Author: admin

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಫಾರಂ 7 ದುರ್ಬಳಕೆ ಆರೋಪದ ಮೇಲೆ ಬಿಜೆಪಿ ಮುಖಂಡರ ಮೇಲೆ ದಾಖಲಾಗಿದ್ದ ಎಫ್​​​ಐಆರ್​​ಗೆ ಇತ್ತೀಚೆಗೆ ಹೈಕೋರ್ಟ್ ತಡೆ ನೀಡಿತ್ತು. ಇದೀಗ ಆದೇಶ ಕಾಯ್ದಿರಿಸಿ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದ್ದು, ಚುನಾವಣಾ ಆಯೋಗದ ಸಿಸಿಟಿವಿ ಸಂರಕ್ಷಿಸುವಂತೆ ನ್ಯಾ. ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಪೀಠ ಸೂಚಿಸಿದೆ. ತಡೆಯಾಜ್ಞೆ ತೆರವು ಕೋರಿ ಸರ್ಕಾರದ ಪರ ವಕೀಲರು ಮನವಿ ಎಸ್‌ಐಆರ್ ವೇಳೆ ತಪ್ಪು ಮಾಹಿತಿ ನೀಡಿ ಫಾರಂ 7 ಸಲ್ಲಿಕೆ ಆರೋಪ ಹಿನ್ನೆಲೆ ಎಫ್‌ಐಆರ್​ ರದ್ದು ಕೋರಿ ಬಿಜೆಪಿ ಮುಖಂಡರಾದ ವಸಂತಲಕ್ಷ್ಮೀ ಮತ್ತು ದೀಪಕ್ ಸಿಂಗ್​​ ಇತ್ತೀಚೆಗೆ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ಮಾಡಿದ್ದ ಹೈಕೋರ್ಟ್, ಎಫ್‌ಐಆರ್​ಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಕೋರಿ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ‘ಬಿಎಲ್‌ಎ ಹಾಗೂ ಬಿಎಲ್‌ಒಗಳ ಜೊತೆಗೂಡಿ ಮನೆಮನೆಗೆ ಹೋಗಿದ್ದಾರೆ. ಮನೆಯಲ್ಲಿರುವುದು ತಿಳಿದೂ ಅಲ್ಪಸಂಖ್ಯಾತರ ಮತಗಳನ್ನ ಮತಪಟ್ಟಿಯಿಂದ ಡಿಲೀಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಎಲೆಕ್ಟ್ರಾನಿಕ್…

Read More

ಬಳ್ಳಾರಿ : ಪತಿಯ ವರದಕ್ಷಿಣೆ ಕಿರುಕುಳ ಹಾಗೂ ದೌರ್ಜನ್ಯ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಕಂದಮ್ಮಗಳನ್ನು ಒಂದೇ ವೇಲ್‌ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಸಮೀಪದ ತುಂಗಭದ್ರಾ ಕಾಲುವೆ ಬಳಿ ನಡೆದಿದೆ. ಬಳ್ಳಾರಿ ನಗರದ ಮಿಲ್ಲರ್ ಪೇಟೆ ನಿವಾಸಿ ಲತೀಪಾ ಸಿಮ್ರಾನ್ (29) ಹಾಗೂ ಅವರ ಕಂದಮ್ಮಗಳಾದ ಮಹಮ್ಮದ್ ಅಯಾನ್ (3) ಮತ್ತು ಆಯಿಷಾ ಫಾತಿಮಾ (2) ಮೃತ ದುರ್ದೈವಿಗಳು. ಸೋಮವಾರ ಸಂಜೆ ಲತೀಪಾ ಸಿಮ್ರಾನ್ ಅವರು ತಮ್ಮ ಇಬ್ಬರು ಮಕ್ಕಳನ್ನು ಒಂದೇ ವೇಲ್‌ಗೆ ಬಿಗಿಯಾಗಿ ಕಟ್ಟಿ ಕಾಲುವೆಗೆ ಎಸೆದಿದ್ದಾರೆ. ಇದರ ಬೆನ್ನಲ್ಲೇ ತಾವೂ ಅದೇ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ ಲತೀಪಾ ಸಿಮ್ರಾನ್ ಅವರ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿತ್ತು. ತೀವ್ರ ಹುಡುಕಾಟದ ಬಳಿಕ ಕರ್ನಾಟಕದ ಗಡಿಭಾಗದ ನಾಗಲಾಪುರ ಬಳಿ ಇಬ್ಬರು ಹಸುಗೂಸುಗಳ ಮೃತದೇಹಗಳು ಕೂಡ ಪತ್ತೆಯಾಗಿವೆ. ಲತೀಪಾ ಸಿಮ್ರಾನ್ ಅವರ…

Read More

ಕೊಪ್ಪಳ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣ ಅಂಜನಾದ್ರಿ ಬೆಟ್ಟದ ದೇವಸ್ಥಾನದ ಆಡಳಿತ ವಿಚಾರ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಅಂಜನಾದ್ರಿ ಪರ್ವತದ ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ಗಂಗಾವತಿ ತಹಶೀಲ್ದಾರ್ ವಿನಾಯಕ್ ನೀಡಿದ ದೂರಿನನ್ವಯ ಕೇಸ್ ದಾಖಲಿಸಲಾಗಿದೆ. ಇನ್ನು ಜೂನ್​​ 13ರ ಸಂಜೆ 4-30 ಗಂಟೆ ಸುಮಾರಿಗೆ ಆಂಜನಾದ್ರಿ ಬೆಟ್ಟದ ಸಿಬ್ಬಂದಿ ವೆಂಕಟೇಶ್​​ ನನಗೆ ಕರೆ ಮಾಡಿ ತಿಳಿಸಿದ್ದೆನೆಂದರೆ ‘ವಿದ್ಯಾದಾಸ್ ಬಾಬ ಅವರು ನಮಗೆ ಕಾರ್ಯಲಯದಿಂದ ನಮ್ಮನ್ನು ಹೊರಗಡೆ ಹಾಕಿ ಬೀಗ ಹಾಕಿದ್ದು, ಹಾಗೂ ಇತರೆ ಎಲ್ಲಾ ರೂಮ್​ಗಳಿಗೆ ಬೀಗ ಹಾಕಿದ್ದಾರೆ. ನಮ್ಮ ಮಾತು ಕೇಳುತ್ತಿಲ್ಲ, ನಿಮಗೂ, ಅಂಜನಾದ್ರಿ ಬೆಟ್ಟಕ್ಕೆ ಸಂಬಂಧ ಇರವುದಿಲ್ಲ ಎಂದು ಕೂಗಾಡುತ್ತಿದ್ದಾರೆ. ನೀವು ಕೂಡಲೇ ಬನ್ನಿ ಅಂತಾ ತಿಳಿಸಿದ್ದರಿಂದ ನಾನು ಮತ್ತು ನಮ್ಮ ಸಿಬ್ಬಂದಿ ರವಿಕುಮಾರ ನಾಯ್ಕವಾಡಿ, ಮಹೇಶ ದಾಲಾಲ್, ಚನ್ನಪ್ಪ ಭೇಟಿ ನೀಡಿದ್ದೇವೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಿಬ್ಬಂದಿಯನ್ನ…

Read More

ಉಡುಪಿ : ಶರನ್ನವರಾತ್ರಿ ಮಹೋತ್ಸವದ ಧಾರ್ಮಿಕ ಸಂಭ್ರಮ ಹಾಗೂ ಜನದಟ್ಟಣೆಯಿಂದ ಕೂಡಿದ್ದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ಭಾರಿ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ವಾಣಿಜ್ಯ ಸಂಕೀರ್ಣದ ಮಹಡಿಗೆ ಅಳವಡಿಸಲಾಗಿದ್ದ ಬೃಹತ್ ಗಾತ್ರದ ಅಲಂಕಾರಿಕ ಲೈಟ್ ಸೆಟ್ ಗಾಳಿಯ ರಭಸಕ್ಕೆ ಏಕಾಏಕಿ ಭಕ್ತರ ಮೇಲೆ ಉರುಳಿಬಿದ್ದ ಪರಿಣಾಮ, ವಯೋವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನದ ವೇಳೆ ತೀವ್ರ ಬಿಸಿಲು ಇದ್ದ ಕಾರಣ ದೇವಸ್ಥಾನದ ಎದುರಿನ ವಾಣಿಜ್ಯ ಸಂಕೀರ್ಣದ ನೆರಳಿನ ಆಶ್ರಯದಲ್ಲಿ ಹತ್ತಾರು ಭಕ್ತಾದಿಗಳು ನಿಂತುಕೊಂಡಿದ್ದರು. ನವರಾತ್ರಿ ಉತ್ಸವದ ವಿಶೇಷ ದೀಪಾಲಂಕಾರಕ್ಕಾಗಿ ಕಟ್ಟಡದ ಮಹಡಿಯ ಮೇಲ್ಭಾಗದಲ್ಲಿ ಬೃಹತ್ ಗಾತ್ರದ ಲೈಟ್ ಸೆಟ್‌ಗಳನ್ನು ಅಳವಡಿಸಲಾಗಿತ್ತು. ಇದೇ ವೇಳೆ ಇದ್ದಕ್ಕಿದ್ದಂತೆ ಬಲವಾದ ಗಾಳಿ ಬೀಸಿದ ಪರಿಣಾಮ, ಲೈಟ್ ಸೆಟ್‌ನ ತೂಕವನ್ನು ತಾಳಲಾರದೆ ಕಟ್ಟಡದ ಮೇಲಿಂದ ನೆರಳಿನಲ್ಲಿ ನಿಂತಿದ್ದ ಭಕ್ತರ ಮೇಲೆ ನೇರವಾಗಿ ಕುಸಿದುಬಿದ್ದಿದೆ. ಲೈಟ್ ಸೆಟ್ ಬೀಳುತ್ತಿದ್ದಂತೆಯೇ ಎಚ್ಚೆತ್ತ ಬಹುತೇಕ ಭಕ್ತರು ತಕ್ಷಣವೇ ಚುರುಕಾಗಿ ಪಕ್ಕಕ್ಕೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ,…

Read More

ಬೆಂಗಳೂರು: ಸಿಐಡಿ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿರುವ ಅಪರೂಪದ ‘ಆಫ್ರಿಕನ್ ಗ್ರೇ ಗಿಳಿ’ಯನ್ನು ಮರಳಿ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ರಾಜಾಜಿನಗರದ ನಿವಾಸಿ ಆರ್. ಮಹೇಶ್ ಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಏಕಸದಸ್ಯ ಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಿಐಡಿ ಅರಣ್ಯ ಸಂಚಾರಿ ದಳಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೂ ನಿರ್ದೇಶನ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ. ಏನಿದು ಪ್ರಕರಣ? : ಅರ್ಜಿದಾರ ಮಹೇಶ್ ಕುಮಾರ್ ಅವರ ಪ್ರಕಾರ, ಅವರು ಹಕ್ಕಿ ಪ್ರೇಮಿಯಾಗಿದ್ದು, 2018ರಲ್ಲಿ ಸ್ನೇಹಿತರೊಬ್ಬರು ಅಂಗವೈಕಲ್ಯ ಹೊಂದಿದ್ದ ಆಫ್ರಿಕನ್ ಗ್ರೇ ಗಿಳಿಯನ್ನು ಅವರಿಗೆ ನೀಡಿದ್ದರು. ಒಂದು ರೆಕ್ಕೆಯಲ್ಲಿ ಚಲನೆ ಇಲ್ಲದ ಕಾರಣ…

Read More

ಕೊಚ್ಚಿ: ಕೇರಳದ ಕೊಚ್ಚಿ ಸಮೀಪದ ನೆಡುಂಬಸ್ಸೇರಿಯಲ್ಲಿ ಮಿನಿ ಕೂಪರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪವನ್ನು ಎರ್ನಾಕುಲಂ ಗ್ರಾಮಾಂತರ ಪೊಲೀಸರು ತಳ್ಳಿಹಾಕಿದ್ದಾರೆ. ತನಿಖೆಯನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕೆ.ಎಸ್. ಸುದರ್ಶನ್ ಸ್ಪಷ್ಟಪಡಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸುಹೈಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ವೇಳೆ, ಪ್ರಮುಖ ಆರೋಪಿ ಸುಹೈಲ್ ಜಾಮೀನು ಕೋರಿ ಅಂಗಮಾಲಿ ನ್ಯಾಯಾಲಯದ ಮೊರೆ ಹೋಗಿದ್ದಾನೆ. ಅಕ್ಟೋಬರ್ 11ರ ಮುಂಜಾನೆ ಸುಮಾರು 1.45ರ ವೇಳೆಗೆ ಅಥಣಿ–ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಸುಹೈಲ್ ಚಲಾಯಿಸುತ್ತಿದ್ದ ಮಿನಿ ಕೂಪರ್ ಕಾರು ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಸ್ಕೂಟರ್‌ನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಯಾಸ್, ವಯನಾಡಿನ ದೇವಿಕಾ ಮತ್ತು ಪಾಲಕ್ಕಾಡ್‌ನ ಗೋಪಿಕಾ ಮೃತಪಟ್ಟಿದ್ದರು. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಸ್ಥಳೀಯರು…

Read More

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ 4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಲಿದ್ದು ಬಳಿಕ 4.40ಕ್ಕೆ ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ ಇದಾದ ಬಳಿಕ ಸಂಜೆ 6.30ಕ್ಕೆ ಮಂಗಳೂರು ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿಯಾಗಿ ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Read More

ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿ ತೋಡಿನಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿರುವ ಆರೋಪದ ಮೇಲೆ ತೋಟದ ಮಾಲೀಕ ಮಧುಸೂದನ್ ಭಟ್ ಅವರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.12ರಂದು ರಾತ್ರಿ ನಡೆದ ಘಟನೆಯಲ್ಲಿ ಕಲ್ಮಡ್ಕದ ಭರತ್ (28) ಹಾಗೂ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ಗ್ರಾಮದ ಮುಂಗೇಲು ಮನೆ ರಮೇಶ್ ಅಲಿಯಾಸ್ ಗಣೇಶ್ (36) ಮೃತಪಟ್ಟಿದ್ದರು. ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ಇದ್ದ ಬಾಲಕ ಗಾಯಗೊಂಡಿದ್ದು ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ತೋಡಿನಲ್ಲಿ ಹರಿಯುತ್ತಿದ್ದ ನೀರಿನಲ್ಲಿ ಮೀನು ಹಿಡಿಯುತ್ತಾ ಸಾಗುತ್ತಿದ್ದಾಗ, ಸಮೀಪದಲ್ಲಿದ್ದ ಮಧುಸೂದನ್ ಭಟ್ ಅವರ ತೋಟದಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ದುರಂತ ಸಂಭವಿಸಿದೆ ಎಂದು ತಿಳಿಸಲಾಗಿದೆ. ಬಿಎನ್ಎಸ್ 105 ರಡಿ ಪ್ರಕರಣ ದಾಖಲು ತೋಟಕ್ಕೆ ಅನಧಿಕೃತವಾಗಿ ವಿದ್ಯುತ್…

Read More

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ  ತಮ್ಮ ವಿರುದ್ಧ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹಂಚಿಕೊಂಡು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ದೂರಿನ ಮೇರೆಗೆ ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಸೂಚನೆಯಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ಷಡ್ಯಂತ್ರ ರೂಪಿಸಿ, ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅವರು ಖುದ್ದು ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದರು. ದೂರಿನೊಂದಿಗೆ ಸುಳ್ಳು ಮಾಹಿತಿ ಹರಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ (ID) ವಿವರಗಳನ್ನೂ ಒದಗಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಸೈಬರ್ ಕ್ರೈಮ್ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದು, ವಿಡಿಯೋ ಪ್ರಸಾರ ಮಾಡಿದ ಪ್ರಮುಖ ಖಾತೆಗಳ ಐಪಿ (IP) ವಿಳಾಸಗಳ…

Read More

ಮಂಗಳೂರು : ಕರಾವಳಿ ಭಾಗದ ಪ್ರಮುಖ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡುವ ಐತಿಹಾಸಿಕ ಪ್ರಸ್ತಾವನೆಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಿ ಕರ್ನಾಟಕ ಸರ್ಕಾರ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಈ ಪ್ರಮುಖ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಮರುನಾಮಕರಣದ ಕುರಿತು ಸ್ಥಳೀಯ ರಾಜಕಾರಣಿಗಳು, ಸಮಾಜ ಚಿಂತಕರು, ಧಾರ್ಮಿಕ ಮುಖಂಡರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳಿಂದ ಸರ್ಕಾರಕ್ಕೆ ನಿರಂತರ ಮನವಿಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಭಾಷೆಗಳನ್ನು ಕಲಿಯಿರಿ ರಾಜ್ಯ ಕಂದಾಯ ಇಲಾಖೆಯು ಅಕ್ಟೋಬರ್ 1 ರಂದು ಅಧಿಕೃತ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ‘ಕರ್ನಾಟಕ ಭೂ ಕಂದಾಯ ಕಾಯ್ದೆ, 1964’ ರ ನಿಬಂಧನೆಗಳ ಅಡಿಯಲ್ಲಿ ಈ ಪ್ರಸ್ತಾವನೆಯನ್ನು ಸಾರ್ವಜನಿಕ ಗಮನಕ್ಕೆ ತರಲಾಗಿದೆ. ಜಿಲ್ಲೆಯ ಹೆಸರನ್ನು ಬದಲಾಯಿಸುವ ಅಂತಿಮ ತೀರ್ಮಾನಕ್ಕೆ ಬರುವ ಮುನ್ನ…

Read More