Author: admin

ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಭಕ್ತರನ್ನು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ ಹಾಗೂ ಸ್ಥಳೀಯ ಆಡಳಿತ ಸೂಚನೆ ನೀಡಿದೆ. ಸ್ನಾನಘಟ್ಟ ಬಳಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಪರ್ಯಾಯ ವ್ಯವಸ್ಥೆಯಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಿತ್ಯ ಸಾವಿರಾರು ಭಕ್ತರು ಯಾವುದೇ ತೊಂದರೆಯಾಗದಂತೆ ದೇವರ ದರ್ಶನ ಪಡೆಯುತ್ತಿದ್ದಾರೆ. ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ಪೊಲೀಸರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯ ನೀರಿನ ಮಟ್ಟದ ಮೇಲೆ ಆಡಳಿತ ನಿರಂತರ ನಿಗಾ ಇರಿಸಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಪರ್ಯಾಯ ಸ್ನಾನ ವ್ಯವಸ್ಥೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

Read More

ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ನೀಟ್ (NEET) ಪರೀಕ್ಷೆ ಅಕ್ರಮ ಖಂಡಿತ ಪ್ರತಿಭಟನೆಯ ವೇಳೆ ತಮ್ಮ ಹಾಗೂ ತಮ್ಮ ದಿವಂಗತ ತಾಯಿಯ ವಿರುದ್ಧ ಅಸಭ್ಯ ಮತ್ತು ನಿಂದನಾತ್ಮಕ ಪದ ಬಳಸಿದ್ದ ಯುವ ಪ್ರತಿಭಟನಾಕಾರರನ್ನು ಕರುಣೆಯಿಂದ ಕ್ಷಮಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಸೋಷಿಯಲ್ ಮೀಡಿಯಾದಲ್ಲಿ ವೈಯಕ್ತಿಕ ಭಾವನಾತ್ಮಕ ವೀಡಿಯೊ ಸಂದೇಶ ಹಂಚಿಕೊಂಡ ಪ್ರಧಾನಿ, “ನನ್ನ ವಿರುದ್ಧ ಮತ್ತು ನನ್ನ ತೀರಿಹೋದ ತಾಯಿಯ ವಿರುದ್ಧ ಅಸಭ್ಯ ಭಾಷೆ ಬಳಸಿದ್ದು ಸಾಂಸ್ಕೃತಿಕ ಆಘಾತ ತಂದಿದೆ. ಆದರೆ, ದಾರಿತಪ್ಪಿದ ಯುವಜನತೆಗೆ ಶಿಕ್ಷೆ ವಿಧಿಸುವುದು, ಕೋರ್ಟ್-ಕಚೇರಿ ಅಲೆದಾಡಿಸುವುದು ಪರಿಹಾರವಲ್ಲ. ನಾಲಿಗೆ ಹಲ್ಲಿಗೆ ಸಿಕ್ಕಿ ರಕ್ತ ಬಂದರೆ ನಾವು ಹಲ್ಲನ್ನು ಮುರಿಯುವುದಿಲ್ಲ; ಏಕೆಂದರೆ ನಾಲಿಗೆಯೂ ನಮ್ಮದೇ, ಹಲ್ಲೂ ನಮ್ಮದೇ. ಹಾಗೆಯೇ ಈ ಮಕ್ಕಳೂ ನಮ್ಮವರೇ. ಇವರನ್ನು ಆಲಂಗಿಸಿ ಸರಿದಾರಿಗೆ ತರುವುದು ನಮ್ಮ ಕರ್ತವ್ಯ,” ಎಂದಿದ್ದಾರೆ. ಯುವಜನರನ್ನು ದಾರಿತಪ್ಪುವುದರಿಂದ ದೂರವಿಟ್ಟು ರಾಷ್ಟ್ರ ನಿರ್ಮಾಣದತ್ತ ಕೊಂಡೊಯ್ಯುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿ, ಬಾಲ್ಯದಲ್ಲಿ…

Read More

ಮಂಗಳೂರು : ಮಂಗಳೂರು ನಗರದ ಪಣಂಬೂರು ಸಮೀಪದ ತೋಟ ಬೆಂಗ್ರೆ ಬೀಚ್‌ನಲ್ಲಿ 2018ರಲ್ಲಿ ನಡೆದಿದ್ದ ಭೀಕರ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜುಲೈ 30, 2026 ರಂದು ಮಹತ್ವದ ತೀರ್ಪು ನೀಡಿದ್ದು, ತಪ್ಪಿತಸ್ಥ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ ನವೆಂಬರ್ 18, 2018 ರಂದು ಯುವತಿಯೊಬ್ಬರು ತಮ್ಮ ಪುರುಷ ಸ್ನೇಹಿತನೊಂದಿಗೆ ತೋಟ ಬೆಂಗ್ರೆಗೆ ತೆರಳಿದ್ದರು. ಈ ವೇಳೆ ತೋಟ ಬೆಂಗ್ರೆ ನಿವಾಸಿಗಳು ಹಾಗೂ ವೃತ್ತಿಯಲ್ಲಿ ಮೀನುಗಾರರಾಗಿದ್ದ ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲಿಯನ್ (28) ಮತ್ತು ಅಬ್ದುಲ್ ರಿಯಾಜ್ (40) ಹಾಗೂ ಮೂವರು ಅಪ್ರಾಪ್ತರು ಯುವತಿಯ ಸ್ನೇಹಿತನ ಮೇಲೆ ಭೀಕರ ಹಲ್ಲೆ ನಡೆಸಿ, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೆ ಘಟನೆ ಕುರಿತು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ…

Read More

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ. ಹೆಚ್ಚು ಕೊಬ್ಬಿನಂಶ ಇರುವ ಆಹಾರಗಳ ಕುರಿತು ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದಾಗ ರಾಜ್ಯದ 134 ಶಾಲಾ-ಕಾಲೇಜುಗಳು ತಮ್ಮದೇ ಸ್ವಂತ ಕ್ಯಾಂಟಿನ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯಕರ ಜಂಕ್‌ಫುಡ್‌ಗಳನ್ನು ಮಾರಾಟ ಮಾಡುತ್ತಿರುವುದು ತಿಳಿದುಬಂದಿತ್ತು. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸರ್ಕಾರದ ಆದೇಶ ಮೀರಿಯೂ ಜಂಕ್‌ಫುಡ್ ಮಾರಾಟ ಮುಂದುವರಿಸಿದರೆ ಭಾರೀ ದಂಡ ವಿಧಿಸಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೊಸದಾಗಿ ವ್ಯಾಪಾರಿಗಳಿಗೆ ಮತ್ತು ಕ್ಯಾಂಟಿನ್‌ಗಳಿಗೆ ಲೈಸೆನ್ಸ್ ನೀಡುವಾಗಲೇ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟ ಮಾಡಬಾರದು ಎಂಬ ನಿಯಮವನ್ನು ಕಡ್ಡಾಯಗೊಳಿಸಲಾಗುವುದಾಗಿ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯಿಂದಲೇ ಈ ಸಂಬಂಧ ನೋಟಿಸ್ ನೀಡಲಾಗುವುದು. ಶಾಲೆಯ 50 ಮೀಟರ್ ಅಂತರದಲ್ಲಿ…

Read More

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಲಸೆ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಕೆಲ್ಲಂ ಪ್ರದೇಶದಲ್ಲಿ ಅಪರಿಚಿತ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಕಾರ್ಮಿಕ ಶುಕ್ರವಾರ ಮೃತಪಟ್ಟಿದ್ದರು. ಇದೀಗ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳುಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿಯ ವೇಳೆ ಕಾರ್ಮಿಕರು ಕೆಲ್ಲಂನಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಅಂಗಸಂಸ್ಥೆಯೆಂದು ಪರಿಗಣಿಸಲ್ಪಡುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಘಟನೆಯ ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು, ಉಗ್ರರ ಪತ್ತೆಗೆ ವ್ಯಾಪಕ ಶೋಧ ಆರಂಭಿಸಿವೆ.

Read More

ಬಂಟ್ವಾಳ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧರೊಬ್ಬರು ವ್ಯಾಪಕ ಶೋಧದ ಬಳಿಕ ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ಪ್ರದೇಶದ ಅಡಿಕೆ ತೋಟದೊಳಗಿನ ನೀರಿನ ಚರಂಡಿಯಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅಪಾಯದಿಂದ ಪಾರಾಗಿದ್ದಾರೆ. ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಅವರು ಮೂರು ದಿನಗಳ ಹಿಂದೆ ಕಾಣೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರು ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸಮೀಪದ ಕೆರೆ ಹಾಗೂ ಹೊಳೆಗಳಲ್ಲಿ ಅವರು ಬಿದ್ದಿರಬಹುದೆಂಬ ಅನುಮಾನದ ಮೇರೆಗೆ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ ಹಲವು ಗಂಟೆಗಳ ಕಾಲ ನಡೆದ ಶೋಧದಲ್ಲಿಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಕುಟುಂಬಸ್ಥರು, ಕೊಡಪದವು ಮಾರುತಿ ಫ್ರೆಂಡ್ಸ್ ತಂಡದ ಸದಸ್ಯರು ಹಾಗೂ ಸ್ಥಳೀಯರು ಶುಕ್ರವಾರ ಬೆಳಗ್ಗೆ ಮತ್ತೊಮ್ಮೆ ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಕುಕ್ಕಿಲದ ಅಡಿಕೆ ತೋಟದೊಳಗೆ ಹರಿಯುವ ನೀರಿನ ಚರಂಡಿಯಲ್ಲಿ ಗಿರಿಯಪ್ಪ…

Read More

ಬೆಂಗಳೂರು: ಕರ್ನಾಟಕದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ ದೇಶದ ಪ್ರಮುಖ ಕ್ರೂಸ್ ಸೇವಾ ಸಂಸ್ಥೆಗಳೊಂದಿಗೆ ಸಮಾಲೋಚನೆ ಆರಂಭಿಸಿದೆ. ಇದರ ಭಾಗವಾಗಿ, ಭಾರತದ ಪ್ರಮುಖ ಕ್ರೂಸ್ ಕಂಪನಿಗಳಲ್ಲೊಂದಾದ ವಾಟರ್‌ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸುವ ಸಾಧ್ಯತೆಯನ್ನು ಪರಿಶೀಲಿಸಲು ತಾತ್ವಿಕ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಐಎಎಸ್ ತಿಳಿಸಿದ್ದಾರೆ. ಇತ್ತೀಚೆಗೆ ಕಾರ್ಯದರ್ಶಿಗಳ ನೇತೃತ್ವದ ಹಿರಿಯ ಅಧಿಕಾರಿಗಳ ನಿಯೋಗವು ಮುಂಬೈನಲ್ಲಿ ಸಂಸ್ಥೆಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜುರ್ಗೆನ್ ಬೈಲೊಮ್ ಮತ್ತು ಸಹ ನಿರ್ದೇಶಕ ಭರತ್ ಆಚಾರ್ಯ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿತು. ಈ ಸಭೆಯಲ್ಲಿ ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ಅಗತ್ಯವಿರುವ ಮೂಲಸೌಕರ್ಯ, ಕಾರ್ಯಾಚರಣೆಯ ಅಗತ್ಯತೆಗಳು, ಮಾರುಕಟ್ಟೆ ಅವಕಾಶಗಳು ಹಾಗೂ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.…

Read More

ಮಂಗಳೂರು: ಅಪ್ರಾಪ್ತ ಬಾಲಕಿಯ ಪ್ರೀತಿಯ ಮನವೊಲಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಸ್ನಾನದ ವೀಡಿಯೊ ಸ್ಕ್ರೀನ್‌ಶಾಟ್ ತೆಗೆದು ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಕುಂಜತ್ತಬೈಲಿನ ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ (20) ಶಿಕ್ಷೆಗೆ ಗುರಿಯಾದ ಆರೋಪಿ. ಈತನ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 130/2025 ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿ ಸೋನು ಮ್ಯಾಕ್ಲಿನ್ 2024ರ ಫೆಬ್ರವರಿಯಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಮನವೊಲಿಸಿದ್ದ. ಬಳಿಕ 2024ರ ಸೆಪ್ಟೆಂಬರ್‌ನಲ್ಲಿ ಶಕ್ತಿನಗರದ ಬಾಡಿಗೆ ಮನೆಯಲ್ಲಿ ಹಾಗೂ 2024ರ ನವೆಂಬರ್‌ನಿಂದ 2025ರ ಜೂನ್‌ ಅವಧಿಯಲ್ಲಿ ಅಳಪೆ ಗ್ರಾಮದ ಕೆಂಬಾರು ಕೆಇಬಿ ಮುಂಭಾಗದ ಮನೆಯಲ್ಲಿ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ. ಅಲ್ಲದೆ, ಬಾಲಕಿ ಸ್ನಾನ ಮಾಡುತ್ತಿದ್ದಾಗ ವೀಡಿಯೊ ಕಾಲ್ ಮಾಡಿ, ನಗ್ನ ಚಿತ್ರಗಳ ಸ್ಕ್ರೀನ್‌ಶಾಟ್ ಸಂಗ್ರಹಿಸಿಟ್ಟುಕೊಂಡಿದ್ದ.…

Read More

ಶಬರಿಮಲೆ: ಮುಂಬರುವ ಮಂಡಲಂ ಮಹೋತ್ಸವದ ಸಂದರ್ಭದಲ್ಲಿ ಅರವಣ ಸೇರಿದಂತೆ ಪ್ರಸಾದಗಳ ತಯಾರಿಕೆಗೆ ಇನ್ನು ಮುಂದೆ ಹೊರಗಿನಿಂದ ತುಪ್ಪವನ್ನು ಖರೀದಿಸದಿರಲು ನಿರ್ಧರಿಸಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕೆ. ಜಯಕುಮಾರ್, “ಶಬರಿಮಲೆಗೆ ಆಗಮಿಸುವ ಭಕ್ತರು ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತುಪ್ಪವನ್ನು ಕಾಣಿಕೆಯಾಗಿ ತರುತ್ತಿದ್ದಾರೆ. ಹೀಗಾಗಿ ಭಕ್ತರು ನೀಡುವ ತುಪ್ಪವನ್ನಷ್ಟೇ ಪ್ರಸಾದ ತಯಾರಿಕೆಗೆ ಬಳಸಲು ಮಂಡಳಿ ತೀರ್ಮಾನಿಸಿದೆ. ಹೊರಗಿನಿಂದ ತುಪ್ಪ ಖರೀದಿ ಬಂದ್ ಮಾಡಲು ದೇವರೇ ನಮಗೆ ಈ ದಾರಿ ತೋರಿಸಿದ್ದಾನೆ,” ಎಂದು ಹೇಳಿದರು. ಶಬರಿಮಲೆಗೆ ಮಿಲ್ಮಾ ಸಂಸ್ಥೆಯಿಂದ ಸರಬರಾಜಾಗುತ್ತಿದ್ದ ತುಪ್ಪ ಪೂರೈಕೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಡೈರಿ ಅಭಿವೃದ್ಧಿ ಇಲಾಖೆಯ ತನಿಖೆಯಿಂದ ಬಯಲಾಗಿದೆ. ಸುಮಾರು 1.5 ಲಕ್ಷ ಲೀಟರ್‌ಗೂ ಹೆಚ್ಚು ಕಳಪೆ ಗುಣಮಟ್ಟದ ತುಪ್ಪ ದೇವಾಲಯಕ್ಕೆ ತಲುಪಿದ್ದು, ಇದರಿಂದ ಮಿಲ್ಮಾಗೆ ₹85 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಕ್ರೈಂ ಬ್ರಾಂಚ್ ತನಿಖೆ ನಡೆಸುವಂತೆ ದೇವಸ್ವಂ ಕಾರ್ಯದರ್ಶಿ ಸರ್ಕಾರಕ್ಕೆ ಶಿಫಾರಸು…

Read More

ಬೆಂಗಳೂರು: ಕರ್ನಾಟಕ ಸರ್ಕಾರ ಹೊರಡಿಸಿರುವ ವಿವಾದಾತ್ಮಕ ಕರಡು ಅಧಿಸೂಚನೆಯೊಂದು ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭೂ ಮಾಲೀಕರಲ್ಲಿ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಕುಟುಂಬದೊಳಗೆ ಪಿತ್ರಾರ್ಜಿತ ಆಸ್ತಿಯನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಸರ್ಕಾರಕ್ಕೂ ದೊಡ್ಡ ಪ್ರಮಾಣದ ಭೂಮಿ ಪಾಲು ನೀಡುವ ಪ್ರಸ್ತಾವನೆ ಈ ಕರಡಿನಲ್ಲಿ ಇರುವುದರಿಂದ, ಆಸ್ತಿ ಹಕ್ಕು ಮತ್ತು ಖಾಸಗಿ ಆಸ್ತಿಯಲ್ಲಿ ಸರ್ಕಾರದ ಹಸ್ತಕ್ಷೇಪದ ಕುರಿತು ಪ್ರಶ್ನೆಗಳು ಎದ್ದಿವೆ. ಜೂನ್ 4ರಂದು ಹೊರಡಿಸಲಾಗಿರುವ ಈ ಕರಡು ಅಧಿಸೂಚನೆಯಲ್ಲಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಅಧ್ಯಾಯ 6ರ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಅದರ ಪ್ರಕಾರ, 2,000 ಚದರ ಮೀಟರ್‌ಗಿಂತ ಹೆಚ್ಚಿನ ವಿಸ್ತೀರ್ಣದ ಪಿತ್ರಾರ್ಜಿತ ಆಸ್ತಿಯನ್ನು ಕಾನೂನುಬದ್ಧ ವಾರಸುದಾರರ ನಡುವೆ ಹಂಚಿಕೆ ಮಾಡುವ ಸಂದರ್ಭದಲ್ಲಿ ಸರ್ಕಾರಕ್ಕೆ ಶೇ.45ರಷ್ಟು ಭೂಮಿಯ ಹಕ್ಕು ನೀಡುವ ಪ್ರಸ್ತಾವನೆ ಮಾಡಲಾಗಿದೆ. ಸರಳವಾಗಿ ಹೇಳುವುದಾದರೆ, ತಂದೆ ಅಥವಾ ಅಜ್ಜನ ಆಸ್ತಿಯನ್ನು ಮಕ್ಕಳು ಅಥವಾ ಇತರ ವಾರಸುದಾರರ ನಡುವೆ ಹಂಚುವಾಗ, ಅದರ ದೊಡ್ಡ ಭಾಗವನ್ನು ಮೊದಲು ಸರ್ಕಾರಕ್ಕೆ ಬಿಟ್ಟುಕೊಡಬೇಕಾಗುತ್ತದೆ. ಈ…

Read More