Author: admin
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೋರ್ವ ಬೆಳ್ತಂಗಡಿಯ ಸಮಾಜಸೇವಕನ ಹೆಸರಲ್ಲಿ ಡ್ರಗ್ಸ್ ಪೆಡ್ಡಿಂಗ್ ದಂಧೆ ನಡೆಸುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ @ ಬಾಬಾ(42) ಎಂಬಾತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ವಿವರ :ಮಂಗಳೂರು ನಗರ ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಗೆ ಜೂ.25 ರಂದು ನಡೆಸಿದ ದಾಳಿಯಲ್ಲಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು 200 1.50 ಲಕ್ಷ 15.17 ಗ್ರಾಂ ವಶಪಡಿಸಿಕೊಂಡಿದ್ದರು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದರು. ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ…
ಬಂಟ್ವಾಳ: ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 22 ಜುಲೈ 2026 ರಂದು ಸಂಭವಿಸಿದ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ (UDR) ಸಂಖ್ಯೆ 35/2026 ಕಲಂ 194 ಬಿಎನ್‌ಎಸ್ (BNS) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿತ್ತು. ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ (RTO) ಸದರಿ ಶಾಲಾ ವಾಹನದ ದಾಖಲೆ ಪತ್ರಗಳ ಮಾನ್ಯತೆಯ ಕುರಿತು ಅಧಿಕೃತ ವರದಿ ಪಡೆದಿದ್ದಾರೆ. ಈ ವೇಳೆ, ಘಟನೆ ಸಂಭವಿಸಿದ ಸಮಯದಲ್ಲಿ ವಾಹನದ ವಿಮಾ ಪತ್ರ (Insurance) ಹಾಗೂ ಅರ್ಹತಾ ಪತ್ರ (Fitness Certificate – FC) ಎರಡೂ ಚಾಲ್ತಿಯಲ್ಲಿರಲಿಲ್ಲ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ,…
ಕೆನಡಾ: ಭಾರತೀಯ ಮೂಲದ ಮಹಿಳೆಯನ್ನು ಆಕೆಯ ಲಿವ್ ಇನ್ ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಕೆನಡಾದ ಎಡ್ಮಂಟನ್‌ನಲ್ಲಿ ನಡೆದಿದೆ. ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಕೊಲೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಬಂಧಿತ ಆರೋಪಿ. ಜುಲೈ 9 ರಂದು ರಿತೀಶ್ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಳು. ತನಿಖೆ ನಡೆಸಿದ ಪೊಲೀಸರು ಜುಲೈ 14 ರಂದು ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಘೋಷಿಸಿದ್ದರು. ಜು.22 ರಂದು ಆರೋಪಿಯನ್ನು ಬಂಧಿಸಿದ ಪೊಲೀಸರು ಜುಲೈ 23 ರಂದು ಮಹಿಳೆಯನ್ನು ಕತ್ತು ಹಿಸುಕಿಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದರು. ತನಿಖೆ ಕಾರಣದಿಂದಾಗಿ ಈ ವಿಚಾರವನ್ನು ಪೊಲೀಸರು ಅಲ್ಲಿಯ ತನಕ ತಡೆಹಿಡಿದಿದ್ದರು. ಆರ್ಥಿಕ ಸಂಕಷ್ಟದಿಂದಾಗಿ ಕೊಲೆಯಾದ…
ಮಹಾರಾಷ್ಟ್ರ:ಇತ್ತೀಚೆಗೆ ನಡೆದ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದರ ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾನನ್ನು ಬಂಧಿಸಲಾಗಿದೆ. ಥಾಣೆ ಪೊಲೀಸರು ಬಿಹಾರದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಕರಣದ ಪ್ರಮುಖ ಆರೋಪಿ ಗುಪ್ತಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ರಾಜ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಇನ್ನು ಮುಂದೆ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದ್ದು, ಇಂತಹ ಪ್ರಕರಣಗಳನ್ನು ನಿಭಾಯಿಸಲು ಹೊಸ ಮಸೂದೆಯೊಂದನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಥಾಣೆ ಪೊಲೀಸರು, ಬಿಹಾರದಲ್ಲಿ ಅಡಗಿಕೊಂಡಿದ್ದ ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ನವದೆಹಲಿ: ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದ ಪ್ರಮುಖ ಬೇಡಿಕೆ ಈಡೇರಿದರೂ, ಹೋರಾಟ ಇನ್ನೂ ಮುಗಿದಿಲ್ಲ ಎಂದು ಕಾಕ್ರೋಚ್ ಜನತಾ ಪಕ್ಷ ಸ್ಪಷ್ಟಪಡಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸಿದ ಸಿಜೆಪಿ, ಉಳಿದ ಬೇಡಿಕೆಗಳು ಈಡೇರುವವರೆಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದು ಘೋಷಿಸಿದೆ. ಸಿಜೆಪಿ ತನ್ನ ನವೀಕರಿಸಿದ ಬೇಡಿಕೆಗಳ ಪಟ್ಟಿಯನ್ನು ‘X’ ಖಾತೆಯಲ್ಲಿ ಹಂಚಿಕೊಂಡಿದೆ, ಇನ್ನೂ ಮೂರು ಪ್ರಮುಖ ಬೇಡಿಕೆಗಳು ಬಾಕಿ ಉಳಿದಿವೆ ಎಂದು ತಿಳಿಸಿದೆ. ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡಬೇಕು, ಪ್ರತಿಭಟನೆಯಲ್ಲಿ ಭಾಗವಹಿಸಿದ ಯಾವುದೇ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬಾರದು ಹಾಗೂ ಆರ್‌ಎಎಫ್ ಮತ್ತು ದೆಹಲಿ ಪೊಲೀಸರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಸಿಜೆಪಿ ಆಗ್ರಹಿಸಿದೆ. ʼಜಂತರ್ ಮಂತರ್ ಮಾತ್ರವಲ್ಲ, ಇಡೀ ದೇಶವೇ ಈ ಬೇಡಿಕೆಗಳು ಈಡೇರುವುದನ್ನು ಕಾಯುತ್ತಿದೆ. ಅವು ಈಡೇರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲʼ ಎಂದು ಸಿಜೆಪಿ ಹೇಳಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಪಕ್ಷದ ಸಂಸ್ಥಾಪಕ ಅಭೀಜಿತ್…
‘ಕಾಕ್ರೋಚ್ ಜನತಾ ಪಾರ್ಟಿ’ ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು (ಶನಿವಾರ) ಮಧ್ಯಾಹ್ನದವರೆಗೆ ಸಮಯ ಕೋರಿದ್ದರು. ಇದೀಗ ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಅಲ್ಲಿಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ. ರಾಜೀನಾಮೆ ಬಳಿಕ ಧರ್ಮೇಂದ್ರ…
ಮಂಗಳೂರು: ನಗರದ ಲಾಲ್‌ಬಾಗ್ ಸಮೀಪ ಶನಿವಾರ ಮಧ್ಯಾಹ್ನ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯುವಕನ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಯುವಕನನ್ನು ಪ್ರಾಥಮಿಕವಾಗಿ ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 1:45ರ ವೇಳೆಗೆ ಅವರು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಮತ್ತೊಂದು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಅಪರಿಚಿತ ವ್ಯಕ್ತಿ ಏಕಾಏಕಿ ಮಾರಕಾಸ್ತ್ರದಿಂದ ಅವರ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯ ಪರಿಣಾಮ ಕುತ್ತಿಗೆಯ ಸಮೀಪ ಆಳವಾದ ಗಾಯವಾಗಿದ್ದು, ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸಿ ಪರಾರಿಯಾಗಿರುವ ಆರೋಪಿಯ ಪತ್ತೆಗಾಗಿ ನಗರದ ವಿವಿಧೆಡೆ ಇರುವ ಚೆಕ್‌ಪೋಸ್ಟ್‌ಗಳಿಗೆ ಮಾಹಿತಿ ರವಾನಿಸಲಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಪ್ರಕರಣವು ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಲಿದ್ದು,…
ಜೈಪುರ್: ರಾಜಸ್ಥಾನದಲ್ಲಿ ವೈದ್ಯರಿಗೆ ಬ್ಲಾಕ್‌ಮೇಲ್ ಮಾಡಿ ಬಂಧನಕ್ಕೊಳಗಾದ ನರ್ಸ್ ಒಬ್ಬಳು ವೈದ್ಯನ ವಿರುದ್ಧ ಸರಣಿ ಅತ್ಯಾಚಾರದ ಆರೋಪ ಮಾಡಿದ್ದಾಳೆ. 65 ವರ್ಷದ ವೈದ್ಯರೊಬ್ಬರಿಂದ 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕಮಲಾ ಎಂಬ ನರ್ಸ್‌ನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಆಕೆಯನ್ನು ಬಾರ್ಮರ್ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಅದರಲ್ಲಿ, ತಮ್ಮ ಆಸ್ಪತ್ರೆಗೆ ಭೇಟಿ ನೀಡಿದ ಹಲವಾರು ಮಹಿಳಾ ರೋಗಿಗಳ ಮೇಲೆ ವೈದ್ಯರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ. ವೈದ್ಯನನ್ನು ನಂಬರ್ 1 ಅತ್ಯಾಚಾರಿ ಎಂದು ಕರೆದಿರುವ ನರ್ಸ್, ಸುಮಾರು 100 ಮಹಿಳೆಯರನ್ನು ಆತ ರೇಪ್ ಮಾಡಿದ್ದಾನೆ ಎಂದು ಆಕ್ರೋಶ ಹೊರಹಾಕಿದ್ದಾಳೆ. ಅಲ್ಲದೇ ಇಬ್ಬರು ಸಿಬ್ಬಂದಿ ಮಹಿಳೆಯರನ್ನು ಖರೀದಿಸಲು ವೈದ್ಯರಿಗೆ ಸಹಾಯ ಮಾಡಿದ್ದಾರೆ. ಈ ಹಿಂದೆ ಕೆಲವು ಮಹಿಳೆಯರು ದೂರನ್ನು ಸಹ ನೀಡಿದ್ದರು ಎಂದು ಹೇಳಿಕೊಂಡಿದ್ದಾಳೆ. ಪೊಲೀಸರು ಈ ಯಾವುದೇ ಆರೋಪಗಳನ್ನು ದೃಢಪಡಿಸಿಲ್ಲ. ನರ್ಸ್ ಚಹಾ ತಯಾರಿಸುವ ನೆಪದಲ್ಲಿ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿರುವ ತನ್ನ…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಾಲೆಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರು, ಚಿಂತಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು ಎಂದು ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿ ಶಿಕ್ಷಣ ತಜ್ಞರು, ಚಿಂತಕರು ಹಾಗೂ ವಿದ್ಯಾರ್ಥಿ ಒಕ್ಕೂಟಗಳು ತುರ್ತು ಸಭೆ ನಡೆಸಿ ತಮ್ಮ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಲಾಭಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ಹಸ್ತಾಂತರಿಸುವುದು ಸಾರ್ವಜನಿಕ ಶಿಕ್ಷಣದ ಮೂಲ ಆಶಯಕ್ಕೇ ವಿರುದ್ಧವಾಗಿದೆ. ಇದು ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಲಾಭಕೋರ ಕಂಪನಿಗಳಿಗೆ ವಹಿಸುವ ಹುನ್ನಾರ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಕಟುವಾಗಿ ಖಂಡಿಸಿದೆ. ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರಿ ಶಾಲೆಗಳನ್ನು ಸರ್ಕಾರವೇ…
ಬೆಳ್ತಂಗಡಿ: ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯ ಮರೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಘಟನೆ ಶುಕ್ರವಾರ ಶಿಶಿಲ ಸಮೀಪದ ಬರ್ಗುಳದಲ್ಲಿ ನಡೆದಿದೆ. ಅದೃಷ್ಟವಶಾತ್ ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರನ್ನು ಶಿಶಿಲ ಗ್ರಾಮದ ದೇಣೋಡಿ ನಿವಾಸಿ ರತೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ಕೊಕ್ಕಡದಿಂದ ಶಿಶಿಲ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿದ್ದ ಮರ ಭಾರೀ ಮಳೆ ಮತ್ತು ಗಾಳಿಯಿಂದ ಬೇರುಸಹಿತ ಉರುಳಿ ಬೈಕ್ ಮೇಲೆ ಬಿದ್ದಿದೆ. ಉರುಳಿದ ಮರ ವಿದ್ಯುತ್ ತಂತಿಗಳ ಮೇಲೂ ಬಿದ್ದ ಪರಿಣಾಮ ಆ ಪ್ರದೇಶದಲ್ಲಿ ಕೆಲಕಾಲ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತು. ಘಟನೆಯಿಂದ ವಾಹನ ಸಂಚಾರಕ್ಕೂ ತಾತ್ಕಾಲಿಕ ಅಡಚಣೆ ಉಂಟಾಯಿತು. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಪಡೆಯ ಅರಸಿನಮಕ್ಕಿ-ಶಿಶಿಲ ಘಟಕದ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಮರವನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಬಳಿಕ ಪಂಚಾಯತ್ ಸಿಬ್ಬಂದಿ ಹಾಗೂ ಮೆಸ್ಕಾಂನ ಪವರ್‌ಮ್ಯಾನ್ ಸಂತೋಷ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು…



