Author: admin

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಶಂಕಿಸಲಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಹಮ್ಮದ್ ಶಾಖಿರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆರೋಪಿಯು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳದ ಸುಜೀರು ಬದಿಗುಡ್ಡೆ ನಿವಾಸಿ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಂಗ ಪ್ರಕ್ರಿಯೆಯಂತೆ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಕಳ್ಳತನದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ? ಕಳವಾದ ವಸ್ತುಗಳು ಅಥವಾ ಹಣದ ಸುಳಿವು, ಘಟನೆಯಲ್ಲಿ ಬಳಸಿದ ವಾಹನ ಅಥವಾ ಇತರೆ ಸಾಕ್ಷ್ಯಾಧಾರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನಷ್ಟು ಮಾಹಿತಿ ಹಾಗೂ ತನಿಖೆಯ ಅಧಿಕೃತ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಸೂಕ್ತ ಸಮಯದಲ್ಲಿ ಪ್ರಕಟಿಸುವ ಸಾಧ್ಯತೆಯಿದೆ.

Read More

ನವದೆಹಲಿ : ಉಜಿರೆಯ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣಗೊಂಡಿದ್ದು, ಮರು ತನಿಖೆಯ ಸ್ವರೂಪದ ಕುರಿತಾದ ಆದೇಶವನ್ನು ಮಾನ್ಯ ನ್ಯಾಯಾಲಯ ಕಾಯ್ದಿರಿಸಿದೆ. ವಿಚಾರಣೆ ವೇಳೆ ತನಿಖಾ ಸಂಸ್ಥೆಯಾದ ಸಿಬಿಐ ಅನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಸಿಬಿಐ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, “ಘಟನೆ ನಡೆದು 14 ವರ್ಷಗಳೇ ಕಳೆದಿವೆ. ಆದರೂ ಸರಿಯಾದ ತನಿಖೆ ನಡೆದಿಲ್ಲ. ಸಿಬಿಐ ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಏಕೆ ಹೋಗಿಲ್ಲ?” ಎಂದು ಖಾರವಾಗಿ ಪ್ರಶ್ನಿಸಿತು. ಅಲ್ಲದೆ “ಕೆಳ ಹಂತದ ನ್ಯಾಯಾಲಯದಲ್ಲಿ ಇನ್ನು ಕೆಲವು ಆರೋಪಿಗಳ ವಿರುದ್ಧ ತನಿಖೆ ನಡೆಸಬೇಕು ಎಂದು ಹೇಳಿದ್ದ ಸಿಬಿಐ, ಈಗ ಸಿಬ್ಬಂದಿ ಕೊರತೆ ಹಾಗೂ ಹಣಕಾಸಿನ ಕೊರತೆಯ ನೆಪ ಹೇಳುತ್ತಿರುವುದು ತೀರಾ ಅಸಮಂಜಸ” ಎಂದು…

Read More

ನವದೆಹಲಿ:  ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ದಿಢೀರ್ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಾಕ್ರೋಚ್‌ ಜನತಾ ಪಾರ್ಟಿ  ನೇತೃತ್ವದ ಪ್ರತಿಭಟನೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರು ‘ಸಂಸದ್ ಚಲೋ’ ಕರೆಯನ್ನು ನೀಡಿ ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ಹಾಗೂ ಟಿಯರ್‌ ಗ್ಯಾಸ್‌ ಪ್ರಯೋಗ ಮಾಡಿದ್ದಾರೆ. ಟಾಲ್‌ಸ್ಟಾಯ್ ಮಾರ್ಗ ಮತ್ತು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಕಲ್ಲು ತೂರಾಟ ನಡೆದಿದೆ. ಈ ಘರ್ಷಣೆಯಲ್ಲಿ ಇಬ್ಬರು ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ ಕನಿಷ್ಠ 6 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.  ಆಯೋಜಕರ ಮಾತು ಕೇಳದೆ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆಯೇ ದಾಳಿ…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಶಾಲಾ ಬಸ್‌ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ, ಕಲ್ಲಡ್ಕ ಶ್ರೀರಾಮ ಶಾಲೆಯ ಆರು ವರ್ಷದ ವಿದ್ಯಾರ್ಥಿನಿ ಚಿರ ಎಂಬಾಕೆ ಮೃತಪಟ್ಟಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬುಧವಾರ ಸಂಜೆ ಶಾಲಾ ಅವಧಿ ಮುಗಿದ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ವಾಹನವು ಬರಿಮಾರು ಸಮೀಪದ ಶ್ರೀ ಕಾನಲ್ತಾಯ ದೈವಸ್ಥಾನದ ರಸ್ತೆಯಲ್ಲಿ ಚಲಿಸುತ್ತಿತ್ತು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಶಾಲಾ ವಾಹನದ ಮೇಲೆಯೇ ಉರುಳಿ ಬಿದ್ದಿದೆ. ಮರದ ಭಾರಕ್ಕೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಂದು ತಕ್ಷಣವೇ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವಾಹನದಲ್ಲಿದ್ದ ಮಕ್ಕಳನ್ನು ಹೊರತೆಗೆಯಲಾಯಿತಾದರೂ, ತೀವ್ರವಾಗಿ ಗಾಯಗೊಂಡಿದ್ದ 6 ವರ್ಷದ ಬಾಲಕಿ ಚಿರ ಚಿಕಿತ್ಸೆ ಫಲಕಾರಿಯಾಗದೆ ದುರಂತವಾಗಿ ಕೊನೆಯುಸಿರೆಳೆದಿದ್ದಾಳೆ. ಗಾಯಗೊಂಡ ಉಳಿದ…

Read More

ಗುವಾಹಟಿ: ಅಸ್ಸಾಂನಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ. ಬುಧವಾರ ಒಂದೇ ದಿನ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿನ 5.64 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವರ್ಷ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಶಿವಸಾಗರ್ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಅಂದರೆ 13 ಮಂದಿ ಮೃತಪಟ್ಟಿದ್ದಾರೆ. ಚರೈದಿಯೋ ಜಿಲ್ಲೆಯಲ್ಲಿ ಐವರು, ಗೋಲಾಘಾಟ್‌ನಲ್ಲಿ ಇಬ್ಬರು ಹಾಗೂ ಜೋರ್ಹಾಟ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಲ್ಲಿ ಶಿವಸಾಗರ್, ಜೋರ್ಹಾಟ್ ಹಾಗೂ ಚರೈದಿಯೋ ಪ್ರಮುಖವಾಗಿವೆ. ಶಿವಸಾಗರ್ ಜಿಲ್ಲೆಯಲ್ಲಿ 3,59,535 ಮಂದಿ, ಜೋರ್ಹಾಟ್‌ನಲ್ಲಿ 87,662 ಮಂದಿ ಮತ್ತು ಚರೈದಿಯೋ ಜಿಲ್ಲೆಯಲ್ಲಿ 72,646 ಮಂದಿ ಪ್ರವಾಹದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಮತ್ತು…

Read More

ಉಡುಪಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಗೆ ಸಂಬಂಧಿಸಿದಂತೆ ಉಡುಪಿಯ ಬ್ರಹ್ಮಗಿರಿಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಸಂಚಾರದಲ್ಲಿ ಅಲ್ಪ ವ್ಯತ್ಯಯ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರನ್ನು ಬಂಧಿಸಿರುವುದು ಖಂಡನೀಯ. ದೇಶದಾದ್ಯಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ ಎಂದು ಟೀಕಿಸಿದರು. ಕೇಂದ್ರ ಸರ್ಕಾರವು ಪ್ರತಿಭಟನೆಗಳನ್ನು ಹತ್ತಿಕ್ಕಲು ಗೂಂಡಾಗಳನ್ನು ಬಳಸುತ್ತಿದೆ ಎಂಬ ಆರೋಪ ಮಾಡಿರುವ ಅವರು, ಈ ಬೆಳವಣಿಗೆಗಳ ಕುರಿತು ಕೇಂದ್ರ ಸರ್ಕಾರ…

Read More

ಬೆಂಗಳೂರು: ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ಹರಿಹರದ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಸಂಗ ನಡೆದಿದೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಇಂದು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆ ತಿರುಗೇಟು ಎಂಬಂತೆ ಬಿಜೆಪಿ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿತ್ತು. ಶಾಸಕರ ಮೊಬೈಲಿಗೆ ಪ್ರತಿಭಟನೆ ಸ್ಥಳದ ಲೋಕೇಶನ್‌ ಕಳುಹಿಸಲಾಗಿತ್ತು. ಈ ಲೋಕೇಶನ್‌ ಆಧಾರದ ಮೇಲೆ ಬಿಪಿ ಹರೀಶ್‌ ಚಾಲಕ ಕ್ವೀನ್ಸ್‌ ರೋಡ್‌ ಬಳಿ ಹರೀಶ್‌ ಅವರನ್ನು ಬಿಟ್ಟಿದ್ದಾನೆ. ಹರೀಶ್‌ ಅವರು ಕಾರಿನಿಂದ ಇಳಿದ ಕೂಡಲೇ ಅಲ್ಲಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಕೂಡಲೇ ಅಲ್ಲಿದ್ದ ಪೊಲೀಸರು ಬಿಪಿ ಹರೀಶ್‌ ಅವರನ್ನು ರಕ್ಷಿಸಿದ್ದಾರೆ. ಬಿಪಿ ಹರೀಶ್‌ ಪ್ರತಿಕ್ರಿಯಿಸಿ, ನಮ್ಮ ನಾಯಕ…

Read More

ನವದೆಹಲಿ: ದೇಶದಲ್ಲಿ ಬಳಕೆಯಲ್ಲಿರುವ ಇ20 ಪೆಟ್ರೋಲ್ ಅಂದರೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಹಳೆಯ ವಾಹನಗಳ ಎಂಜಿನ್​ಗಳು ಹಾಳಾಗುತ್ತಿವೆ ಎಂಬ ಸಾರ್ವಜನಿಕರ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಇ20 ಇಂಧನ ಬಳಕೆಯಿಂದ ಹಳೆಯವ ವಾಹನಗಳಲ್ಲಿ ಮೈಲೇಜ್ ಶೇ.3 ರಿಂದ 5ರಷ್ಟು ಕಡಿಮೆಯಾಗಬಹುದೇ ವಿನಃ ಯಾವುದೇ ದೊಡ್ಡ ಹಾನಿಯಾಗುವುದಿಲ್ಲ ಎಂದು ಸರ್ಕಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ಎತ್ತಲಾದ ಪ್ರಶ್ನೆಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಲಿಖಿತ ಉತ್ತರ ನೀಡಿದ್ದಾರೆ. ಮೈಲೇಜ್ ಇಳಿಕೆಗೆ ಹಲವು ಕಾರಣ ಹಳೆಯ ಇ10 ಹೊಂದಿಕೊಳ್ಳುವ ವಾಹನಗಳಲ್ಲಿ ಇ20 ಪೆಟ್ರೋಲ್ ಬಳಸಿದಾಗ ಮೈಲೇಜ್‌ ಶೇ. 3 ರಿಂದ 5 ರಷ್ಟು ಮಾತ್ರ ಕಡಿತಗೊಳ್ಳಬಹುದು. ಆದರೆ, ವಾಹನದ ಮೈಲೇಜ್‌ ಎನ್ನುವುದು ಕೇವಲ ಇಂಧನವನ್ನಷ್ಟೇ ಅಲ್ಲದೆ, ಚಾಲನೆ ಮಾಡುವ ಶೈಲಿ, ಟೈರ್ ಒತ್ತಡ , ಎಸಿ ಬಳಕೆ ಮತ್ತು ವಾಹನದ ನಿರ್ವಹಣೆಯನ್ನು ಅವಲಂಬಿಸಿರುತ್ತದೆ. ಎಂಜಿನ್‌ಗೆ ತೊಂದರೆಯಿಲ್ಲ ದೇಶಾದ್ಯಂತ ಕೋಟ್ಯಂತರ ಕಾರುಗಳು ಹಾಗೂ ದ್ವಿಚಕ್ರ ವಾಹನಗಳು ಕಳೆದ…

Read More

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಚಳವಳಿಯ ಸ್ಥಾಪಕ ಮುಖಂಡರು, ಹಿರಿಯ ದಲಿತ ನಾಯಕರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಜನ ಚಳವಳಿಗಳ ಸಹಭಾಗಿಗಳು, ಮಾರ್ಗದರ್ಶಕರೂ ಆಗಿದ್ದ ಎಂ ದೇವದಾಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿ ಪ್ರಾರಂಭಗೊಂಡಾಗ ಕರಾವಳಿ ಜಿಲ್ಲೆಯಲ್ಲಿ ದಲಿತ ಚಳವಳಿಯನ್ನು ಪ್ರಾರಂಭಿಸಲು ಎಂ ದೇವದಾಸ್ ಬಹಳಷ್ಟು ಶ್ರಮ ವಹಿಸಿದ್ದರು. ಜಿಲ್ಲೆಯಾದ್ಯಂತ ಸಂಘಟನೆ ಕಟ್ಟಲು ಓಡಾಡಿದ್ದರು. ದಲಿತ ಸಮುದಾಯದ ನಡುವೆ ವೈಚಾರಿಕ ಪ್ರಜ್ಞೆ, ಸ್ವಾಭಿಮಾನ ಮೂಡಿಸಲು ಬಹಳಷ್ಟು ಶ್ರಮಿಸಿದ್ದರು. ಮಂಗಳೂರು ಭಾಗದಲ್ಲಿ ಎಡಪಂಥೀಯ, ವೈಚಾರಿಕ ಸಂಘಟನೆಗಳ ಜೊತೆ ಸೇರಿ ಹಲವು ಹೋರಾಟಗಳು, ಪ್ರತಿಭಟನೆಗಳನ್ನು ಸಂಘಟಿಸಿದ್ದರು. ಸಮಾನ ಮನಸ್ಕರ ವೇದಿಕೆಗಳು, ಜಂಟಿ ಹೋರಾಟಗಳನ್ನು ಸಂಘಟಿಸುವುದರಲ್ಲಿ ದೇವದಾಸ್ ಅವರು ಕೊಡುಗೆ ನೀಡಿದ್ದರು. ಹೊಸ ತಲೆಮಾರಿನ ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದರು. ಜನ ಚಳವಳಿಗಳು ಸವಾಲು ಎದುರಿಸುತ್ತಿರುವ, ಕೋಮುವಾದದ ಅಪಾಯ ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ಸೈದ್ದಾಂತಿಕ ಬದ್ದತೆ ಹೊಂದಿದ್ದ ಎಂ ದೇವದಾಸ್ ಅವರ ನಿರ್ಗಮನ ಚಳವಳಿಗಳಿಗೆ ಅಪಾರ ನಷ್ಟ ಉಂಟು ಮಾಡಿದೆ. ಅವರ…

Read More

ಬೆಂಗಳೂರು: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕ್ಷಮೆಯಾಚನೆಯ ವೀಡಿಯೋ ಹಂಚಿಕೊಂಡಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಪಡಿಸಿದ ಪ್ರತಿಭಟನಾಕಾರರು ಪಾಲಿಕೆಯ ಇಂಜಿನಿಯರ್‌ಗಳು, ಜೆಸಿಬಿ ಚಾಲಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಒಬ್ಬ ಸಿಬ್ಬಂದಿಗೆ ಹೆಲ್ಮೆಟ್‌ನಿಂದ ಹೊಡೆಯಲು ಯತ್ನಿಸಿದ್ದು ಮಾತ್ರವಲ್ಲದೆ, ಚಾಲಕನ ಕಣ್ಣಿಗೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ಉದ್ಧಟತನ ಮೆರೆದಿದ್ದಾರೆ. ಇದರಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಇವರು ಜೀವನೋಪಾಯಕ್ಕೆ ಕಷ್ಟಪಡುವ ಬಡವರಲ್ಲ, ಸಮಾಜಘಾತುಕ ಶಕ್ತಿಗಳು. ಕರ್ತವ್ಯನಿರತ ಅಧಿಕಾರಿಗಳ ಮೇಲೆ ಕೈಮಾಡಿದ ಯಾರನ್ನೂ ಬಿಡುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್…

Read More