Author: admin

ಮಂಗಳೂರು: ವೃದ್ಧರೊಬ್ಬರಿಗೆ ಅಪರಿಚಿತ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ರಾ.ಹೆ. 66ರ ಅಂಬಿಕಾರೋಡ್ ಎಂಬಲ್ಲಿ ನಡೆದಿದ್ದು, ಈ ಘಟನೆಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂಬಿಕಾರೋಡ್ ಬಳಿಯ ಸತ್ಯನಾರಾಯಣ ಕಂಪೌಂಡ್ ನಿವಾಸಿ ದಾಮೋದರ ಪೂಜಾರಿ (72) ಮೃತಪಟ್ಟವರು. ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿಯಲ್ಲಿರುವ ಕೊರಗಜ್ಜನ ಕಟ್ಟೆಯ ಚಾಕರಿ (ಸೇವೆ) ಕಾರ್ಯ ಮಾಡುತ್ತಿದ್ದ ದಾಮೋದರ ಅವರು, ಮಂಗಳವಾರ ರಾತ್ರಿ 7 ಗಂಟೆಗೆ ಕೊರಗಜ್ಜನ ಸಾನಿಧ್ಯದಲ್ಲಿ ದೀಪ ಬೆಳಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಅವರು ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಅವರ ಎರಡು ಕಾಲುಗಳು ಮುರಿತಕ್ಕೊಳಗಾಗಿದ್ದವು. ಕೂಡಲೇ ಸ್ಥಳೀಯರು ದಾಮೋದರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…

Read More

ನವದೆಹಲಿ: ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ‘ಸಂಸದ್ ಚಲೋ’ ಮೆರವಣಿಗೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಆಕ್ಷೇಪಾರ್ಹ ಪೋಸ್ಟ್‌ಗಳು, ನಿಂದನೀಯ ಕಾಮೆಂಟ್‌ಗಳು ಮತ್ತು ಡೀಪ್‌ಫೇಕ್ ವಿಡಿಯೊಗಳ ವಿರುದ್ಧ ದೆಹಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಜುಲೈ 20ರಂದು ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಹಲವು ಸಾಮಾಜಿಕ ಜಾಲತಾಣ ಖಾತೆಗಳಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳ ಸಾಮಾಜಿಕ ಜಾಲತಾಣ ಖಾತೆಗಳ ಮಾಹಿತಿ ಹಾಗೂ ನಿಂದನೀಯ ಪೋಸ್ಟ್‌ಗಳನ್ನು ಪ್ರಕಟಿಸಿದ ಬಳಕೆದಾರರ ವಿವರಗಳನ್ನು ಒದಗಿಸುವಂತೆ ‘ಎಕ್ಸ್’ ವೇದಿಕೆಗೆ ಸೂಚಿಸಲಾಗಿದೆ. ದೆಹಲಿ ಪೊಲೀಸ್ ಸೈಬರ್ ಕ್ರೈಮ್ ವಿಭಾಗವು ಪ್ರಧಾನಿ ವಿರುದ್ಧದ ಆಕ್ಷೇಪಾರ್ಹ ಕಾಮೆಂಟ್‌ಗಳು, ವಿಡಿಯೊಗಳು ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕುವಂತೆ ವಿವಿಧ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ, ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ…

Read More

ಮಂಗಳೂರು: ಬಂಟ್ವಾಳದ ವೃದ್ಧೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜು. 28ರಂದು ಆದೇಶ ಹೊರಡಿಸಿರುತ್ತದೆ. ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಹಾಗೂ ಚರಣ್ ಕುಮಾರ್ (31) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು. ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ಧೆ ಬೆನಡಿಕ್ಟ್ ಕಾರ್ಲೋ (73) ಎಂಬುವವರನ್ನ ಆರೋಪಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ ನೋಡಿಕೊಳ್ಳುತ್ತಿದ್ದಳು. ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಸತೀಶ ನಾಯಕ್ ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಾಳೆ. ಆದರೆ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಚರಣ್ ಕುಮಾರ್ ಎಂಬಾತನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಲಾಗಿರುತ್ತದೆ. ವೃದ್ಧೆಯ ಕೊಲೆ ಮಾಡಿದ ಬಳಿಕ ಆರೋಪಿಗಳು ಆಕೆಯ ಬಳಿಯಿದ್ದ ಒಟ್ಟು 61.070ಗ್ರಾಂ ತೂಕದ (ಅಂದಿನ…

Read More

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗದ ಕೊರತೆಯಿಂದ ಯುವಕರ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಶಿಕ್ಷಕ ಅಭ್ಯರ್ಥಿಗಳು ಸರ್ಕಾರದ ಮುಂದೆ ವಿಭಿನ್ನ ರೀತಿಯ ಮನವಿಯೊಂದನ್ನು ಸಲ್ಲಿಸಿದ್ದಾರೆ. “ಉದ್ಯೋಗ ಸಿಗುತ್ತಿಲ್ಲ, ಕೆಲಸ ಇಲ್ಲದ ಕಾರಣ ಮದುವೆಯೂ ಆಗುತ್ತಿಲ್ಲ. ಹೀಗಾಗಿ ಕನ್ಯಾ ಭಾಗ್ಯವನ್ನಾದರೂ ನೀಡಿ” ಎಂದು ಸರ್ಕಾರದ ಗಮನ ಸೆಳೆಯುವ ಮೂಲಕ ತಮ್ಮ ಅಳಲು ಹೊರಹಾಕಿದ್ದಾರೆ.ಡಿ.ಎಡ್. (D.Ed.) ಪೂರ್ಣಗೊಳಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಭ್ಯರ್ಥಿಗಳು, ಶಿಕ್ಷಕರ ನೇಮಕಾತಿಯಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಸುಮಾರು 32 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ, ಶಿಕ್ಷಣ ಇಲಾಖೆ ಕೇವಲ 800 ಹುದ್ದೆಗಳ ನೇಮಕಾತಿಗೆ ಮಾತ್ರ ಅಧಿಸೂಚನೆ ಹೊರಡಿಸಿರುವುದಾಗಿ ಅಭ್ಯರ್ಥಿಗಳು ಆರೋಪಿಸಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 800 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವುದರಿಂದ, ಉಳಿದ ಅಭ್ಯರ್ಥಿಗಳ ಭವಿಷ್ಯ ಏನಾಗಲಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ತಮ್ಮ ವಯಸ್ಸು ಮೀರಿಬರುತ್ತಿದ್ದು, ಉದ್ಯೋಗವಿಲ್ಲದ ಕಾರಣ ಮದುವೆಯೂ…

Read More

ಕಾಸರಗೋಡು: ಜಿಲ್ಲೆಯಲ್ಲಿ ಎಚ್1ಎನ್‌1 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಅಜನೂರು ಮಾಣಿಕೊಟ್ಟೆಯ ನಿವಾಸಿ ಯಶೋದಾ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಅವರಿಗೆ ತೀವ್ರ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ, ಎಚ್1ಎನ್‌1 ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಯಶೋದಾ ಮೃತಪಟ್ಟಿದ್ದಾರೆ. ಈ ನಡುವೆ, ಯಶೋದಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು ಏಳು ಮಂದಿಯಲ್ಲಿ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಂಡುಬಂದಿವೆ. ಆರೋಗ್ಯ ಇಲಾಖೆ ತಕ್ಷಣವೇ ಅವರ ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಿ, ಸೋಂಕು ದೃಢಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಿದೆ. ಘಟನೆಯ…

Read More

ಬೆಂಗಳೂರು: ಖಾಸಗಿ ಕಾಲೇಜಿಗೆ ನುಗ್ಗಿದ ತಂದೆಯೊಬ್ಬರು ತಮ್ಮ ಮಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ರಾಜಾನುಕುಂಟೆಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ದುರ್ಗ ಚಾಕು ಇರಿತಕ್ಕೊಳಗಾದ ಯುವತಿ. ಆಕೆಯ ತಂದೆ ನಾಗೇಂದ್ರ ಚಾಕು ಇರಿದ ಆರೋಪಿಯಾಗಿದ್ದಾನೆ. ಜು.25ರ ಮಧ್ಯಾಹ್ನ 3:00 ಗಂಟೆ ವೇಳೆಗೆ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲೇ ಕೃತ್ಯ ನಡೆದಿದೆ. ಆರೋಪಿ ಕಾಲೇಜಿಗೆ ಬಂದು ಮಗಳನ್ನು ನೋಡಬೇಕು ಎಂದಿದ್ದ. ಬಳಿಕ ಕ್ಯಾಬಿನ್‌ಗೆ ನುಗ್ಗಿ ಮಗಳ ಹೊಟ್ಟೆ, ಎದೆ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಗಂಗಮ್ಮನ ಗುಡಿ ಸರ್ಕಲ್ ಬಳಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್‌ ಹತ್ತಿದ್ದರು. ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ. ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ ಕರೆಸಿಕೊಂಡಿದ್ದಳು. ಬಸ್‌ ಅಲ್ಲಿಗೆ ಬರುತ್ತಿದ್ದಂತೆ ಯುವಕರ ಗುಂಪು ಹಲ್ಲೆ ನಡೆಸಿದೆ. ನಾನು ಪೊಲೀಸ್ ಪೊಲೀಸ್ ಎಂದರೂ ಬಿಡದೆ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮುಖ ಹಾಗೂ ಮೈಮೇಲೆ ಗಾಯಗಳಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆ ಹಾಗೂ ಪೊಲೀಸ್‌ ಪೇದೆಯಿ ಇಬ್ಬರೂ ದೂರು – ಪ್ರತಿದೂರು ದಾಖಲಿಸಿದ್ದಾರೆ.

Read More

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಎಂದು ಗುರುತಿಸಲಾಗಿದೆ. ರಾಜವರ್ಮ ಜೈನ್ ಅವರು ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಕಂಪನಿಯ ವಾಹನವನ್ನು ಸಹೋದ್ಯೋಗಿಯೊಬ್ಬರು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ರಾಜವರ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Read More

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಮೈರಕಟ್ಟೆ ಎಂಬಲ್ಲಿ ಜುಲೈ 28ರಂದು ಸಂಭವಿಸಿದೆ. ಮೂಲತಃ ಫರಂಗಿಪೇಟೆ ನಿವಾಸಿಗಳಾದ ಕಾರು ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ 4 ವರ್ಷದ ಪುಟ್ಟ ಮಗು ಮಹಮ್ಮದ್ ಇಲ್ಹಾನ್ ಗಾಯಗೊಂಡ ಪ್ರಯಾಣಿಕರು. ಫರಂಗಿಪೇಟೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಪೆರ್ನೆಯ ಮೈರಕಟ್ಟೆ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಗೆ ಕಾರು ಹಿಂಬದಿಯಿಂದ ಬಂದು ಭೀಕರವಾಗಿ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಒಳಗಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More

ಕೋಝಿಕೋಡ್ : ಕೇರಳದ ಕೋಝಿಕೋಡ್ ಗ್ರಾಮೀಣ ಪೊಲೀಸರ ವಿಶೇಷ ತನಿಖಾ ತಂಡ (SIT) ನಡೆಸುತ್ತಿರುವ ಎಂಡಿಎಂಎ (MDMA) ಮಾದಕ ದ್ರವ್ಯ ಜಾಲದ ತನಿಖೆಯಲ್ಲಿ ಮತ್ತೊಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದ್ದು, ಪೆರಂಬ್ರಾ ಬಿಆರ್‌ಸಿಯ ಮೂರನೇ ವಿಶೇಷ ಶಿಕ್ಷಕಿ ವಿ.ಪಿ. ನೀಶ್ಮಾ (30) ಮಂಗಳವಾರ ಬಂಧನಕ್ಕೊಳಗಾಗಿದ್ದಾರೆ. ಆಟಿಸಂ ಕೇಂದ್ರದ ವಿಶೇಷ ಶಿಕ್ಷಕಿ ಅವಲಾ ಕುಟ್ಟೋತ್ ಮೂಲದ ವಿ.ಪಿ. ನೀಶ್ಮಾ ಬಂಧನದೊಂದಿಗೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಶಿಕ್ಷಕಿಯರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ಹಿಂದೆ ದೈಹಿಕ ಶಿಕ್ಷಣ ಶಿಕ್ಷಕಿ ಕೀರ್ತನಾ ಹಾಗೂ ಕಾವ್ಯಾ ಎಂಬವರನ್ನು ಬಂಧಿಸಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಈ ಮೂವರೂ ಶಿಕ್ಷಕಿಯರು ನಿರಂತರವಾಗಿ ಮಾದಕ ದ್ರವ್ಯ (MDMA) ಸೇವನೆ ಮಾಡುತ್ತಿದ್ದುದಲ್ಲದೆ, ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಗ್ರಾಹಕರನ್ನು ಸೆಳೆದು ಹೈಟೆಕ್ ದಂಧೆ ನಡೆಸುತ್ತಿದ್ದರು ಎಂದು ವಟಕರ ಇನ್ಸ್‌ಪೆಕ್ಟರ್ ಎ.ವಿ. ದಿನೇಶ್ ದೃಢಪಡಿಸಿದ್ದಾರೆ. ಮಾದಕ ದ್ರವ್ಯದ ಜಾಲದ ಕೊಂಡಿ ಗಲ್ಫ್ ದೇಶದ ಸಂಖ್ಯೆಗೆ ಲಿಂಕ್ ಆಗಿದ್ದು, ಗಲ್ಫ್ ಸಂಖ್ಯೆಯ ಮೂಲಕ ವಾಟ್ಸಾಪ್/ಸಂದೇಶ ಕಳುಹಿಸಿ ಬುಕಿಂಗ್ ಮಾಡಲಾಗುತ್ತಿತ್ತು. ಹಣ…

Read More