Author: admin

ಬೆಂಗಳೂರು: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿಯ ರಾಜ್ಯವನ್ನಾಗಿ ರೂಪಿಸುವ ಉದ್ದೇಶದಿಂದ, ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ನಗರದ **ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ನಡೆದ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ–2026ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಐ ತಂತ್ರಜ್ಞಾನವನ್ನು ಆಡಳಿತ, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಾರ್ವಜನಿಕ ಸೇವೆಗಳೊಂದಿಗೆ ಸಮಗ್ರವಾಗಿ ಜೋಡಿಸುವ ಮಹತ್ವಾಕಾಂಕ್ಷೆಯ ಯೋಜನೆ ರೂಪಿಸಿದೆ ಎಂದು ತಿಳಿಸಿದರು. ಪ್ರಸ್ತಾವಿತ ಎಐ ವಿಶ್ವವಿದ್ಯಾಲಯವು ಜಾಗತಿಕ ಮಟ್ಟದ ಎಐ ಪರಿಣಿತರನ್ನು ಬೆಳೆಸುವುದು, ಸುಧಾರಿತ ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ಶಿಕ್ಷಣ ಸಂಸ್ಥೆಗಳು, ಕೈಗಾರಿಕೆ ಮತ್ತು ಸರ್ಕಾರದ ನಡುವಿನ ಸಹಭಾಗಿತ್ವವನ್ನು ಬಲಪಡಿಸುವುದು ಎಂಬ ಉದ್ದೇಶ ಹೊಂದಿದೆ ಎಂದು ಅವರು ಹೇಳಿದರು. ಎಐ ತಂತ್ರಜ್ಞಾನವನ್ನು ವಿವಿಧ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರ ವಿಶೇಷ ಒತ್ತು ನೀಡಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಎಐ ಆಧಾರಿತ ಬೋಧನಾ ವಿಧಾನ, ಆರೋಗ್ಯ ಸೇವೆಯಲ್ಲಿ…

Read More

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತ ವೀಕ್ಷಿಸಲು ಮಂಗಳೂರಿನಿಂದ ಬಂದಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐದಕ್ಕೂ ಹೆಚ್ಚು ಸ್ಥಳೀಯ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್ ಹಾಗೂ ಇತರ ಸ್ಥಳೀಯ ಯುವಕರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದು, ಪೊಲೀಸರು ಇವರಿಗಾಗಿ ತನಿಖೆ ತೀವ್ರಗೊಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಮಂಗಳೂರಿನ ನಿವಾಸಿಯಾದ ಯುವತಿಯು ಜುಲೈ 12ರ ಭಾನುವಾರದಂದು ತನ್ನ ಸ್ನೇಹಿತ ಜೊತೆಗೆ ದಿಡುಪೆಯ ಜಲಪಾತ ಪ್ರವಾಸಕ್ಕೆ ಆಗಮಿಸಿದ್ದರು. ನಿಯಮಾವಳಿಗಳ ಅನ್ವಯ ಇಬ್ಬರೂ ಜಲಪಾತದ ಪ್ರವೇಶ ದ್ವಾರದಲ್ಲಿದ್ದ ಅರಣ್ಯ ಇಲಾಖೆಯ ಅಧಿಕೃತ ಚೆಕ್ ಪೋಸ್ಟ್‌ನಲ್ಲಿ ಅಗತ್ಯ ಅನುಮತಿ  ಪಡೆದುಕೊಂಡೇ ಒಳಗೆ ತೆರಳಿದ್ದರು. ಜಲಪಾತ ವೀಕ್ಷಣೆ ಮುಗಿಸಿ ಸಂಜೆ…

Read More

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಲಾವಿದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಧಾರ್ಮಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ವಿಡಿಯೋ ಬಿಡುಗಡೆ ಮಾಡುವ ಮೂಲಕ ಕಲಾವಿದೆಯರು ತಮ್ಮ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸೂಕ್ಷ್ಮ ಘಟನೆಯ ಕುರಿತು ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಮಠದ ಕಡೆಯಿಂದಲೂ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಜುಲೈ 11ರಂದು ಕೃಷ್ಣ ಮಠದ ರಾಜಾಂಗಣದಲ್ಲಿ ಅಂಕಿತಾ ನಾಯ್ಕ್ ಮತ್ತು ಗೌರಿ ಪಾಂಡುರಂಗಿ ಎಂಬುವವರು ನಮ್ಮಿಂದ ಒಂದು ಗಂಟೆಯ ಭರತನಾಟ್ಯ ಕಾರ್ಯಕ್ರಮ ಮತ್ತು ಮತ್ತೊಂದು ಗಂಟೆಯ ಹರಿವಾಣ ನೃತ್ಯ ಸೇವೆ ನಡೆಸಿಕೊಡುವುದಾಗಿ ಅನುಮತಿ ಪಡೆದಿದ್ದರು. ಆದರೆ, ಕಾರ್ಯಕ್ರಮದ ನಡುವೆ ಆಯೋಜಕರಿಗೆ ತಿಳಿಸದೆ ಏಕಾಏಕಿ ‘ಭಕ್ತ ಪ್ರಹ್ಲಾದ’ ಎಂಬ ಹರಿಕಥಾ ಪ್ರಸಂಗವನ್ನು ನಡೆಸಿದ್ದಾರೆ. ಈ…

Read More

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿ ಅನುಮಾನಾಸ್ಪದವಾಗಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ನಡೆದಿದ್ದು ಇಲ್ಲಿಂದ ಅಲ್ಯೂಮಿನಿಯಂ ತಂತಿ ಹಾಗೂ ಇತರ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಎಸ್‌.ಎಲ್.ವಿ.ಇ ಪವರ್‌ ಪ್ರೈವೇಟ್ ಲಿಮಿಟೆಡ್‌ ರಿಸೀವಿಂಗ್ ಸ್ಟೇಷನ್ ನಲ್ಲಿ ಜು.1ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ತಂತಿಗೆ ಸಿಲುಕಿ ಅಥವಾ ಇನ್ಯಾವುದೋ ರೀತಿಯಲ್ಲಿ ಕರಾಯ ಗ್ರಾಮದ ನಿವಾಸಿ ಮುಸ್ತಾಕ್(27) ಎಂಬವರ ಮೃತದೇಹ ಪತ್ತೆಯಾಗಿತ್ತು. ಮುಸ್ತಾಕ್ ಮೃತದೇಹ ಪತ್ತೆಯಾದ ಸ್ಥಳದ ಹತ್ತಿರ ರಿಸಿವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಉಪಯೋಗಿಸಿ ಉಳಿದ ಹಳೆಯ ಅಲ್ಯೂಮಿನಿಯಂ ತಂತಿ ತುಂಡುಗಳು ಬಿದ್ದಿರುವುದನ್ನು ಕಂಡು ಈ ಬಗ್ಗೆ ಅನುಮಾನಗೊಂಡ ಮ್ಯಾನೇಜರ್ ರಾಜೇಂದ್ರನ್ ಅವರು ರಿಸೀವಿಂಗ್‌ ಸ್ಟೇಷನ್ ನ ಕಂಪೌಂಡ್‌ ಒಳಗೆ ಇರಿಸಿದ ಅಲ್ಯೂಮಿನಿಯಂ ತಂತಿಯ ಬಂಡಲ್ ಮತ್ತು ಇನ್ನಿತರ ಸಲಕರಣೆಗಳನ್ನು ಪರಿಶೀಲನೆ ನಡೆಸಿದಾಗ ಹಳೆಯ ಅಲ್ಯೂಮಿನಿಯಂ ತಂತಿ…

Read More

ಬೆಂಗಳೂರು:ರಾಜ್ಯ ಬಿಜೆಪಿಯ ಹಿರಿಯ ಧುರೀಣ, ಮಾಜಿ ಸಚಿವ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಸಾತ್ ನೀಡಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು. ಪಕ್ಷದ ಆರಂಭದ ದಿನಗಳಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಕ್ಕಾ ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಪಡೆದರು. ಬಿಜೆಪಿಯ ಮುಂಚಿನ ರೂಪವಾಗಿದ್ದ ‘ಭಾರತೀಯ ಜನಸಂಘ’ದ ವತಿಯಿಂದ…

Read More

ಮಂಗಳೂರು: ನಗರದ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಕಲ್ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂಟು ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಕೆಲಸ ಮಾಡುತ್ತಿದ್ದವರನ್ನು ಪರಿಶೀಲಿಸಿದ ವೇಳೆ, ಅವರ ಬಳಿಯಿದ್ದ ದಾಖಲೆಗಳ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಪರಿಶೀಲನೆಯ ವೇಳೆ ಅವರು ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿರುವುದು ಬೆಳಕಿಗೆ ಬಂದಿದ್ದು, ಬಳಿಕ ತಾವು ಬಾಂಗ್ಲಾದೇಶದ ಪ್ರಜೆಗಳಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಒಂದೂವರೆ ರಿಂದ ಎರಡು ತಿಂಗಳಿನಿಂದ ಅವರು ಕೂಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಮಹಾನಗರಪಾಲಿಕೆಯ ಮಾಜಿ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅಕ್ರಮ ವಲಸಿಗರು ಕೆಲಸ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರು, ಬಿಲ್ಡರ್‌ಗಳು ಹಾಗೂ ಮನೆ ಮಾಲೀಕರು ತಮ್ಮಲ್ಲಿ ಕೆಲಸ ಮಾಡುವ ಕಾರ್ಮಿಕರ ಗುರುತಿನ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು…

Read More

ಮಂಗಳೂರು: ಕೊಲೆ, ಅಪಹರಣ, ಸುಲಿಗೆ ಸೇರಿದಂತೆ ಒಟ್ಟು ಆರು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಹಾಗೂ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಾಹಿಲ್ ಹಮೀದ್‌ನನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಕಾಂಚನ ಟೆಕ್ಸ್‌ಟೈಲ್ಸ್ ವ್ಯವಸ್ಥಾಪಕ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಕರಣಗಳಲ್ಲಿ ನ್ಯಾಯಾಲಯವು ಶಾಹಿಲ್ ಹಮೀದ್ ವಿರುದ್ಧ ಜಾಮೀನುರಹಿತ ವಾರಂಟ್ ಹಾಗೂ ಘೋಷಣೆ (ಪ್ರೋಕ್ಲಮೇಷನ್) ಹೊರಡಿಸಿತ್ತು. ನ್ಯಾಯಾಲಯದ ಆದೇಶಗಳಿದ್ದರೂ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾರಣ ಆತನ ವಿರುದ್ಧ ಮತ್ತೊಂದು ಹೊಸ ಪ್ರಕರಣವೂ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಶಾಹಿಲ್ ಹಮೀದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಮಂಗಳೂರು ಗ್ರಾಮಾಂತರ, ಉತ್ತರ ಮತ್ತು ಬರ್ಕೆ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳಲ್ಲಿ ಅಪಹರಣ, ಸುಲಿಗೆ, ಸಾರ್ವಜನಿಕ ಸೇವಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳು ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 307ನೇ ಕಲಂ ಅಡಿ ಕೊಲೆ ಯತ್ನದ ಪ್ರಕರಣಗಳು…

Read More

ಒಡಿಶಾ: ಕ್ಷುಲ್ಲಕ ಕಾರಣಕ್ಕಾಗಿ ದಂಪತಿಗಳ ನಡುವೆ ನಡೆದ ಜಗಳದ ವೇಳೆ, ಪತ್ನಿಯು ಆಕ್ರೋಶದಿಂದ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಅತ್ಯಂತ ದುರದೃಷ್ಟಕರ ಘಟನೆ ಒಡಿಶಾದ ಬೋಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶನಿವಾರದಂದು ಮನೆಯಲ್ಲಿ ದಂಪತಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಗಲಾಟೆ ತಾರಕಕ್ಕೇರಿದಾಗ ಪತ್ನಿಯು ಕೈಯಲ್ಲಿದ್ದ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ಇದರಿಂದಾಗಿ ಅವರ ತಲೆಗೆ ಗಂಭೀರ ಗಾಯವಾಗಿತ್ತು. ರಕ್ತಸಿಕ್ತವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಕುಟುಂಬ ಸದಸ್ಯರು ತಕ್ಷಣವೇ ಬೋಲಂಗಿರ್‌ನಲ್ಲಿರುವ ಜಿಲ್ಲಾ ಪ್ರಧಾನ ಕಚೇರಿ ಆಸ್ಪತ್ರೆಗೆ  ದಾಖಲಿಸಿದ್ದರು. ಅಲ್ಲಿ ಅವರಿಗೆ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ, ವೈದ್ಯರು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ  ಮನೆಗೆ ಕಳುಹಿಸಿದ್ದರು. ಆದರೆ, ಮನೆಗೆ ತಲುಪಿದ ಕೆಲವೇ ಸಮಯದ ನಂತರ ಅವರ ಆರೋಗ್ಯ ಸ್ಥಿತಿ ಹಠಾತ್ತನೆ ಹದಗೆಟ್ಟಿದೆ. ತಕ್ಷಣವೇ ಗಾಬರಿಗೊಂಡ ಕುಟುಂಬಸ್ಥರು ಅವರನ್ನು…

Read More

ಬೆಂಗಳೂರು: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್  ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಅಮಾನತು ಮಾಡಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಶಿವಶಂಕರಪ್ಪ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಅಗತ್ಯ ತನಿಖೆಗಾಗಿ ಭಾರತದ ಸಂವಿಧಾನದ 317(1)ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಜೊತೆಗೆ ತನಿಖೆ ಕುರಿತು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಆಯೋಗದ ಅಧ್ಯಕ್ಷ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಶಿವಶಂಕರಪ್ಪ ಅವರನ್ನು ಅಮಾನತು ಮಾಡಿದ್ದಾರೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಕರ್ನಾಟಕ ಲೋಕ ಸೇವಾ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ಆದೇಶಿಸಿದ್ದಾರೆ. ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ ಇವರ ವಿರುದ್ಧ ಸ್ವಜನ ಪಕ್ಷಪಾತ, ಮಾಹಿತಿಯನ್ನು ಬಹಿರಂಗಪಡಿಸದೇ ಇರುವುದು ಇತ್ಯಾದಿ ದೂರುಗಳು ಬಂದಿದ್ದು, ಅವರ ಇಬ್ಬರು ಹೆಣ್ಣುಮಕ್ಕಳನ್ನು ಕಾನೂನುಬಾಹಿರವಾಗಿ, ಅಧಿಕಾರ ದುರುಪಯೋಗಪಡಿಸಿಕೊಂಡು, ಕೈಗಾರಿಕಾ ವಿಸ್ತರಣಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಅವರ ವಿರುದ್ಧ ಕ್ರಮ…

Read More

ಬಂಟ್ವಾಳ: ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೋಮವಾರ ಕಳ್ಳತನಕ್ಕೆ ಯತ್ನಿಸಿದ್ದು, ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ. ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚು ತಂಡ, ಸೋಕೋ ತಂಡಗಳು ಭೇಟಿ ನೀಡಿವೆ. ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಹೆಚ್ಚಿನ ಪರಿಶೀಲನೆಯ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read More