Author: admin

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿ ಹಾಗೂ ನೌಕಾ ದಿಗ್ಬಂಧನದಿಂದಾಗಿ ಅಮೆರಿಕ ಮತ್ತು ಇರಾನ್ ನಡುವಿನ ಜಾಗತಿಕ ಉದ್ವಿಗ್ನತೆ ಅತ್ಯಂತ ತುತ್ತತುದಿಗೆ ತಲುಪಿದೆ. ಕಳೆದ ಜೂನ್ ತಿಂಗಳಷ್ಟೇ ಉಭಯ ದೇಶಗಳ ನಡುವೆ ಏರ್ಪಟ್ಟಿದ್ದ ‘ತಾತ್ಕಾಲಿಕ ತಿಳಿವಳಿಕೆ ಒಪ್ಪಂದ’ ದಿಂದ ಅಧಿಕೃತವಾಗಿ ಹಿಂದೆ ಸರಿಯುತ್ತಿರುವುದಾಗಿ ಇರಾನ್ ಘೋಷಿಸಿದೆ. ಅಮೆರಿಕ ತನ್ನ ಬಂದರುಗಳ ಮೇಲೆ ಮತ್ತೆ ಕಠಿಣ ನೌಕಾ ನಿರ್ಬಂಧ ಹೇರಿ ಒಪ್ಪಂದವನ್ನು ಗಾಳಿಗೆ ತೂರಿರುವುದೇ ಇದಕ್ಕೆ ಕಾರಣ ಎಂದು ಇರಾನ್ ವಿದೇಶಾಂಗ ಸಚಿವಾಲಯ ಗಂಭೀರ ಆರೋಪ ಮಾಡಿದೆ. ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಸುಮಾರು ಶೇಕಡಾ 20 ರಷ್ಟು ಭಾಗ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗುವುದರಿಂದ, ಈ ಪ್ರಾಂತ್ಯದಲ್ಲಿ ಇರಾನ್ ನಡೆಸುತ್ತಿರುವ ಕ್ಷಿಪಣಿ ಅಬ್ಬರ ಇಡೀ ಜಗತ್ತನ್ನೇ ಆತಂಕಕ್ಕೆ ತಳ್ಳಿದೆ. ಇರಾನ್‌ನ ಉದ್ಧಟತನಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್‌ಗೆ ಹಿಂದೆಂದೂ ಕಾಣದ ಕಠಿಣ ಮುನ್ನೆಚ್ಚರಿಕೆ ನೀಡಿದ್ದಾರೆ. “ಇರಾನ್ ತನ್ನ…

Read More

ಕೋಟ : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿ ಸಾರ್ವಜನಿಕ ಶಾಂತಿಗೆ ಧಕ್ಕೆ ತರುತ್ತಿದ್ದ ಯುವಕನ ಕೃತ್ಯವನ್ನು ವಿಚಾರಿಸಲು ಹೋದ ಪೊಲೀಸ್ ಅಧಿಕಾರಿಯ ಮೇಲೆಯೇ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ಬೆಳಿಗ್ಗೆ ಕೋಟತಟ್ಟು ಗ್ರಾಮದ ಬೆಲ್ಲದ ಗಣಪತಿ ದೇವಸ್ಥಾನದ ಎದುರು ನಡೆದಿದೆ. ಈ ವೇಳೆ ಕರ್ತವ್ಯ ನಿರತ ಕೋಟ ಠಾಣಾ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಟ ಠಾಣೆಯ ಪ್ರಭಾರ ಹೊತ್ತಿದ್ದ ರಾಘವೇಂದ್ರ ಬಿ.ಎನ್. ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿಯಾಗಿದ್ದಾರೆ. ಕೋಟತಟ್ಟುವಿನ ಸಾರ್ವಜನಿಕ ರಸ್ತೆಯಲ್ಲಿ ದಾಂಧಲೆ ನಡೆಸಿ, ಪೋಲೀಸರ ತಲೆ ತೆಗೆಯುವುದಾಗಿ ಅಬ್ಬರಿಸಿದ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಜುಲೈ 14 ರಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಕೋಟ ಠಾಣೆಗೆ ಸಾರ್ವಜನಿಕರೊಬ್ಬರು ಫೋನ್ ಕರೆ ಮಾಡಿ, “ಕೋಟತಟ್ಟು ಗ್ರಾಮದ ಬೆಲ್ಲದ ಗಣಪತಿ ದೇವಸ್ಥಾನದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವ್ಯಕ್ತಿಯೊಬ್ಬ ದೊಡ್ಡ ಟಿವಿ, ಸೌಂಡ್ ಬಾಕ್ಸ್ ಹಾಗೂ ಲ್ಯಾಪ್‌ಟಾಪ್ ಇಟ್ಟುಕೊಂಡು ವಿಪರೀತ ಶಬ್ದದಲ್ಲಿ ಮ್ಯೂಸಿಕ್ ಹಾಕಿ ಸಾರ್ವಜನಿಕರಿಗೆ…

Read More

ಮಂಗಳೂರು: ಮಳೆಗಾಲದ ಅಲೆಗಳ ನಡುವೆ ಸಸಿಹಿತ್ಲು ಕಡಲತೀರದಲ್ಲಿ ನಿಗೂಢವಾಗಿ ಬಿಳಿ ನೊರೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಅದರ ಮೂಲದ ಬಗ್ಗೆ ಆತಂಕ ಎದುರಾಗಿದೆ. ಕೆಲವು ದಿನಗಳ ಹಿಂದೆ ಕುಂದಾಪುರ ಭಾಗದಲ್ಲಿ ಮೊದಲ ಬಾರಿಗೆ ಕಂಡುಬಂದಿದ್ದ ಈ ಬಿಳಿ ನೊರೆ ಇದೀಗ ಸಸಿಹಿತ್ಲು ಕರಾವಳಿಯಲ್ಲಿಯೂ ಕಂಡುಬಂದಿದೆ. ಸಮುದ್ರದ ಅಲೆಗಳೊಂದಿಗೆ ತೀರಕ್ಕೆ ತಲುಪುತ್ತಿರುವ ಈ ನೊರೆಯನ್ನು ಬಲವಾದ ಗಾಳಿ ಎಲ್ಲೆಡೆ ಚದುರಿಸುತ್ತಿದೆ. ಈ ನೊರೆಯು ಬಲೂನ್‌ಗಳಂತೆ ಗಾಳಿಯಲ್ಲಿ ತೇಲುತ್ತಿವೆ. ಕೆಲ ಸ್ಥಳೀಯರು ಹಾಗೂ ಮಕ್ಕಳು ಅದನ್ನು ಹಿಡಿದು ಆಟವಾಡುತ್ತಿರುವ ದೃಶ್ಯಗಳೂ ಕಂಡುಬಂದಿವೆ. ಈ ವಿದ್ಯಮಾನವು ಸಮುದ್ರದಲ್ಲಿ ನಡೆಯುವ ನೈಸರ್ಗಿಕ ಪ್ರಕ್ರಿಯೆಗಳ ಪರಿಣಾಮವಾಗಿರಬಹುದು. ಸಮುದ್ರದ ನೀರಿನಲ್ಲಿರುವ ಸಾವಯವ ಪದಾರ್ಥಗಳು, ಪಾಚಿ, ಸಸ್ಯಗಳ ಅವಶೇಷಗಳು ಹಾಗೂ ಅಲೆಗಳ ತೀವ್ರ ಚಲನೆಯಿಂದ ಇಂತಹ ನೊರೆ ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮಳೆಗಾಲದಲ್ಲಿ ನದಿಗಳ ಮೂಲಕ ಹೆಚ್ಚಿನ ಪ್ರಮಾಣದ ಮಣ್ಣು, ಸಾವಯವ ತ್ಯಾಜ್ಯ ಹಾಗೂ ಖನಿಜಗಳು ಸಮುದ್ರ ಸೇರುತ್ತವೆ. ಇವು ಸಮುದ್ರದ ನೀರಿನೊಂದಿಗೆ ಬೆರೆತು ಪ್ರಬಲ…

Read More

ರಾಂಚಿ:ನಮ್ಮ ದೇಶದಲ್ಲಿ ಕಾನೂನು ವ್ಯವಸ್ಥೆಗೆ ಜಾರಿಗೆ ಬಂದು ಹಲವು ದಶಕಗಳೇ ಕಳೆದಿದ್ದರೂ ಕೆಲವು ಹಳ್ಳಿಗಳಲ್ಲಿ ಕೋರ್ಟ್ ಬದಲು ಗ್ರಾಮ ಪಂಚಾಯ್ತಿಯನ್ನೋ, ಊರ ಮುಖಂಡರನ್ನೋ ನಂಬಿಕೊಂಡು ಅವರಿಂದಲೇ ನ್ಯಾಯ ತೀರ್ಮಾನ ತೆಗೆದುಕೊಳ್ಳುವ ಜನರು ಇಂದಿಗೂ ಇದ್ದಾರೆ. ಜಮೀನಿನ ವ್ಯಾಜ್ಯ, ಅಣ್ಣ-ತಮ್ಮಂದಿರ ಕಲಹಗಳಂತಹ ಸಣ್ಣ ವಿಷಯಗಳನ್ನು ಊರೊಳಗೇ ಬಗೆಹರಿಸಿಕೊಳ್ಳುವುದರಲ್ಲಿ ತಪ್ಪಿಲ್ಲ. ಆದರೆ, ಜಾರ್ಖಂಡ್​​ನಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಆ ಮಗುವಿನ ತಂದೆ-ತಾಯಿ ಪಂಚಾಯ್ತಿ ಕಟ್ಟೆಯಲ್ಲಿ ನ್ಯಾಯ ಕೇಳಿದ್ದಾರೆ. ಈ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಪಂಚಾಯ್ತಿ ಸದಸ್ಯರು ಆರೋಪಿಗೆ ಕೇವಲ 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ಆ ಹಣವನ್ನು ಬಾಲಕಿಯ ಮನೆಯವರಿಗೂ ಕೊಡದೆ ಆ ಪಂಚಾಯ್ತಿಯ ಸದಸ್ಯರು ಆ ಹಣದಲ್ಲಿ ಆಲ್ಕೋಹಾಲ್ ಪಾರ್ಟಿ ಮಾಡಿದ್ದಾರೆ. ಏನಿದು ಘಟನೆ?: ಆರೋಪಿ ಸುನಿಲ್ ಲೋಹಾರ ಶನಿವಾರ ಸಂಜೆ ತಮ್ಮದೇ ಊರಿನವರೊಬ್ಬರ ಮನೆಗೆ ಹೋಗಿದ್ದನು. ಆ ಮನೆಯಲ್ಲಿ 3 ವರ್ಷದ ಹೆಣ್ಣುಮಗುವಿತ್ತು. ಆತ ಹೋದ ಸಮಯದಲ್ಲಿ ಮಗುವಿನ ತಾಯಿ ಮನೆಯಲ್ಲಿದ್ದರು. ತಾಯಿ ತನ್ನ…

Read More

ಮಂಗಳೂರು: ಕನ್ನಡದ ಬರಹಗಾರ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ಪುನೀತ್ ಮೊದಲ ಬಾರಿಗೆ ನಿರ್ದೇಶಕರಾಗಿ ಪರಿಚಯಿಸುತ್ತಿರುವ ಮಲಯಾಳಂ ಚಿತ್ರ ‘ಅಚ್ಯುತ ಅವತಾರಂ’ ಇದೇ ಜುಲೈ 17ರಂದು ದೇಶಾದ್ಯಂತ ಮಲಯಾಳಂ, ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಪಂಚಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥಾಹಂದರ, ಮಹಿಳಾ ಪ್ರಧಾನ ನಿರೂಪಣೆ ಮತ್ತು ಸಾಮಾಜಿಕ ಕಾಳಜಿಯೊಂದಿಗೆ ಮೂಡಿಬಂದಿರುವ ಈ ಸಿನಿಮಾ ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚಿತ್ರದ ಮತ್ತೊಂದು ವಿಶೇಷವೆಂದರೆ, ಕರ್ನಾಟಕದಲ್ಲಿ ಇದರ ವಿತರಣೆಯನ್ನು ಖ್ಯಾತ ಕೆವಿಎನ್ ಡಿಸ್ಟ್ರಿಬ್ಯೂಷನ್ ಸಂಸ್ಥೆ ಮಾಡಲಿದೆ. ‘ಟಾಕ್ಸಿಕ್’, ‘ಜನನಾಯಗನ್’ ಸೇರಿದಂತೆ ಹಲವು ಬಹುನಿರೀಕ್ಷಿತ ಹಾಗೂ ಬಿಗ್ ಬಜೆಟ್ ಸಿನಿಮಾಗಳೊಂದಿಗೆ ಗುರುತಿಸಿಕೊಂಡಿರುವ ಕೆವಿಎನ್ ಸಂಸ್ಥೆ, ಇದೀಗ ‘ಅಚ್ಯುತ ಅವತಾರಂ’ ಚಿತ್ರವನ್ನೂ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಇದರಿಂದ ಚಿತ್ರವು ಕರ್ನಾಟಕದ ಪ್ರೇಕ್ಷಕರನ್ನು ಮತ್ತಷ್ಟು ವ್ಯಾಪಕವಾಗಿ ತಲುಪುವ ವಿಶ್ವಾಸವನ್ನು ಚಿತ್ರತಂಡ ವ್ಯಕ್ತಪಡಿಸಿದೆ. ವಿಭಿನ್ನ ಪ್ರಚಾರದ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಚಿತ್ರತಂಡ ಹೊಸ ಮಾದರಿಯ…

Read More

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಇನ್ಮುಂದೆ ಮಹತ್ವದ ಬದಲಾವಣೆಯೊಂದು ಆಗುವ ಸಾಧ್ಯತೆ ದಟ್ಟವಾಗಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಉಲ್ಲೇಖದ ಜೊತೆಗೆ ಇದೀಗ ‘ಬೌದ್ಧ ಧರ್ಮ’ದ ಹೆಸರನ್ನು ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ಸಮಿತಿಯು ಈ ಮಹತ್ವದ ಸಲಹೆಯನ್ನು ನೀಡಿದ್ದು, ಈ ಸಂಬಂಧ ಸರ್ಕಾರಕ್ಕೆ ಅಧಿಕೃತ ಮನವಿ ಸಲ್ಲಿಕೆಯಾಗಿದೆ. ಕುವೆಂಪು ಅವರು ಬರೆದಿದ್ದ ಮೂಲ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರನ್ನು ಕೈಬಿಡಲಾಗಿತ್ತು. ಪ್ರಸ್ತುತ ಹಾಡಿನಲ್ಲಿ “ಜೈನರ ಪೂಜ್ಯ ಉದ್ಯಾನ” ಎಂಬ ಸಾಲಿದೆ. ಪುರುಷೋತ್ತಮ ಬಿಳಿಮಲೆ ಸಮಿತಿಯ ಸಲಹೆಯ ಪ್ರಕಾರ, ಇನ್ನು ಮುಂದೆ ಈ ಸಾಲನ್ನು “ಜೈನ ಬೌದ್ಧರ ಪೂಜ್ಯ ಉದ್ಯಾನ” ಅಥವಾ “ಜೈನರುದ್ಯಾನದ ಜೊತೆಗೆ ಬೌದ್ಧರುದ್ಯಾನ” ಎಂದು ಬದಲಾಯಿಸಲು ಪ್ರಸ್ತಾಪಿಸಲಾಗಿದೆ. ಕುವೆಂಪು ಅವರು ಈ ಗೀತೆಯನ್ನು ರಚಿಸುವ ಸಮಯದಲ್ಲಿ ಮೂಲ ಕಾವ್ಯದಲ್ಲಿ ಬೌದ್ಧ ಧರ್ಮದ ನೇರ ಉಲ್ಲೇಖ ಇರಲಿಲ್ಲ ಎನ್ನಲಾಗಿದೆ. ಇತ್ತೀಚಿನ ವರ್ಷಗಳಲ್ಲಿ…

Read More

ಇರಾನ್ ಮತ್ತು ಅಮೆರಿಕದ ನಡುವಿನ ಸಂಘರ್ಷದ ಫಲವಾಗಿ ಹಾರ್ಮುಜ್ ಜಲಸಂಧಿಯಲ್ಲಿ ಬೇರೆ ದೇಶಗಳ ಹಡಗುಗಳು ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಓರ್ವ ನಾವಿಕ ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಇರಾನ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಹಡಡುಗಳ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದೆ. ಹಾಗೇ, ಭಾರತ ಇರಾನಿನ ರಾಯಭಾರಿಗೆ ಸಮನ್ಸ್ ಕೂಡ ನೀಡಿದೆ. ಇರಾನ್ ಜೊತೆ ಉತ್ತಮ ಸಂಬಂಧ ಹೊಂದಿದ್ದರೂ ಭಾರತದ 2 ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿತ್ತು. ಈ ಮೂಲಕ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ 2 ವಾಣಿಜ್ಯ ಹಡಗುಗಳಾದ ‘ಎಂವಿ ಅಲ್ ಬಾಹಿಯಾ’ ಮತ್ತು ‘ಎಂವಿ ಮೊಂಬಾಸಾ’ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇದನ್ನು ನಾವಿಕರನ್ನು ಗುರಿಯಾಗಿಸಿಕೊಂಡು ನಡೆಸಲಾದ ಹಿಂಸಾತ್ಮಕ ಕೃತ್ಯ ಎಂದು ಅಸಮಾಧಾನ ಹೊರಹಾಕಿರುವ ಭಾರತ, ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸುವ ಇಂತಹ ದಾಳಿಗಳು ತಕ್ಷಣವೇ ನಿಲ್ಲಬೇಕು…

Read More

ಮಂಗಳೂರು: ನಗರದ ಕೊಡ್ಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್‌ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ಸಾಮಗ್ರಿಗಳನ್ನು ಎಸೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸುವ ಉದ್ದೇಶದಿಂದ ಜೈಲಿನ ಆವರಣ ಗೋಡೆಯ ಮೇಲ್ಭಾಗದಲ್ಲಿ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಸುವ ಕಾಮಗಾರಿ ಆರಂಭವಾಗಿದೆ. ಕಾರಾಗೃಹ ಇಲಾಖೆಯ ರೂ. 50 ಲಕ್ಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಟೆಂಡರ್‌ ಸೇರಿದಂತೆ ವಿವಿಧ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕಳೆದ ಕೆಲ ದಿನಗಳಿಂದ ಕಾಮಗಾರಿ ಆರಂಭವಾಗಿದೆ. ಪ್ರಸ್ತುತ ಜೈಲಿನ ಸುತ್ತ ಸುಮಾರು 15 ಅಡಿ ಎತ್ತರದ ಕಲ್ಲಿನ ಆವರಣ ಗೋಡೆ ಹಾಗೂ ಅದರ ಮೇಲ್ಭಾಗದಲ್ಲಿ ಸುಮಾರು ಎರಡು ಅಡಿ ತಂತಿ ಬೇಲಿ ಇದೆ. ಆದರೂ ಕೆಲವರು ಹೊರ ರಸ್ತೆಯಲ್ಲಿ ನಿಂತು ಗಾಂಜಾ, ಮೊಬೈಲ್‌ ಹಾಗೂ ಇತರ ವಸ್ತುಗಳನ್ನು ಪ್ಲಾಸ್ಟಿಕ್‌ ಪೊಟ್ಟಣಗಳಲ್ಲಿ ಕಲ್ಲು ಕಟ್ಟಿ ಜೈಲಿನೊಳಗೆ ಎಸೆಯುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿವೆ. ಹೊಸದಾಗಿ ನಿರ್ಮಿಸಲಾಗುತ್ತಿರುವ ತಂತಿ ಬೇಲಿ…

Read More

ಬೆಂಗಳೂರು: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಬಂಧನ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಅವರನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಪಿಎಸ್ಐ ಭೈರಪ್ಪ ಕಳೆದ ಕೆಲವು ಸಮಯದಿಂದ ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರ ಕೌಟುಂಬಿಕ ಕಲಹ ತಾರಕಕ್ಕೇರಿದಾಗ, ಪಿಎಸ್ಐ ಭೈರಪ್ಪ ಅವರು ಮನೆಯಲ್ಲಿದ್ದ ಮಚ್ಚನ್ನು ಹಿಡಿದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಹಲ್ಲೆಯ ಬೆನ್ನಲ್ಲೇ ಸಂತ್ರಸ್ತೆ ಕೆಂಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಆರಂಭದಲ್ಲಿ ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಸತ್ಯಾಂಶ ಬೆಳಕಿಗೆ ಬರುತ್ತಿದ್ದಂತೆಯೇ…

Read More

ಬೆಂಗಳೂರು: ನಗರದ ಆದಿಚುಂಚನಗಿರಿ ಮಠಕ್ಕೆ  ಸೇರಿದ ಬರೋಬ್ಬರಿ 120 ಕೋಟಿ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ  ಸೃಷ್ಟಿಸಿ ವಂಚಿಸಿದ್ದ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಹೈಟೆಕ್ ಮತ್ತು ರೋಚಕ ವಂಚನೆ ಪ್ರಕರಣದಲ್ಲಿ ತೊಡಗಿದ್ದ 6 ಜನ ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿದಂತೆ ಒಟ್ಟು 11 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 30 ವರ್ಷದ ಹಿಂದಿನ ಮಠದ ಜಾಗಕ್ಕೆ ಸ್ಕೆಚ್ ಸುಮಾರು 30 ವರ್ಷಗಳ ಹಿಂದೆ ಭಕ್ತರು ಆದಿಚುಂಚನಗಿರಿ ಮಠಕ್ಕೆ ಕೆಂಗೇರಿ ಹೋಬಳಿಯ ಕಂಬಳಿಪುರ ಗ್ರಾಮದ ಸರ್ವೇ ನಂಬರ್ 43 ರಲ್ಲಿ ಒಟ್ಟು 45 ಎಕರೆ ಜಮೀನನ್ನು ಕಾಣಿಕೆಯಾಗಿ ನೀಡಿದ್ದರು. ಈ ಪೈಕಿ 6 ಎಕರೆ ಬೆಲೆಬಾಳುವ ಜಮೀನನ್ನು ಕಬಳಿಸಲು ನೆಲಮಂಗಲ ಮೂಲದ ಮಾಸ್ಟರ್ ಮೈಂಡ್ ನರೇಶ್ ಗೌಡ ಮತ್ತು ಬ್ರೋಕರ್ ಆರೋಗ್ಯಸ್ವಾಮಿ ಸ್ಕೆಚ್ ಹಾಕಿದ್ದ. ಸತ್ತವರ ಸಮಾಧಿ ಹುಡುಕಿ ನಕಲಿ ವಂಶವೃಕ್ಷ ಸೃಷ್ಟಿ ಆರೋಪಿಗಳು ವಂಚನೆಗೆ ಬಳಸಿದ ದಾರಿ ಯಾವುದೇ ಸಿನಿಮಾಕ್ಕೂ ಕಡಿಮೆ ಇಲ್ಲ.ಮಠದ ಜಮೀನಿನ…

Read More