Author: admin

ಕಣ್ಣೂರು: ಮಂಗಳೂರು ಮೂಲದ ಯುವಕನ ಕೊಲೆ ಕೇಸ್‌ನಲ್ಲಿ ಸೌದಿ ಅರೇಬಿಯಾದ ಜೈಲು ಸೇರಿ, ಬಳಿಕ ಬರೋಬ್ಬರಿ 80 ಲಕ್ಷ ರೂಪಾಯಿ ‘ಬ್ಲಡ್ ಮನಿ’ ಪಾವತಿಸಿ ಭಾರತಕ್ಕೆ ಮರಳಿದ್ದ ಕಣ್ಣೂರು ಮೂಲದ ವ್ಯಕ್ತಿಯೊಬ್ಬ, ಇದೀಗ ಬೆಂಗಳೂರಿನಿಂದ ಕೇರಳಕ್ಕೆ ಸಿಂಥೆಟಿಕ್ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಅಂತರರಾಜ್ಯ ಮೆಥಾಂಫೆಟಮೈನ್ ಕಳ್ಳಸಾಗಣೆ ಜಾಲದ ಮಾಸ್ಟರ್ ಮೈಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳದ ಕರಿಕೊಟ್ಟಕ್ಕರಿ ನಿವಾಸಿ ಫಜಲುದ್ದೀನ್ ಟಿ (45) ಜುಲೈ 14 ರಂದು ಇರಿಟ್ಟಿ ಪೊಲೀಸರಿಂದ ಬಂಧನಕ್ಕೊಳಗಾದ ಕುಖ್ಯಾತ ಡ್ರಗ್ ಕಿಂಗ್‌ಪಿನ್ ಆಗಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಫಜಲುದ್ದೀನ್ 2006 ರಲ್ಲಿ ಸೌದಿ ಅರೇಬಿಯಾದಲ್ಲಿ ಟ್ಯಾಕ್ಸಿ ಚಾಲಕನಾಗಿದ್ದಾಗ ಮಂಗಳೂರು ಮೂಲದ ಅಶ್ರಫ್ (23) ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸೌದಿ ಜೈಲು ಸೇರಿದ್ದನು. ಅಲ್ಲಿ 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಬಳಿಕ, ಸ್ವಯಂಸೇವಾ ಸಂಸ್ಥೆಗಳು ಹಾಗೂ ದಾನಿಗಳ ಬೆಂಬಲದೊಂದಿಗೆ ಕ್ರೋಢೀಕರಿಸಲಾದ ಬರೋಬ್ಬರಿ 80 ಲಕ್ಷ ರೂ. ‘ಬ್ಲಡ್ ಮನಿ’ಯನ್ನು ಸಂತ್ರಸ್ತರ ಕುಟುಂಬಕ್ಕೆ…

Read More

ನವದೆಹಲಿ : ರಾಷ್ಟ್ರಗೀತೆ ಜನಗಣಮನಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸಲಾಗುತ್ತದೆ. ಅದರಂತೆ ಇನ್ನು ಮುಂದೆ ವಂದೇ ಮಾತರಂ ಗೀತೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲಾಗುತ್ತದೆ. ಈ ಬಗ್ಗೆ ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ವಿಧೇಯಕದಲ್ಲಿ ಪ್ರಸ್ತಾವನೆಯಿದೆ. ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ವಿಧೇಯಕ-2026 ಅನ್ನು ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ರಾಜ್ಯಸಭೆ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದ್ದರು. ಇದೀಗ ವಿಧೇಯಕವನ್ನು ಅವರು ಸದನದಲ್ಲಿ ಮಂಡಿಸಲಿದ್ದಾರೆ. ಈ ವಿಧೇಯದ ಪ್ರಕಾರ, ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆ, ವಂದೇಮಾತರಂಗೆ ಅಡ್ಡಿಪಡಿಸಿದರೆ ೩ ವರ್ಷಗಳವರೆಗೆ ಜೈಲುಶಿಕ್ಷೆ, ದಂಡ ವಿಧಿಸಬಹುದಾಗಿದೆ. ಸರ್ಕಾರ ಇತ್ತೀಚೆಗಷ್ಟೇ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿತ್ತು.

Read More

2026ರ ನೀಟ್ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿದೇಶಿ ಕೆಟಗರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಮೊಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಇವರು ಅಬ್ದುಲ್ ಸಮದ್ ಕೊಳ್ನಾಡ್ ಅವರ ಪುತ್ರರಾಗಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅಯಾನ್ ಶೇಕಡಾ 99.92ರಷ್ಟು ಅಂಕಗಳನ್ನು ಗಳಿಸಿ ಗಮನಾರ್ಹ ಶೈಕ್ಷಣಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸೌದಿ ಅರೇಬಿಯಾದ ಅಲ್-ಜುಬೈಲ್‌ನಲ್ಲಿರುವ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ವಿದ್ಯಾರ್ಥಿಯಾಗಿರುವ ಮೊಹಮ್ಮದ್ ಅಯಾನ್, ಈ ಸಾಧನೆಯ ಮೂಲಕ ಸೌದಿ ಅರೇಬಿಯಾದಲ್ಲಿನ ಭಾರತೀಯ ಸಮುದಾಯಕ್ಕೆ ಅಪಾರ ಹೆಮ್ಮೆ ತಂದಿದ್ದಾರೆ. ಅಯಾನ್ ಕೇವಲ ನೀಟ್ ಪರೀಕ್ಷೆಯಲ್ಲಿ ಮಾತ್ರವಲ್ಲದೆ, ಸಿಬಿಎಸ್‌ಇ 12ನೇ ತರಗತಿಯ ವಿಜ್ಞಾನ ವಿಭಾಗದಲ್ಲೂ ಟಾಪರ್ ಆಗುವ ಮೂಲಕ ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದರು. ಅವರ ಈ ಉತ್ತಮ ಸಾಧನೆಗೆ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.

Read More

ಬಂಟ್ವಾಳ: ಆರೋಪಿಯೋರ್ವನ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಠಾಣಾ ಅ.ಕ್ರ 95/2026 U/S 78 126,103 ಬಿ.ಎನ್.ಎಸ್, 2023 ಮತ್ತು ಕಲಂ: 25, 27, ಆರ್ಮ್ಸ್ ಆಕ್ಟ್ ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣ ಕುರಿತು ವಿವಿಧ ವಾಟ್ಸಾಪ್ ಗ್ರೂಪ್‌ಗಳು ಹಾಗೂ ಇನ್‌ಸ್ಟಾಗ್ರಾಂ ಖಾತೆಗಳ ಮೂಲಕ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಅಳವಡಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಲಾಗಿರುತ್ತದೆ. ಈ ರೀತಿ ಫೋಟೋ ಎಡಿಟ್ ಮಾಡಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹಾಕಿರುವುದಕ್ಕೆ ಸಂಬಂಧಿಸಿದಂತೆ 1) troll_master.__Instagram Account 2) Yuva Belthangady Whatsappgroup 3) PPadmaraj Padmarajpari Whatsapp group 4) Padmaraj Padmaraj pariWhatsapp group 5)Yuva CongressBelthangady Whatsappgroup 6) Facts and Justice Whatsappgroup ಗಳ ವಿರುದ್ಧ ಅ.ಕ್ರ: 96/2026…

Read More

ನವದೆಹಲಿ:ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್ಚುಕ್  ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಜ್ಞೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ದೆಹಲಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಹೈಕೋರ್ಟ್ ನಿರ್ದೇಶನ ಹಾಗೂ ವೈದ್ಯಕೀಯ ತಜ್ಞರ ಸಲಹೆಯಂತೆ ವಾಂಗ್ಚುಕ್ ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಾಗಿದ್ದರಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೆಲ ಪ್ರತಿಭಟನಾಕಾರರು ಪೊಲೀಸರ ಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಯಿತು. ಆದರೆ, ಸಂಪೂರ್ಣ ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಬಲಪ್ರಯೋಗದ ಆರೋಪ ಇನ್ನೊಂದೆಡೆ, ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಘಟನೆಯ ಮುಖಂಡರು ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಲಾಗಿದೆ. ಲಾಠಿ ಚಾರ್ಜ್…

Read More

ನವದೆಹಲಿ: ದಾಂಪತ್ಯ ಜೀವನದಲ್ಲಿ ಪ್ರೀತಿ, ವಿಶ್ವಾಸ ಮತ್ತು ಪರಸ್ಪರ ಗೌರವ ಅತ್ಯಂತ ಮುಖ್ಯವಾದ ಅಂಶಗಳಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಅನುಮಾನ, ಅಪನಂಬಿಕೆ ಅಥವಾ ಕುತೂಹಲದ ಕಾರಣದಿಂದ ಗಂಡ-ಹೆಂಡತಿ ಪರಸ್ಪರರ ಮೊಬೈಲ್ ಫೋನ್, ವಾಟ್ಸಾಪ್ ಸಂದೇಶಗಳು, ಕರೆಗಳ ದಾಖಲೆ, ಫೋಟೋಗಳು ಹಾಗೂ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪರಿಶೀಲಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆದರೆ, ಸಂಗಾತಿಯ ಅನುಮತಿಯಿಲ್ಲದೆ ಅವರ ಮೊಬೈಲ್ ಪರಿಶೀಲಿಸುವುದು ಕಾನೂನುಬದ್ಧವೇ? ಈ ಬಗ್ಗೆ ಭಾರತೀಯ ಕಾನೂನು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಭಾರತೀಯ ಕಾನೂನಿನ ಪ್ರಕಾರ, ಮದುವೆಯಾದ ಬಳಿಕವೂ ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಹಕ್ಕುಗಳು ಮತ್ತು ಗೌಪ್ಯತೆಯ ಹಕ್ಕು ಅಸ್ತಿತ್ವದಲ್ಲೇ ಇರುತ್ತವೆ. ಮದುವೆಯಾದ ಕಾರಣಕ್ಕೆ ಒಬ್ಬರ ವೈಯಕ್ತಿಕ ಮಾಹಿತಿಯ ಮೇಲೆ ಮತ್ತೊಬ್ಬರಿಗೆ ಸಂಪೂರ್ಣ ಹಕ್ಕು ದೊರೆಯುವುದಿಲ್ಲ. ಅನೇಕರು “ಗಂಡ ಅಥವಾ ಹೆಂಡತಿ ಎಂದರೆ ಅವರ ಮೊಬೈಲ್ ಯಾವಾಗ ಬೇಕಾದರೂ ನೋಡಬಹುದು” ಎಂದು ಭಾವಿಸುತ್ತಾರೆ. ಆದರೆ ಈ ಕಲ್ಪನೆ ಕಾನೂನಿನ ದೃಷ್ಟಿಯಲ್ಲಿ ಸರಿಯಲ್ಲ. ಭಾರತೀಯ ಸಂವಿಧಾನದ ವಿಧಿ 21 (Article 21) ಅಡಿಯಲ್ಲಿ…

Read More

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಕಳ್ಳ ಬೇಟೆಗಾರರು ಗಾಯಗೊಂಡಿದ್ದಾರೆ. ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡುಕೋಣ ಬೇಟೆಯಾಡಿ ಜೀಪ್‌ನಲ್ಲಿ ಮಾಂಸ ಸಾಗಿಸುತ್ತಿದ್ದ ಇಬ್ಬರು ಕಳ್ಳಬೇಟೆಗಾರರನ್ನ ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆರೋಪಿಗಳು ಜೀಪನ್ನು ಅರಣ್ಯ ಸಿಬ್ಬಂದಿ ಮೇಲೆಯೇ ಹರಿಸಿ ಪರಾರಿಯಾಗಲು ಯತ್ನಿಸಿದರೆಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಿಸಲು ಮತ್ತು ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ 3 ಸುತ್ತು ಗುಂಡು ಹಾರಿಸಿದ್ದಾರೆ. ಈ ವೇಳೆ ಜುಬೇರ್ ಹಾಗೂ ಯಾಕೂಬ್ ಎಂಬ ಇಬ್ಬರು ಆರೋಪಿಗಳಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಅಸ್ಪತ್ರೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಆರೋಪಿಗಳಿಂದ ಸುಮಾರು 266 ಕೆಜಿ ಕಾಡುಕೋಣದ ಮಾಂಸವನ್ನ ವಶಕ್ಕೆ ಪಡೆದಿದ್ದಾರೆ. ಕಳ್ಳಬೇಟೆಗೆ ಬಳಸಿದ್ದ ವಾಹನ…

Read More

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಐಷಾರಾಮಿ ಬಿಎಂಡಬ್ಲ್ಯು (BMW) ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲಗಳ ಪ್ರಕಾರ, ಈ ಐಷಾರಾಮಿ ಕಾರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಉಪ್ಪಿನಂಗಡಿ ದಾಟಿ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ತಲುಪಿದಾಗ ಕಾರಿನ ಮುಂಭಾಗದ ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಇಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ತಕ್ಷಣವೇ ಗಮನಿಸಿದ ಚಾಲಕ, ತಡಮಾಡದೆ ಕಾರನ್ನು ಹೆದ್ದಾರಿಯ ಬದಿಗೆ ನಿಲ್ಲಿಸಿದ್ದಾರೆ. ಕಾರು ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕುವ ಮುನ್ನವೇ ಒಳಗಿದ್ದ ನಾಲ್ವರೂ ಪ್ರಯಾಣಿಕರು ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. ಅವರು ಕೆಳಗಿಳಿಯುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ವ್ಯಾಪಿಸಿದ್ದು, ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿದೆ.

Read More

ನವದೆಹಲಿ: ಭಾರತದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಯೋಜನೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಜಂಟಿ ನಿರ್ಧಾರವೊಂದನ್ನು ಭಾರತ ಮತ್ತು ಜಪಾನ್ ಸರ್ಕಾರಗಳು ಕೈಗೊಂಡಿವೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಜಪಾನ್‌ನೊಂದಿಗಿನ ದ್ವಿಪಕ್ಷೀಯ ಮಾತುಕತೆಗಳು ಅತ್ಯಂತ ಯಶಸ್ವಿಯಾಗಿ ಮುನ್ನಡೆದಿದ್ದು, ದೇಶದ ಮೊದಲ ಬುಲೆಟ್ ರೈಲನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಓಡಿಸಲು ಇತ್ತೀಚಿನ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿವೆ. ಮೊದಲ ಹಂತದ ಕಾರಿಡಾರ್ 2027 ರಲ್ಲೇ ಮುಕ್ತಾಯ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ ಯೋಜನೆಯ ಸಿವಿಲ್ ಕಾಮಗಾರಿಗಳು (ಪಿಲ್ಲರ್ ಮತ್ತು ಟ್ರ್ಯಾಕ್ ಅಳವಡಿಕೆ) ಪ್ರಸ್ತುತ ಗುಜರಾತ್ ವಲಯದಲ್ಲಿ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿವೆ. ಯೋಜನೆಯ ಮೊದಲ ಆದ್ಯತೆಯ ವಿಭಾಗವು 2027 ರ ವೇಳೆಗೆ ಸಂಚರಿಸಲು ಸಂಪೂರ್ಣ ಸಜ್ಜಾಗಲಿದೆ. ಜಪಾನ್‌ನ ‘E10 ಸರಣಿ’ ತಂತ್ರಜ್ಞಾನ ತಡವಾಗಲಿದೆ ಜಪಾನ್ ದೇಶವು ಭಾರತೀಯ ಹವಾಮಾನ ಮತ್ತು ಪರಿಸರಕ್ಕೆ ಹೊಂದುವಂತಹ ಅತ್ಯಾಧುನಿಕ ‘ಇ10 ಸರಣಿ’ (E10 Series) ಬುಲೆಟ್ ರೈಲುಗಳನ್ನು ಭಾರತಕ್ಕೆ ಪೂರೈಸಲು ಒಪ್ಪಿಕೊಂಡಿದೆ. ಆದರೆ,…

Read More

ಕಾರ್ಕಳ : ಶಿವತಿಕೆರೆ ಸಮೀಪ ರವಿವಾರ (ಜುಲೈ 12) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ, ನಂದಳಿಕೆ ನಿವಾಸಿ ಶಿವಪ್ರಸಾದ್‌ ರಾವ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಓರ್ವ ಪ್ರಾಮಾಣಿಕ ಅಧಿಕಾರಿಯ ಅಕಾಲಿಕ ಮರಣವು ಇಡೀ ತಾಲೂಕು ಕಚೇರಿ ಹಾಗೂ ಸ್ಥಳೀಯರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ರವಿವಾರ ಸಂಜೆ ಶಿವಪ್ರಸಾದ್ ರಾವ್ ಅವರು ಕಾರ್ಕಳದಿಂದ ತಮ್ಮ ಸ್ಕೂಟರಿನಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ತಲುಪಿದಾಗ, ಸ್ಕೂಟರ್‌ನ ಇಂಡಿಕೇಟರ್ ನೀಡಿ ಯೂ-ಟರ್ನ್ (U-Turn) ಪಡೆಯಲು ಮುಂದಾಗಿದ್ದರು. ಇದೇ ವೇಳೆ ಹಿಂದಿನಿಂದ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಬೈಕ್ ಒಂದು ಅವರ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಶಿವಪ್ರಸಾದ್ ರಾವ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಗಾಯಗಳ…

Read More