Author: admin
ಮಂಗಳೂರು: ಕುತ್ತಾರು ಜಂಕ್ಷನ್‌ನ ವೃತ್ತದ ನಾಮಕರಣ ವಿಚಾರವಾಗಿ ಕೆಲಕಾಲದಿಂದ ವಿವಾದಕ್ಕೆ ಕಾರಣವಾಗಿದ್ದ ವಿಷಯಕ್ಕೆ ಇದೀಗ ತೆರೆ ಬಿದ್ದಿದೆ. ಕುತ್ತಾರು ಜಂಕ್ಷನ್‌ನಲ್ಲಿ ನಿರ್ಮಿಸಲಾಗಿರುವ ನೂತನ ‘ಸೌಹಾರ್ದ ವೃತ್ತ’ವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳವಾರ ರಾತ್ರಿ ಲೋಕಾರ್ಪಣೆ ಮಾಡಿದರು. ನೂತನ ವೃತ್ತದ ಮುಕುಟದಲ್ಲಿ ಕೊರಗಜ್ಜನ ಮುಟ್ಟಾಲೆ ಹಾಗೂ ದಂಟೆಯ ಪ್ರತಿಕೃತಿಯನ್ನು ಅಳವಡಿಸಲಾಗಿದ್ದು, ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ವೃತ್ತವನ್ನು ವಿನ್ಯಾಸಗೊಳಿಸಲಾಗಿದೆ. ವೃತ್ತದಲ್ಲಿ ಕೊರಗಜ್ಜನ ಆದಿಕ್ಷೇತ್ರ, ರಾಣಿಪುರ ಚರ್ಚ್ ಹಾಗೂ ಕುಂಡೂರು ಜುಮಾ ಮಸೀದಿಗೆ ತೆರಳುವ ಮಾರ್ಗಗಳ ಕುರಿತು ಮಾರ್ಗಸೂಚಿ ಫಲಕಗಳನ್ನು ಅಳವಡಿಸಲಾಗಿದೆ. ಈ ಮೂಲಕ ವಿವಿಧ ಧರ್ಮಗಳ ಹಾಗೂ ಸಮುದಾಯಗಳ ನಡುವೆ ಸೌಹಾರ್ದದ ಸಂದೇಶ ಸಾರುವ ಉದ್ದೇಶವನ್ನು ಹೊಂದಲಾಗಿದೆ. ‘ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ’ ವೃತ್ತವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಯು.ಟಿ. ಖಾದರ್, ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ, ಈ ಮಣ್ಣಿನ ಶಕ್ತಿ ಎಂದು ಹೇಳಿದರು. ಎಲ್ಲ ಧರ್ಮಗಳ ಸಂದೇಶವೂ ಇನ್ನೊಬ್ಬರ ದೇಹದ ಗಾಯ ಹಾಗೂ ಮನಸ್ಸಿನ ನೋವನ್ನು ಗುಣಪಡಿಸುವ ಔಷಧಿಯಂತಿರಬೇಕು ಎಂದು ಅವರು…
ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಪಣಕಜೆ ಮಸೀದಿ ಬಳಿ ತೆರಳುತ್ತಿದ್ದಾಗ ಟೆಂಪೋಗೆ ರಿನ್ಸ್ ಚಲಾಯಿಸುತ್ತಿದ್ದ ಬೈಕ್ ಹಿಂಬದಿಯಿಂದ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಿನ್ಸ್‌ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ರಿನ್ಸ್ ಶಿಬಿ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು, ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಕೀಯ ನೇಮಕಾತಿ ಹಗರಣದಲ್ಲಿ ಬಗೆದಷ್ಟೂ ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ. ಕಾಸು ಕೊಟ್ರೆ ಸರ್ಕಾರಿ ಹುದ್ದೆ ಕಡ್ಲೆಪುರಿಯಂತೆ ಬಿಕರಿ ಆಗಿದೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಹೌದು. ಡಿಗ್ರಿಯಲ್ಲೇ 5 ವಿಷಯಗಳಲ್ಲಿ ಫೇಲ್ ಆಗಿದ್ದ ಅಭ್ಯರ್ಥಿ ಮಹಮದ್ ಸುಹೇಲ್ ಬಂಡೇಗೋಳ್ ದುಡ್ಡು ಕೊಟ್ಟಿದ್ದಾನೆ ಅನ್ನೋ ಕಾರಣಕ್ಕೆ ಕೆಪಿಎಸ್‌ಸಿ ನಲ್ಲಿ ಟಾಪರ್ ಆಗಿದ್ದಾನೆ ಅನ್ನೋ ಅಚ್ಚರಿ ಸಂಗತಿ ತನಿಖೆ ವೇಳೆ ಬಯಲಾಗಿದೆ. ದುಡ್ಡು ಕೊಟ್ಟು ರ‍್ಯಾಂಕ್ ಪಡೆದ ಅಭ್ಯರ್ಥಿಯ ಅಂಕಪಟ್ಟಿ ಕೂಡ ʻಪಬ್ಲಿಕ್ ಟಿವಿʼಗೆ (Public TV) ಲಭ್ಯವಾಗಿದೆ. ಡಿಗ್ರಿಯಲ್ಲಿ ಓದೋದಕ್ಕೆ ಹೆಣಗಾಡುತ್ತಿದ್ದ ಸುಹೇಲ್ 5 ವಿಷಯಗಳಲ್ಲಿ ಫೇಲ್ ಆಗಿದ್ದಾನೆ. ಆದ್ರೆ ಪಶುವೈದ್ಯಾಧಿಕಾರಿಗಳ ಹುದ್ದೆಯಲ್ಲಿ ಕಾಸಿನ ದರ್ಬಾರ್ ನಡೆದು, ಟಾಪರ್ ಆಗಿ ಹೊರಹೊಮ್ಮಿದ್ದಾನೆ. ಇದರಲ್ಲಿ ಕನ್ನಾಳೆಯ ಕೈಚಳಕವೂ ಇದೆ ಅಂತ ಖುದ್ದು ಅಭ್ಯರ್ಥಿಯೇ ಸಿಐಡಿ ಎದುರು ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಉಡುಪಿ : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿಯು ಮಂಗಳೂರಿನ ಕೂಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಪೋಷಕರು ಕೂಳೂರಿನಿಂದ ಕುಕ್ಕಿಕಟ್ಟೆಗೆ ಕರೆದುಕೊಂಡು ಬಂದಿರುತ್ತಾರೆ. ಯುವತಿಯು ಹೆಚ್ಚಾಗಿ ಮೊಬೈಲ್ ಫೋನ್ ಬಳಕೆಮಾಡುತ್ತಿದ್ದರಿಂದ ಊರಿನಲ್ಲಿ ಬಿಟ್ಟರೆ ಸರಿಯಾಗಬಹುದೆಂದು ತಿಳಿದು ಪೋಷಕರು ಆಕೆಯೊಂದಿಗೆ ಆಗಸ್ಟ್ 25 ರಂದು ಕುಕ್ಕಿಕಟ್ಟೆಯಿಂದ ಹೊರಟು ಕುಂದಾಪುರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ರಾತ್ರಿ 10.30 ರ ಸುಮಾರಿಗೆ ಬಂದಿದ್ದು, ಯುವತಿಯು ವಾಶ್ ರೂಂ ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಯುವತಿಯು 4 ಅಡಿ 5 ಇಂಚು ಎತ್ತರ ಇದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ ವಿಭಾಗ ಡಿ.ವೈ.ಎಸ್.ಪಿ ಮೊ.ನಂ: 9480805422, ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455, ಪಿ.ಎಸ್.ಐ ಮೊ.ನಂ: 8277988957 ಹಾಗೂ 8277988959 ಅನ್ನು…
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ ಹಿನ್ನೆಲೆಯಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರವೇಶ ದ್ವಾರವನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿದ್ದು, ಈ ವಿಶಿಷ್ಟ ಎಂಜಿನಿಯರಿಂಗ್ ಕಾರ್ಯವನ್ನು ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (AJIET)ಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ತಾಂತ್ರಿಕವಾಗಿ ವೀಕ್ಷಿಸಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸುಮಾರು 15 ಮಂದಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದು, ಅವರೊಂದಿಗೆ ಅಸೋಸಿಯೇಟ್ ಪ್ರೊಫೆಸರ್ ವಿನೋದ್ ಟಿ. ಡಿಸೋಜಾ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ದೀಕ್ಷಾ ಆನಂದ್ ಉಪಸ್ಥಿತರಿದ್ದರು. ಯೋಜನೆಯ ತಾಂತ್ರಿಕ ಮಾರ್ಗದರ್ಶನ ನೀಡುತ್ತಿರುವ ಎಂಜಿನಿಯರ್ ಮುಲ್ಕಿ ಜೀವನ್ ಕೆ. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ದ್ವಾರವನ್ನು ಸ್ಥಳಾಂತರಿಸುವ ಅಗತ್ಯತೆ, ಅದರ ಐತಿಹಾಸಿಕ ಹಾಗೂ ತಾಂತ್ರಿಕ ಮಹತ್ವ ಮತ್ತು ಕಾಮಗಾರಿಯಲ್ಲಿ ಅನುಸರಿಸಲಾಗುತ್ತಿರುವ ವಿವಿಧ ಹಂತಗಳ ಕುರಿತು ಮಾಹಿತಿ ನೀಡಿದರು. ಬಪ್ಪನಾಡು ದೇವಸ್ಥಾನದ ಪ್ರವೇಶ ದ್ವಾರಕ್ಕೆ ಯಾವುದೇ ಹಾನಿಯಾಗದಂತೆ ಹಾಗೂ ಅದರ ರಚನಾತ್ಮಕ ಸಮಗ್ರತೆಯನ್ನು ಕಾಪಾಡಿಕೊಂಡು ಸ್ಥಳಾಂತರಿಸುವುದು ಕಾಮಗಾರಿಯ ಪ್ರಮುಖ…
ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಅಬೂಬಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕರ್ ಬಂಧಿತ ಆರೋಪಿ. ಮೂಡುಬಿದಿರೆ ಪೊಲೀಸ್ ಠಾಣೆಯ ವಾರೆಂಟ್ ಜಾರಿ ಕರ್ತವ್ಯದ ಹೆಡ್ ಕಾನ್‌ಸ್ಟೆಬಲ್ ರವೀಂದ್ರ, ಪೊಲೀಸ್ ಕಾನ್‌ಸ್ಟೆಬಲ್ ಲಿಂಗೇಶ್ ಹಾಗೂ ಕೋರ್ಟ್ ಪೊಲೀಸ್ ಕಾನ್‌ಸ್ಟೆಬಲ್ ರಮೇಶ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಕಾರ್ಕಳ ಗ್ರಾಮಾಂತರ, ಶಿರ್ವ, ಮುಲ್ಕಿ, ಬಸವನಹಳ್ಳಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ನೆಲಮಂಗಲ: ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ಜ್ಯುವೆಲರಿ ದರೋಡೆ ಯತ್ನ ಹಾಗೂ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಶೂಟರ್‌ಗಳ ಕ್ರೈಂ ನೆಟ್‌ವರ್ಕ್ ನಂಟು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ನೆಲಮಂಗಲ ಪೊಲೀಸರು ಆರೋಪಿಗಳ ಸುಳಿವು ಬೆನ್ನತ್ತಿ ಹೊರರಾಜ್ಯಗಳಲ್ಲಿ ತಲಾಶ್ ನಡೆಸುತ್ತಿದ್ದಾರೆ. ಏನಿದು ದರೋಡೆ ಪ್ರಕರಣ? ಕಳೆದ ಆಗಸ್ಟ್ 6ರಂದು ದಾಬಸ್‌ಪೇಟೆಯಲ್ಲಿದ್ದ ‘ಪ್ರೇಮ್ ಶಿವ ಜ್ಯುವೆಲರಿ’ ಅಂಗಡಿಗೆ ನುಗ್ಗಿದ್ದ ಸಶಸ್ತ್ರ ದರೋಡೆಕೋರರ ಗುಂಪು, ಜ್ಯುವೆಲರಿ ಮಾಲೀಕ ಕುನ್ನಾರಾಮ್ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ದರೋಡೆಗೆ ಯತ್ನಿಸಿತ್ತು. ಆದರೆ ಮಾಲೀಕ ಪ್ರತಿರೋಧ ಒಡ್ಡಿದ್ದರಿಂದ ಹೆದರಿದ ಆರೋಪಿಗಳು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆ ಸ್ಥಳೀಯವಾಗಿ ತೀವ್ರ ಸಂಚಲನ ಸೃಷ್ಟಿಸಿತ್ತು. ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಪೊಲೀಸರು ವಿಶೇಷ ಪಡೆ ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ತನಿಖೆ ವೇಳೆ ಈ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ಎಂಬಾತನ ಕ್ರಿಮಿನಲ್ ಹಿನ್ನೆಲೆ ಬಯಲಾಗಿದೆ. ದಾಬಸ್‌ಪೇಟೆಯಲ್ಲಿ…
ಬುಲಂದ್‌ಶಹರ್ ಜಿಲ್ಲೆಯ ಜಿನಾಮಾಯಿ ಗ್ರಾಮದಲ್ಲಿ ರಾತ್ರಿ ವೇಳೆ ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಬಂದ 28 ವರ್ಷದ ಯುವಕ ಪುಷ್ಪೇಂದ್ರ ಎಂಬಾತನನ್ನು ಮಹಿಳೆಯ ಪತಿ ಮತ್ತು ಆಕೆಯ ಚಿಕ್ಕಪ್ಪ ಸೇರಿ ದೊಣ್ಣೆಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬುಲಂದ್‌ಶಹರ್‌ನ ಜಿನಾಮಾಯಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ರಕ್ತಸಿಕ್ತ ಘಟನೆ ನಡೆದಿದೆ.ಮೂಲಗಳ ಪ್ರಕಾರ, ಪುಷ್ಪೇಂದ್ರ ಎಂಬ ಯುವಕ ರಾತ್ರಿಯ ವೇಳೆ ಗ್ರಾಮದ ವಿವಾಹಿತ ಮಹಿಳೆಯ ಮನೆಗೆ ತೆರಳಿದ್ದಾಗ ಆಕೆಯ ಪತಿ ಮತ್ತು ಚಿಕ್ಕಪ್ಪ ಆತನನ್ನು ತಡೆದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.ತೀವ್ರ ಗಾಯಗೊಂಡ ಪುಷ್ಪೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಗಳವಾರ ಬೆಳಿಗ್ಗೆ ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣವೇ ಅನೂಪ್‌ಶಹರ್ ಸರ್ಕಲ್ ಆಫೀಸರ್ ಹಾಗೂ ಛತಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಫೋರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಎಸ್ಪಿ ಅಂತರಿಕ್ಷ್ ಜೈನ್ ಮಾತನಾಡಿ, ‘ಆರೋಪಿಗಳ…
ಝಡ್ ಶ್ರೇಣಿಯ ಭದ್ರತೆ ಹೊಂದಿರುವ ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಇಂದು (ಸೆಪ್ಟೆಂಬರ್ 1) ಅಂಚೆ ಮೂಲಕ ಬಂದ ಅನಾಮಧೇಯ ಪತ್ರವೊಂದರಲ್ಲಿ ‘ತೀವ್ರಗಾಮಿ ಉಗ್ರರು ಶೀಘ್ರದಲ್ಲೇ ನಿಮ್ಮನ್ನು ಕೊಲೆ ಮಾಡುತ್ತಾರೆ’ ಎಂದು ಜೀವ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಪತ್ರ ಬಂದ ತಕ್ಷಣ ಅದನ್ನು ಗಂಭೀರವಾಗಿ ಪರಿಗಣಿಸಿರುವ ಚಿರಾಗ್ ಪಾಸ್ವಾನ್ ಅವರ ಕಚೇರಿ ಕೇಂದ್ರ ಗೃಹ ಕಾರ್ಯದರ್ಶಿಯವರಿಗೆ ಪತ್ರ ಬರೆದಿದೆ. ಈ ಬೆದರಿಕೆ ಪತ್ರದ ಮೂಲ ಮತ್ತು ಸತ್ಯಾಸತ್ಯತೆಯನ್ನು ತುರ್ತಾಗಿ ತನಿಖೆ ಮಾಡುವಂತೆ ಹಾಗೂ ಸಚಿವರ ಭದ್ರತಾ ವ್ಯವಸ್ಥೆಯನ್ನು ಮರುಪರಿಶೀಲಿಸುವಂತೆ ಕೋರಿದೆ. ಕೇಂದ್ರ ಗೃಹ ಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ಚಿರಾಗ್ ಪಾಸ್ವಾನ್ ಅವರ ಹೆಚ್ಚುವರಿ ವೈಯಕ್ತಿಕ ಕಾರ್ಯದರ್ಶಿ ಆಲೋಕ್ ಕುಮಾರ್, “ಕೇಂದ್ರ ಗೃಹ ಸಚಿವಾಲಯದಿಂದ ಝಡ್ ಶ್ರೇಣಿಯ ಭದ್ರತೆ ಪಡೆಯುತ್ತಿರುವ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ಸಚಿವರ ವೈಯಕ್ತಿಕ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಚಾರವನ್ನು ನಿಮ್ಮ ತುರ್ತು ಗಮನಕ್ಕೆ ತರಲು…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ‘ದುನಿಯಾ’ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ಹಲ್ಲೆ ಹಾಗೂ ಅಪಹರಣ ಆರೋಪ ಕೇಳಿಬಂದಿದೆ. ಕಾರು ಓವರ್‌ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಸಹಪಾಠಿಯನ್ನೇ ಕಾರಿನಲ್ಲಿ ಎಳೆದೊಯ್ದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮನೀಶ್ ಗೌಡ ಎಂಬ ಯುವಕ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿನ್ನೆ ಸಂಜೆ ನಟ ವಿಜಯ್ ಪುತ್ರ ಸಾಮ್ರಾಟ್ ಹಾಗೂ ಆತನ ಸ್ನೇಹಿತರು ಜಿಪ್ಸಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಜರಾಜೇಶ್ವರಿನಗರದಲ್ಲಿ ಮನೀಶ್ ಗೌಡ ಮತ್ತು ಆತನ ಸ್ನೇಹಿತರು ತಮ್ಮ ಐ20 ಕಾರಿನಲ್ಲಿ ಸಾಮ್ರಾಟ್ ಚಲಾಯಿಸುತ್ತಿದ್ದ ಕಾರನ್ನು ಓವರ್‌ಟೇಕ್ ಮಾಡಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿತ್ತು. ನಿನ್ನೆಯ ಗಲಾಟೆಯ ಹಿನ್ನೆಲೆಯಲ್ಲಿ, ಇಂದು ಮಧ್ಯಾಹ್ನ ಮೈಸೂರು ರಸ್ತೆಯ ಆರ್‌ವಿ ಯೂನಿವರ್ಸಿಟಿ ಹೊರಭಾಗದಲ್ಲಿದ್ದ ಮನೀಶ್ ಗೌಡನನ್ನು ಸಾಮ್ರಾಟ್ ಹಾಗೂ ಆತನ ಕಡೆಯವರು ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು…



