Author: admin
ಮಂಗಳೂರು: ನಂತೂರಿನ ಡಾ. ಎನ್.ಎಸ್.ಎ.ಎಮ್ ಪದವಿ ಪೂರ್ವ ಕಾಲೇಜು ವತಿಯಿಂದ ವಿದ್ಯಾರ್ಥಿ ಸಂಘದ ಕಾರ್ಯಾರಂಭ ಹಾಗೂ ಹೊಸದಾಗಿ ಕಾಲೇಜಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉರ್ವ ಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ಉತ್ಸಾಹಭರಿತ ವಾತಾವರಣದಲ್ಲಿ ನಡೆದ ಈ ಸಮಾರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ ಸಕ್ರಿಯವಾಗಿ ಭಾಗವಹಿಸಿದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸಮಾರಂಭವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವಜನತೆ ರಾಷ್ಟ್ರದ ಪ್ರಗತಿಗೆ ದಿಕ್ಕು ತೋರುವ ಶಕ್ತಿಯಾಗಿದ್ದು, ಪೋಷಕರು ಮತ್ತು ಗುರುಗಳ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದು ಹೇಳಿದರು. ವಿದ್ಯಾಭ್ಯಾಸದ ಅವಧಿಯಲ್ಲೇ ಜವಾಬ್ದಾರಿ ಹಾಗೂ ಮುನ್ನಡೆಸುವ ಗುಣಗಳನ್ನು ಬೆಳೆಸಿಕೊಳ್ಳುವುದು ಸಮಾಜ ಸೇವೆಗೆ ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು. ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತೆ ಮೀನಾಕ್ಷಿ ಆರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಲ್ಲಿ ನಿರ್ವಹಣಾ ಕೌಶಲ್ಯ, ತಂಡದ ಸಹಕಾರ ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ವೇದಿಕೆಯಾಗಿದೆ ಎಂದು ತಿಳಿಸಿದರು. ಕಾಲೇಜು ಜೀವನವು…
ಮಂಗಳೂರು: ಬೆಂಗಳೂರು ಕರ್ನಾಟಕದ ಅತ್ಯಂತ ಅಭಿವೃದ್ಧಿ ಹೊಂದಿದ ನಗರವಾಗಿ ಮುಂದುವರಿದಿದ್ದರೂ, ಮಂಗಳೂರು ರಾಜ್ಯದ ವೇಗವಾಗಿ ಬೆಳೆಯುತ್ತಿರುವ ನಗರ ಕೇಂದ್ರಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ. ಹೂಡಿಕೆಗಳು, ಪರಿಸರ ಸ್ನೇಹಿ ಜೀವನಶೈಲಿ ಮತ್ತು ಉದ್ಯೋಗಾವಕಾಶಗಳ ವಿಸ್ತರಣೆಯಿಂದಾಗಿ, ಕರಾವಳಿ ನಗರವು ದಕ್ಷಿಣ ಭಾರತದ ಅತ್ಯಂತ ವಾಸಯೋಗ್ಯ ನಗರಗಳಲ್ಲಿ ಒಂದೆAದು ಗುರುತಿಸಿಕೊಳ್ಳುತ್ತಿದೆ. 2025ರ ಅಂಕಿಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯು ತಲಾ ಜಿಡಿಪಿ 6.69 ಲಕ್ಷ ರೂಪಾಯಿಗಳೊಂದಿಗೆ ಕರ್ನಾಟಕದ ಅತ್ಯಂತ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗಿದೆ. ಬೆಂಗಳೂರನ್ನು ಹೊರತುಪಡಿಸಿದರೆ, ಇದು ರಾಜ್ಯದಲ್ಲಿಯೇ ಅತಿ ಹೆಚ್ಚು ತಲಾ ಆದಾಯವಾಗಿದೆ. ವ್ಯಾಪಾರ, ಕೈಗಾರಿಕೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿನ ಪ್ರಗತಿಯು ಈ ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಕಾರಣವಾಗಿದೆ. ನವ ಮಂಗಳೂರು ಬಂದರು ದೇಶದ ಪ್ರಮುಖ ಕಂಟೈನರ್ ಟರ್ಮಿನಲ್‌ಗಳಲ್ಲಿ ಒಂದಾಗಿದ್ದು, ಭಾರತದ ಕಾಫಿ ರಫ್ತಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅಲ್ಲದೆ, ಮಂಗಳೂರಿನ ಮಾಹಿತಿ ತಂತ್ರಜ್ಞಾನ ವಲಯವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. 2018ರಲ್ಲಿ ಸುಮಾರು 300 ಕೋಟಿ ರೂಪಾಯಿಗಳಷ್ಟಿದ್ದ ಐಟಿ ಆದಾಯವು 2024ರ ವೇಳೆಗೆ 2,500…
ಬಂಟ್ವಾಳ: ಕಳೆದ ವರ್ಷ ಇದೇ ಅವಧಿಯಲ್ಲಿ ಅಪಾಯದ ಮಟ್ಟದ ಸಮೀಪ ಹರಿದು ಆತಂಕ ಸೃಷ್ಟಿಸಿದ್ದ ನೇತ್ರಾವತಿ ನದಿ, ಈ ಬಾರಿ ಮಾತ್ರ ನಿರೀಕ್ಷಿತ ಪ್ರಮಾಣದಲ್ಲಿ ತುಂಬಿಕೊಂಡಿಲ್ಲ. ಮಳೆಗಾಲ ಆರಂಭವಾಗಿ ಹಲವು ದಿನಗಳಾದರೂ ನದಿಯಲ್ಲಿ ನೀರಿನ ಹರಿವು ಕಡಿಮೆಯೇ ಇರುವುದರಿಂದ ನೀರಿನ ಮಟ್ಟ ಗಮನಾರ್ಹವಾಗಿ ಏರಿಕೆಯಾಗಿಲ್ಲ. ಬಿ.ಸಿ.ರೋಡ್ ಸಮೀಪದ ಕಂಚಿಕಾರಪೇಟೆಯಲ್ಲಿ ಕಂದಾಯ ಇಲಾಖೆ ಅಳವಡಿಸಿರುವ ಮೀಟರ್ ಗೇಜ್‌ನಲ್ಲಿ ದಾಖಲಾಗುತ್ತಿರುವ ಅಂಕಿ-ಅಂಶಗಳ ಪ್ರಕಾರ, ಕಳೆದ ವರ್ಷ ಇದೇ ಅವಧಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ ಸುಮಾರು5.9 ಮೀಟರ್ ತಲುಪಿತ್ತು. ಆದರೆ ಈ ಬಾರಿ ಇದುವರೆಗೆ 4 ಮೀಟರ್ ಗಡಿಯನ್ನೂ ದಾಟಿಲ್ಲ ಎಂದು ತಿಳಿದುಬಂದಿದೆ. ನೇತ್ರಾವತಿ ನದಿಯ ನೀರಿನ ಮಟ್ಟವನ್ನು ಅಳೆಯಲು ಅಳವಡಿಸಿರುವ ಮೀಟರ್ ಗೇಜ್‌ನ ಅಳತೆ ಸ್ತಂಭಗಳ ಪೈಕಿ ಒಂದು ಸ್ತಂಭ ವಾಲಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗಿ ನದಿಯ ನೀರಿನ ಮಟ್ಟ ಹೆಚ್ಚಾದರೆ, ನಿಖರ ಅಳತೆ ಪಡೆಯಲು ಇದು ತೊಂದರೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ತ್ವರಿತವಾಗಿ ದುರಸ್ತಿ…
ತೆಲಂಗಾಣ : ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ದ್ವೇಷಕ್ಕೆ, ತನ್ನ ಪತ್ನಿ, ಇಬ್ಬರು ಹಸುಗೂಸುಗಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಸಂತ್ರಸ್ತೆ, ಆಕೆಯ ತಾಯಿ, ಅಜ್ಜಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಅತ್ಯಂತ ಘೋರ ಘಟನೆ ಶನಿವಾರ ಮುಂಜಾನೆ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನ ದೈವಲಗುಡ ಗ್ರಾಮದಲ್ಲಿ ಜರುಗಿದೆ. ದೈವಲಗುಡ ನಿವಾಸಿ ರಾಜ್‌ಕುಮಾರ್ (28) ಎಂಬಾತನೇ ಆರು ಅಮಾಯಕರನ್ನು ರಕ್ತದ ಮಡುವಿನಲ್ಲಿ ತೇಲಿಸಿದ ನರಹಂತಕ ಆರೋಪಿಯಾಗಿದ್ದಾನೆ. ಈತನ ಕ್ರೌರ್ಯಕ್ಕೆ ಸ್ವಂತ ಪತ್ನಿ ಸರಿತಾ, ಇಬ್ಬರು ಮಕ್ಕಳು ಹಾಗೂ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ, ಆಕೆಯ ತಾಯಿ ಮತ್ತು ಅಜ್ಜಿ ಬಲಿಯಾಗಿದ್ದಾರೆ. ಪೊಲೀಸ್ ತನಿಖೆಯ ವಿವರಗಳ ಪ್ರಕಾರ, ಆರೋಪಿ ರಾಜ್‌ಕುಮಾರ್ ಏಳು ವರ್ಷಗಳ ಹಿಂದೆ ಸರಿತಾಳನ್ನು ಪ್ರೀತಿಸಿ ಮದುವೆಯಾಗಿದ್ದನು. ಇವರಿಗೆ ಇಬ್ಬರು ಮಕ್ಕಳಿದ್ದರು. ಇತ್ತೀಚೆಗೆ ಈತ ನೆರೆಹೊರೆಯ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ಸಂಬಂಧ ಮೇ 16ರಂದು ಸಂತ್ರಸ್ತ ಬಾಲಕಿ ಮತ್ತು ಆಕೆಯ…
ಕೊಚ್ಚಿ : ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕುಂಭಮೇಳ 2025ರ ವೈರಲ್ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ ಪತಿ ಫರ್ಮಾನ್ ಖಾನ್‌ಗೆ ಕೇರಳ ಹೈಕೋರ್ಟ್ ಶುಕ್ರವಾರ ಶಾಕ್ ನೀಡಿದೆ. ಅಂತರ್ಧರ್ಮೀಯ ವಿವಾಹದ ಹಿನ್ನೆಲೆಯಲ್ಲಿ ಈ ದಂಪತಿಗೆ ನೀಡಲಾಗಿದ್ದ ಪೊಲೀಸ್ ರಕ್ಷಣೆಯನ್ನು ನ್ಯಾಯಾಲಯವು ಅಧಿಕೃತವಾಗಿ ಹಿಂಪಡೆದಿದೆ. ದಂಪತಿಯನ್ನು ಪತ್ತೆಹಚ್ಚಲು ಅಥವಾ ಅವರೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಸಾಧಿಸಲು ತಮಗೆ ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಅಧಿಕೃತ ವರದಿ ಸಲ್ಲಿಸಿದ ಬೆನ್ನಲ್ಲೇ, ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಏಕಸದಸ್ಯ ಪೀಠವು ಈ ಹಿಂದೆ ಜೂನ್ 19ರಂದು ಹೊರಡಿಸಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ. ನ್ಯಾಯಾಲಯದ ವಿಚಾರಣೆ ವೇಳೆ ಸರ್ಕಾರಿ ವಕೀಲರು ಮಾಹಿತಿ ನೀಡಿ, “ಅರ್ಜಿದಾರರು ಕೋರ್ಟ್‌ಗೆ ಯಾವುದೇ ನಿಖರವಾದ ಸಂಪರ್ಕ ಸಂಖ್ಯೆ ಅಥವಾ ಪ್ರಸ್ತುತ ವಾಸವಿರುವ ವಿಳಾಸವನ್ನು ಒದಗಿಸಿಲ್ಲ. ಈ ಕಾರಣದಿಂದಾಗಿ ಪೊಲೀಸರು ಅವರನ್ನು ಪತ್ತೆಹಚ್ಚಲು ಪದೇ ಪದೇ ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಹೀಗೆ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್‌ನ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಇರ್ಫಾನ್ (32), ತಂದೆ ಅಬುಸಾಲಿ, ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ಪ್ರಸ್ತುತ ಅಬುಬಕರ್ ಅವರ ಬಾಡಿಗೆ ಮನೆ, ಕರ್ವೇಲು, ಉಪ್ಪಿನಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರು–ವಿಟ್ಲ ಮಾರ್ಗದ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 9, 2026ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆ ಮಾಡಿದ್ದಲ್ಲದೆ, “ಹಿಂದಿನ ಸೀಟಿಗೆ ಬಾ” ಎಂದು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿಯರ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ…
ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಬೆಳೆಸಿ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ ಪ್ರಕರಣದಲ್ಲಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜೊತೆಗೆ ₹50 ಸಾವಿರ ದಂಡ ಪಾವತಿಸುವಂತೆ ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಗುರುಪುರ ಮೂಡೂರು ಕೆಳಗಿನಕೆರೆಮನೆ ನಿವಾಸಿ ಹಾಗೂ ಕಾರು ಚಾಲಕನಾಗಿರುವ ಆಫ್ರಿದಿ ಅಲಿಯಾಸ್ ಆಫ್ರಿ (20) ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ವಿಚಾರಣೆಯಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ತನಿಖೆ ಪ್ರಕಾರ, ಬಂಟ್ವಾಳ ತಾಲೂಕಿನ 17 ವರ್ಷದ ಬಾಲಕಿ ಫ್ಯಾಷನ್ ಡಿಸೈನಿಂಗ್ ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಆಫ್ರಿದಿಯೊಂದಿಗೆ ಪರಿಚಯ ಬೆಳೆದಿತ್ತು. ಮೊದಲಿಗೆ ಸ್ನೇಹಪೂರ್ಣವಾಗಿ ಮಾತನಾಡಿದ ಆರೋಪಿ, ನಂತರ ಮದುವೆಯ ಭರವಸೆ ನೀಡಿ ಆಕೆಯ ವಿಶ್ವಾಸ ಗಳಿಸಿದ್ದಾನೆ ಎನ್ನಲಾಗಿದೆ. 2024ರ ಮೇ 27ರಂದು ಬಾಲಕಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದಾಗ ಅಲ್ಲಿಗೆ ತೆರಳಿದ ಆರೋಪಿ ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ…
ನವದೆಹಲಿ: ಭಾರತದ ಜೈಲಿನಲ್ಲಿ ನೀಡಲಾಗುವ ಮಸಾಲೆಯುಕ್ತ, ಎಣ್ಣೆ ಮತ್ತು ಕರಿದ ಪದಾರ್ಥಗಳ ಆಹಾರವನ್ನು ತಿನ್ನಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ, ತನಗೆ “ಅಮೆರಿಕನ್ ಶೈಲಿಯ ಆಹಾರ” ನೀಡಬೇಕು ಹಾಗೂ ಸ್ವತಃ ಅಡುಗೆ ಮಾಡಿಕೊಳ್ಳಲು ಅನುಮತಿ ನೀಡಬೇಕೆಂದು ಕೋರಿ ಅಮೆರಿಕದ ಪ್ರಜೆಯೊಬ್ಬರು ದೆಹಲಿ ನ್ಯಾಯಾ. ಮ್ಯಾಥ್ಯೂ ಆರನ್ ವ್ಯಾನ್‌ಡೈಕ್ ಎಂಬ ಹೆಸರಿನ ಈ ಕೈದಿ, ಜೈಲಿನ ಆಹಾರ ಪದ್ಧತಿಗೆ ಹೊಂದಿಕೊಳ್ಳಲಾಗದೆ ಮೇ 6 ರಿಂದ ಉಪವಾಸ ಮಾಡುತ್ತಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಎನ್‌ಐಎ (NIA) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು ಈ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಜೈಲು ಅಧೀಕ್ಷಕರಿಗೆ ಒಂದು ವಾರದ ಕಾಲಾವಕಾಶ ನೀಡಿದ್ದು, ಜುಲೈ 21 ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದ್ದಾರೆ. ಸೋಯಾ ಹಾಲಿನಲ್ಲೇ 50 ದಿನ ಕಳೆದ ಕೈದಿ! ಆರೋಪಿಯ ಪರ ವಕೀಲರಾದ ರೋಹಿತ್ ಗೌರ್ ಮತ್ತು ರೋಹಿತ್ ದಂಡ್ರಿಯಾಲ್ ಅವರು ಮಾನವೀಯತೆಯ ಆಧಾರದ ಮೇಲೆ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಕಳೆದ 50 ದಿನಗಳಿಂದ ಮ್ಯಾಥ್ಯೂ…
ಫಿರೋಜಾಬಾದ್ (ಉತ್ತರ ಪ್ರದೇಶ) : ತನ್ನನ್ನು ಮದುವೆಯಾಗಲು ನಿರಾಕರಿಸಿದ ಮಹಿಳೆಯ ಮೇಲಿನ ಆಕ್ರೋಶಕ್ಕೆ ಆಕೆಯ ಕೇವಲ ಒಂದೂವರೆ ವರ್ಷದ ಹಸುಗೂಸನ್ನು ಪದೇ ಪದೇ ನೆಲಕ್ಕೆ ಅಪ್ಪಳಿಸಿ ಭೀಕರವಾಗಿ ಕೊಂದ ಕ್ರೂರಿ ಜಿತೇಂದ್ರ ಪಾಠಕ್ ಅಲಿಯಾಸ್ ವಿರಾಜ್‌ಗೆ ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶುಕ್ರವಾರ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಾ. ಬಬ್ಬು ಸಾರಂಗ್ ಅವರು ಈ ಪ್ರಕರಣವನ್ನು ವಿಶೇಷ ಆದ್ಯತೆಯ ಮೇರೆಗೆ ಆಲಿಸಿ, ಆರೋಪಿಗೆ ಕಠಿಣ ಶಿಕ್ಷೆ ಪ್ರಕಟಿಸಿದ್ದಾರೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಜಿಲ್ಲಾ ಸರ್ಕಾರಿ ವಕೀಲ ರಾಜೀವ್ ಉಪಾಧ್ಯಾಯ ಅವರು ಒದಗಿಸಿದ ಮಾಹಿತಿ ಪ್ರಕಾರ, ಅರೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಮೈ ನಿವಾಸಿಯಾದ ರತಿ ಎಂಬ ಮಹಿಳೆ ಮೇ 30 ರಂದು ಶಿಕೋಹಾಬಾದ್‌ನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ ಆಕೆಯ ಮೈದುನ ವಿರಾಜ್, ತನ್ನನ್ನು ಮದುವೆಯಾಗುವಂತೆ ರತಿಗೆ ಪ್ರಸ್ತಾಪ ಇಟ್ಟಿದ್ದನು. ಆದರೆ,…
ನವದೆಹಲಿ : ಕೋಟ್ಯಂತರ ರೂಪಾಯಿ ಮೊತ್ತದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ನಟನ ಹಳೆಯ ನಡೆ-ನುಡಿಯನ್ನು ತೀವ್ರವಾಗಿ ಪರಿಗಣಿಸಿದ ನ್ಯಾಯಾಲಯವು ಅವರಿಗೆ ಕಾನೂನಿನಡಿ ಲಭ್ಯವಿರುವ ಪ್ರೊಬೇಷನ್ (ಪರಿವೀಕ್ಷಣೆಯಡಿ ಬಿಡುಗಡೆ) ಸೌಲಭ್ಯವನ್ನು ನೀಡಲು ಕಟ್ಟುನಿಟ್ಟಾಗಿ ನಿರಾಕರಿಸಿದೆ. ರಾಜ್‌ಪಾಲ್ ಯಾದವ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಏಕಸದಸ್ಯ ಪೀಠವು, ನೆಗೋಶಿಯಬಲ್ ಇನ್‌ಸ್ಟ್ರುಮೆಂಟ್ಸ್ (NI) ಕಾಯ್ದೆಯ ಸೆಕ್ಷನ್ 138ರ ಅಡಿಯಲ್ಲಿ ಈ ಆದೇಶ ಹೊರಡಿಸಿದೆ. ಚೆಕ್ ಬೌನ್ಸ್‌ಗೆ ಸಂಬಂಧಿಸಿದ ಏಳು ಪ್ರತ್ಯೇಕ ಪ್ರಕರಣಗಳಲ್ಲಿ ನಟನಿಗೆ ತಲಾ ಮೂರು ತಿಂಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಆದರೆ, ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ (Concurrent) ಜಾರಿಯಾಗಲಿರುವುದರಿಂದ ನಟ ರಾಜ್‌ಪಾಲ್ ಯಾದವ್ ಒಟ್ಟು ಮೂರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಇದರೊಂದಿಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತವನ್ನೂ ಕಡ್ಡಾಯವಾಗಿ ಪಾವತಿಸಬೇಕು…



