Author: admin
ತುಮಕೂರು: ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ ವೇಳೆ, ತಕ್ಷಣವೇ ಜಾಗರೂಕರಾದ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕ ಹಾಗೂ ನಿರ್ವಾಹಕರು ನಿಗದಿತ ಮಾರ್ಗವನ್ನೇ ಬದಲಾಯಿಸಿ ಬಸ್ ಅನ್ನು ನೇರವಾಗಿ ಆಸ್ಪತ್ರೆಯ ಆವರಣಕ್ಕೆ ಒಯ್ದು ಮಹಿಳೆಯ ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಪ್ರಯಾಣಿಸುತ್ತಿದ್ದರು. ಬಸ್ ತುಮಕೂರು-ಮಧುಗಿರಿ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಮಹಿಳೆಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು, ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಇದನ್ನು ಗಮನಿಸಿದ ನಿರ್ವಾಹಕರು ಹಾಗೂ ಸಹಪ್ರಯಾಣಿಕರು ತಕ್ಷಣವೇ ಚಾಲಕನಿಗೆ ಮಾಹಿತಿ ನೀಡಿದ್ದಾರೆ. ಸ್ಥಿತಿಯ ಗಂಭೀರತೆಯನ್ನು ಕ್ಷಣಾರ್ಧದಲ್ಲಿ ಗ್ರಹಿಸಿದ ಬಸ್ ಚಾಲಕ, ಸ್ವಲ್ಪವೂ ವಿಳಂಬ ಮಾಡದೆ ನಿಗದಿತ ಮಾರ್ಗವನ್ನು ಮುಂದುವರಿಸುವುದನ್ನು ಬಿಟ್ಟು, ತುಮಕೂರು–ಮಧುಗಿರಿ ರಸ್ತೆಯಲ್ಲಿದ್ದ ಸಮೀಪದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯತ್ತ ಬಸ್ ಅನ್ನು ಚಲಾಯಿಸಿದ್ದಾರೆ. ಅಷ್ಟೇ ಅಲ್ಲದೆ, ಆಸ್ಪತ್ರೆಯ ಮುಖ್ಯ ದ್ವಾರದವರೆಗೂ ಬಸ್ ಅನ್ನು ಕೊಂಡೊಯ್ದು, ಇತರ ಪ್ರಯಾಣಿಕರ ಸಹಾಯದೊಂದಿಗೆ ಮಹಿಳೆಯನ್ನು ತಕ್ಷಣವೇ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲು…
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಅರ್ಹತೆಯು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಈಗ ವಿಸ್ತರಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ಆಗಸ್ಟ್ 31, 2027 ರ ಗಡುವನ್ನು ಮತ್ತೊಂದು ವರ್ಷ ವಿಸ್ತರಿಸಿ, ಆಗಸ್ಟ್ 31, 2028 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಆಯೋಜಿಸಲಾದ ಕಲಾಪದ ವೇಳೆ ಘೋಷಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಮತ್ತು ಕಾಯ್ದೆಯ ನಿಯಮಗಳು: ಲೋಕಸಭೆ ಸದಸ್ಯರೊಬ್ಬರು ಕೇಳಿದ ಲಿಖಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೇ 29, 2026 ರಂದು ಪರಿಶೀಲನಾ ಅರ್ಜಿಗಳನ್ನು ವಿಲೇವಾರಿ ಮಾಡುವ ಸಮಯದಲ್ಲಿ ಸುಪ್ರೀಂ ಕೋರ್ಟ್ ಶಿಕ್ಷಕರಿಗೆ ಈ ಒಂದು ವರ್ಷದ ಹೆಚ್ಚುವರಿ ಅವಧಿಯನ್ನು ಮಂಜೂರು ಮಾಡಿದೆ ಎಂದು ತಿಳಿಸಿದರು. ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (RTE ಕಾಯ್ದೆ), 2009 ರ ಸೆಕ್ಷನ್ 23…
ಯಾದಗಿರಿ: ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಕಾರ್ಖಾನೆಯ ಕೆಮಿಕಲ್ ಸ್ಕ್ರಬರ್‌ನಿಂದ ಇದ್ದಕ್ಕಿದ್ದಂತೆ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಇಡೀ ಆವರಣದಲ್ಲಿ ತೀವ್ರ ದುರ್ವಾಸನೆ ಹರಡಿದೆ. ಅನಿಲ ಸೇವನೆಯ ಪರಿಣಾಮ ಸ್ಥಳದಲ್ಲಿದ್ದ ಕಾರ್ಮಿಕರು ಉಸಿರುಗಟ್ಟಿ ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ಮೃತ ಕಾರ್ಮಿಕರು ಮಧ್ಯಪ್ರದೇಶ ಹಾಗೂ ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡಿರುವ ಇನ್ನಿಬ್ಬರು ಕಾರ್ಮಿಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ‘ರಿಮ್ಸ್’ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪೃಥ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕಾರ್ಖಾನೆಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಅನಿಲ ಸೋರಿಕೆಗೆ ನಿಖರ ಕಾರಣ ತಿಳಿಯಲು ಪೊಲೀಸರು ಹಾಗೂ ಕಾರ್ಖಾನೆ ಇಲಾಖೆ ಅಧಿಕಾರಿಗಳು ತನಿಖೆ…
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಯುಪಿಐ (UPI) ವಹಿವಾಟುಗಳ ಮೇಲೆ ಶುಲ್ಕ ಅಥವಾ ಮರ್ಚೆಂಟ್ ಡಿಸ್ಕೌಂಟ್ ದರ (MDR) ವಿಧಿಸುವ ಕುರಿತು ಆಡಿದ ಮಾತುಗಳು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿವೆ. “ಡಿಜಿಟಲ್ ಮೂಲಸೌಕರ್ಯದ ವೆಚ್ಚವನ್ನು ಯಾರಾದರೂ ಒಬ್ಬರು ಭರಿಸಲೇಬೇಕು” ಎಂದು ಗವರ್ನರ್ ಹೇಳಿರುವುದು ಮುಂಬರುವ ದಿನಗಳಲ್ಲಿ ಯುಪಿಐ ವಹಿವಾಟುಗಳ ಮೇಲಿನ ಉಚಿತ ಸೇವೆಗೆ ಅಂತ್ಯ ಹಾಡುವ ಸೂಚನೆಯೇ ಎಂಬ ಪ್ರಶ್ನೆ ಮೂಡಿಸಿದೆ. ಸರ್ಕಾರವು ಯುಪಿಐ ವಹಿವಾಟುಗಳ ಮೇಲೆ ವಿಧಿಸಲಾಗುತ್ತಿದ್ದ ಎಂಡಿಆರ್ (MDR) ಶುಲ್ಕವನ್ನು ರದ್ದುಗೊಳಿಸಿತ್ತು. ಬ್ಯಾಂಕುಗಳು ಮತ್ತು ಪಾವತಿ ಕಂಪನಿಗಳು ಅನುಭವಿಸುತ್ತಿದ್ದ ನಷ್ಟವನ್ನು ಸರಿದೂಗಿಸಲು ಸರ್ಕಾರ ಸಬ್ಸಿಡಿ ನೀಡುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಯುಪಿಐ ವಹಿವಾಟುಗಳು ಲಕ್ಷಾಂತರ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಸರ್ವರ್, ಮೂಲಸೌಕರ್ಯ ಮತ್ತು ಭದ್ರತೆಗೆ ಖರ್ಚಾಗುತ್ತಿರುವ ಭಾರಿ ಮೊತ್ತಕ್ಕೆ ಸರ್ಕಾರದ ಸಬ್ಸಿಡಿ ಸಾಕಾಗುತ್ತಿಲ್ಲ. ಬ್ಯಾಂಕುಗಳು ಈ ನಷ್ಟವನ್ನು ಸದ್ದಿಲ್ಲದೆ ಹೀರಿಕೊಳ್ಳುತ್ತಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ‘ಪಾವತಿ…
ಉಳ್ಳಾಲ : ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ವೃದ್ಧೆಯನ್ನು ನೂಕಿ, ಅವರ ಬಾಯಿ ಒತ್ತಿ ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿ ಬಂಗಾರದ ಸರ ಹಾಗೂ ಬಳೆಯನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಕಾಯರಗೋಳಿಯಲ್ಲಿ ಸಂಭವಿಸಿದೆ. ಕಾಯರಗೋಳಿ ನಿವಾಸಿ ಭವಾನಿ ಎಂಬವರು ಆಗಸ್ಟ್ 3ರಂದು ಮಧ್ಯಾಹ್ನ 1.15ರ ಸುಮಾರಿಗೆ ಮನೆಯಲ್ಲಿದ್ದಾಗ ಈ ದುರಂತ ನಡೆದಿದೆ. ಮಗ ಕೆಲಸಕ್ಕೆ ತೆರಳಿದ್ದ ವೇಳೆ ಬಾಗಿಲು ತಟ್ಟಿದ ಇಬ್ಬರು ಅಪರಿಚಿತ ಯುವಕರು, “ನಮಗೆ ಬಾಡಿಗೆ ಮನೆ ಬೇಕು, ನಾವು ಇನ್ಫೋಸಿಸ್‌ನ ನೌಕರರು. ಬ್ರಾಹ್ಮಣರಿಗೆ ಮನೆ ಇದೆಯೇ?” ಎಂದು ವಿಚಾರಿಸಿದ್ದಾರೆ. ವೃದ್ಧೆ ಭವಾನಿ ಅವರು “ಮಗ ಬಂದ ಮೇಲೆ ಕೇಳಿ ಹೇಳುತ್ತೇನೆ” ಎಂದಾಗ, ಮಗನ ಫೋನ್ ನಂಬರ್ ಕೇಳಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ವೃದ್ಧೆ ಬಾಗಿಲು ಹಾಕಲು ಯತ್ನಿಸಿದಾಗ, ಆರೋಪಿಗಳು ಬಾಗಿಲನ್ನು ಬಲವಾಗಿ ದೂಡಿ ಒಳನುಗ್ಗಿದ್ದಾರೆ. ನೂಕಿದ ರಭಸಕ್ಕೆ ಹಾಲ್‌ನಲ್ಲಿ ಕೆಳಗೆ ಬಿದ್ದ ವೃದ್ಧೆ ಬೊಬ್ಬೆ ಹೊಡೆದಾಗ, ಒಬ್ಬ…
ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಮತ್ತು ಸಂಚಾರ ಪೊಲೀಸರು ಜಂಟಿಯಾಗಿ ನಡೆಸಿದ ಸಂಚಾರ ಕಾರ್ಯಾಚರಣೆಯಲ್ಲಿ ರಸ್ತೆ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ 23 ಬಸ್‌ಗಳ ವಿರುದ್ಧ ಪ್ರಕರಣಗಳು ದಾಖಲಿಸಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಬಸ್‌ಗಳು ಪಾಲಿಸುತ್ತಿವೆಯೇ ಎಂದು ಪರಿಶೀಲಿಸಲು ವಿಶೇಷ ತಪಾಸಣೆ ನಡೆಸಲಾಗಿದೆ. ಸೋಮವಾರ ಉಡುಪಿ ನಗರದಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆ ನಡೆಸಿದ ಕಾರ್ಯಾಚರಣೆಯಲ್ಲಿ 15 ಪ್ರಕರಣಗಳು ದಾಖಲಾಗಿದ್ದವು. ಇದಕ್ಕೂ ಮೊದಲು, ಜುಲೈ 27 ರಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆ ನಡೆಸಿದ ಇದೇ ರೀತಿಯ ಕಾರ್ಯಾಚರಣೆಯಲ್ಲಿ ಎಂಟು ಪ್ರಕರಣಗಳು ದಾಖಲಾಗಿದ್ದವು. ಜಾರಿ ಕಾರ್ಯಾಚರಣೆಯ ಸಮಯದಲ್ಲಿ ಒಟ್ಟು 11,500 ರೂ. ದಂಡವನ್ನು ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಪಾಸಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ ಬಳಿ ಮಾದಕ ದ್ರವ್ಯವಿರುವುದು ಕಂಡುಬಂದಿತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದಾಗ ಮೂವರೂ ಮಾದಕ ದ್ರವ್ಯವನ್ನು ಸೇವಿಸಿರುವುದು ದೃಢಪಟ್ಟಿದೆ. ಎನ್‌ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 27(ಬಿ) (ಸೇವನೆ) ಮತ್ತು 8(ಸಿ) ಅಡಿಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಕಾಲೇಜಿಗೆ ಗಾಂಜಾ ತಂದಿದ್ದಾರೆ ಎನ್ನಲಾದ ವಿದ್ಯಾರ್ಥಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಆತನ ಶೈಕ್ಷಣಿಕ ಹಿನ್ನೆಲೆ ಮತ್ತು ವಶಪಡಿಸಿಕೊಳ್ಳಲಾದ ಗಾಂಜಾದ ಪ್ರಮಾಣವನ್ನು ಪರಿಗಣಿಸಿ, ನ್ಯಾಯಾಲಯವು ಜಾಮೀನು…
ನವದೆಹಲಿ: ಯೆಮನ್ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ (Red Sea) ಸಂಚರಿಸುತ್ತಿದ್ದ ಭಾರತೀಯ ಧ್ವಜ ಹೊಂದಿದ್ದ ‘ಎಂಎಸ್‌ವಿ ಫೈಜ್ ನೂರ್ ಒಲಿಯಾ’ (MSV Faize Noore Oliya) ಎಂಬ ಯಾಂತ್ರೀಕೃತ ವಾಣಿಜ್ಯ ಹಡಗಿನ ಮೇಲೆ ಆಗಸ್ಟ್ 4ರಂದು ಕ್ಷಿಪಣಿ ದಾಳಿ ನಡೆದಿದ್ದು, ಹಡಗು ಸಮುದ್ರದಲ್ಲಿ ಮುಳುಗಿದೆ. ಅದೃಷ್ಟವಶಾತ್, ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ ಎಲ್ಲಾ 14 ಸಿಬ್ಬಂದಿಯನ್ನು ಯೆಮನ್ ಕರಾವಳಿ ರಕ್ಷಣಾ ಪಡೆ (Coast Guard) ಯಶಸ್ವಿಯಾಗಿ ರಕ್ಷಿಸಿದೆ. ದಾಳಿ ನಡೆದ ತಕ್ಷಣ ರಕ್ಷಣೆಗೆ ಧಾವಿಸಿದ ಯೆಮನ್ ಕರಾವಳಿ ರಕ್ಷಣಾ ಪಡೆ, ಎಲ್ಲಾ ನಾವಿಕರನ್ನು ಸುರಕ್ಷಿತವಾಗಿ ಮೊಖಾ (Mokha) ಬಂದರಿಗೆ ಕರೆತಂದಿದೆ. ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಈ ದಾಳಿಯನ್ನು ಭಾರತೀಯ ವಿದೇಶಾಂಗ ಸಚಿವಾಲಯ (MEA) ತೀವ್ರವಾಗಿ ಖಂಡಿಸಿದೆ. ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, “ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾದ ಯೆಮನ್ ಸರ್ಕಾರಕ್ಕೆ ಧನ್ಯವಾದಗಳು. ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ನಾವಿಕರ ಕ್ಷೇಮಕ್ಕಾಗಿ ಯೆಮನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ,” ಎಂದು ಸ್ಪಷ್ಟಪಡಿಸಿದ್ದಾರೆ.
ಮಂಗಳೂರು:2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ. 2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದ ಆತ ತಲೆಮರೆಸಿಕೊಂಡಿದ್ದ, ಬಂಧನದಿಂದ ತಪ್ಪಿಸಿಕೊಂಡಿದ್ದ, ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲನಾಗಿದ್ದ ಮತ್ತು ಪತ್ತೆಯಾಗದಂತೆ ವಿಳಾಸ ಬದಲಾಯಿಸಿದ್ದ. ಆತನ ವಿರುದ್ಧ ನಾಪತ್ತೆ ಆರೋಪಪಟ್ಟಿ ಕೂಡ ದಾಖಲಾಗಿತ್ತು. ತನಿಖೆಯ ಸಮಯದಲ್ಲಿ, ಆರೋಪಿ ವಿದೇಶಕ್ಕೆ ಹೋಗಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು. ಆತನ ಪಾಸ್‌ಪೋರ್ಟ್ ವಿವರಗಳನ್ನು ಪಡೆದ ನಂತರ, ಪೊಲೀಸ್ ಆಯುಕ್ತರ ಕಚೇರಿಯ ಮೂಲಕ ಎಲ್‌ಒಸಿ ರ್ಹೊರಡಿಸಲಾಗಿತ್ತು. ಆಗಸ್ಟ್ 1 ರಂದು ಆರೋಪಿ ವಿದೇಶದಿಂದ ಭಾರತಕ್ಕೆ ಬಂದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. . ಆಗಸ್ಟ್ 2 ರಂದು ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಎಎಸ್ಐ ಜಗದೀಶ್ ಮತ್ತು ಸಿಬ್ಬಂದಿ ರವಿಕುಮಾರ್…
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರದ ಗುಜ್ಜರಕೆರೆ ಸಮೀಪದ ಚಹಾ ಅಂಗಡಿ ಬಳಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.



