತನ್ನ ಬಾಡಿಗೆ ಫ್ಲ್ಯಾಟ್‌ಗೆ ಕರೆದೊಯ್ದು ಬಂದಿಸಿದ್ದ. ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆಗಿಳಿದ ಪೊಲೀಸರು ಆರೋಪಿಯ ತಾಯಿಗೆ ಕರೆ ಮಾಡಿ ಮಗನಿಗೆ ಕರೆ ಮಾಡಲು ಸೂಚಿಸಿದ್ದರು. ತಾಯಿಯೊಂದಿಗೆ ಪೊಲೀಸ್ ಮಾತನಾಡಿದ್ದನ್ನು ತಿಳಿದು ಗಾಬರಿಗೊಂಡ…

Read More

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವಂತಹ ದಾರುಣ ಘಟನೆ ನಡೆದಿದೆ. ಸೈಫ್ ಮುಲ್ಲಾ (29), ಅವರ ನಾಲ್ಕು ವರ್ಷದ ಪುತ್ರಿ ಸಿಜಾ ಸೈಫ್ ಮುಲ್ಲಾ ಹಾಗೂ ಸ್ನೇಹಿತ ಇಮ್ತಿಯಾಜ್ ಬಡಗಾಂವ್ (35) ಮೃತ ದುರ್ದೈವಿಗಳು. ಹಿಡಕಲ್‌ನಿಂದ ಗೋಕಾಕ್ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಗೋಕಾಕ್ ಫಾಲ್ಸ್‌ನಿಂದ ಕೊಣ್ಣೂರಿನತ್ತ ಬೈಕ್‌ನಲ್ಲಿ ತಂದೆ, ಮಗಳು ಮತ್ತು ಸ್ನೇಹಿತ ಪ್ರಯಾಣಿಸುತ್ತಿದ್ದರು. ಈ ವೇಳೆ ಕೊಣ್ಣೂರು ಪಟ್ಟಣದ ಕರೆಮ್ಮಾ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಸ್ಥಳದಲ್ಲೇ ಬಸ್​​ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಕುರಿತು ಗೋಕಾಕ್ ಗ್ರಾಮಾಂತರ…

Read More

ಬೆಂಗಳೂರು: ಬೆಂಗಳೂರಿನ ಪೀಣ್ಯದಲ್ಲಿರುವ ಇಂಡಸ್‌ಇಂಡ್ ಬ್ಯಾಂಕ್‌ನಲ್ಲಿ ದೊಡ್ಡ ಮಟ್ಟದ ಗೋಲ್ಡ್ ಲೋನ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಉದ್ಯೋಗಿ ನಾಗೇಶ್, ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಬರೋಬ್ಬರಿ 1.53 ಕೋಟಿ ರೂ. ಸಾಲ ಪಡೆದು ಬ್ಯಾಂಕ್‌ಗೆ ಮೋಸ ಮಾಡಿದ್ದಾನೆ. ಸುಮಾರು 15 ನಕಲಿ ಅಕೌಂಟ್‌ಗಳ ಮೂಲಕ ಈ ಕೃತ್ಯ ಎಸಗಿದ್ದಾನೆ. ಗೋಲ್ಡ್ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್, ಅಡಮಾನವಿಡುವ ಚಿನ್ನವನ್ನು ಪರಿಶೀಲಿಸುವ ಜವಾಬ್ದಾರಿ ಹೊಂದಿದ್ದ. ಇದನ್ನೇ ದುರುಪಯೋಗಪಡಿಸಿಕೊಂಡು, ನಕಲಿ ಚಿನ್ನದ ಸರಗಳಿಗೆ ಹಾಲ್‌ಮಾರ್ಕ್ ಇರುವ ಅಸಲಿ ಕೊಂಡಿಗಳನ್ನು ಮಾತ್ರ ಜೋಡಿಸಿ, ಅವುಗಳನ್ನು ಅಸಲಿ ಎಂದು ಪರಿಗಣಿಸಿ ಲೋನ್ ಮಂಜೂರು ಮಾಡಿದ್ದಾನೆ. ಬ್ಯಾಂಕ್‌ನ ಆಡಿಟಿಂಗ್ ವೇಳೆ ನಾಗೇಶ್‌ನ ವಂಚನೆ ಬಯಲಾಗಿದೆ. ಬ್ಯಾಂಕ್ ಅಧಿಕಾರಿಗಳು ಹಣ ಹಿಂದಿರುಗಿಸುವಂತೆ ಒತ್ತಡ ಹೇರಿದಾಗ, ನಾಗೇಶ್ ತನ್ನ ಸ್ನೇಹಿತನಾಗಿರುವ ಉದ್ಯಮಿ ಜಗದೀಶ್‌ಗೆ ಮೋಸ ಮಾಡುವ ಯೋಜನೆ ರೂಪಿಸಿದ್ದಾನೆ. ಕಡಿಮೆ ಬೆಲೆಗೆ ಹರಾಜಿಗೆ ಬಂದಿರುವ ಚಿನ್ನದಿಂದ 40 ಲಕ್ಷ ರೂ. ಲಾಭ ಗಳಿಸಬಹುದು ಎಂದು ಜಗದೀಶ್‌ರನ್ನು ನಂಬಿಸಿದ್ದಾನೆ. ನಾಗೇಶ್‌…

Read More

ಝಾನ್ಸಿ: ಗ್ಯಾಂಗ್​ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ಬಳಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಝಾನ್ಸಿ ಜೈಲಿನಲ್ಲಿರುವ ತಮ್ಮ ಸಹೋದರ ಅಲಿ ಅಹ್ಮದ್ ಅವರನ್ನು ಭೇಟಿಯಾಗಿ ವಾಪಸ್ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯ ಪೂಂಚ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಅಬಾನ್ ಹಾಗೂ ಅವರ ಸಹಚರರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (Divider) ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಬಾನ್ ಹಾಗೂ ಅವರ ಸ್ನೇಹಿತ ಸೋನು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಯುವಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಮಾತ್‌ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಝಾನ್ಸಿ ಜೈಲಿನಲ್ಲಿ ಬಂಧಿಯಾಗಿರುವ ಅತೀಕ್…

Read More

ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ  ಕೊಡುವುದಾಗಿ ವಾಟ್ಸಾಪ್‌ನಲ್ಲಿ ಜಾಹೀರಾತು ನೀಡಿ, ಆಪ್ ಡೌನ್‌ಲೋಡ್ ಮಾಡಿಸಿ 55 ವರ್ಷದ ಮಹಿಳೆಯೊಬ್ಬರಿಗೆ ಬರೋಬ್ಬರಿ ₹10,50,000 (ರೂ. 10.50 ಲಕ್ಷ) ಆನ್‌ಲೈನ್ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ದಿನಾಂಕ 29-06-2026ರಂದು ಸಂತ್ರಸ್ತ ಮಹಿಳೆಯು ತಮ್ಮ ಮೊಬೈಲ್‌ನಲ್ಲಿ ವಾಟ್ಸಾಪ್ ಬಳಸುತ್ತಿದ್ದಾಗ ‘Private Equity Fund Investment Block Deal’ ಎಂಬ ಹೂಡಿಕೆ ಕುರಿತ ಜಾಹೀರಾತು ಕಂಡಿದೆ. ಅದರಲ್ಲಿ ನೀಡಲಾಗಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ‘B.R.NOVA’ ಎಂಬ ಆ್ಯಪ್ ಡೌನ್‌ಲೋಡ್ ಮಾಡಲು ಸೂಚಿಸಲಾಗಿದೆ. ಬಳಿಕ ‘ಹಾರ್ದಿಕ್ ಜೋಶಿ’ (ಮೊಬೈಲ್ ಸಂಖ್ಯೆ: 8763273640) ಎಂಬ ವ್ಯಕ್ತಿ ಸಂತ್ರಸ್ತೆಯನ್ನು ಸಂಪರ್ಕಿಸಿ, ತಮ್ಮ ಬ್ಲಾಕ್ ಡೀಲ್ ಹೂಡಿಕೆಯು ‘ಸೆಬಿ’ ನೋಂದಾಯಿತವಾಗಿದ್ದು, ಹಣ ತೊಡಗಿಸಿದರೆ ಹೆಚ್ಚಿನ ಲಾಭ ಬರುವುದಾಗಿ ನಂಬಿಸಿದ್ದಾನೆ. ಅಲ್ಲದೆ, ‘Investment Plan VIP1’ ಎಂಬ ವಾಟ್ಸಾಪ್ ಗ್ರೂಪ್ ರಚಿಸಿ ಆಪ್ ಮೂಲಕ ಚಾಟ್ ಮಾಡುತ್ತಾ ಸಂತ್ರಸ್ತೆಯ ವಿಶ್ವಾಸ ಗಳಿಸಿದ್ದಾನೆ. ವಂಚಕರ ಮಾತು ನಂಬಿದ ಮಹಿಳೆ, ಜುಲೈ 22,…

Read More

ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿ ಪ್ರಧಾನಿ ನರೇಂದ್ರ ಮೋದಿ  ಸೆಲ್ಫಿ ವಿಡಿಯೋ ರಿಲೀಸ್ ಮಾಡಿದ್ದರು. ಆ ವಿಡಿಯೋವನ್ನು ಫೇಸ್​​ಬುಕ್​ನಿಂದ ಕೆಲಕಾಲ ಡಿಲೀಟ್ ಮಾಡಲಾಗಿತ್ತು. ಈ ಘಟನೆ ದೇಶಾದ್ಯಂತ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ಮೆಟಾ (Meta) ಸಂಸ್ಥೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಕ್ಷಮೆಯಾಚನೆಗೆ ಪಟ್ಟುಹಿಡಿದಿತ್ತು. ಇದೀಗ ಕೊನೆಗೂ ಮೆಟಾ ಮುಖ್ಯಸ್ಥ ಮಾರ್ಕ್ ಝುಕರ್​ಬರ್ಗ್ ಈ ಕುರಿತು ಕ್ಷಮೆಯಾಚಿಸಿದ್ದಾರೆ. ಮೆಟಾ ಪ್ಲಾಟ್‌ಫಾರ್ಮ್‌ಗಳಲ್ಲಿ ಬಾಲ ಲೈಂಗಿಕ ಶೋಷಣೆ ವಿಷಯ, ಡೀಪ್‌ಫೇಕ್ ವಿಷಯಗಳು ಮತ್ತು ಪ್ಲಾಟ್‌ಫಾರ್ಮ್ ಕಾರ್ಯಾಚರಣೆಯಲ್ಲಾದ ದೋಷಗಳ ಕುರಿತು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಕಠಿಣ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮೆಟಾ ಸಿಇಒ ಮಾರ್ಕ್ ಝುಕರ್‌ಬರ್ಗ್ ಕ್ಷಮೆಯಾಚಿಸಿದ್ದಾರೆ. ತಮ್ಮ ತಪ್ಪಿಗೆ ಕ್ಷಮೆ ಕೋರಿದ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದಿಂದ ಮೆಟಾ ಅಧಿಕಾರಿಗಳನ್ನು ಮತ್ತೊಮ್ಮೆ ವಿಚಾರಣೆಗೆ ಕರೆಯಲಾಗುವುದು ಎಂದು ಮೂಲಗಳು ತಿಳಿಸಿವೆ. ಸಾಮಾಜಿಕ ಜಾಲತಾಣವು…

Read More