Author: admin

ನವದೆಹಲಿ: ಮುಖ್ಯಮಂತ್ರಿಗಳು ದೆಹಲಿಗೆ ಬಂದು ನೀಟ್ ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಆದರೆ ಕೆಪಿಎಸ್‌ಸಿ ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣುತ್ತಿಲ್ಲವೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ. ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದ ಅವರು, “10 ದಿನಗಳ ಹಿಂದೆ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತು ಮಾಡಲಾಗಿದೆ. ತಮ್ಮ ಮಕ್ಕಳಿಗೆ ನಕಲಿ ದಾಖಲೆಗಳನ್ನು ಮಾಡಿಸಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ವೆಟರ್ನರಿ ಕಾಲೇಜಿನಲ್ಲಿ ಒಂದೊಂದು ಸೀಟಿಗೆ ೮೦ ಲಕ್ಷ ರೂ. ವಸೂಲಿ ಮಾಡಿದ ಹಗರಣವೂ ನಡೆದಿದೆ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಯ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಈ ಎಲ್ಲ ವಿಚಾರಗಳ ಬಗ್ಗೆ ಸಿಎಂ ಉತ್ತರ ನೀಡಬೇಕು” ಎಂದು ಕೇಳಿದ್ದಾರೆ. “ದೇಶದ ಯುವಕರು ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ನೋಡುತ್ತಿಲ್ಲ. ಅವರಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆ…

Read More

ಮಂಗಳೂರು: ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು. ನಗರದ ಕೊಟೆಕಾರ್ ಬೀರಿ ಹಾಗೂ ಕೊಣಾಜೆ ಬಂಟ್ಸ್ ಭವನ ಸಮೀಪ ಈ ವಿಶೇಷ ಕಾರ್ಯಾಚರಣೆ ನಡೆಯಿತು. ದಕ್ಷಿಣ ಹಾಗೂ ಕೇಂದ್ರ ಉಪವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಂಜೆ 4.30ರಿಂದ 6.00 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಖಾಸಗಿ ಹಾಗೂ ಕಾಲೇಜು ಬಸ್‌ಗಳನ್ನು ತಡೆದು, ವಿದ್ಯಾರ್ಥಿಗಳಿಗೆ ಮಲ್ಟಿ-ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ಪರೀಕ್ಷೆ ನಡೆಸಲಾಯಿತು. ಕೊಟೆಕಾರ್ ಬೀರಿ ಪ್ರದೇಶದಲ್ಲಿ ಎಸ್‌ಡಿಎಂ ಕಾಲೇಜು, ನಿಟ್ಟೆ ಕೆ.ಎಸ್. ಹೆಗ್ಡೆ, ಸೇಂಟ್ ಅಲೋಶಿಯಸ್, ಪಿ.ಎ. ಕಾಲೇಜು, ಬಿಯರೀಸ್ ಇನ್‌ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಹಾಗೂ ಕೆನರಾ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ 72 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಇವರಲ್ಲಿ 71 ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದ್ದು, ಒಬ್ಬ ವಿದ್ಯಾರ್ಥಿ…

Read More

ಬೆಂಗಳೂರು: ಐಷಾರಾಮಿ ಕಾರುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಣಿ ವಂಚನೆ ಎಸಗುತ್ತಿದ್ದ ಭಾರಿ ಜಾಲವನ್ನು ಆಡುಗೋಡಿ ಠಾಣೆ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಖತರ್ನಾಕ್ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 1.74 ಕೋಟಿ ರೂಪಾಯಿ ಮೌಲ್ಯದ 7 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಭಾಕರ್, ಪ್ರಶಾಂತ್, ವೇಣುಗೌಡ ಹಾಗೂ ಭಾಗೇಶ್ ಬಂಧಿತ ಆರೋಪಿಗಳು. ಇವರಿಂದ 2 ಫಾರ್ಚೂನರ್, 1 ವೋಲ್ವೋ, 1 ಇನ್ನೋವಾ, ಫೋರ್ಡ್ ಹಾಗೂ ಸ್ವಿಫ್ಟ್ ಸೇರಿದಂತೆ ಒಟ್ಟು 7 ಕಾರುಗಳನ್ನು ಜಪ್ತಿ ಮಾಡಲಾಗಿದೆ. ವಂಚನೆಯ ಜಾಲ ಹೇಗಿತ್ತು? ಬಂಧಿತ ಆರೋಪಿಗಳು ಕಾರು ಬ್ರೋಕರ್ ಕೆಲಸದ ನೆಪದಲ್ಲಿ ವಂಚನೆಗೆ ಇಳಿಯುತ್ತಿದ್ದರು. 40 ರಿಂದ 50 ಲಕ್ಷ ರೂಪಾಯಿ ಮೌಲ್ಯದ ಕಾರುಗಳನ್ನು ಅಡವಿಟ್ಟು 4-5 ಲಕ್ಷ ರೂಪಾಯಿ ಸಾಲ ಪಡೆಯುವ ಆಟೋಮೊಬೈಲ್ ಮಾಲೀಕರನ್ನು ಈ ಜಾಲ ಟಾರ್ಗೆಟ್ ಮಾಡುತ್ತಿತ್ತು. ಮಾಲೀಕರು ಕಾರು ಅಡಮಾನವಿಟ್ಟ ತಕ್ಷಣ, ಆ ಕಾರುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಅಥವಾ ಒರಿಜಿನಲ್ ಆರ್‌ಸಿ (RC) ಕಾರ್ಡ್ ಟ್ಯಾಂಪರ್ ಮಾಡಿ…

Read More

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ಜಲ ವಿವಾದ ಮತ್ತೆ ಸಂಘರ್ಷದ ರೂಪ ಪಡೆದಿದೆ. ರಾಜ್ಯದಲ್ಲಿ ತೀವ್ರ ಬರ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚಿಸಿದೆ. ಮತ್ತೊಂದೆಡೆ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ವಿಜಯ್​​ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೂ ಮೊದಲೇ ತೀರ್ಮಾನಿಸಿದ್ದಂತೆ ಆಗಸ್ಟ್​​ 3ರ ಸಂಧಾನ ಸಭೆಗೆ ಕರ್ನಾಟಕ ಸಿದ್ಧತೆ ನಡೆಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದು, ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಪ್ರಸ್ತಾವನೆ ಸೇರಿ ಮತ್ತಿತರ ನದಿ ನೀರು ಹಂಚಿಕೆ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ತಮಿಳುನಾಡು ಸಿಎಂಜೊತೆ ಕೆಲ ಸಚಿವರುಗಳು ಸಹ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ ಎನ್ನಲಾಗಿರುವ ಕಾರಣಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.…

Read More

ಗ್ಲಾಸ್ಗೋ: 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಪ್ಯಾರಾ ಅಥ್ಲಿಟ್ ಶರ್ಮಿಳಾ ಧಂಕರ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಗ್ಲ್ಯಾಸ್ಗೋದಲ್ಲಿ ಮಂಗಳವಾರ ನಡೆದ ಮಹಿಳೆಯರ ಶಾಟ್‌ಪುಟ್ ಎಫ್57 ವಿಭಾಗದಲ್ಲಿ ಶರ್ಮಿಳಾ ಉತ್ತಮ ಪ್ರದರ್ಶನ ನೀಡಿದ್ದಾರೆ. ಫೈನಲ್ ಪಂದ್ಯದಲ್ಲಿ ಶರ್ಮಿಳಾ ಅವರು 9.81 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಚಿನ್ನದ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಪರ ಕಾಮನ್‌ವೆಲ್ತ್ ಇತಿಹಾಸದಲ್ಲೇ ಚಿನ್ನದ ಪದಕ ಗೆದ್ದ ಮೊದಲ ಪ್ಯಾರಾ ಅಥ್ಲಿಟ್ ಎಂಬ ಹೆಗ್ಗಳಿಕೆಗೆ ಶರ್ಮಿಳಾ ಅವರು ಪಾತ್ರರಾಗಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಕನ್ನಡತಿ ಕೆ. ಶಿಲ್ಪಾ ಅವರು 7.26 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಗೆಲುವಿನೊಂದಿಗೆ ಭಾರತಕ್ಕೆ 2 ಚಿನ್ನ, 5 ಬೆಳ್ಳಿ ಮತ್ತು 3 ಕಂಚಿನ ಪದಕ ಬಂದಿದ್ದು, ಒಟ್ಟು ಪದಕಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

Read More

ಬೆಂಗಳೂರು: ಎಸ್‌ಐಆರ್ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಎಸ್‌ಐಆರ್ ಅವಧಿ ವಿಸ್ತರಿಸುವಂತೆ ದೇವನೂರು ಮಹದೇವ್ ಮತ್ತು ರಾಮಚಂದ್ರಗುಹಾ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯಪೀಠ, ಅವಧಿ ವಿಸ್ತರಣೆ ಮಾಡುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ಅವಧಿ ವಿಸ್ತರಿಸುವುದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದೆ. ಆಯೋಗದಲ್ಲಿ ತಜ್ಞರ ತಂಡ ಕೆಲಸ ಮಾಡುತ್ತಿದೆ. ಪರಿಹಾರ ಕ್ರಮಗಳನ್ನೂ ಆಯೋಗವೇ ಕೈಗೊಳ್ಳಬೇಕು. ಅಗತ್ಯವಿದ್ದರೆ ಅವರು ಅದನ್ನು ಮಾಡಲಿದ್ದಾರೆ. ಆಯೋಗ ನಿಮ್ಮ ಕೋರಿಕೆಗೆ ನಿರಾಕರಿಸಿದರೆ ನೀವು ಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸುವಂತೆ ಪೀಠ ಸೂಚಿಸಿದೆ.

Read More

ಒಟ್ಟಾವೋ: ಕೆನಡಾದ ಟೊರೊಂಟೊದಲ್ಲಿ 26 ವರ್ಷದ ಭಾರತೀಯ ಮೂಲದ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ನವನೀತ್‌ ಕೌರ್‌ ಹತ್ಯೆಯಾದ ಯುವತಿ. ಹಂಬರ್‌ವುಡ್ ಬೌಲೆವಾರ್ಡ್ ಮತ್ತು ರೆಕ್ಸ್‌ಡೇಲ್ ಬೌಲೆವಾರ್ಡ್ ಬಳಿ ಗುಂಡಿನ ದಾಳಿಗೆ ಒಳಗಾಗಿ ಯುವತಿ ಮೃತಪಟ್ಟಿದ್ದಾಳೆ. ಕೌರ್ ಹತ್ಯೆಗೆ ಸಂಬಂಧಿಸಿದಂತೆ ಟೊರೊಂಟೊ ಪೊಲೀಸರು ಬ್ರಾಂಪ್ಟನ್‌ನ 37 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶರಣಜಿತ್ ಸಿಂಗ್ ಎಂದು ಗುರುತಿಸಲಾದ ಶಂಕಿತನ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸಿದ್ದ. ಈ ವೇಳೆ ಆತ ಯುವತಿಯನ್ನು ಮಾತನಾಡಿಸಿದ್ದಾನೆ. ಇಬ್ಬರ ನಡುವೆ ಒಂದಷ್ಟು ಹೊತ್ತು ಮಾತುಕತೆ ನಡೆಯಿತು. ಈ ವೇಳೆ ಯುವತಿಗೆ ಆರೋಪಿ ಶೂಟ್‌ ಮಾಡಿ ಪರಾರಿಯಾದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾರಕ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಶಂಕಿತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಮಾಹಿತಿ ಇರುವ ಯಾರಾದರೂ ಪೊಲೀಸರನ್ನು ಅಥವಾ ಕ್ರೈಮ್ ಸ್ಟಾಪರ್ಸ್ ಅನ್ನು ಸಂಪರ್ಕಿಸುವಂತೆ ಪೊಲೀಸರು ಒತ್ತಾಯಿಸಿದ್ದಾರೆ.

Read More

ಕಚಾರ್: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಮೆಟಲ್ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಖಾನೆಯಲ್ಲಿ ಉತ್ಪಾದನಾ ಕಾರ್ಯ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕರಗಿದ ಬಿಸಿ ಲೋಹ ಸುತ್ತಮುತ್ತ ಚಿಮ್ಮಿ ಹತ್ತಿರದಲ್ಲಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಕಾರ್ಖಾನೆಯ ಮಾಲೀಕನನ್ನು ಗುವಾಹಟಿಯಲ್ಲಿ ಬಂಧಿಸಲಾಗಿದ್ದು, ನಿರ್ದೇಶಕ ಮಂಡಳಿಯ ನಾಲ್ವರು ಸದಸ್ಯರನ್ನು ಕಚಾರ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಬಂಧಿತ ಐವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ನಿರ್ಲಕ್ಷ್ಯ ಹಾಗೂ ಸುರಕ್ಷತಾ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಳಿಕ ಕಾರ್ಖಾನೆಯ ಎದುರು ಸ್ಥಳೀಯ ನಿವಾಸಿಗಳು ಹಾಗೂ ಕಾರ್ಮಿಕರು…

Read More

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, ಯುರೋಪ್ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

Read More

ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರವನ್ನು ನಾಶಪಡಿಸುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಖಜಾನೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಇಂತಹ ಅಕ್ರಮಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ (Zero Tolerance)’ ನೀತಿಯನ್ನು ಅನುಸರಿಸಲಾಗುತ್ತಿದ್ದು, ರಾಜ್ಯಾದ್ಯಂತ ಈ ಕಟ್ಟುನಿಟ್ಟಿನ ನಿಯಮಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲು ಸೂಚಿಸಲಾಗಿದೆ. ಪ್ರಿಯಾಂಕ್ ಖರ್ಗೆ ಹೇಳಿದ್ದೇನು? “ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧವಾಗಿದೆ. ಸರ್ಕಾರ ಯಾವುದೇ ಅಕ್ರಮ…

Read More