Author: admin
ಮೈಸೂರು: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಟಿ. ನರಸೀಪುರದಲ್ಲಿ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಬಳಿ ಇದ್ದ ಯುವತಿಯನ್ನು ಮೂವರು ಆರೋಪಿಗಳು ಅಪಹರಿಸಿದ್ದರು. ಬಳಿಕ ಚಾಮರಾಜನಗರ ತಾಲೂಕಿನ ಸಂತೆಮರಳ್ಳಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದರು. ಘಟನೆ ನಡೆದ 24 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಟಿ. ನರಸೀಪುರ ಪೊಲೀಸರು ಸ್ಥಳೀಯ ನಿವಾಸಿಗಳಾದ ಕಿರಣ್, ಕಿಶೋರ್ ಮತ್ತು ರಿಯಾನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಮೂಲದ ಆಟೋ ರಿಕ್ಷಾ ಚಾಲಕ ಶುಭರಾಜ್ (28) ಬಂಧಿತ ಆರೋಪಿ. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಈತ ಪರಿಚಯ ಮಾಡಿಕೊಂಡು, ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಷಯವನ್ನು ಯಾರ ಬಳಿಯೂ ಹೇಳದಂತೆ ಬಾಲಕಿಗೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಕಂಡುಬಂದಿದೆ. ಆಘಾತಗೊಂಡ ತಾಯಿ ವಿಚಾರಿಸಿದಾಗ ಆರೋಪಿ ಶುಭರಾಜ್ ಎಸಗಿದ್ದ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನನ್ವಯ ಜುಲೈ 18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ ಬೆಳ್ತಂಗಡಿ ಪೊಲೀಸರು…
ಗ್ಯಾಂಗ್ಟಾಕ್: ನಿರ್ಮಾಣ ಹಂತದ ಸುರಂಗ ಕುಸಿದು ಏಳು ಮಂದಿ ಮೃತಪಟ್ಟ ಘಟನೆ ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಡೆದಿದೆ. ಸಮರ್ಡುಂಗ್ (ಜೋಲುಂಗೆ) ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದರಲ್ಲಿ ಭೂಕುಸಿತ ಹಾಗೂ ಮೀಥೇನ್ ಅನಿಲ ಸ್ಫೋಟ ಸಂಭವಿಸಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟಿದ್ದು, ಹಲವರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ಸಿಕ್ಕಿಂ ಜಿಲ್ಲಾಡಳಿತದ ಪ್ರಕಾರ ಇದುವರೆಗೆ 7 ಶವಗಳನ್ನು ಹೊರತೆಗೆಯಲಾಗಿದ್ದು, ಸಿಂಗ್ತಾಮ್, ಗ್ಯಾಂಗ್ಟಾಕ್ ಮತ್ತು ನಾಮ್ಚಿ ಜಿಲ್ಲಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸುರಂಗದೊಳಗೆ ಅಂದಾಜು 18 ರಿಂದ 27 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದ್ದು, ಪ್ರಸ್ತುತ ಎನ್‌ಡಿಆರ್‌ಎಫ್ (NDRF) ಹಾಗೂ ಎಸ್‌ಡಿಆರ್‌ಎಫ್ (SDRF) ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸುರಂಗದೊಳಗೆ ಸುಮಾರು 1.5 ಕಿ.ಮೀ ಆಳದಲ್ಲಿ ನೈಸರ್ಗಿಕವಾಗಿ ರೂಪುಗೊಂಡಿದ್ದ ಅಪಾಯಕಾರಿ ಮೀಥೇನ್ ಅನಿಲ ಶೇಖರಣೆಯಾಗಿತ್ತು. ಅದನ್ನು ಹೊರಹಾಕುವ ಯತ್ನದ ವೇಳೆ ಸ್ಫೋಟ ಸಂಭವಿಸಿ ಭೂಕುಸಿತ ಉಂಟಾಗಿದೆ. ಇದರಿಂದ ಸುರಂಗದ ಪ್ರವೇಶ ದ್ವಾರ ಸಂಪೂರ್ಣ ಬಂದ್ ಆಗಿದೆ. ಸುರಂಗದಲ್ಲಿ ಆಮ್ಲಜನಕದ ಅಭಾವ, ದಟ್ಟ…
ಕೀವ್: ಉಕ್ರೇನ್‌ನ ಪ್ರಮುಖ ಬಂದರು ನಗರವಾದ ಒಡೆಸಾ ಸಮೀಪ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಭಾರತೀಯರು ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಕಾಸರಗೋಡು ಮೂಲದ ವ್ಯಕ್ತಿ ಸೇರಿ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ. ಕಾಸರಗೋಡಿನ ವ್ಯಾಪಾರಿ ನೌಕಾಪಡೆಯ ಉದ್ಯೋಗಿ ಅಖಿಲ್ ಜೋಯಾನ್ (26) ಮೃತ ವ್ಯಕ್ತಿ. ಸಾವನ್ನಪ್ಪಿದ ಇತರ ಭಾರತೀಯರ ವಿವರಗಳು ಇನ್ನೂ ಲಭ್ಯವಿಲ್ಲ. ಅಖಿಲ್ ಕಾಸರಗೋಡಿನ ವೆಲ್ಲರಿಕುಂಡು ಮೂಲದ ಜೋಯಾನ್ ಮತ್ತು ಸ್ಯಾಲಿ ದಂಪತಿಯ ಪುತ್ರ. ಮತ್ತೊಬ್ಬ ಭಾರತೀಯ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ರಷ್ಯಾ–ಉಕ್ರೇನ್ ಯುದ್ಧದ ನಡುವೆ ಈ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ ಈ ಘಟನೆಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭಾರತೀಯರಿದ್ದ ಹಡಗಿನ ಮೇಲೆ ದಾಳಿ ನಡೆಸಿರೋದು ಖಂಡನೀಯ ಮತ್ತು ಅತ್ಯಂತ ವಿಷಾದನೀಯ. ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುವುದು, ನಿರಪರಾಧಿ ನಾಗರಿಕ ಸಿಬ್ಬಂದಿಯನ್ನ ಕೊಲ್ಲುವುದು ಹಾಗೂ ಸಾಗರ ಮಾರ್ಗದ ಸ್ವಾತಂತ್ರ ವ್ಯಾಪಾರಕ್ಕೆ…
ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಂಘರ್ಷ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಇರಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಭಾರತ ಸರ್ಕಾರ ಅತ್ಯಂತ ತುರ್ತು ಪ್ರಯಾಣ ಸಲಹೆಯನ್ನು ಹೊರಡಿಸಿದೆ. ಪರಿಸ್ಥಿತಿ ಸುಧಾರಿಸುವವರೆಗೆ ಇರಾನ್ ಪ್ರಯಾಣವನ್ನು ಸಂಪೂರ್ಣವಾಗಿ ಮುಂದೂಡುವಂತೆ ಸೂಚಿಸಿರುವ ಕೇಂದ್ರ ಸರ್ಕಾರ, ಈಗಾಗಲೇ ಇರಾನ್‌ನಲ್ಲಿರುವ ಭಾರತೀಯರು ಲಭ್ಯವಿರುವ ವಿಮಾನಗಳ ಮೂಲಕ ತಕ್ಷಣವೇ ದೇಶಕ್ಕೆ ವಾಪಸಾಗುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಇರಾನ್ ದೇಶದಾದ್ಯಂತ ರಾಜಕೀಯ ಅಸ್ಥಿರತೆ ಹಾಗೂ ಸೈನಿಕ ಕಾರ್ಯಾಚರಣೆಗಳು ಉಲ್ಬಣಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಟೆಹರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಷ್ಕೃತ ಪ್ರಯಾಣ ಸಲಹೆಯನ್ನು ಬಿಡುಗಡೆ ಮಾಡಿದೆ. “ಯಾವುದೇ ಉದ್ದೇಶಕ್ಕಾಗಿ ಭಾರತೀಯ ಪ್ರಜೆಗಳು ಇರಾನ್‌ಗೆ ಪ್ರಯಾಣಿಸುವ ಯೋಜನೆ ಮಾಡಿಕೊಂಡಿದ್ದರೆ, ಭದ್ರತಾ ವಾತಾವರಣ ಸುಧಾರಿಸುವವರೆಗೂ ಪ್ರವಾಸವನ್ನು ತಡೆಹಿಡಿಯಬೇಕು. ಇರಾನ್‌ನಲ್ಲಿರುವ ಭಾರತೀಯರು ಕಾಯದೆ ಲಭ್ಯವಿರುವ ಕಮರ್ಷಿಯಲ್ ವಿಮಾನಗಳ ಮೂಲಕ ತಕ್ಷಣವೇ ಭಾರತಕ್ಕೆ ಹಿಂದಿರುಗಬೇಕು” ಎಂದು ತಿಳಿಸಲಾಗಿದೆ. ಒಂದು ವೇಳೆ ಇರಾನ್‌ನಲ್ಲೇ ಉಳಿಯಲು ಬಯಸುವ ಭಾರತೀಯರು ಅತ್ಯಂತ ಜಾಗರೂಕರಾಗಿರಬೇಕು. ನಿಯಮಿತವಾಗಿ ಸುದ್ದಿಗಳನ್ನು ಗಮನಿಸುತ್ತಾ…
ಮಂಗಳೂರು : ರಾತ್ರಿ ಮನೆಯಲ್ಲಿ ಮಲಗಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ, ಪ್ರಸ್ತುತ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ ಆತನ ಸ್ವಂತ ಅಣ್ಣ ಸೋಮನಾಥ್ (21) ಎಂಬಾತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಪ್ಪಳ ಮೂಲದ ಈ ಕುಟುಂಬ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ವಾಸವಾಗಿತ್ತು. ಇತ್ತೀಚೆಗೆ ತಾಯಿ ಕೊಪ್ಪಳದಲ್ಲಿರುವ ಸ್ವಗ್ರಾಮಕ್ಕೆ ತೆರಳಿದ್ದರಿಂದ ಮನೆಯಲ್ಲಿ ಇಬ್ಬರು ಸಹೋದರರು ಮಾತ್ರ ಇದ್ದರು. ರವಿವಾರ ತಡರಾತ್ರಿ ಇಬ್ಬರೂ ಊಟ ಮಾಡಿ ಮಲಗಿದ್ದರು. ಆದರೆ, ಸೋಮವಾರ ಬೆಳಿಗ್ಗೆ ನಿದ್ದೆಯಿಂದ ಎದ್ದ ಅಣ್ಣ ಸೋಮನಾಥ್, “ನನ್ನ ತಮ್ಮ ಮಲಗಿದ್ದಲ್ಲಿಂದ ಏಳುತ್ತಲೇ ಇಲ್ಲ” ಎಂದು ನೆರೆಮನೆಯವರ…
ದಾವಣಗೆರೆ : ಮೂರು ತಿಂಗಳ ಹಿಂದೆ ಶಂಕಾಸ್ಪದವಾಗಿ ಮೃತಪಟ್ಟಿದ್ದ ತಮ್ಮ ತಾಯಿಯ ಸಾವಿಗೆ ಸೂಕ್ತ ನ್ಯಾಯ ಸಿಗಲಿಲ್ಲ ಎಂಬ ಆಕ್ರೋಶದಿಂದ, ಸಮಾಧಿಯಲ್ಲಿ ಹೂತಿಟ್ಟಿದ್ದ ಕೊಳೆತ ಶವವನ್ನು ಮಧ್ಯರಾತ್ರಿ ಅಗೆದು ಹೊರತೆಗೆದು, ಬಟ್ಟೆಯಲ್ಲಿ ಸುತ್ತಿ ಬೈಕ್‌ನಲ್ಲಿ ಜಿಲ್ಲಾಸ್ಪತ್ರೆಗೆ ಹೊತ್ತೊಯ್ದ ಅತ್ಯಂತ ಭೀಕರ ಹಾಗೂ ಘೋರ ಘಟನೆಯೊಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ನಡೆದಿದೆ. ಅದಾಪುರ ಗ್ರಾಮದ ಈರಮ್ಮ ಎಂಬುವವರು ಏಪ್ರಿಲ್ 29 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ವೈದ್ಯರು ಹಾಗೂ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಇದನ್ನು ತೀವ್ರವಾಗಿ ನಿರಾಕರಿಸಿದ್ದ ಮೃತ ಈರಮ್ಮ ಅವರ ಮಕ್ಕಳಾದ ಮಂಜುನಾಥ್ ಹಾಗೂ ವೆಂಕಟೇಶ್, “ಇದು ಆತ್ಮಹತ್ಯೆಯಲ್ಲ, ಅಕ್ಕಪಕ್ಕದವರೇ ಸೇರಿ ಮಾಡಿದ ಭೀಕರ ಕೊಲೆ” ಎಂದು ಗಂಭೀರ ಆರೋಪ ಮಾಡಿದ್ದರು. ಗ್ರಾಮದಲ್ಲಿ ಬಾಕ್ಸ್ ಚರಂಡಿ ನಿರ್ಮಾಣದ ವಿಷಯವಾಗಿ ಸಂಬಂಧಿಕರಾದ ಕರಿಯಪ್ಪ, ಭದ್ರಾ, ಶಕುಂತಲಾ ಸೇರಿದಂತೆ ಸುಮಾರು 10 ರಿಂದ 11 ಜನರ ಜೊತೆ ಈರಮ್ಮ…
ಬೈಂದೂರು: ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಐವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರೂರು ಸಮೀಪದ ಸಮುದ್ರ ತೀರದಲ್ಲಿ ನಡೆದಿದೆ. ರಕ್ಷಿಸಲ್ಪಟ್ಟ ಮೀನುಗಾರರನ್ನು ಪಡುವರಿ ಗ್ರಾಮದ ತರಪತಿ ಅಳ್ವೆಕೋಡಿಯ ನಿವಾಸಿಗಳಾದ ನಾಗರಾಜ ಖಾರ್ವಿ, ಯೋಗೀಶ್ ಖಾರ್ವಿ, ರಾಜು ಖಾರ್ವಿ, ಮಂಜುನಾಥ್ ಖಾರ್ವಿ ಹಾಗೂ ನಾಗರಾಜ ಖಾರ್ವಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಮಲ್ಪೆಯಲ್ಲಿ ಮೀನುಗಾರಿಕೆ ಮುಗಿಸಿ ಭಟ್ಕಳದತ್ತ ಹಿಂದಿರುಗುತ್ತಿದ್ದ ವೇಳೆ ಶಿರೂರು ಸಮುದ್ರ ತೀರದ ಕೋಕ್ಲೇರಕಲ್ಲು ಪ್ರದೇಶದ ಬಳಿ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಉಂಟಾದ ಬೃಹತ್ ಅಲೆಯೊಂದು ದೋಣಿಗೆ ಅಪ್ಪಳಿಸಿತು. ಪರಿಣಾಮ ದೋಣಿ ಮಗುಚಿಬಿದ್ದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರು ಜೀವ ರಕ್ಷಕ ಜಾಕೆಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಸಮೀಪದಲ್ಲೇ ಮೀನುಗಾರಿಕೆಯಲ್ಲಿ ತೊಡಗಿದ್ದ ಶೇಖರ್ ಖಾರ್ವಿ ಘಟನೆ ಗಮನಿಸಿ ತಕ್ಷಣ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಐವರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಪಘಾತದಲ್ಲಿ ಮೀನುಗಾರಿಕಾ ದೋಣಿ ಸಂಪೂರ್ಣ ಹಾನಿಗೊಳಗಾಗಿದೆ. ದೋಣಿಯ…
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನ ಮಂಜಿ ದಕ್ಕೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದ ಮೀನುಗಾರನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ. ಮೃತರನ್ನು ಆಂಧ್ರಪ್ರದೇಶದ ಬೆೈನಾಪಲ್ಲಿ ನಿವಾಸಿ ಬೊನ್ನ (40) ಎಂದು ಗುರುತಿಸಲಾಗಿದೆ. ಅವರು ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನುಗಾರಿಕೆ ಸಂಬಂಧಿತ ಕೆಲಸ ಮಾಡುತ್ತಿದ್ದರು. ಜುಲೈ 17ರಂದು ಬೆಳಗ್ಗೆ ಮಂಜಿ ದಕ್ಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಅವರು ನಾಪತ್ತೆಯಾಗಿದ್ದರು. ಬಳಿಕ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಜುಲೈ 19ರಂದು ಬೆಳಗ್ಗೆ ಅವರು ನೀರಿಗೆ ಬಿದ್ದಿದ್ದ ಸ್ಥಳದ ಸಮೀಪವೇ ಮೃತದೇಹ ತೇಲಿಬಂದಿದ್ದು, ಅದನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿಚಾರ್ಜ್ – ದೆಹಲಿಯ ಕೆಲ ಭಾಗಗಳಲ್ಲಿ ಇಂಟರ್ನೆಟ್ ಸ್ಥಗಿತ
ನವದೆಹಲಿ: ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ ಮೊದಲ ದಿನವಾದ ಇಂದು (ಜುಲೈ 20), ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ‘ಚಲೋ ಸಂಸತ್’ ಮೆರವಣಿಗೆಗೆ ಸಿಜೆಪಿ ಕರೆ ನೀಡಿತ್ತು. ಕರೆಯ ಬೆನ್ನಲ್ಲೇ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸಿಜೆಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿ ಸಂಸತ್ತಿನತ್ತ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ತಡೆದರು. ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನಗ್ಗುತ್ತಿದ್ದಂತೆ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ಹಾಗೂ ರ‍್ಯಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿ ಜಂತರ್ ಮಂತರ್ ರಸ್ತೆಯ ಸುತ್ತಲೂ ಬಿಗಿ ಭದ್ರತೆ ಒದಗಿಸಿದ್ದರು. ಪ್ರತಿಭಟನಾಕಾರರು ಪೊಲೀಸ್ ಕಾವಲನ್ನು ಮೀರಿ ಮುನ್ನುಗ್ಗಿದಾಗ, ಪರಿಸ್ಥಿತಿ ಹದ್ದುಬಸ್ತಿಗೆ ತರಲು ಪೊಲೀಸರು ಹಗುರ ಲಾಠಿಚಾರ್ಜ್ ನಡೆಸಿ ಹಲವು ಕಾರ್ಯಕರ್ತರನ್ನು ವಶಕ್ಕೆ…



