Author: admin
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದ ಬಾಡಿಗೆ ಮನೆಯೊಂದರಲ್ಲಿ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಿ ನಡೆಯುತ್ತಿದ್ದ ಖೋಟಾ ನೋಟು ದಂಧೆ ಪ್ರಕರಣದಲ್ಲಿ ಬಂಧಿತ ಎಳು ಆರೋಪಿಗಳ ಪೈಕಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆದಿದ್ದು, ಉಳಿದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದಲ್ಲಿ ಬಂಧಿತ ಎಲ್ಲ ಏಳು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದು, ಮಂಗಳವಾರ ಕಸ್ಟಡಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ಪೊಲೀಸ್ ತನಿಖೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಇಬ್ರಾಹಿಂ, ಉತ್ತರ ಕನ್ನಡ ಮೂಲದ ಸಂದೀಪ ಪುಂಡಲೀಕ ಶೋಳಂಬಿ, ಬೆಳ್ತಂಗಡಿ ಉರುವಾಲು ನಿನ್ನಿಕಲ್ಲು ನಿವಾಸಿ ಸಿರಾಜುದ್ದೀನ್, ಬೆಳ್ತಂಗಡಿ ಪುತ್ತಿಲ ನಿವಾಸಿ ಇರ್ಷಾದ್ ಅವರನ್ನು ಜು. 26ರ ವರೆಗೆ ಮತ್ತೆ…
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿರುವ ಬಲ ಪ್ರಯೋಗ, ಲಾಠಿಚಾರ್ಜ್ ಖಂಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರಿದ್ದ ಪೀಠವು, “ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ” ಎಂದು ಅರ್ಜಿದಾರ ಪರ ವಕೀಲರಿಗೆ ಖಡಕ್ ಆಗಿ ತಿಳಿಸಿದೆ. ವೀಡಿಯೊ ನೋಡಲು ನಮಗೆ ಸಮಯವಿಲ್ಲ: ಸಿಜೆಐ ಸೂರ್ಯ ಕಾಂತ್ ಅರ್ಜಿ ಪ್ರಸ್ತಾಪಿಸಿದ ವಕೀಲ ನರೇಂದ್ರ ಮಿಶ್ರಾ, ಪೊಲೀಸರ ಕ್ರೌರ್ಯ ಮತ್ತು ಲಾಠಿಚಾರ್ಜ್ ಪ್ರದರ್ಶಿಸುವ ವೀಡಿಯೊ ಆಧಾರಗಳು ತಮ್ಮ ಬಳಿಯಿವೆ ಎಂದು ಪೀಠದ ಗಮನಕ್ಕೆ ತರಲು ಯತ್ನಿಸಿದರು. ನಮಗೆ ವೀಡಿಯೊಗಳನ್ನು ವೀಕ್ಷಿಸಲು ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ. ಈ ವಿಷಯದಲ್ಲಿ ನ್ಯಾಯಾಲಯದ ಸಮಯವನ್ನು ದಯವಿಟ್ಟು ವ್ಯರ್ಥ ಮಾಡಬೇಡಿ ಎಂದು ಸಿಜೆಐ ಅರ್ಜಿದಾರರ ಮಾತಿಗೆ ಅಡ್ಡಿಪಡಿಸಿದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಇನ್ನೂ ಸ್ಥಳದಲ್ಲೇ ಇದ್ದಾರೆ, ದಯವಿಟ್ಟು ಗುರುವಾರ…
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಮರ ಮತ್ತೆ ತೀವ್ರರೂಪ ಪಡೆದುಕೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರಿ ಜಿಗಿತ ಕಂಡಿದೆ. ಇದು ಭಾರತ ಸೇರಿದಂತೆ ಪ್ರಮುಖ ತೈಲ ಆಮದುದಾರ ರಾಷ್ಟ್ರಗಳಲ್ಲಿ ಆತಂಕ ಮೂಡಿಸಿದೆ. ಅಂತರರಾಷ್ಟ್ರೀಯ ತೈಲ ಮಾನದಂಡವಾಗಿರುವ ಬ್ರೆಂಟ್ ಕಚ್ಚಾ ತೈಲ ಬೆಲೆಯು ಶೇಕಡಾ 1.2 ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 92.09 ಡಾಲರ್‌ಗೆ ತಲುಪಿದೆ. ಇದು ಜೂನ್ ತಿಂಗಳ ಬಳಿಕ ದಾಖಲಾದ ಗರಿಷ್ಠ ದರವಾಗಿದೆ. ಅದೇ ರೀತಿ ಅಮೆರಿಕದ ಪ್ರಮುಖ ಕಚ್ಚಾ ತೈಲ ಮಾನದಂಡವಾದ ಡಬ್ಲೂಟಿಐ ದರ ಕೂಡ ಶೇ.1.1 ರಷ್ಟು ಹೆಚ್ಚಾಗಿದ್ದು, ಪ್ರತಿ ಬ್ಯಾರಲ್‌ಗೆ 85.23 ಡಾಲರ್‌ಗೆ ತಲುಪಿದೆ. ವಿಶ್ವದ ಸುಮಾರು ಶೇ. 20 ರಷ್ಟು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ (ಇರಾನ್ ತೈಲ ಟ್ಯಾಂಕರ್‌ಗಳನ್ನು ತಡೆದು ದಾಳಿ ನಡೆಸಿದೆ. ಅಮೆರಿಕದ ಸೇನಾ ನೆಲೆ ಹಾಗೂ ರೇಡಾರ್ ಕೇಂದ್ರಗಳನ್ನು ಗುರಿಯಾಗಿಸಿ ಇರಾನ್ ಸರಣಿ ದಾಳಿ ನಡೆಸಿದ್ದರೆ, ಪ್ರತಿಯಾಗಿ ಅಮೆರಿಕ ಪಡೆಗಳು…
ಬಂಟ್ವಾಳ: ಫರಂಗಿಪೇಟೆಯ ಬ್ಯಾಂಕ್‌ನಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದ್ದು, ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಬಂಟ್ವಾಳ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಎಎಸ್‌ಪಿ) ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಜುಲೈ 12ರ ರಾತ್ರಿ ಫರಂಗಿಪೇಟೆಯ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿತ್ತು. ದುಷ್ಕರ್ಮಿಗಳು ಕಟ್ಟಡದ ಮೇಲ್ಛಾವಣಿಯನ್ನು ಕೊರೆದು ಬ್ಯಾಂಕ್ ಒಳನುಗ್ಗಿದ್ದರು. ಆದರೆ ಬ್ಯಾಂಕ್‌ನ ಲಾಕರ್ ತೆರೆಯಲು ವಿಫಲರಾದ ಅವರು ಯಾವುದೇ ನಗದು ಅಥವಾ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡದೇ ಸ್ಥಳದಿಂದ ಪರಾರಿಯಾಗಿದ್ದರು. ಪ್ರಕರಣದ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ನಡೆಸಿರುವ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆಯ ವೇಳೆ ಮಹತ್ವದ ಸುಳಿವು ದೊರೆತ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡವನ್ನು ರಚಿಸಿ ತನಿಖೆ ಮುಂದುವರಿಸಲಾಗಿದೆ. ಘಟನೆ ನಡೆದ ದಿನದ ಮರುದಿನ ಎರಡನೇ ಶನಿವಾರದ ರಜೆ ಹಿನ್ನೆಲೆ ಬ್ಯಾಂಕ್ ಮುಚ್ಚಲಾಗಿತ್ತು. ಹೀಗಾಗಿ ಶನಿವಾರ ರಾತ್ರಿ ಮತ್ತು ಭಾನುವಾರದ…
ಮಂಗಳೂರು : ಗೆಳೆಯರ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿಯೊಬ್ಬರ ಬ್ಯಾಂಕ್ ಖಾತೆ, ಚೆಕ್ ಬುಕ್ ಹಾಗೂ ಸಿಮ್ ಕಾರ್ಡ್ ಪಡೆದು ದೇಶದ ವಿವಿಧ ರಾಜ್ಯಗಳಲ್ಲಿ ಸೈಬರ್ ವಂಚನೆ ಎಸಗಿರುವ ಆಘಾತಕಾರಿ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೂರುದಾರ 23 ವರ್ಷದ ಯುವಕ 2022ರಲ್ಲಿ ಬಲ್ಮಠದ ಖಾಸಗಿ ಕಾಲೇಜಿನಲ್ಲಿ ಐಟಿಐ ಕಲಿಯುತ್ತಿದ್ದಾಗ ಮಂಥನ್ ಎಂಬಾತನ ಪರಿಚಯವಾಗಿತ್ತು. 2023ರ ಅಕ್ಟೋಬರ್‌ನಲ್ಲಿ ಮಂಥನ್, ತನ್ನ ಪರಿಚಯದ ಮೊಹಮ್ಮದ್ ಹಮ್ರಾಜ್ ಹಾಗೂ ಮೊಹಮ್ಮದ್ ನಿಜಾಮುದ್ದೀನ್ ಎಂಬುವವರನ್ನು ಕಾಲೇಜು ಬಳಿ ಕರೆತಂದು ದೂರುದಾರರಿಗೆ ಪರಿಚಯಿಸಿದ್ದ. ಈ ವೇಳೆ ಮೊಹಮ್ಮದ್ ಹಮ್ರಾಜ್, “ನನಗೆ ವಿದೇಶದಿಂದ ಹಣ ಬರಬೇಕಿದ್ದು, ವರ್ಗಾವಣೆಗೆ ಬ್ಯಾಂಕ್ ಖಾತೆಯ ಅಗತ್ಯವಿದೆ” ಎಂದು ನಂಬಿಸಿದ್ದ. ಇದನ್ನು ನಿಜವೆಂದು ನಂಬಿದ ವಿದ್ಯಾರ್ಥಿ, ಸೌತ್ ಇಂಡಿಯನ್ ಬ್ಯಾಂಕಿನಲ್ಲಿ ತನ್ನ ಕೆವೈಸಿ (KYC) ನೀಡಿ ಖಾತೆ ತೆರೆದಿದ್ದರು. ಬಳಿಕ ಬ್ಯಾಂಕ್ ಪಾಸ್‌ಬುಕ್, ಸಹಿ ಮಾಡಿದ ಚೆಕ್‌ಬುಕ್, ಎಟಿಎಂ ಕಾರ್ಡ್ ಹಾಗೂ ಖಾತೆಗೆ ಲಿಂಕ್ ಆಗಿದ್ದ ಸಿಮ್ ಕಾರ್ಡ್ ಅನ್ನು ಹಮ್ರಾಜ್‌ಗೆ ನೀಡಿದ್ದರು. ಇದಕ್ಕೆ…
ಮಂಗಳೂರು: ಮನೆ ದುರಸ್ತಿ ಕಾಮಗಾರಿ ವೇಳೆ ಸುಮಾರು ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು 24 ಗಂಟೆಯೊಳಗೆ ಬಂಧಿಸಿ, ಕಳವಾಗಿದ್ದ ಸಂಪೂರ್ಣ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಜಹೀರುದ್ದೀನ್ (24), ನಿರಾಜುದ್ದೀನ್ ಅವರ ಪುತ್ರ, ಮೂಲತಃ ಉತ್ತರ ಪ್ರದೇಶದ ಬಲರಾಮ್ಪುರ ಜಿಲ್ಲೆಯ ಮುಜಾಹನಿ, ಗುಮಾರಿ ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದ ಅಜಿಜುದ್ದೀನ್ ರಸ್ತೆಯಲ್ಲಿ ವಾಸವಾಗಿರುವವನಾಗಿ ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಪ್ರದೇಶದ ಮನೆಯೊಂದರಲ್ಲಿ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ಹಾಲ್ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿಯನ್ನು ಮೇಸ್ತ್ರಿ ಹಾಗೂ ಸಹಾಯಕ ಕೆಲಸಗಾರರು ನಡೆಸುತ್ತಿದ್ದ ವೇಳೆ ಮನೆಯ ಟೇಬಲ್ ಡ್ರಾಯರ್ನಲ್ಲಿದ್ದ ಸಣ್ಣ ಪರ್ಸ್ನಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಉಂಗುರ, 4 ಗ್ರಾಂ ತೂಕದ ಮತ್ತೊಂದು ಚಿನ್ನದ ಉಂಗುರ…
ಮಂಗಳೂರು : ಮಂಗಳೂರು ತಾಲೂಕಿನ ಪಡವು ಗ್ರಾಮದ ಕೊಪ್ಪಳಕಾಡುವಿನಲ್ಲಿರುವ ಮನೆಯೊಂದರ ಬೆಡ್‌ರೂಮ್ ಟೇಬಲ್ ಡ್ರಾವರ್‌ನಲ್ಲಿಟ್ಟಿದ್ದ ಬರೋಬ್ಬರಿ ₹6,37,000 (ಆರು ಲಕ್ಷದ ಮೂವತ್ತೇಳು ಸಾವಿರ ರೂಪಾಯಿ) ಮೌಲ್ಯದ ಚಿನ್ನಾಭರಣ ಹಾಗೂ ಕೈಗಡಿಯಾರ ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೊಪ್ಪಳಕಾಡುವಿನ ‘ಶ್ರೀದೇವಿ ನಿವಾಸ’ದ ನಿವಾಸಿ ಜಗದೀಶ್ ದಾಸ್ ಎಂಬುವರು ತಮ್ಮ ಮನೆಯ ಹಿಂಭಾಗದ ಕೊಠಡಿಯ ಸಿಮೆಂಟ್ ಸ್ಲಾಬ್ ಕೆಲಸ ಮುಗಿದ ಬಳಿಕ, ಮನೆಯ ಹಾಲ್‌ನಲ್ಲಿ ಫಾಲ್ ಸೀಲಿಂಗ್ (False Ceiling) ಕೆಲಸವನ್ನು ವಹಿಸಿಕೊಟ್ಟಿದ್ದರು. ಅದರಂತೆ ಐದು ಮಂದಿ ಜುಲೈ 8, 2026 ರಿಂದ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ದೂರುದಾರ ಜಗದೀಶ್ ದಾಸ್ ಅವರು ತಮ್ಮ ಬೆಡ್‌ರೂಮ್‌ನಲ್ಲಿರುವ ಕಬ್ಬಿಣದ ಆಫೀಸ್ ಟೇಬಲ್ ಡ್ರಾವರ್‌ನಲ್ಲಿ (ಬೀಗ ಹಾಕಿರಲಿಲ್ಲ) ಸಣ್ಣ ಪರ್ಸ್‌ನಲ್ಲಿ ಇರಿಸಿದ್ದ: 20 ಗ್ರಾಂ ತೂಕದ ಚಿನ್ನದ ಕಡಗ (1),17 ಗ್ರಾಂ ತೂಕದ ವೆಂಕಟರಮಣ ದೇವರ ಪೆಂಡೆಂಟ್ ಹೊಂದಿದ್ದ ಚಿನ್ನದ ಚೈನ್ (1),8 ಗ್ರಾಂ ತೂಕದ ನವಗ್ರಹ ಉಂಗುರ (1),4 ಗ್ರಾಂ ತೂಕದ ಸಾದಾ ಚಿನ್ನದ ಉಂಗುರ…
ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ಮಾಡಲು ಪ್ರಯತ್ನಿಸಲಾಯಿತು ಎಂದು ಪಾಲಿಕೆ ಸಿಬ್ಬಂದಿ ತಿಳಿಸಿದ್ದಾರೆ. ಅಲ್ಲದೆ, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಯಿತು ಎಂದೂ ಅವರು ಆರೋಪಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿದರು. ಹಲ್ಲೆ ಯತ್ನದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಉದ್ವಿಗ್ನ ಪರಿಸ್ಥಿತಿಯಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಪಾಲಿಕೆ ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿದ್ದಾರೆ.
ಮಂಗಳೂರು: ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಸ್ಥಳೀಯ ದಿನಗೂಲಿ ಕಾರ್ಮಿಕ ಗಿರೀಶ್ ತೋರಿದ ಧೈರ್ಯ ಮತ್ತು ಸಮಯಪ್ರಜ್ಞೆ ಮಹತ್ವದ ಪಾತ್ರ ವಹಿಸಿದೆ. ಪೊಲೀಸರು ಅಧಿಕೃತವಾಗಿ ವಾಮಂಜೂರಿನ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಆರೋಪಿಯನ್ನು ಬಂಧಿಸುವ ಮುನ್ನವೇ ಗಿರೀಶ್ ತೋರಿದ ಸಾಹಸಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದ ಕಾರ್ಮಿಕರ ಮಾಹಿತಿ ಪ್ರಕಾರ, ಹತ್ಯೆ ನಡೆಸಿದ ಬಳಿಕ ಚೇತನ್ ಮಂಗಳೂರಿನತ್ತ ಕಾರಿನಲ್ಲಿ ತೆರಳಿ ವಾಮಂಜೂರಿಗೆ ಬಂದಿದ್ದಾನೆ ಎನ್ನಲಾಗಿದೆ. ಪಚ್ಚನಾಡಿ ಪ್ರದೇಶದಲ್ಲಿ ರಾತ್ರಿ ವೇಳೆ ಆತನ ಆಲ್ಟೋ ಕಾರು ಸಂಚರಿಸುತ್ತಿರುವುದು ಕಂಡುಬಂದಿದ್ದು, ಆತ ಕಾರಿನಲ್ಲೇ ರಾತ್ರಿ ಕಳೆದಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಮಾತನಾಡಿದ ಗಿರೀಶ್, ತಾನು ಗುರುಪುರ, ಕೈಕಂಬ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕೋಳಿ ಅಂಗಡಿಗಳ ತ್ಯಾಜ್ಯವನ್ನು ಪಿಕಪ್ ವಾಹನದಲ್ಲಿ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.…
ಬೆಂಗಳೂರು: ಸೈಬರ್ ವಂಚಕರು ದಿನಕ್ಕೊಂದು ಹೊಸ ಪ್ರಯೋಗ ಮಾಡುತ್ತಿದ್ದು , ವಾಟ್ಸಪ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಾಗ ತೆರೆಯುವ ಮುನ್ನ ಎಚ್ಚರವಾಗಿರಿ. ಮದುವೆ ಆಹ್ವಾನ ಪತ್ರಿಕೆ ಬಂದಿದೆ ಎಂದು ನಂಬಿ ಫೈಲ್ ಓಪನ್ ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಸುಮಾರು 9.96 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಜನರನ್ನು ಮೋಸಗೊಳಿಸಲು ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಾಟ್ಸಪ್‌ಗೆ ಬರುವ ಅಪರಿಚಿತ ಲಿಂಕ್ ಅಥವಾ ಫೈಲ್‌ಗಳನ್ನು ಕ್ಲಿಕ್ ಮಾಡಿ ಹಣ ಕಳೆದುಕೊಂಡ ಘಟನೆಗಳು ಆಗಾಗ ಕೇಳಿಬರುತ್ತಲೇ ಇವೆ. ಇದೀಗ ಅದೇ ರೀತಿಯಲ್ಲಿ ವಾಟ್ಸಪ್‌ನಲ್ಲಿ ಮದುವೆ ಆಹ್ವಾನದ ಹೆಸರಿನಲ್ಲಿ APK ಫೈಲ್ ಕಳುಹಿಸಿ ಸರ್ಕಾರಿ ಅಧಿಕಾರಿಯೊಬ್ಬರಿಗೆ ಸುಮಾರು 9.96 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ರಮೇಶ್ ಬಾಬು ಅವರಿಗೆ ಜುಲೈ 14ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸಪ್‌ನಲ್ಲಿ ಮದುವೆ ಆಹ್ವಾನದ ಸಂದೇಶ ಬಂದಿದೆ. ಸ್ನೇಹಿತ ಅಥವಾ…



