Author: admin

ರಾಯಚೂರು/ಸಿಂಧನೂರು : ಸಿಂಧನೂರು ತಾಲೂಕಿನ ಕೆ.ಹಂಚಿನಾಳ ಕ್ಯಾಂಪ್‌ನಲ್ಲಿ ಬುಧವಾರ ಮುಂಜಾನೆ ಕೋಳಿ ಅಂಗಡಿಯೊಂದರ ಬಳಿ ಜಮಾಯಿಸಿದ್ದ ಬೀದಿನಾಯಿಗಳ ಹಿಂಡು, ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಹಸುಗೂಸಿನ ಮೇಲೆ ಏಕಾಏಕಿ ದಾಳಿ ನಡೆಸಿ ಕಚ್ಚಿ ಕೊಂದಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ ಪುತ್ರಿ ಆನಂ (18 ತಿಂಗಳು) ಬೀದಿನಾಯಿಗಳ ಅಟ್ಟಹಾಸಕ್ಕೆ ಬಲಿಯಾದ ದುರ್ದೈವಿ. ಬುಧವಾರ ಮುಂಜಾನೆ ಮನೆಯಲ್ಲಿ ಮಲಗಿದ್ದ ಮಗು ಆನಂ, ನಿದ್ದೆಯಿಂದ ಎಚ್ಚರಗೊಂಡು ಪೋಷಕರಿಗೆ ತಿಳಿಯದಂತೆ ಸದ್ದಿಲ್ಲದೆ ಮನೆಯಿಂದ ಹೊರಗೆ ರಸ್ತೆಗೆ ಬಂದಿದೆ. ಈ ವೇಳೆ ರಸ್ತೆಯ ಪಕ್ಕದಲ್ಲಿದ್ದ ಕೋಳಿ ಅಂಗಡಿಯ ಬಳಿ ತ್ಯಾಜ್ಯಕ್ಕಾಗಿ ಜಮಾಯಿಸಿದ್ದ ಬೀದಿನಾಯಿಗಳ ಹಿಂಡು ಪುಟ್ಟ ಕಂದಮ್ಮನ ಮೇಲೆ ಏಕಾಏಕಿ ಮುಗಿಬಿದ್ದಿದೆ. ನಾಯಿಗಳು ಮಗುವನ್ನು ಮನಬಂದಂತೆ ಕಚ್ಚಿ ರಸ್ತೆಯುದ್ದಕ್ಕೂ ಎಳೆದಾಡಿವೆ. ಕಂದಮ್ಮನ ಚೀರಾಟ ಕೇಳಿ ಪೋಷಕರು ಹಾಗೂ ಸ್ಥಳೀಯರು ಓಡಿ ಬರುವಷ್ಟರಲ್ಲಿ ಮಗುವಿನ ದೇಹ ರಕ್ತಸಿಕ್ತವಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣವೇ ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪರಿಸ್ಥಿತಿ…

Read More

ಬೆಂಗಳೂರು : ಅಣ್ಣನ ಪ್ರೇಮ ಪ್ರಸ್ತಾಪವನ್ನು ತಳ್ಳಿಹಾಕಿದ ಕಾರಣಕ್ಕೆ ಆತನ ಸಹೋದರನೇ ಯುವತಿಯೊಬ್ಬಳಿಗೆ ಸಾರ್ವಜನಿಕ ರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಇಲ್ಲಿನ ಕೋಡಿಹಳ್ಳಿಯ ಹೆಚ್‌ಎಎಲ್  ರಸ್ತೆಯಲ್ಲಿ ಸಂಭವಿಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಕಾನೂನು ವಿದ್ಯಾರ್ಥಿನಿ ಅಮೃತಾ (21) ಚಿಕಿತ್ಸೆ ಫಲಿಸದೇ ಬುಧವಾರ (ಜುಲೈ 15) ಸಂಜೆ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸೂರ್ಯ ಹಾಗೂ ಆತನ ಅಣ್ಣ ಧನುಷ್‌ನನ್ನು ಜೀವನ್‌ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಓಂ ಶಕ್ತಿ ಮಾಲೆ ಹಾಕುವ ಧಾರ್ಮಿಕ ಕಾರ್ಯಕ್ರಮದ ವೇಳೆ ಮೃತ ಅಮೃತಾ ಹಾಗೂ ಧನುಷ್ ಕುಟುಂಬಗಳ ನಡುವೆ ಪರಿಚಯವಾಗಿತ್ತು. ಇದು ಇಬ್ಬರ ನಡುವೆ ಆತ್ಮೀಯ ಪ್ರೀತಿಯಾಗಿ ಬದಲಾಗಿತ್ತು. ಆದರೆ, ಧನುಷ್ ತನಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದಿರುವ ಮತ್ತು ತನಗೊಂದು ಮಗು ಇರುವ ಸತ್ಯವನ್ನು ಅಮೃತಾಳಿಂದ ಮುಚ್ಚಿಟ್ಟಿದ್ದನು. ಇತ್ತೀಚೆಗೆ ಈ ವಂಚನೆಯ ವಿಚಾರ ಅಮೃತಾಳಿಗೆ ತಿಳಿಯುತ್ತಿದ್ದಂತೆಯೇ ಆಕೆ ಆತನಿಂದ ಸಂಪೂರ್ಣವಾಗಿ ದೂರವಾಗಿದ್ದಳು ಹಾಗೂ ಮದುವೆ…

Read More

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಾನವಸಹಿತ ಬಾಹ್ಯಾಕಾಶ ಯೋಜನೆ ಸೇರಿದಂತೆ ಹಲವು ಬಾಹ್ಯಾಕಾಶ ಕಾರ್ಯಕ್ರಮಗಳ ನಡುವೆಯೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರತಿಭಾ ಪಲಾಯನದ ಸವಾಲನ್ನು ಎದುರಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ 100ಕ್ಕೂ ಹೆಚ್ಚು ಹಿರಿಯ ವಿಜ್ಞಾನಿಗಳು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ರಾಜೀನಾಮೆ ಹಾಗೂ ಸ್ವಯಂಪ್ರೇರಿತ ನಿವೃತ್ತಿ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಕೇಂದ್ರ ಬಾಹ್ಯಾಕಾಶ ಇಲಾಖೆ ಜುಲೈ 14ರಂದು ಹೊರಡಿಸಿರುವ ಹೊಸ ಆಂತರಿಕ ಮಾರ್ಗಸೂಚಿಗಳ ಪ್ರಕಾರ, ಪ್ರಮುಖ ವೈಜ್ಞಾನಿಕ ಮತ್ತು ತಾಂತ್ರಿಕ ಸಿಬ್ಬಂದಿಯ ರಾಜೀನಾಮೆ ಅರ್ಜಿಗಳನ್ನು ಇನ್ನು ಮುಂದೆ ಸ್ಥಳೀಯ ಮಟ್ಟದಲ್ಲಿ ಅಂಗೀಕರಿಸಲು ಅವಕಾಶ ಇರುವುದಿಲ್ಲ. ಇದುವರೆಗೆ ಇಸ್ರೋದ ವಿವಿಧ ಕೇಂದ್ರಗಳ ನಿರ್ದೇಶಕರು ತಮ್ಮ ವ್ಯಾಪ್ತಿಯ ವಿಜ್ಞಾನಿಗಳ ರಾಜೀನಾಮೆ ಅಥವಾ ವಿಆರ್‌ಎಸ್ ಅರ್ಜಿಗಳನ್ನು ಪರಿಶೀಲಿಸಿ ಅನುಮೋದಿಸುವ ಅಧಿಕಾರ ಹೊಂದಿದ್ದರು. ಹೊಸ ನಿಯಮದಂತೆ ಈ ಅಧಿಕಾರವನ್ನು ಹಿಂಪಡೆಯಲಾಗಿದ್ದು, ಇಂತಹ ಅರ್ಜಿಗಳನ್ನು ನೇರವಾಗಿ ದೆಹಲಿಯಲ್ಲಿರುವ ಬಾಹ್ಯಾಕಾಶ ಇಲಾಖೆಯ ಉನ್ನತ ಮಟ್ಟದ ಸಮಿತಿ ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ವಿಶೇಷವಾಗಿ ಗಗನಯಾನದಂತಹ…

Read More

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಜಾಗತಿಕ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗಿದೆ. ಅಮೆರಿಕದ ಮಿಲಿಟರಿ ಪಡೆಗಳು ಇರಾನ್‌ನ ರಾಜಧಾನಿ ಟೆಹ್ರಾನ್ ಸೇರಿದಂತೆ ಇರಾನ್ ನ ಉತ್ತರ ಭಾಗದ ಪ್ರಮುಖ ಸೇನಾ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ. ಇದರ ಬೆನ್ನಲ್ಲೇ ಅಮೆರಿಕದ ನೌಕಾ ದಿಗ್ಬಂಧನವನ್ನು  ಮೀರಿ ಚಲಿಸಲು ಯತ್ನಿಸಿದ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಅಮೆರಿಕ ಪಡೆಗಳು ಕ್ಷಿಪಣಿ ದಾಳಿ ನಡೆಸಿ, ಅದನ್ನು ಸಮುದ್ರದಲ್ಲೇ ಚಲಿಸಲಾಗದಂತೆ ನಿಷ್ಕ್ರಿಯಗೊಳಿಸಿವೆ. ಇರಾನ್ ವಿರುದ್ಧದ ಯುದ್ಧವನ್ನು ಅಂತ್ಯಗೊಳಿಸಲು ಮಾಡಿಕೊಂಡಿದ್ದ ಮಧ್ಯಂತರ ಒಪ್ಪಂದ ಈಗಾಗಲೇ ಸಂಪೂರ್ಣವಾಗಿ ವಿಫಲವಾಗಿದ್ದು, ಎರಡೂ ರಾಷ್ಟ್ರಗಳು ಮತ್ತೆ ತೀವ್ರ ದಾಳಿ-ಪ್ರತಿದಾಳಿಯಲ್ಲಿ ತೊಡಗಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಉತ್ಪಾದನೆ ಮತ್ತು ಬಾಹ್ಯಾಕಾಶ ಕಾರ್ಯಕ್ರಮದ ಪ್ರಮುಖ ಕೇಂದ್ರವಾಗಿರುವ ‘ಸೆಮ್ನಾನ್’ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ಭಾರಿ ಬಾಂಬ್ ದಾಳಿ ನಡೆಸಿವೆ. ಬಂದರ್ ಅಬ್ಬಾಸ್ ಮತ್ತು ಖೇಶ್ಮ್ ದ್ವೀಪಗಳಲ್ಲಿರುವ ಇರಾನ್‌ನ ಡ್ರೋನ್ ಉಡಾವಣಾ ಕೇಂದ್ರಗಳು ಮತ್ತು ರೇಡಾರ್ ವ್ಯವಸ್ಥೆಗಳನ್ನು…

Read More

ಧಾರವಾಡ: ಜಿಲ್ಲೆಯ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಅವರ 8 ವರ್ಷದ ಮಗನ ಮೇಲೂ ಹಲ್ಲೆ ನಡೆಸಲಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರಾಯು ಆಸ್ಪತ್ರೆಯ ವೈದ್ಯರಾಗಿದ್ದ ಡಾ. ಕಿರಣ್ ಹೊನ್ನಣ್ಣವರ್ (45) ಹತ್ಯೆಯಾದ ದುರ್ದೈವಿ. ಇವರ ಪತ್ನಿ ಪ್ರಿಯಾಂಕಾ ಕೂಡ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರಿಯಾಂಕಾ ತನ್ನ ಪತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. ಪತಿಯನ್ನು ಒಂದು ಕೋಣೆಯಲ್ಲಿ ಕೊಂದ ಬಳಿಕ ಈಕೆಯ ಕ್ರೌರ್ಯ ಅಲ್ಲಿಗೆ ನಿಲ್ಲಲಿಲ್ಲ. ಮತ್ತೊಂದು ಕೋಣೆಯಲ್ಲಿದ್ದ ಎಂಟು ವರ್ಷದ ಮಗ ನೇಹಿತ್ ಮೇಲೂ ಚಾಕುವಿನಿಂದ ಮನಬಂದಂತೆ ಇರಿದಿದ್ದಾಳೆ. ರಕ್ತದ ಮಡುವಿನಲ್ಲಿ ಉಸಿರಾಡಲು ಒದ್ದಾಡುತ್ತಿದ್ದ ಮಗುವಿನ ಪಕ್ಕದಲ್ಲೇ ಕುಳಿತು ಈಕೆ ಅತ್ಯಂತ ನಿರ್ಲಜ್ಜವಾಗಿ ತನ್ನ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು ಎಂದು ತಿಳಿದುಬಂದಿದೆ. ಇನ್ನು ಅಪಾರ್ಟ್‌ಮೆಂಟ್‌ನಲ್ಲಿದ್ದ ನೆರೆಹೊರೆ ಹಾಗೂ…

Read More

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಲ್ಟಿಂಜ ಗ್ರಾಮದ ನಿಡಿಗಲ್ ಪ್ರದೇಶದಲ್ಲಿರುವ ಕೃಷಿಕ ಹಾಗೂ ಧರ್ಮಸ್ಥಳ ದೇವಸ್ಥಾನದ ರೆವೆನ್ಯೂ ವಿಭಾಗದ ವ್ಯವಸ್ಥಾಪಕರಾದ ಶುಭ ಚಂದ್ರರಾಜ್ ಅವರ ಮನೆಗೆ ದರೋಡೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಏಳು ಮಂದಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ವಿರುದ್ಧದ ಆರೋಪಗಳನ್ನು ಸಮರ್ಪಕವಾಗಿ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಪ್ರಕರಣದಲ್ಲಿ ಪಿ. ಇರ್ಫಾನ್, ಚಿದಾನಂದ ಗೌಡ ಡಿ., ಮೊಹಮ್ಮದ್ ತೌಸೀಫ್, ಮೋಹನ, ನಿತಿನ್ ಕೋಟ್ಯಾನ್, ಮೊಹಮ್ಮದ್ ಆಶಿಕ್ ಹಾಗೂ ತೌಷಿರ್ @ ಪತ್ತೊಂಜಿ ತೌಷಿರ್ ಆರೋಪಿಗಳಾಗಿದ್ದರು. ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಮಾಟೆ ಅವರಿದ್ದ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿವರದ ಪ್ರಕಾರ, ಆರೋಪಿಗಳು ತಲವಾರು, ಖಡ್ಗ ಹಾಗೂ ಚೂರಿಗಳಂತಹ ಮಾರಕಾಸ್ತ್ರಗಳನ್ನು ಹಿಡಿದು ಶುಭ ಚಂದ್ರರಾಜ್ ಅವರ ‘ಓಂಕಾರ ನಿಲಯ’ ಮನೆಗೆ ಅಕ್ರಮವಾಗಿ ನುಗ್ಗಲು ಯತ್ನಿಸಿದ್ದರು ಎನ್ನಲಾಗಿತ್ತು. ಈ ವೇಳೆ ಮನೆಯ ಸಾಕು…

Read More

ಬೆಳ್ತಂಗಡಿ: ಅಂಗನವಾಡಿ ಕೇಂದ್ರದ ಕೊಠಡಿಯೊಳಗೆ ಆಟಿಕೆಗಳ ಮಧ್ಯೆ ಅಡಗಿದ್ದ ವಿಷಕಾರಿ ಹಾವೊಂದು ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವಿಗೆ ಕಚ್ಚಿ ಗಂಭೀರವಾಗಿ ಅಸ್ವಸ್ಥಗೊಂಡಿರುವ ಘಟನೆ ಸೌತಡ್ಕ ಸಮೀಪದ ಮಲ್ಲಿಗೆಮಜಲು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಫಾತಿಮತ್ ಸಹದಿಯಾ (4) ಹಾವು ಕಚ್ಚಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ. ಮಂಗಳವಾರ ಎಂದಿನಂತೆ ಬಾಲಕಿ ಫಾತಿಮತ್ ಸಹದಿಯಾ ಅಂಗನವಾಡಿ ಕೇಂದ್ರಕ್ಕೆ ಬಂದಿದ್ದಳು. ಕೊಠಡಿಯೊಳಗೆ ಮಕ್ಕಳು ಆಟವಾಡುವ ಪ್ಲಾಸ್ಟಿಕ್ ಆಟಿಕೆ ಸಾಮಗ್ರಿಗಳನ್ನಿಟ್ಟಿದ್ದ ಜಾಗದಲ್ಲಿ ಆಕೆ ಆಟವಾಡುತ್ತಿದ್ದಳು. ಈ ವೇಳೆ ಆಟಿಕೆಗಳ ನಡುವೆ ಅಡಗಿ ಕುಳಿತಿದ್ದ ಹಾವೊಂದು ಬಾಲಕಿಯ ಕೈಗೆ ಕಚ್ಚಿದೆ. ತಕ್ಷಣವೇ ಮಗು ಜೋರಾಗಿ ಅಳಲು ಆರಂಭಿಸಿದೆ. ಮಗುವಿನ ಚೀರಾಟ ಕೇಳಿ ಧಾವಿಸಿ ಬಂದ ಅಂಗನವಾಡಿ ಸಹಾಯಕಿ ಪರಿಶೀಲಿಸಿದಾಗ ಹಾವಿನ ಕಡಿತದ ಗುರುತು ಪತ್ತೆಯಾಗಿದೆ. ತಕ್ಷಣವೇ ಅವರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಪೋಷಕರು ಹಾಗೂ ಸ್ಥಳೀಯರು ಸೇರಿ ತಕ್ಷಣವೇ ಮಗುವನ್ನು ಕೊಕ್ಕಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ…

Read More

ಲಕ್ನೋ: ನೊಯ್ಡಾದ ಮಾಮುರಾ ಗ್ರಾಮದಲ್ಲಿರುವ ನಾಲ್ಕು ಮಹಡಿಗಳ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ದಟ್ಟ ಹೊಗೆಯಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟಿದ್ದು, ಸುಮಾರು 50 ಕುಟುಂಬಗಳನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಮಾಹಿತಿಯ ಪ್ರಕಾರ, ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅದು ಸಂಪೂರ್ಣ ಪಾರ್ಕಿಂಗ್‌ಗೆ ವ್ಯಾಪಿಸಿದೆ. ಅಲ್ಲಿದ್ದ ವಾಹನಗಳಿಗೂ ಬೆಂಕಿ ತಗುಲಿದ್ದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಚಾಲಿತ ವಾಹನ (EV) ಚಾರ್ಜ್ ಮಾಡುತ್ತಿದ್ದ ವೇಳೆ ಉಂಟಾದ ಸ್ಪಾರ್ಕ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ಬೆಂಕಿ ಸಮೀಪದಲ್ಲಿದ್ದ ಪೆಟ್ರೋಲ್ ವಾಹನಗಳಿಗೂ ವ್ಯಾಪಿಸಿ ಅಗ್ನಿ ಅನಾಹುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಕಿಗಿಂತಲೂ ದಟ್ಟ ಹೊಗೆ ವೇಗವಾಗಿ ಮೇಲಿನ ಮಹಡಿಗಳಿಗೆ ಹರಡಿದ್ದರಿಂದ ಹಲವು ನಿವಾಸಿಗಳು ತಮ್ಮ ಮನೆಗಳಲ್ಲೇ ಸಿಲುಕಿಕೊಂಡಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ದಳ, ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಏಳು ಅಗ್ನಿಶಾಮಕ…

Read More

ಕಲಬುರಗಿ: ಜಿಲ್ಲೆಯ ಕೇಂದ್ರ ಕಾರಾಗೃಹದ ಬ್ಯಾರಕ್ ಕಂಬಿಗಳನ್ನು ಕಟ್ ಮಾಡಿ, ಮೂವರು ಸಜಾ ಕೈದಿಗಳು ಮಂಗಳವಾರ (ಜು 14) ಮುಂಜಾನೆ ಸುಮಾರು 3 ಗಂಟೆಗೆ ಜೈಲಿನ ಕಾಂಪೌಂಡ್ ಗೋಡೆ ಹಾರಿ ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿದ್ದಾರೆ. ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಖತರ್ನಾಕ್ ಕೈದಿಗಳಾಗಿದ್ದು, ಇವರು ಬೀದರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದರು. ಕೈದಿಗಳು ಜೈಲಿನಿಂದ ಹೊರಬಂದು ಬಿಂದಾಸ್ ಆಗಿ ನಡೆದುಕೊಂಡು ಹೋಗಿ ಕಾರ್ ಹತ್ತಿ ಬೀದರ್ ಕಡೆಗೆ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಪ್ಪಿಸಿಕೊಂಡ ಆರೋಪಿಗಳು ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದರು. ಘಟನೆ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಲಬುರಗಿಯ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ಒರ್ವ ಆರೋಪಿಯ ಕಾಲಿಗೆ ಗುಂಡು ಹೊಡೆದು ಖೆಡ್ಡಾಗೆ ಕೆಡವಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ತನ್ನ ಪೋಷಕರೊಂದಿಗೆ ಸುಭಾಷಿತ ನಗರದ ವಸತಿ ಸಮುಚ್ಚಯವೊಂದರ ಎರಡನೇ ಅಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಮಹಾಲಕ್ಷ್ಮೀ ಅವರು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಂಗಳವಾರ ತಂದೆ-ತಾಯಿಯ ಜೊತೆ ಸೇರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಮನೆಗೆ ಮರಳಿದ್ದರು. ದೇವಸ್ಥಾನದಿಂದ ವಾಪಸ್ ಬಂದ ಕೆಲವೇ ಸಮಯದ ಬಳಿಕ, ಪೋಷಕರು ಮನೆಯಲ್ಲಿದ್ದಾಗಲೇ ಮಹಾಲಕ್ಷ್ಮೀ ಏಕಾಏಕಿ ಅಪಾರ್ಟ್‌ಮೆಂಟ್‌ನ 5ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ತಕ್ಷಣ ಸುರತ್ಕಲ್ ಠಾಣಾ…

Read More