Author: admin
ಉಡುಪಿ: ಅಪ್ರಾಪ್ತರು ಹಾಗೂ ಕಾನೂನುಬದ್ಧ ವಯಸ್ಸಿಗಿಂತ ಕಡಿಮೆ ವಯಸ್ಸಿನ ಯುವಕರಿಗೆ ಮದ್ಯ ಸೇವಿಸಲು ಅವಕಾಶ ನೀಡಿದ ಆರೋಪದಡಿ ಉಡುಪಿ ಜಿಲ್ಲಾ ಪೊಲೀಸರು ಮಣಿಪಾಲದ ಆರು ಪಬ್ ಮತ್ತು ಬಾರ್‌ಗಳ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಪಬ್ ಹಾಗೂ ಬಾರ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಹುಕ್ಕಾ ಸೇದುವ ಅವಕಾಶ ನೀಡಲಾಗುತ್ತಿದೆ ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಪೂರೈಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ದಿಢೀರ್ ತಪಾಸಣೆ ನಡೆಸಲಾಯಿತು. ಈ ವೇಳೆ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಕರ್ನಾಟಕ ಅಬಕಾರಿ ಪರವಾನಗಿ ಷರತ್ತುಗಳು ಹಾಗೂ ಕರ್ನಾಟಕ ಅಬಕಾರಿ ಕಾಯ್ದೆಯ ಉಲ್ಲಂಘನೆ ನಡೆದಿರುವುದು ಬೆಳಕಿಗೆ ಬಂದಿದೆ. ಮಣಿಪಾಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಮಣಿಪಾಲ, ಮಲ್ಪೆ, ಹಿರಿಯಡ್ಕ, ಕೋಟ ಹಾಗೂ ಉಡುಪಿ ಮಹಿಳಾ ಪೊಲೀಸ್ ಠಾಣೆಗಳ 20 ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ ಆರು ವಿಶೇಷ ತಂಡಗಳನ್ನು ರಚಿಸಿ…
ಮೈಸೂರು: ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ಗಂಟಲಿಗೆ ಸಿಲುಕಿ ಮಗು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಘಟನೆ ಆಗಸ್ಟ್ 1 ರಂದು ನಡೆದಿದೆ. ಗೌರಿಪುರ ಗ್ರಾಮದ ಸಂತೋಷ್-ಐಶ್ವರ್ಯ ದಂಪತಿಯ ಮೂರು ವರ್ಷದ ಏಕೈಕ ಪುತ್ರ ಮುಕುಂದ್ ಮಯೂರ್(5) ಮೃತಪಟ್ಟ ಮಗು. ಶನಿವಾರ ಮಗು ಅಳುತ್ತಿದ್ದುದನ್ನು ಕಂಡು ಸಂಬಂಧಿಕರ ಮಕ್ಕಳು ಗೌರಿಪುರದ ಅಂಗಡಿಯಲ್ಲಿ ಕುರ್ ಕುರೆ ಪ್ಯಾಕೆಟ್ ಕೊಡಿಸಿದ್ದಾರೆ. ಕುರ್ ಕುರೆ ಪ್ಯಾಕೆಟ್‌ನಲ್ಲಿ ಪ್ಲಾಸ್ಟಿಕ್ ಬಾಲ್ ಇತ್ತು. ಈ ಬಾಲನ್ನು ಮಗು ಕುರ್ ಕುರೆಯೊಂದಿಗೆ ನುಂಗಿದೆ. ತಕ್ಷಣವೇ ಆ ಬಾಲ್ ಗಂಟಲಿಗೆ ಅಡ್ಡವಾಗಿ ಸಿಕ್ಕಿಕೊಂಡು ಮಗು ಉಸಿರಾಡಲು ಪರದಾಡಿ ಒದ್ದಾಡತೊಡಗಿದೆ. ಪರಿಸ್ಥಿತಿಯ ಗಂಭೀರತೆ ಅರಿತ ಮನೆಯವರು ಕೂಡಲೇ ಮಗುವನ್ನು ಹುಣಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಮಗು ಉಸಿರುಗಟ್ಟಿ ಕೊನೆಯುಸಿರೆಳೆದಿದೆ.
ಶಿವಮೊಗ್ಗ: ಕರಾವಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ವರುಣನ ಈ ಅವಾಂತರಕ್ಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ ಎನ್ನಲಾಗಿದ್ದು, ಗುಡ್ಡದ ಕೆಳಭಾಗದಲ್ಲಿ ಶಡ್ ನಿರ್ಮಾಣ ಮಾಡಿಕೊಂಡು ಕುಟುಂಬ ವಾಸವಿತ್ತು ಎನ್ನಲಾಗಿದೆ. ಘಟನೆಯಲ್ಲಿ ಪಕ್ಕದ ಶೆಡ್ನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ. ಮೃತರನ್ನು ಮಲ್ಲಿಕಾರ್ಜುನ (35), ನಾಗವೇಣಿ (28), ಸಂತೋಷ (3) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂಬುದು ತಿಳಿದುಬಂದಿದೆ. ಮಣ್ಣಿನಡಿ ಸಿಲುಕಿ ಮೂವರೂ ಪ್ರಾಣ ಕಳೆದುಕೊಂಡಿದ್ದು, ಶವಗಳನ್ನು ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ (ಆಗಸ್ಟ್ 1, 2026) ಸುರಿದ ಧೋ ಧೋ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನೇತ್ರಾವತಿ, ಮೃತ್ಯುಂಜಯ, ಫಲ್ಗುಣಿ ಹಾಗೂ ಸೋಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಾಲೂಕಿನಾದ್ಯಂತ ಪ್ರವಾಹದ ಭೀತಿ ಆವರಿಸಿದೆ. ಭಾರಿ ಮಳೆಯಿಂದಾಗಿ ರಸ್ತೆಗಳ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಲಾಯಿಲ-ಕಿಲ್ಲೂರು ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇತ್ತ ಮುಂಡಾಜೆ-ಧರ್ಮಸ್ಥಳ ರಸ್ತೆಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಧರ್ಮಸ್ಥಳದ ಮಣ್ಣಸಂಕ ಪ್ರದೇಶ ಮುಳುಗಡೆಯಾಗಿದ್ದು, ಭಾರಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ಸೋಮಂತಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಬದಿಯ ಮಳೆ ನೀರನ್ನು ಒಂದೇ ಚರಂಡಿಗೆ ಹರಿಸಿರುವುದೇ ಪ್ರವಾಹಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನೀರು ಸರಾಗವಾಗಿ ಹರಿಯದೆ ಮನೆಗಳಿಗೆ ಹಾಗೂ ಕೃಷಿ ಜಮೀನುಗಳಿಗೆ ನುಗ್ಗಿದೆ. ತಾಲೂಕಿನ ನದಿಗಳಿಗೆ ಅಡ್ಡಲಾಗಿ ನಿರ್ಮಿಸಲಾದ ಬಹುತೇಕ ಕಿರು ಅಣೆಕಟ್ಟುಗಳು ನೀರಿನಲ್ಲಿ ಮುಳುಗಿವೆ. ಮುಂಡಾಜೆ, ಪುದುವೆಟ್ಟು, ಕಿಲ್ಲೂರು,…
ಕೇರಳ : ಕೇರಳಾದ್ಯಂತ ಸುರಿಯುತ್ತಿರುವ ನಿರಂತರ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತದ ಸರಣಿ ದುರಂತಗಳು ಮುಂದುವರಿದಿದ್ದು, ಶನಿವಾರ (ಆಗಸ್ಟ್ 1, 2026) ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಡುಕ್ಕಿ, ಕೊಟ್ಟಾಯಂನಲ್ಲಿ ಸರಣಿ ದುರಂತ: ಇಡುಕ್ಕಿ ಜಿಲ್ಲೆಯ ಕುದಯತ್ತೂರು ಸಮೀಪದ ಆಡೂರ್‌ಮಾಲಾದಲ್ಲಿ ಶನಿವಾರ ನಸುಕಿನ ಜಾವ ಮನೆಗೆ ಮಣ್ಣಿನ ಕುಸಿತ ಅಪ್ಪಳಿಸಿ ಸುಮತಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. ನೆರೆಹೊರೆಯವರು ಆಕೆಯ ಪತಿ ಹಾಗೂ ಮಗನನ್ನು ರಕ್ಷಿಸಿದ್ದು, ತೋಡುಪುಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರೀತಿ ಇಡುಕ್ಕಿಯ ವಗಮೋನ್‌ನಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತಕ್ಕೆ ಕೋಟಾಯಂನ ವೈಕೋಮ್ ಮೂಲದ ಪ್ರಭಾಕರನ್ ನಾಯರ್ ಬಲಿಯಾಗಿದ್ದಾರೆ. ಮತ್ತೊಂದೆಡೆ, ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನ ಪಯ್ಯನಿತೋಟಂನಲ್ಲಿ ಭೂಕುಸಿತ ಉಂಟಾಗಿ ಜೋಸೆಫ್ ಎಂಬ ಯುವಕ ಮೃತಪಟ್ಟಿದ್ದು, ಆತನ ತಾಯಿಗಾಗಿ ಎನ್‌ಡಿಆರ್‌ಎಫ್ (NDRF) ಶೋಧ ಕಾರ್ಯಾಚರಣೆ ಮುಂದುವರಿಸಿದೆ. ಹೆದ್ದಾರಿ ಬಂದ್, ನದಿಗಳು ಉಕ್ಕಿ ಹರಿವು: ಪುಲ್ಲಕಾಯರ್ ಹಾಗೂ…
ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ಬಿಜೆಪಿ ನಾಯಕಿ ಲಕ್ಷ್ಮೀ ಮಂಜುನಾಥ್ ಕೊಳ (37) ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿದ್ದ ಲಕ್ಷ್ಮೀ ಮಂಜುನಾಥ್, ಬಳಿಕ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ಕೋರ್ಟ್ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತಿವೇಗವಾಗಿ ಬಂದ ಖಾಸಗಿ ಬಸ್ಸೊಂದು ಅವರಿಗೆ ತೀವ್ರವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು. ಬಿಜೆಪಿ ಮುಖಂಡ ಮಂಜುನಾಥ್ ಕೊಳ ಅವರ ಧರ್ಮಪತ್ನಿಯಾಗಿರುವ ಲಕ್ಷ್ಮೀ ಮಂಜುನಾಥ್ ಕೊಳ ಅವರು ತಮ್ಮ ಸರಳತೆ, ಸೌಜನ್ಯ ಹಾಗೂ ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾಗಿದ್ದರು. ನಗರಸಭೆಯ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿ ಪ್ರಾಮಾಣಿಕತೆ ಹಾಗೂ ಜನಪರ ಕಾಳಜಿಯ ಮೂಲಕ ಸಾರ್ವಜನಿಕರ ಅಪಾರ ಪ್ರೀತಿ-ವಿಶ್ವಾಸ ಗಳಿಸಿದ್ದರು. ಸಾಮಾಜಿಕ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದ…
ಕರ್ನಾಟಕದ ಪೊಲೀಸ್ ಕಾನ್ಸ್‌ಸ್ಟೇಬಲ್ ಪರೀಕ್ಷೆಗೆ ಸರ್ಕಾರ ಸಜ್ಜಾಗಿದೆ. ಆಗಸ್ಟ್ 2ರಂದು ರಾಜ್ಯದಲ್ಲಿ ಪೊಲೀಸ್ ಪೇದೆ ಲಿಖಿತ ಪರೀಕ್ಷೆ ನಡೆಯಲಿದೆ. ಈಗಾಗಲೇ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಯುವ ಸಮೂಹದ ಪ್ರತಿಭಟನೆಯಿಂದ ದೇಶದಲ್ಲೇ ಶಿಕ್ಷಣ ಹಾಗೂ ಪರೀಕ್ಷಾ ಸುಧಾರಣೆಗಳಿಗೆ ಒತ್ತಾಯ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ರಾಜ್ಯದ ಕಾನ್ಸ್‌ಸ್ಟೇಬಲ್ ಪರೀಕ್ಷೆಯನ್ನು ಸೂಸೂತ್ರವಾಗಿ ನಡೆಸಲು ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಮುತುವರ್ಜಿ ವಹಿಸಿದ್ದಾರೆ. ಇದೇ ವೇಳೆ ಎದ್ದಿರುವ ಕೆಲ ಗೊಂದಲಗಳಿಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಪೈಕಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಾನ್ಸ್‌ಸ್ಟೇಬಲ್ ಲಿಖಿತ ಪರೀಕ್ಷೆಯಲ್ಲಿ ಹಿಜಾಬ್ ಹಾಕಲು ಅವಕಾಶವಿಲ್ಲ. ಧಾರ್ಮಿಕ ಉಡುಪುಗಳ ಬಗ್ಗೆ ಗೊಂದಲ ಆಗದಂತೆ ಮೊದಲೇ ನೋಡಿಕೊಳ್ಳಲಾಗುವುದು ಎಂದು ಪ್ರಿಯಾಂಕಾ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ವೇಳೆ ಯಾವ ಉಡುಪು ಹಾಕಬಹುದು..ಯಾವುದು ಹಾಕಬಾರದು ಅಂತ ಪ್ರವೇಶ ಪತ್ರದಲ್ಲಿ ಹಾಕಿರುತ್ತೇವೆ. ಹೀಗಾಗಿ ಪರೀಕ್ಷಾ ಕೊಠಡಿ ಬಳಿ ಯಾವುದೇ ಗೊಂದಲಕ್ಕೆ ಅವಕಾಶವಿರುವುದಿಲ್ಲ ಎಂದು ಪ್ರಿಯಾಂಕ ಖರ್ಗೆ…
ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ. ಹೆಬ್ರಿ ಮೂಲದ ಪ್ರಸ್ತುತ ಬಾರ್ಕೂರು ಕಚ್ಚೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಎನ್ನುವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಆರೋಪಿ ಡೆರಿಕ್ ತಲೆಮರೆಸಿಕೊಂಡಿದ್ದ. ಭಟ್ಕಳದ ಬೆಳಕೆ ಹೇರಬುಡಿಕೆ ಎಂಬಲ್ಲಿ ಶನಿವಾರ ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ತನಿಖೆ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ
ಶಿವಮೊಗ್ಗ: ಹೊಳೆಯಲ್ಲಿ ಕಾರು ಸಿಲುಕಿ ಹೊನ್ನಾವರ ಮೂಲದ ಕುಟುಂಬವೊಂದು ಪರದಾಡಿದ ಪರದಾಡಿದ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಮಾಲತಿ ಹೊಳೆ ಉಕ್ಕಿ ಹರಿಯುತ್ತಿದ್ದು, ಕಾರಿಗೆ ಏಕಾಏಕಿ ನೀರು ನುಗ್ಗಿದ್ದರಿಂದ ಕಾರಿನ ಮೇಲೇರಿ ಕುಟುಂಬಸ್ಥರು ಸಹಾಯಕ್ಕಾಗಿ ಕೂಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕಾರಿಗೆ ಹಗ್ಗ ಕಟ್ಟಿ ಸುರಕ್ಷಿತ ಸ್ಥಳಕ್ಕೆ ತಂದಿದ್ದಾರೆ. ಭಾರೀ ಮಳೆಗೆ ತೀರ್ಥಹಳ್ಳಿಯಲ್ಲಿ ಮಾಲತಿ ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದ ನಾಬಳ ಸೇತುವೆ ಬಂದ್ ಆಗಿದೆ. ಅದೇ ಮಾರ್ಗದಲ್ಲಿ ಹೊನ್ನಾವರ ಮೂಲದ ಕುಟುಂಬವೊಂದು ಶೃಂಗೇರಿಗೆ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಏಕಾಏಕಿ ಕಾರಿಗೆ ನೀರು ತುಂಬಿ, ಸೇತುವೆ ಮೇಲೆ ನಿಂತಿದೆ. ಇದನ್ನು ಗಮನಿಸಿದ ಸ್ಥಳೀಯರಾದ ಪ್ರವೀಣ್, ಮಂಜುನಾಥ್ ಹಾಗೂ ಇನ್ನಿತರರು ಕೂಡಲೇ ಕಾರಿಗೆ ಹಗ್ಗಕಟ್ಟಿ ಎಳೆದು ಸುರಕ್ಷಿತ ಸ್ಥಳಕ್ಕೆ ತಂದಿದ್ದಾರೆ. ಕಾರಿನಲ್ಲಿದ್ದ ಬಾಲಕನೋರ್ವನನ್ನು ಸ್ಥಳೀಯರು ಹೊತ್ತು ತಂದಿದ್ದಾರೆ. ಸ್ಥಳೀಯರ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನಿಗೆ ವೀಡಿಯೊ ಕರೆ (Video Call) ಮಾಡಿ ಮಾತನಾಡುತ್ತಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಅಬುಸಾಲಿ ಇಸ್ಮಾಯಿಲ್ ಎಂಬವರ ಪುತ್ರ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಕೆಲವು ಸಮಯದಿಂದ ಬೆಳುವಾಯಿಯ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಎರಡು ವರ್ಷದ ಮಗುವಿನೊಂದಿಗೆ ವಾಸವಾಗಿದ್ದ ಅನ್ವರ್, ಮೀನಿನ ಟೆಂಪೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ದಿನಗಳಿಂದ ಕೆಲಸವಿಲ್ಲದೆ ಮನೆಯಲ್ಲಿದ್ದ ಇವರು ಕುಟುಂಬ ಕಲಹದಿಂದ ಬಳಲುತ್ತಿದ್ದರು. ಪತಿ-ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿದ್ದು, ಈ ಕುರಿತು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು ಎನ್ನಲಾಗಿದೆ. ಗುರುವಾರ ಮತ್ತೆ ದಂಪತಿ ನಡುವೆ ಜಗಳವಾಗಿದ್ದರಿಂದ ಪತ್ನಿ ತನ್ನ ಮಗುವಿನೊಂದಿಗೆ ತವರು ಮನೆಗೆ ತೆರಳಿದ್ದರು. ಇದರಿಂದ ಮನನೊಂದ ಅನ್ವರ್, ಅಕ್ಕನಿಗೆ ವೀಡಿಯೊ ಕರೆ ಮಾಡಿ ‘ಪತ್ನಿ ಕಡೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ…



