Author: admin
ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆಗೈದು, ಆಕೆ ಪ್ರಾಣಕ್ಕಾಗಿ ಹೋರಾಡುತ್ತಿದ್ದ ದೃಶ್ಯವನ್ನು ಅತ್ತೆ-ಮಾವನಿಗೆ ವಿಡಿಯೋ ಕಾಲ್ ಮೂಲಕ ತೋರಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪತಿ ಪ್ರವೀಣ್ ಜಿಗಳೂರು ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತ ಮಹಿಳೆಯನ್ನು ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪತ್ನಿಯ ಮೇಲೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಪತಿ ಪ್ರವೀಣ್ ಜಿಗಳೂರು ಆಕೆಯೊಂದಿಗೆ ಜಗಳವಾಡಿ, ಬಳಿಕ ಕಟ್ಟಿಗೆಯಿಂದ ಹಲ್ಲೆ ನಡೆಸಿ ನೇಣು ಬಿಗಿದು ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಇದಾದ ಬಳಿಕ, ಪತ್ನಿ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಆಕೆಯ ತಂದೆ-ತಾಯಿಗೆ ವಿಡಿಯೋ ಕಾಲ್ ಮೂಲಕ ತೋರಿಸಿದ್ದಲ್ಲದೆ, ಆ ಘಟನೆಯನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೊ ರೂಪದಲ್ಲೂ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತನಿಖೆ ವೇಳೆ, ಮೃತಳು ಎರಡು ತಿಂಗಳ ಹಿಂದೆ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ತವರು ಮನೆ ಮಹಾಲಿಂಗಪುರಕ್ಕೆ ತೆರಳಿದ್ದಳು…
ಕಾರ್ಕಳ : ಬರೋಬ್ಬರಿ 36 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣದ ವಾರಂಟ್ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾರ್ಕಳ ಕಸಬಾ ಗ್ರಾಮದ ರಾಮಸಮುದ್ರ ನಿವಾಸಿ ಪೀಟರ್ ಆಗಸ್ಟಿನ್ ಮಾರ್ಟೀಸ್ (60) ಬಂಧಿತ ಆರೋಪಿ. ಈತನ ವಿರುದ್ಧ 1989ರಲ್ಲಿ ಕಾರ್ಕಳ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/1989 ರಂತೆ ಐಪಿಸಿ ಕಲಂ 143, 147, 148, 447, 448, 323, 326 ಜೊತೆಗೆ 149 ರಡಿಯಲ್ಲಿ ಗಲಭೆ, ಅಕ್ರಮ ಪ್ರವೇಶ ಹಾಗೂ ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ ಗಂಭೀರ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದಂದಿನಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಕಾರ್ಕಳದ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ LPC 14/2004 ವಾರಂಟ್ ಜಾರಿಯಲ್ಲಿತ್ತು. ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಕಾರ್ಕಳ ವೃತ್ತ ನಿರೀಕ್ಷಕರು ಹಾಗೂ ಉಡುಪಿ ಮಹಿಳಾ ಠಾಣೆ ಪೊಲೀಸ್…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪವಿತ್ರ ಅಮರನಾಥ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಮನೆಗೆ ಉರುಳಿದ ಪರಿಣಾಮ 39 ಯಾತ್ರಿಕರು ಗಾಯಗೊಂಡಿದ್ದಾರೆ.ಪವಿತ್ರ ಅಮರನಾಥ ಗುಹಾ ದೇವಾಲಯದಲ್ಲಿ ಬಾಬಾ ಬರ್ಫಾನಿ ದರ್ಶನ ಪಡೆದು ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಬಸ್, ಹರಿಗನ್ವಾನ್ ಬಳಿಯ ತೀಕ್ಷ್ಣವಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಖಾಲಿ ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ ಹತ್ತಿರದಲ್ಲೇ ಹರಿಯುತ್ತಿದ್ದ ಸಿಂಧ್ ನದಿಗೆ ಬೀಳುವುದರಿಂದ ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ಭಾರಿ ಪ್ರಾಣಾಪಾಯ ಹಾಗೂ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಅಪಘಾತದ ಸಮಯದಲ್ಲಿ ಮನೆಯೊಳಗೆ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನೆ ತಿಳಿದ ತಕ್ಷಣವೇ ಸ್ಥಳೀಯ ನಿವಾಸಿಗಳು, ಜಮ್ಮು-ಕಾಶ್ಮೀರ ಪೊಲೀಸರು, ಐಟಿಬಿಪಿ , ಸಿಆರ್‌ಪಿಎಫ್ ಹಾಗೂ ಭಾರತೀಯ ಸೇನೆಯ ಪಡೆಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳು ಹಾಗೂ ‘ಸ್ಕಿಮ್ಸ್’…
ಮಂಗಳೂರು: ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಚೇರಿಯಲ್ಲಿ ಗ್ರೂಪ್ ‘ಡಿ’ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಪಿಎಂಸಿ ಕಾರ್ಯದರ್ಶಿ ಸಿ.ಹೆಚ್. ಮೋಹನ್ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ನೇತೃತ್ವದ ಮಹಿಳಾ ತಂಡ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಕಳೆದ ಎರಡೂವರೆ ವರ್ಷಗಳಿಂದ ₹15,000 ವೇತನಕ್ಕೆ ದುಡಿಯುತ್ತಿರುವ ಇಬ್ಬರು ಮಕ್ಕಳ ತಾಯಿಯಾಗಿರುವ ಸಂತ್ರಸ್ತೆಗೆ, ತನ್ನ ಲೈಂಗಿಕ ಬೇಡಿಕೆಗೆ ಒಪ್ಪಿದರೆ ವೇತನವನ್ನು ₹25,000ಕ್ಕೆ ಏರಿಸುವುದಾಗಿ ಮೋಹನ್ ಆಮಿಷ ಒಡ್ಡಿದ್ದರು ಎನ್ನಲಾಗಿದೆ. ಇದಕ್ಕೆ ಒಪ್ಪದಿದ್ದಾಗ ಆಕೆಯನ್ನು ಕಚೇರಿ ಕೆಲಸದಿಂದ ತೆಗೆದು ಶೌಚಾಲಯ ಶುಚಿಗೊಳಿಸುವ ಕೆಲಸಕ್ಕೆ ಹಾಕಲಾಗಿತ್ತು. ಕಳೆದ ಶನಿವಾರ ಕರೆ ಮಾಡಿದ್ದ ಅಧಿಕಾರಿಯು, ತನ್ನ ಬೇಡಿಕೆಗೆ ಸಮ್ಮತಿ ಇದ್ದರೆ ಸೋಮವಾರ ಹಸಿರು ಬಣ್ಣದ ಸೀರೆ ಉಟ್ಟು ಬರಬೇಕೆಂದು ಷರತ್ತು ವಿಧಿಸಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪ್ರತಿಭಾ ಕುಳಾಯಿ ನೇತೃತ್ವದಲ್ಲಿ ಹಲವು ಮಹಿಳೆಯರು ಹಸಿರು…
ಮುಲ್ಕಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಲ್ಕಿ ಮೂಲದ ಜನತಾದಳ (ಜಾತ್ಯತೀತ) ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಶಶಿಪ್ರಭಾ (47) ಅವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಶಶಿಪ್ರಭಾ ಅವರು ಮುಲ್ಕಿಯ ಕಾರ್ನಾಡ್ ಕೆ.ಎಸ್. ರಾವ್ ನಗರ, ಕೊರಂಟಬೆಟ್ಟು ನಿವಾಸಿಯಾಗಿದ್ದು, ಮುಲ್ಕಿ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿವಂಗತ ಶಶಿಕಾಂತ್ ಶೆಟ್ಟಿ ಅವರ ಸಹೋದರಿಯಾಗಿದ್ದರು. ಅವರು ಜನತಾದಳ (ಜಾತ್ಯತೀತ) ಪಕ್ಷದ ಮುಲ್ಕಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದುದಲ್ಲದೆ, ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಮೆಚ್ಚುಗೆ ಗಳಿಸಿದ್ದರು. ಅಪಘಾತದಲ್ಲಿ ಗಾಯಗೊಂಡಿರುವ ಕಾರ್ಕಳ ನಿವಾಸಿ ದಿನೇಶ್ (34), ಮಂಡ್ಯ ನಿವಾಸಿ ಸುಜನ್ (20) ಹಾಗೂ ಕಾರು ಚಾಲಕ ಅಖಿಲ್ (20) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು…
ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್‌ನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ಮರುದಿನ ಮಂಗಳೂರಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಆತ ಇಲಿಪಾಷಾಣ ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭದಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಬಳಿಕ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಪ್ರಸ್ತುತ ಆರೋಪಿ ಬಂಟ್ವಾಳ ನಗರ ಪೊಲೀಸರ ವಶದಲ್ಲಿದ್ದು, ಇಂದು…
ಮಂಗಳೂರು: ನಗರ ಹೊರವಲಯದ ಬೈಕಂಪಾಡಿಯ ಮೀನಕಳಿಯ ಬಳಿ 12 ವರ್ಷಗಳ ಹಿಂದೆ ಮೀನುಗಾರ ಮುಖಂಡ ಗಂಗಾಧರ ಪಾಂಗಳ (55) ಎಂಬವರನ್ನು ವಾಹನ ಢಿಕ್ಕಿ ಪಡಿಸಿ ಕೊಲೆ ಮಾಡಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸತೀಶ್ ಬೈಕಂಪಾಡಿ (58), ಹರೀಶ್ ಬೈಕಂಪಾಡಿ (60), ಭಾಸ್ಕರ್ ಬೈಕಂಪಾಡಿ (61) ಪುಷ್ಪರಾಜ್ (47) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು ಎಂದು ತಿಳಿದುಬಂದಿದೆ. ಬೈಕಂಪಾಡಿಯ ಮೊಗವೀರ ಮಹಾಸಭಾದ ಅಧ್ಯಕ್ಷರಾಗಿದ್ದ ಸತೀಶ್ ಬೈಕಂಪಾಡಿಯು ಮೀನಕಳಿಯದ ಗೋಪಾಲ ಕೃಷ್ಣ ಭಜನಾ ಮಂದಿರದ ಪುನಃ ನಿರ್ಮಾಣ ಕಾರ್ಯ ಮತ್ತು ಹೈಸ್ಕೂಲ್ ಕಟ್ಟಡದ ನಿರ್ಮಾಣ ಕಾರ್ಯಗಳ ಅಧ್ಯಕ್ಷರೂ ಆಗಿದ್ದರು. ಸತೀಶ್ ಬೈಕಂಪಾಡಿ ಮತ್ತು ಭಾಸ್ಕರ್ ಸೇರಿ ಅದರ ವಂತಿಗೆ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಮೊಗವೀರ ಮಹಾ ಸಭಾದ ಸದಸ್ಯತ್ವದಿಂದ ಅಮಾನತು ಪಡಿಸಲು ಕಾರಣರಾಗಿದ್ದಾರೆ ಎಂದು ಗಂಗಾಧರ ಪಾಂಗಳ ಮೇಲೆ ದ್ವೇಷ ಸಾಧಿಸಿದ್ದರು ಎಂದು…
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸ್ ವೃತ್ತಿಯಲ್ಲಿ ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಧನ್ ರಾಜ್ (65) ಜುಲೈ 27 ರ ಸೋಮವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮುರಳೀಧರನ್ ಅವರ ಪುತ್ರ ಧನ ರಾಜ್ ಕಣ್ಣೂರಿನವರು. ಸೇವೆಯಿಂದ ನಿವೃತ್ತರಾದ ನಂತರ, ಅವರು ಕಾಸರಗೋಡಿನ ಪಾರಕಟ್ಟೆಯಲ್ಲಿ ಮನೆ ಕಟ್ಟಿಕೊಂಡು ಅಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಧನ ರಾಜ್ ಕಾಸರಗೋಡು ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು ಮತ್ತು ಅತ್ಯಂತ ದಕ್ಷ ಮತ್ತು ಚತುರ ತನಿಖಾ ಅಧಿಕಾರಿ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದ್ದರು. ಅವರು ಕಾಸರಗೋಡು ಅಪರಾಧ ವಿಭಾಗದ ಸದಸ್ಯರಾಗಿ ಸೇವೆಯಿಂದ ನಿವೃತ್ತರಾದರು. ನಿವೃತ್ತಿಯ ನಂತರ ಅವರು ಚೆರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಭದ್ರತಾ ಅಧಿಕಾರಿಯಾಗಿ ಕೆಲಸ ಮಾಡಿದರು. ಆದರೆ, ಸುಮಾರು ಎರಡು…
ಶ್ರೀಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಹಾಗೂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂಬ್ಳೆ ನಿವಾಸಿ ಸುರೇಶ್ ಹಾಗೂ ಶಾಂತಿಯಂಗಡಿ ನಿವಾಸಿ ಅಬ್ದುಲ್ ರಝಾಕ್ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಭಕ್ತರು ಸುಮಾರು ನಾಲ್ಕು ದಶಕಗಳಿಂದ ಸಮರ್ಪಿಸಿದ್ದ ತಾಮ್ರ ಹಾಗೂ ಪಿತ್ತಳದ ಪೂಜಾ ಪರಿಕರಗಳು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಕಳವಾದ ವಸ್ತುಗಳಲ್ಲಿ ಹಳೆಯ ಕೊಪ್ಪರಿಗೆ, ಆರು ದೀಪಗಳು, ಸುಮಾರು 20 ಗಿಂಡೆಗಳು, ಹರಿವಾಣ ತಟ್ಟೆ, ಭಜನಾ ತಾಳ, ತಾಮ್ರದ ಕೊಡಪಾನ, ತಾಮ್ರದ ಅಕ್ಕಿ ಸೋಸುವ ಪಾತ್ರೆ ಸೇರಿದಂತೆ ಹಲವು ಪೂಜಾ ಸಾಮಗ್ರಿಗಳು ಸೇರಿದ್ದವು. ಘಟನೆಯ ಸಂದರ್ಭದಲ್ಲಿ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಮೂವರು ವ್ಯಕ್ತಿಗಳು ಗೋಣಿಯಲ್ಲಿ ಸಾಮಗ್ರಿಗಳನ್ನು ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯಗಳು ಸೆರೆಯಾಗಿದ್ದವು. ಅಲ್ಲದೆ, ದೇವಸ್ಥಾನ ಆವರಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕೆಲವರನ್ನು ಸ್ಥಳೀಯರು ಪ್ರಶ್ನಿಸಿದಾಗ, ದೇವಸ್ಥಾನದ ಪರವಾಗಿ ಕೆಲಸಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿತ್ತು.…
ಕಾಪು: ಕಾಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಎರಡು ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ಸುಮಾರು 15 ನಿಮಿಷಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ಎರಡೂ ಬಸ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್ ಮತ್ತು ಕಂಡಕ್ಟರ್‌ಗಳಾದ ವಿಜಯಕುಮಾರ್ ಮತ್ತು ಹರೀಶ್ ಬಿ ಹೆಗ್ಡೆ ಎಂದು ಗುರುತಿಸಲಾಗಿದೆ. ಕಾಪು ಬಸ್ ನಿಲ್ದಾಣದ ಬಳಿಯ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್, ಪ್ರಯಾಣಿಕರನ್ನು ಹತ್ತಿಸಲು ಮತ್ತು ಬಿಡಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಮತ್ತೊಂದು ಬಸ್ಸಿನ ಹಿಂಭಾಗದ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಉದ್ಯಾವರದಿಂದಲೂ ಸಮಯ ಮತ್ತು ಓವರ್‌ಟೇಕ್ ಸಮಸ್ಯೆಗಳ ಕುರಿತು ಎರಡೂ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರ ನಡುವೆ ಆರೋಪ- ಪ್ರತ್ಯಾರೋಪಗಳಿಂದ ಪರಿಸ್ಥಿತಿ ಉದ್ವಿಗ್ನತೆ ಗೆ ಕಾರಣವಾಗಿತ್ತು ಎಂದು ಮೂಲಗಳು ತಿಳಿಸಿವೆ.…



