Author: admin
ನವದೆಹಲಿ: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ ವಾಣಿಜ್ಯ ಹಡಗಿನಲ್ಲಿದ್ದ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ದೃಢಪಡಿಸಿದೆ. ಜುಲೈ 18 ರಂದು ಕಪ್ಪು ಸಮುದ್ರದಲ್ಲಿ ಸಾಗುತ್ತಿದ್ದ MV OMORFI ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದೆ. ಈ ಘಟನೆ ರಷ್ಯಾದ ಪ್ರಾದೇಶಿಕ ಜಲ ಪ್ರದೇಶದಲ್ಲಿ ವರದಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ದಾಳಿಯಲ್ಲಿ ಭಾರತೀಯ ನಾಗರಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಸಚಿವಾಲಯ ಪೋಸ್ಟ್ ಹಂಚಿಕೊಂಡಿದೆ. ದಾಳಿಯ ಸಮಯದಲ್ಲಿ, ಮೂವರು ಭಾರತೀಯ ಪ್ರಜೆಗಳು ಸೇರಿದಂತೆ 10 ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ತಿಳಿದುಬಂದಿದೆ. ಹಡಗಿನಲ್ಲಿರುವ ಇತರ ಇಬ್ಬರು ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಉಡುಪಿ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಅಕ್ಕ ಸ್ಕ್ವಾಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಹಚ್ಚಿದ್ದಾರೆ. ಬಳಿಕ ಬಾಲಕನನ್ನು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿಯ ಕುರಿತು ಉಡುಪಿ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಿಂದ ಅಕ್ಕ ಸ್ಕ್ವಾಡ್‌ಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ದೊರೆಯುತ್ತಿದ್ದಂತೆಯೇ ಅಕ್ಕ ಸ್ಕ್ವಾಡ್ ಸಿಬ್ಬಂದಿ ಬಾಲಕನ ಪತ್ತೆಗಾಗಿ ತಕ್ಷಣವೇ ಶೋಧ ಕಾರ್ಯಾಚರಣೆ ಆರಂಭಿಸಿದರು. ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ, ಮುದ್ದೇಬಿಹಾಳ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಪ್ರಯಾಣಿಸುತ್ತಿರುವುದು ಸಿಬ್ಬಂದಿಯ ಗಮನಕ್ಕೆ ಬಂದಿದೆ. ತಕ್ಷಣವೇ ಬಸ್‌ನ್ನು ತಡೆದು ಬಾಲಕನನ್ನು ಸುರಕ್ಷಿತವಾಗಿ ವಶಕ್ಕೆ ಪಡೆದ ಅಕ್ಕ ಸ್ಕ್ವಾಡ್ ಸಿಬ್ಬಂದಿ, ಮುಂದಿನ ಕಾನೂನು ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯಗಳ ತನಿಖೆಯಿಂದ ಈ ಅಕ್ರಮ ದೃಢಪಟ್ಟಿದ್ದು, ಅಕ್ರಮ ಎಸಗಿದ ಒಟ್ಟು 249 ಅತಿಥಿ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಲು, ಭವಿಷ್ಯದ ನೇಮಕಾತಿಗಳಿಂದ ಖಾಯಂ ಆಗಿ ಬ್ಲ್ಯಾಕ್‌ಲಿಸ್ಟ್ (ಕಪ್ಪುಪಟ್ಟಿ) ಮಾಡಲು ಹಾಗೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರ ಆದೇಶಿಸಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ ಅಕ್ರಮ ಬಯಲು: 2025-26ನೇ ಶೈಕ್ಷಣಿಕ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸುಮಾರು 10,000 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಈ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಸರ್ಕಾರ ಜಾರಿಗೆ ತಂದ ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ, ಆಯ್ಕೆಯಾದ ಅಭ್ಯರ್ಥಿಗಳ ಸ್ನಾತಕೋತ್ತರ ಪದವಿ, ನೆಟ್ (NET), ಕೆ-ಸೆಟ್ (K-SET), ಎಂ.ಫಿಲ್ ಹಾಗೂ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸತ್ಯಾಸತ್ಯತೆ ತನಿಖೆಗಾಗಿ ಆಯಾ ವಿಶ್ವವಿದ್ಯಾಲಯಗಳಿಗೆ ಕಳುಹಿಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಲಾಗಿತ್ತು. ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ವಿಶ್ವವಿದ್ಯಾಲಯಗಳು, 249 ಅಭ್ಯರ್ಥಿಗಳ ಪಿಎಚ್‌ಡಿ ಸರ್ಟಿಫಿಕೇಟ್‌ಗಳು ನಕಲಿ ಅಥವಾ ಅಮಾನ್ಯವಾಗಿವೆ ಎಂದು ದೃಢಪಡಿಸಿ ವರದಿ ನೀಡಿದ್ದವು. ಈ ವರದಿ ಆಧಾರದ ಮೇಲೆ ಇಲಾಖೆ…
ಶಿಮ್ಲಾ: ಹಲವು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಟಾಟಾ ಸುಮೋ ಟ್ಯಾಕ್ಸಿ ಮೇಲೆ ಬೃಹತ್ ಬಂಡೆಯೊಂದು ಉರುಳಿಬಿದ್ದ ಪರಿಣಾಮ, ಟ್ಯಾಕ್ಸಿ ನಜ್ಜುಗುಜ್ಜಾಗಿ 13 ಜನ ಮೃತಪಟ್ಟ ಘಟನೆ ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ. ಘಟನೆ ಉದಯಪುರ-ಕಿಲ್ಲರ್ ರಸ್ತೆಯ ಕಾಡು ನಾಲಾ ಸಮೀಪ ಸಂಭವಿಸಿದೆ. ಚಂಬಾ ಜಿಲ್ಲೆಯ ನಿವಾಸಿಗಳನ್ನು ಹೊತ್ತೊಯ್ಯುತ್ತಿದ್ದ ಟಾಟಾ ಸುಮೋ ಟ್ಯಾಕ್ಸಿ ರಸ್ತೆ ಮೂಲಕ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಭೂಕುಸಿತ ಉಂಟಾಗಿ, ಬೃಹತ್ ಬಂಡೆಗಳು ವಾಹನದ ಮೇಲೆ ಉರುಳಿಬಿದ್ದಿವೆ. ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿ ಪ್ರಯಾಣಿಕರು ಅದರೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಭೂಕುಸಿತದ ಹಿನ್ನೆಲೆ ಗುರುವಾರ ರಾತ್ರಿ ಉದಯಪುರ-ಕಿಲ್ಲರ್ ರಸ್ತೆಯನ್ನ ಮುಚ್ಚಲಾಗಿತ್ತು. ಇದರಿಂದ ಪ್ರಯಾಣಿಕರು ತಿಂಡಿ ಗ್ರಾಮದಲ್ಲಿ ತಂಗಿದ್ದರು. ನಂತರ ರಸ್ತೆ ಸಂಚಾರ ತೆರವುಗೊಳಿಸುತ್ತಿದ್ದಂತೆ ಮತ್ತೆ ಪ್ರಯಾಣ ಆರಂಭಿಸಿದ್ದರು. ಆದ್ರೆ ಪ್ರಯಾಣಿಕರು ಕಾಡು ನಾಲಾ ಸಮೀಪಿಸುತ್ತಿದ್ದಂತೆ ಮತ್ತೊಮ್ಮೆ ಭೂಕುಸಿತ ಸಂಭವಿಸಿ ಈ ಅವಘಡ ನಡೆದಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಸ್ಥಳೀಯ ಪೊಲೀಸರು, ಜಿಲ್ಲಾಡಳಿತ ಹಾಗೂ ವಿಪತ್ತು…
ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳರು ದೇವಸ್ಥಾನದೊಳಗೆ ಅಕ್ರಮವಾಗಿ ಪ್ರವೇಶಿಸಿ ಪೂಜೆಗೆ ಬಳಸಲಾಗುತ್ತಿದ್ದ ಬೆಳ್ಳಿ ವಸ್ತುಗಳು, ಒಂದು ಕಾಣಿಕೆ ಪಾತ್ರೆ, 10 ಸಾಂಪ್ರದಾಯಿಕ ದೀಪಗಳು, 10 ಹಿತ್ತಾಳೆ ಕಲಶಗಳು, ಐದು ಹಿತ್ತಾಳೆ ತಟ್ಟೆಗಳು, ಒಂದು ತಾಮ್ರದ ಪಾತ್ರೆ, ಎರಡು ತಾಮ್ರದ ಕಲಶಗಳು, ಒಂದು ತಾಮ್ರದ ಅಡುಗೆ ಪಾತ್ರೆ ಹಾಗೂ ಕೆಲವು ಉಕ್ಕಿನ ಪಾತ್ರೆಗಳನ್ನು ಕಳವು ಮಾಡಿದ್ದಾರೆ. ಕಳುವಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು 57,000 ರೂ. ಎಂದು ಅಂದಾಜಿಸಲಾಗಿದೆ. ಮೂವರು ಆರೋಪಿಗಳು ಕದ್ದ ವಸ್ತುಗಳನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಸ್ಥಳದಿಂದ ತೆರಳುತ್ತಿರುವ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ಈ ಸಂಬಂಧ ಸುನೀಲ್ ಕುಮಾರ್ ಕೆ.ಎನ್. ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು…
ಮಂಗಳೂರು:ಅಸ್ತ್ರ ಹೆಸರಲ್ಲಿ ಕಳೆದ 3-4 ವರ್ಷಗಳಲ್ಲಿ ಮೂರು ಸೀಸನ್ ಲಕ್ಕಿ ಸ್ಕೀಮ್ ಮಾಡಿದ್ದು ಇದರಲ್ಲಿ ಅಂದಾಜು 50 ಸಾವಿರದಷ್ಟು ಜನರು ತಿಂಗಳ ಕಂತು ಹಣ ಕಟ್ಟಿದ್ದಾರೆ. ಪ್ರತಿ ಸ್ಕೀಮ್ ಮುಕ್ತಾಯದಲ್ಲಿ ಅದೃಷ್ಟ ಸಿಗದ ಎಲ್ಲರಿಗೆ ಹಣ ಹಿಂತಿರುಗಿಸಬೇಕಿದ್ದರೂ, ಏಜಂಟರು ಅವರೆಲ್ಲರನ್ನೂ ಮುಂದಿನ ಸ್ಕೀಮಿಗೆ ಸೇರಿಸಿ ಹಣ ಕಟ್ಟುವಂತೆ ಮಾಡುತ್ತಿದ್ದರು. ಇದೀಗ ಮೂರು ಸೀಸನಲ್ಲಿ ಹಣ ಕಟ್ಟಿದರೂ, ಒಂದು ಬಾರಿಯೂ ಹಣ ಸಿಗದವರು ಇನ್ನು ಕೈಗೆ ಚೊಂಬೇ ಗತಿ ಎನ್ನುತ್ತಾ ಬಂಗಾರದ ಬಣ್ಣದ ಬಳೆ ಹಾಕ್ಕೊಂಡು ಪೋಸು ನೀಡುತ್ತಿದ್ದ ಲಂಚು ಹುಡುಕಾಟಕ್ಕೆ ಬಿದ್ದಿದ್ದಾರೆ. ಕೆಲವು ತಿಂಗಳ ಹಿಂದಷ್ಟೇ ಮೂರನೇ ಸೀಸನ್ ಹೆಸರಲ್ಲಿ ಅಸ್ತ್ರ ಲಕ್ಕಿ ಸ್ಕೀಮ್ ಯೋಜನೆಯನ್ನು ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಲಾಂಚ್ ಮಾಡಿದ್ದು ಅಲ್ಲಿಯೂ ಸಾಕಷ್ಟು ಗ್ರಾಹಕರನ್ನು ಸೆಳೆಯುವ ಕೆಲಸ ಮಾಡಲಾಗಿತ್ತು. ಆದರೆ, ಕಳೆದ ಎಪ್ರಿಲ್ ನಂತರ ಲಂಚುಲಾಲ್ ತನ್ನ ಬ್ಯಾಂಕ್ ಖಾತೆ ಫ್ರೀಜ್ ಆಗಿದೆ, ಸ್ವಲ್ಪ ಟೈಮ್ ಬೇಕಾಗುತ್ತೆ ಎಂದು ಹಣ ಕೇಳಲು ಬಂದ ಮಂಗಳೂರಿನ ಕೆಲವು ಏಜಂಟರನ್ನು ನಂಬಿಸುತ್ತ ಬಂದಿದ್ದ.…
ಮಂಗಳೂರು : ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಈವರೆಗೆ ಅವರು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ (ಕೆಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಿಸಲಾಗಿದೆ. ಈ ವರ್ಗಾವಣೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಆದೇಶ ಹೊರಡಿಸಿದೆ. ಹೊಸ ಆಯುಕ್ತರ ನೇಮಕದೊಂದಿಗೆ ಮಂಗಳೂರು ನಗರದ ನಾಗರಿಕ ಸೌಲಭ್ಯಗಳು, ಮೂಲಸೌಕರ್ಯ ಅಭಿವೃದ್ಧಿ, ಸ್ವಚ್ಛತೆ, ಮಳೆಗಾಲದ ನಿರ್ವಹಣೆ ಹಾಗೂ ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್-2026’ ಗೌರವ ಲಭಿಸಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಸೇವೆ, ಜನಪರ ಆಡಳಿತ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಅಮೆರಿಕದ American Multi Ethnic Commission ಅಂತಾರಾಷ್ಟ್ರೀಯ ಪ್ರಶಸ್ತಿಗೆ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿ ಸ್ವೀಕರಿಸಲು ಯು.ಟಿ. ಖಾದರ್ ಅವರು ಮಂಗಳೂರಿನಿಂದ ಅಮೆರಿಕಕ್ಕೆ ತೆರಳಿದ್ದು, ಜುಲೈ 25ರಂದು ಇಲಿನಾಯ್ಸ್ ರಾಜ್ಯದ ನೇಪರ್‌ವಿಲ್‌ನ ಯೆಲ್ಲೋ ಬಾಕ್ಸ್ ಆಡಿಟೋರಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ ಸ್ವೀಕರಿಸಲಿದ್ದಾರೆ. ಈ ಪ್ರಶಸ್ತಿಗೆ ಆಯ್ಕೆಯಾದ ಮೊದಲ ಭಾರತೀಯ ಎಂಬ ವಿಶೇಷ ಗೌರವ ಯು.ಟಿ. ಖಾದರ್ ಅವರಿಗೆ ಸಂದಿದ್ದು, ಕರಾವಳಿ ಹಾಗೂ ಕರ್ನಾಟಕದ ಪಾಲಿಗೆ ಇದು ಹೆಮ್ಮೆಯ ಕ್ಷಣವಾಗಿದೆ. ರಾಜ್ಯದ ಆರೋಗ್ಯ ಕ್ಷೇತ್ರದ ಸೇವೆಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಾನ್ಯತೆ ದೊರೆತಂತಾಗಿದೆ.
ನವದೆಹಲಿ: ನ್ಯಾಯಾಲಯಗಳ ಕಲಾಪದ ವೀಡಿಯೋಗಳನ್ನು ರೆಕಾರ್ಡ್ ಮಾಡುವುದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೋರ್ಟ್ ಕಲಾಪಗಳ ವೀಡಿಯೋಗಳನ್ನು ಅನಿಯಂತ್ರಿತವಾಗಿ ಪ್ರಸಾರ ಮಾಡುವುದನ್ನು ‘ಚೀಲದಿಂದ ಹೊರಬಂದ ರಾಕ್ಷಸ’ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಸಂಬಂಧಪಟ್ಟ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಲಯದ ಕಲಾಪಗಳ ಆಡಿಯೊ-ವಿಡಿಯೋ ರೆಕಾರ್ಡಿಂಗ್‌ಗಳನ್ನು ಹಂಚಿಕೊಳ್ಳುವುದಕ್ಕೆ ನಿಷೇಧ ಹೇರಲಾಗಿದೆ. ನ್ಯಾಯಾಲಯದ ಕಲಾಪಗಳ ನೇರಪ್ರಸಾರ ಮತ್ತು ವೀಡಿಯೋ ಪ್ರಸಾರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ ಮೋಹನ ಅವರಿದ್ದ ಪೀಠವು ಈ ಆದೇಶ ಹೊರಡಿಸಿದೆ. ಸಂಬಂಧಿತ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್ ಅಥವಾ ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ಅವರ ಪೂರ್ವಾನುಮತಿ ಇಲ್ಲದೆ ಸಾಮಾಜಿಕ ಮಾಧ್ಯಮ ಅಥವಾ ಇತರ ಡಿಜಿಟಲ್ ವೇದಿಕೆಗಳಲ್ಲಿ ನ್ಯಾಯಾಂಗ ಪ್ರಕ್ರಿಯೆಗಳ ಆಡಿಯೋ/ವಿಡಿಯೋ ರೆಕಾರ್ಡಿಂಗ್‌ಗಳನ್ನು ಮಾರ್ಪಡಿಸುವುದು, ಪ್ರಸಾರ ಮಾಡುವುದು, ಪೋಸ್ಟ್ ಮಾಡುವುದು,…
ನವದೆಹಲಿ: ಸಮಸ್ಯೆ ಬಗೆಹರಿಯಬೇಕಾದರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು ಎಂದು ಸಿಜೆಪಿಯ ಸಂಸ್ಥಾಪಕ ಅಭಿಜಿತ್ ದಿಪ್ಕೆ ಆಗ್ರಹ ಮಾಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರದ ಭರವಸೆ ಸಿಕ್ಕ ನಂತರ ಗುರುವಾರ ರಾತ್ರಿ ಸೋನಮ್ ವಾಂಗ್ಚುಕ್ ಅವರು ಉಪವಾಸವನ್ನು ಕೈಬಿಟ್ಟಿದ್ದಾರೆ. ಇದೀಗ ವಾಂಗ್ಚುಕ್ ಅವರೇ ಪ್ರತಿಭಟನೆ ಕೈಬಿಡುವಂತೆ ಕೇಳಿಕೊಂಡರೂ ಕೂಡ ನಾವು ಹಿಂತೆಗೆದುಕೊಳ್ಳುವುದಿಲ್ಲ. ಸಮಸ್ಯೆ ಬಗೆಹರಿಯಬೇಕಾದರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು” ಎಂದಿದ್ದಾರೆ. “ಕೇಂದ್ರ ಸರ್ಕಾರದ ಜೊತೆ 2ನೇ ಹಂತದ ಮಾತುಕತೆ ಆರಂಭಿಸುವ ಮುನ್ನ ದಿಪ್ಕೆ ಈ ಬೇಡಿಕೆಯನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲೇಬೇಕು. ರಾಜೀನಾಮೆ ಹೊರತುಪಡಿಸಿ ಬೇರೆ ಯಾವುದೇ ಪರಿಹಾರ ನಮಗೆ ಬೇಡ. ಈ ಹೋರಾಟ ನನಗೆ ಹಾಗೂ ವಾಂಗ್ಚುಕ್ ಅವರಿಗೆ ಸೇರಿದ್ದಲ್ಲ. ಇದು ದೇಶದ ಎಲ್ಲಾ ಯುವಕರ ಚಳುವಳಿಯಾಗಿದೆ. ಆದ್ದರಿಂದ ರಾಜೀನಾಮೆ ಒಂದೇ ಇದಕ್ಕೆ ಅಂತಿಮ ಪರಿಹಾರ” ಎಂದು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್,…



