Author: admin

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದ ಈಗ ಮತ್ತೊಂದು ಹಂತಕ್ಕೆ ಹೋಗಿದ್ದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಟಿಂಗ್‌ ಆಪರೇಷನ್‌ ಮಾಡಿದ ವ್ಯಕ್ತಿಯ ಫೋಟೋವನ್ನು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲೇ ಬಿಡುಗಡೆ ಮಾಡಿದ್ದಾರೆ. ಜೆಡಿಎಸ್‌ ಕಾರ್ಯಕರ್ತರನ್ನಯ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತರ ಕಚೇರಿ ಆಗಮಿಸಿದ ಕುಮಾರಸ್ವಾಮಿ ಬಾಗೇಪಲ್ಲಿ ಮೂಲದ ಪ್ರಶಾಂತ್‌ ಫೋಟೋವನ್ನು ರಿಲೀಸ್‌ ಮಾಡಿದ್ದಾರೆ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆಗಿರುವ ರೌಡಿಶೀಟರ್ ಫೋಟೋ ಬಿಡುಗಡೆ ಮಾಡಿದ ಹೆಚ್‌ಡಿಕೆ, ಸರ್ಕಾರದ ವಿರುದ್ಧ ರಾಜಕೀಯ ಷಡ್ಯಂತ್ರದ ಗಂಭೀರ ಆರೋಪ ಮಾಡಿದ್ದಾರೆ ಸುರ್ಜೇವಾಲಾ ಜೊತೆ ರೌಡಿಶೀಟರ್ ಪ್ರಶಾಂತ್ ಆತ್ಮೀಯವಾಗಿ ತಬ್ಬಿಕೊಂಡು ನಿಂತಿದ್ದಾನೆ ನೋಡಿ. ಈತನನ್ನು ವಶಕ್ಕೆ ಪಡೆದು, ಬೆದರಿಸಿ ನನ್ನ ಹೆಸರನ್ನು ಹೇಳಿಸಲು ಸಂಚು ರೂಪಿಸಿದ್ದಾರೆ “ಅಸಲಿ ‘420’ಗಳು ವಿಧಾನಸೌಧದಲ್ಲಿ ಕುಳಿತಿದ್ದಾರೆ. ನನ್ನ ಹಾಗೂ ನನ್ನ ಕಾರ್ಯಕರ್ತರ ತನಿಖೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಅಧಿಕಾರ ಇದೆ ಎಂದು ಯಾರ ಕುಟುಂಬವನ್ನಾದರೂ ಹಾಳು ಮಾಡುತ್ತೀರಾ? ಮೊದಲು ಗೃಹ ಸಚಿವರು…

Read More

ಮಂಗಳೂರು :  “ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್  ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ…

Read More

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರು ದಸರಾ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಗಣ್ಯರ ಭದ್ರತೆ ಹಾಗೂ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಅ.15 ಸಂಜೆ 4 ಗಂಟೆಯಿಂದ ಗಣ್ಯರು ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸಾರ್ವಜನಿಕರು ಕೆಲವು ಸೂಚನೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಿದ್ದಾರೆ. ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವ ರಸ್ತೆಗಳು : ಕೆಪಿಟಿ ವೃತ್ತದಿಂದ- ಕೆಎಸ್‌ಆರ್‌ಟಿಸಿ – ಲಾಲ್‌ಬಾಗ್ ಮೂಲಕ ನಾರಾಯಣಗುರು ವೃತ್ತದವರೆಗೆ. ನಾರಾಯಣಗುರು ವೃತ್ತದಿಂದ ಮಣ್ಣಗುಡ್ಡೆ – ದುರ್ಗಾಮಹಲ್ ಜಂಕ್ಷನ್ – ಕುದ್ರೋಳಿ ದೇವಸ್ಥಾನ -ಅಳಕೆ ಸೇತುವೆ -ನ್ಯೂ ಚಿತ್ರಾ ಜಂಕ್ಷನ್ ಕಡೆಗೆ ಸಾಗುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಎರಡು ರಸ್ತೆಗಳಲ್ಲಿ ಸಂಚರಿಸುವ ವಾಹನ ಚಾಲಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಗೆ…

Read More

ಬೆಳ್ತಂಗಡಿ: ನಾವೂರಿನಲ್ಲಿ ಡಾ. ಪ್ರದೀಪ್ ಅವರು ನಡೆಸುತ್ತಿದ್ದ ಸ್ವಾತಿ ಕಟ್ಟಡದ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ನಾವೂರು ನಿವಾಸಿ ರವಿ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಶಂಕಿತರಾದ ನಾವೂರು ನಿವಾಸಿ ಸುರೇಶ್ ಇಂಚರ ಮತ್ತು ಪುತ್ತೂರಿನ ಕೌಡಿಚಾರು ಎಂಬಲ್ಲಿನ ನಾವೂರು ನಿವಾಸಿ ದಿನೇಶ್ ಪ್ರಭು ಎಂಬವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅ.6ರಂದು ತಡರಾತ್ರಿ ದುಷ್ಕರ್ಮಿಗಳು ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕುವ ಪ್ರಯತ್ನ ಮಾಡಿದ್ದರು. ಈ ಕೃತ್ಯದಿಂದ ಔಷಧಿಗಳು, ವೈದ್ಯಕೀಯ ಸಲಕರಣೆಗಳು ಸಂಪೂರ್ಣ ಸುಟ್ಟು ಸುಮಾರು 2 ರಿಂದ 3 ಲಕ್ಷ ರೂ. ನಷ್ಟ ಉಂಟಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ BNS ಕಲಂ 326, 324ರಡಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯದ ಹಿಂದೆ ಇರುವವರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಎಸ್ಪಿ ಅವರಿಗೆ ದೂರು ನೀಡಲಾಗಿತ್ತು. “ಈ ಕೃತ್ಯ ಯಾಕೆ ನಡೆದಿದೆ ಎಂದು ತನಿಖೆಯಾಗಬೇಕು.…

Read More

ಮಂಗಳೂರು : : ಬಡಗುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಗತ್ತು-ಗಾಂಭೀರ್ಯದ ವೇಷಧಾರಿಯಾಗಿ ಕರಾವಳಿಯ ಮನೆಮಾತಾಗಿದ್ದ ಥಂಡಿಮನೆ ಶ್ರೀಪಾದ ಭಟ್ (62) ಅವರು ಗುರುವಾರ (ಅಕ್ಟೋಬರ್ 15) ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಕಾಲದಿಂದ ತೀವ್ರವಾದ ಕಾಲುನೋವು ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಚೇತರಿಸಿಕೊಂಡು ಮರಳಿ ರಂಗಸ್ಥಳಕ್ಕೆ ಬರುವ ಮಹದಾಸೆ ಹೊಂದಿದ್ದ ಶ್ರೀಪಾದ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಸಂಭವಿಸಿದ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆ ಯಕ್ಷಗಾನ ರಂಗಕ್ಕೆ ಎಂದೂ ತುಂಬಲಾರದ ನಷ್ಟವನ್ನುಂಟುಮಾಡಿದೆ. ಬಡಗುತಿಟ್ಟಿನ ಪ್ರಸಿದ್ಧ ಡೇರೆಮೇಳಗಳಾದ ಸಾಲಿಗ್ರಾಮ ಮೇಳ, ಪೆರ್ಡೂರು ಮೇಳ ಸೇರಿದಂತೆ ವಿವಿಧ ಪ್ರಸಿದ್ಧ ಬಯಲಾಟ ಮೇಳಗಳಲ್ಲಿ ವೇಷಧಾರಿಯಾಗಿ ಹಂತ ಹಂತವಾಗಿ ಬೆಳೆದು ಬಂದ ಶ್ರೀಪಾದ ಭಟ್ ಅವರು, ತಮ್ಮ ವಿಶಿಷ್ಟ ಗತ್ತು ಹಾಗೂ ಗಾಂಭೀರ್ಯದ ಹಾವಭಾವಗಳ ಮೂಲಕ ನಾಯಕ ಹಾಗೂ ಖಳನಾಯಕ (ಪ್ರತಿಪಾದ) ಎರಡೂ ರೀತಿಯ ಪಾತ್ರಗಳಲ್ಲೂ ಸೈ ಎನಿಸಿಕೊಂಡಿದ್ದರು. ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ…

Read More

ಮಂಗಳೂರು: ಮಂಗಳೂರಿನ ವಲೆನ್ಸಿಯಾದ ಸೇಂಟ್ ವಿನ್ಸೆಂಟ್ ಚರ್ಚ್‌ನ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೋ ಅವರ ವಿರುದ್ಧ 50ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದೆ.  ಚರ್ಚ್‌ನಲ್ಲಿ ಧಾರ್ಮಿಕ ಸೇವೆಗಳಿಗೆ ಸಹಾಯ ಮಾಡುತ್ತಿದ್ದ ಅಪ್ರಾಪ್ತ ಬಾಲಕರ ಮೇಲೆ ಧರ್ಮಗುರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕೆಲವು ಸಂತ್ರಸ್ತರು ಈ ವಿಷಯವನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪಾಲ್ ಸಲ್ದಾನ್ಹಾ ಅವರ ಗಮನಕ್ಕೂ ತಂದಿದ್ದರು ಎಂದು ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ತಿಳಿಸಿದ್ದಾರೆ. ಬಿಷಪ್‌ಗೆ ದೂರು ನೀಡಿದ್ದರ ಕುರಿತು: ಸುಮಾರು ಎರಡು ತಿಂಗಳ ಹಿಂದೆ ಪೋಷಕರು ಬಿಷಪ್‌ಗೆ ಲಿಖಿತ ಮನವಿ ಸಲ್ಲಿಸಿದ್ದರು ಎನ್ನಲಾಗಿದೆ. ಈ ವಿಷಯವನ್ನು ವ್ಯಾಟಿಕನ್‌ನಲ್ಲಿರುವ ಪೋಪ್ ಅವರ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೋಷಕರಿಗೆ…

Read More

ಮೀರತ್ : ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಾಜಿ ನೌಕಾಪಡೆ ಅಧಿಕಾರಿ ಸೌರಭ್ ರಜಪೂತ್ ಹತ್ಯೆ ಪ್ರಕರಣದಲ್ಲಿ ಮೀರತ್‌ನ ಸ್ಥಳೀಯ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಮೃತರ ಪತ್ನಿ ಮುಸ್ಕಾನ್ ರಸ್ತೋಗಿ ಹಾಗೂ ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ದೋಷಿಗಳು ಎಂದು ಎರಡು ವಾರಗಳ ಹಿಂದೆ ಘೋಷಿಸಲಾಗಿದ್ದು, ವಿಚಾರಣೆ ಪೂರ್ಣಗೊಳಿಸಿ ಬುಧವಾರ ಇಬ್ಬರಿಗೂ ಮರಣದಂಡನೆ ವಿಧಿಸಿ ಜಿಲ್ಲಾ ನ್ಯಾಯಾಧೀಶ ಅರವಿಂದ್ ಕುಮಾರ್ ಮಿಶ್ರಾ ಆದೇಶ ಹೊರಡಿಸಿದ್ದಾರೆ. ಕೇವಲ 126 ವಿಚಾರಣೆಗಳು ಹಾಗೂ 22 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ಮುಸ್ಕಾನ್ ಹಾಗೂ ಸಾಹಿಲ್ ಇಬ್ಬರೂ ಸೇರಿ ಸೌರಭ್ ರಜಪೂತ್ ಅವರನ್ನು ವ್ಯವಸ್ಥಿತವಾಗಿ ಕೊಲೆಗೈದು, ಅವರ ಛಿದ್ರಗೊಂಡ ದೇಹದ ತುಂಡುಗಳನ್ನು ನೀಲಿ ಬಣ್ಣದ ಕೈಗಾರಿಕಾ ಡ್ರಮ್‌ನಲ್ಲಿ ಹಾಕಿ, ಕಾಂಕ್ರೀಟ್, ಮರಳು ಮತ್ತು ಸಿಮೆಂಟ್‌ನಿಂದ ಮುಚ್ಚಿ ಮರೆಮಾಚಿದ್ದರು. ಇಂತಹ ಕೃತ್ಯಗಳು ಸಮಾಜದಲ್ಲಿ ಭೀತಿಯನ್ನುಂಟುಮಾಡುತ್ತವೆ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಕಠಿಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಶೇಷವೆಂದರೆ, ಮುಸ್ಕಾನ್ ಪೋಷಕರೇ ಸೌರಭ್…

Read More

ಮಂಗಳೂರು: ಹೊರವಲಯದ ಆಡಂಕುದ್ರುವಿನ ನೇತ್ರಾವತಿ ನದಿ ತೀರದಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳ ವಿರುದ್ದ ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಸ್ತು ಕರ್ತವ್ಯದಲ್ಲಿದ್ದಾಗ ಪಿಕಪ್‌ನಲ್ಲಿ ನೇತ್ರಾವತಿ ದಕ್ಕೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿರುವುದನ್ನು ಕಂಡು ಹಿಂಬಾಲಿಸಿಕೊಂಡು ಹೋದಾಗ ಅದರ ಚಾಲಕ ಪಿಕಪ್ ನಿಲ್ಲಿಸಿ ಓಡಿ ಹೋಗಿದ್ದಾನೆ. ಮರಳು ಸಮೇತ ಪಿಕಪ್ ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು: ಬೆಂಗಳೂರಿನ ಪಿಳ್ಳಗಾನಹಳ್ಳಿ ನೈಸ್ ರಸ್ತೆ ಸೇತುವೆ ಬಳಿ ಹಳೇ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮೂರು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ. ಶ್ರೀನಿವಾಸ್ ಅಲಿಯಾಸ್ ಮೆಂಟಲ್ ಸೀನನ ಕಾಲಿಗೆ ರಿಯಲ್ ಎಸ್ಟೇಟ್ ಉದ್ಯಮಿ ಸಂಪಂಗಿ ಎಂಬಾತನಿಂದ ಫೈರಿಂಗ್​ ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ​ ಪ್ರಕರಣ ದಾಖಲಾಗಿದೆ. ಗಾಯಾಳು ಶ್ರೀನಿವಾಸ್, ಸಂಪಂಗಿ ಬಳಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ವೇಳೆ ವೈಯಕ್ತಿಕ ವಿಚಾರವಾಗಿ ಸೀನ ಮತ್ತು ಸಂಪಂಗಿ ನಡುವೆ ಗಲಾಟೆ ನಡೆದಿದೆ. ಹೀಗಾಗಿ ಸುಮಾರು ಒಂದು ವರ್ಷದ ಹಿಂದೆ ಡ್ರೈವಿಂಗ್ ಕೆಲಸದಿಂದ ಸೀನನನ್ನ ತೆಗೆದುಹಾಕಲಾಗಿತ್ತು. ಇಬ್ಬರ ಮಧ್ಯೆ ಪದೇಪದೆ ಗಲಾಟೆ ನಡೆಯುತ್ತಿತ್ತು. ಶ್ರೀನಿವಾಸ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸಂಪಂಗಿ ಕಳೆದೊಂದು ತಿಂಗಳ ಹಿಂದೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿತ್ತು. ನಿನ್ನೆ ಸಂಜೆ ಸಂಪಂಗಿ ಮೂವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಬೈಕ್‌ನಲ್ಲಿ ಬರುತ್ತಿದ್ದ ಶ್ರೀನಿವಾಸ್‌ನನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಸಂಪಂಗಿ ಲೈಸೆನ್ಸ್ ಹೊಂದಿರುವ ಬಂದೂಕಿನಿಂದ ಶ್ರೀನಿವಾಸ್ ಕಾಲಿಗೆ…

Read More

ಮುಂಬೈ: ಎನ್‌ಎಂಸಿ ಹೆಲ್ತ್‌ಕೇರ್ ಸಂಸ್ಥಾಪಕ ಬಿ.ಆರ್. ಶೆಟ್ಟಿ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಬರೋಡಾ ಮತ್ತಿತರರ ವಿರುದ್ಧ 15 ಬಿಲಿಯನ್ ಡಾಲರ್ (ಸುಮಾರು 1.44 ಲಕ್ಷ ಕೋಟಿ ರೂ) ಮೊಕದ್ದಮೆ ಹೂಡಿದ್ದಾರೆ. ಇದರ ಬೆನ್ನಲ್ಲೇ ಈ ಸರ್ಕಾರಿ ಬ್ಯಾಂಕ್ ನ ಷೇರು ಮೌಲ್ಯವು ಇವತ್ತಿನ ವಹಿವಾಟಿನಲ್ಲಿ ಶೇ. 3ರಷ್ಟು ಕುಸಿದಿದೆ. ನಿನ್ನೆ 238 ರೂ ಬೆಲೆಯಲ್ಲಿ ಅಂತ್ಯಗೊಂಡಿದ್ದ ಬ್ಯಾಂಕ್ ಆಫ್ ಬರೋಡಾದ ಶೇರುಬೆಲೆ ಇವತ್ತು 229 ರೂ ಇದೆ. ಕರ್ನಾಟಕ ಮೂಲದವರಾದ ಮತ್ತು ಯುಎಇಯಲ್ಲಿ ಅತಿದೊಡ್ಡ ಉದ್ಯಮಿಗಳಲ್ಲಿ ಒಬ್ಬರೆನಿಸುವ ಮಟ್ಟಕ್ಕೆ ಏರಿದ, ಹಾಗೂ ಎನ್ ಎಂಸಿ ಹೆಲ್ತ್ ಕೇರ್ ಮತ್ತು ಯುಎಇ ಎಕ್ಸ್ ಚೇಂಜ್ ನ ಸಂಸ್ಥಾಪಕರಾದ ಬಿ.ಆರ್. ಶೆಟ್ಟಿ ಅವರು ತಮಗಾದ ನಷ್ಟಗಳಿಗೆ ಪರಿಹಾರ ಕೋರಿ ಈ ಬೃಹತ್ ಮೊತ್ತದ ಮೊಕದ್ದಮೆ ದಾಖಲಿಸಿದ್ದಾರೆ. ಬ್ಯಾಂಕ್ ಆಫ್ ಬರೋಡಾ ಹಾಗೂ ಅದರ ಕೆಲವು ಅಧಿಕಾರಿಗಳು ತಮ್ಮ ಗ್ರೂಪ್ ಕಂಪನಿಗಳಿಗೆ ಸಂಬಂಧಿಸಿದ ವಂಚನೆಯ ವಹಿವಾಟುಗಳಿಗೆ ಸಹಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸಪ್ಲೈಯರ್…

Read More