Author: admin

ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್ ಬಳಿಯಲ್ಲೂ ಮೊಬೈಲ್ ಪತ್ತೆಯಾಗಿದೆ.

Read More

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್‌ಐಆರ್ ಪ್ರಕ್ರಿಯೆಗೆ ನಿಯೋಜಿಸಿರುವುದರಿಂದ, ಜನನ ಮತ್ತು ಮರಣ ಪ್ರಮಾಣಪತ್ರ ನೋಂದಣಿ ಸೇವೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಸಾಮಾನ್ಯವಾಗಿ ದಿನವಿಡೀ ಲಭ್ಯವಿರುತ್ತಿದ್ದ ಅರ್ಜಿ ಸಲ್ಲಿಕೆ ಇದೀಗ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ಪಾಲಿಕೆ ಕಚೇರಿಯಲ್ಲಿ ಅಳವಡಿಸಿರುವ ಪ್ರಕಟಣೆಯ ಪ್ರಕಾರ, ಜೂನ್ 30 ರಿಂದ ಜುಲೈ 29 ರವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಜನನ ಮತ್ತು ಮರಣ ಪ್ರಮಾಣಪತ್ರಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಲಾಗಿದೆ. ಪರಿಣಾಮ ಪ್ರತಿದಿನ ಬೆಳಗ್ಗೆ ನೂರಾರು ನಾಗರಿಕರು ಕಚೇರಿಯ ಹೊರಗೆ ಜಮಾಯಿಸುತ್ತಿದ್ದು, ಸುದೀರ್ಘ ಸಾಲಿನಲ್ಲಿ ನಿಲ್ಲುವಂತಾಗಿದೆ. ನವಜಾತ ಶಿಶುಗಳ ಜನನ ಪ್ರಮಾಣಪತ್ರಕ್ಕಾಗಿ ಪೋಷಕರು, ಮರಣ ಪ್ರಮಾಣಪತ್ರಕ್ಕಾಗಿ ಮೃತಪಟ್ಟವರ ಕುಟುಂಬಸ್ಥರು ಹಾಗೂ ಪಿಂಚಣಿ, ವಿಮೆ, ಬ್ಯಾಂಕಿಂಗ್ ಸೇರಿದಂತೆ ವಿವಿಧ ಅಧಿಕೃತ ಕೆಲಸಗಳಿಗಾಗಿ ಪ್ರಮಾಣಪತ್ರ ಅಗತ್ಯವಿರುವ ಸಾರ್ವಜನಿಕರು ಗಂಟೆಗಟ್ಟಲೆ ಸರದಿಯಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸಮಯದ ಮಿತಿಯಿಂದಾಗಿ ತಮ್ಮ ಸರದಿ…

Read More

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಮತ್ತೊಂದು ಹಾಲಿನ ಟ್ಯಾಂಕರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ಕ್ಷಣಾರ್ಧದಲ್ಲೇ ಬೆಂಕಿಗಾಹುತಿಯಾಗಿದೆ. ಇದೇ ವೇಳೆ ಸಮೀಪದಲ್ಲಿ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್‌ಗೂ ಬೆಂಕಿ ವ್ಯಾಪಿಸಿದ್ದು, ಎರಡೂ ವಾಹನಗಳು ಹೊತ್ತಿ ಉರಿದಿವೆ. ಅದೃಷ್ಟವಶಾತ್ ಎರಡೂ ಲಾರಿಗಳ ಚಾಲಕರು ಸಮಯಪ್ರಜ್ಞೆ ಮೆರೆದು ವಾಹನಗಳಿಂದ ಹೊರಗೆ ಹಾರಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಬೆಂಕಿಯ ತೀವ್ರತೆಗೆ ಎರಡೂ ಲಾರಿಗಳು ಬಹುತೇಕ ಸುಟ್ಟು ಭಸ್ಮವಾಗಿವೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ ಎಂಬ…

Read More

ಅನಂತಪುರ: ಯಾವುದೇ ಸಾಕ್ಷ್ಯಗಳಿಲ್ಲದೆ ಸಂಪೂರ್ಣ ನಿಗೂಢವಾಗಿದ್ದ ವ್ಯಕ್ತಿಯೊಬ್ಬನ ಭೀಕರ ಕೊಲೆ ಪ್ರಕರಣವನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗಂ ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಭೇದಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಸಿಕ್ಕ ಒಂದು ಸಣ್ಣ ಹಪ್ಪಳದ ಪ್ಯಾಕೆಟ್​​​​ ಸಹಾಯದಿಂದ ಬಳ್ಳಾರಿ ಮೂಲದ ಇಬ್ಬರು ಮೂಗ ಮತ್ತು ಕಿವುಡ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬಳ್ಳಾರಿ ಜಿಲ್ಲೆಯ ಬಸವರಾಜು (31) ಮತ್ತು ಕೊಟ್ರೇಶ್ (36) ಎಂದು ಗುರುತಿಸಲಾಗಿದೆ. ಹಪ್ಪಳ ವ್ಯಾಪಾರಿಯೊಬ್ಬನ ಬಳಿ ಭಾರಿ ಹಣಯಿದೆ ಎಂದು ನಂಬಿ, ಆತನನ್ನು ಕೊಲೆ ಮಾಡಿ ಶವವನ್ನು ಸುಟ್ಟು ಹಾಕಿದ್ದಾರೆ. ಕಳೆದ ಜೂನ್ 23 ರಂದು ಅನಂತಪುರ ಜಿಲ್ಲೆಯ ಡಿ. ಹಿರೇಹಾಳ್ ಮಂಡಲದ ಪುಲಾಕುರ್ತಿ ಗ್ರಾಮದ ಸಮೀಪವಿರುವ ಕೃಷಿ ಜಮೀನಿನಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಈ ಕೊಲೆಯ ಬಗ್ಗೆ ಯಾವುದೇ ಗುರುತುಗಳು ಇಲ್ಲದ ಕಾರಣ ಪೊಲೀಸರಿಗೆ ಇದು ದೊಡ್ಡ ಸವಾಲಾಗಿತ್ತು. ಆದರೆ, ಘಟನಾ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ವಿಧಿವಿಜ್ಞಾನ ತಂಡಕ್ಕೆ ಭಾಗಶಃ ಸುಟ್ಟುಹೋಗಿದ್ದ…

Read More

ಬೆಳ್ತಂಗಡಿ : ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಭೀಕರ ಅಪಘಾತದಲ್ಲೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡವರನ್ನು ಮಂಗಳೂರು ಕಾವೂರು ಮೂಲದವರಾದ ವಿನಿತಾ (22), ಗೌರಮ್ಮ (49) ಮತ್ತು ಕೊಟ್ರೆಗೌಡ (55) ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ಮೂಲದವರಾದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗುತ್ತಿದ್ದಂತೆ ಭಾರಿ ಶಬ್ದ ಕೇಳಿಬಂದಿದ್ದು, ತಕ್ಷಣವೇ ಸ್ಥಳೀಯ ನಿವಾಸಿಗಳು ಹಾಗೂ ರಸ್ತೆಯಲ್ಲಿ ಚಲಿಸುತ್ತಿದ್ದ ಇತರ ವಾಹನ ಸವಾರರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದಾರೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಜಾಗರೂಕತೆಯಿಂದ ಹೊರಗೆ ತೆಗೆದು, ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಕಾರುಗಳ…

Read More

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ರಾಜ್ಯದ ಬೆಲ್ಲೆವ್ಯೂ ನಗರದಲ್ಲಿ ಮೈ ನಡುಗಿಸುವಂತಹ ಕೊಲೆ ಬೆಳಕಿಗೆ ಬಂದಿದೆ. ಭಾರತ ಮೂಲದ 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಅವಿನಾಶ್ ನಾರ್ನೆ, ತನ್ನ 27 ವರ್ಷದ ಪತ್ನಿ ರಾಜಿತಾ ಸಬ್ಬಿನೇನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ, ಹೆಂಡತಿಯ ಮೃತದೇಹದ ಫೋಟೋವನ್ನು ಭಾರತದಲ್ಲಿದ್ದ ತನ್ನ ಪ್ರೇಯಸಿಗೆ ವಾಟ್ಸಾಪ್ ಮಾಡಿದ್ದಾನೆ. ಕಳೆದ ಅಕ್ಟೋಬರ್‌ನಲ್ಲಿ ನಡೆದಿದ್ದ ಈ ಕೊಲೆಯನ್ನು ಆತ ಆತ್ಮಹತ್ಯೆ ಅಥವಾ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ. ಆದರೆ ಸುದೀರ್ಘ 9 ತಿಂಗಳ ತನಿಖೆಯ ನಂತರ ಅಮೆರಿಕ ಪೊಲೀಸರು ಆತನ ಅಸಲಿ ಮುಖವಾಡವನ್ನು ಬಯಲು ಮಾಡಿ ಜುಲೈ 5 ರಂದು ಕೊಲೆ ಆರೋಪದಡಿ ಬಂಧಿಸಿದ್ದಾರೆ. 2025ರ ಅಕ್ಟೋಬರ್ 27 ರಂದು ಅವಿನಾಶ್ ಪೊಲೀಸರಿಗೆ ಕರೆ ಮಾಡಿ, ತನ್ನ ಪತ್ನಿ  ಬಾತ್​ರೂಮ್​ಗೆ ಹೋಗಿ ಲಾಕ್ ಮಾಡಿಕೊಂಡಿದ್ದಾಳೆ, ಎಷ್ಟು ಕರೆದರೂ ಹೊರಗೆ ಬರುತ್ತಿಲ್ಲ ಎಂದು ನಾಟಕವಾಡಿದ್ದ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ರಾಜಿತಾ ಶವವಾಗಿ ಬಿದ್ದಿದ್ದರು. ತಾನು ಹೊರಗೆ…

Read More

ಹಾಸನ : ಚಲಿಸುವ ರೈಲಿನಲ್ಲಿ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯೊಬ್ಬರಿಗೆ ಹಾಸನದ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆ ಮತ್ತು ಕಾಲೇಜಿನ ಮೂವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯರು ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಗುವಿನ ಕುತ್ತಿಗೆಗೆ ಹೊಕ್ಕುಳಬಳ್ಳಿ ಸುತ್ತಿಕೊಂಡು ಉಸಿರಾಟಕ್ಕೆ ಸಮಸ್ಯೆಯಾಗಿದ್ದಂತ ಅತ್ಯಂತ ಕಠಿಣ ಪರಿಸ್ಥಿತಿಯಲ್ಲೂ ಧೃತಿಗೆಡದ ಯುವ ವೈದ್ಯರು, ನವಜಾತ ಶಿಶುವಿಗೆ ಮರುಜೀವ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಭಾಗವಹಿಸಲು ಹಾಸನದಿಂದ ವಾರಾಣಸಿಗೆ ರೈಲಿನಲ್ಲಿ ತೆರಳುತ್ತಿದ್ದ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಂಶೋಧನಾ ವಿದ್ಯಾರ್ಥಿನಿಯರಾದ ಡಾ. ರಶ್ಮಿ ಬೀಳಗಿ, ಡಾ. ಶಾಹೀನ್ ಎಂ. ಮತ್ತು ಡಾ. ಲತಾಶ್ರೀ ಎನ್. ಅವರೇ ಈ ಸಾಹಸ ಮೆರೆದ ವೈದ್ಯರು. ಜುಲೈ 6ರಂದು ರೈಲು ವಿಜಯವಾಡಾ ಬಳಿ ಚಲಿಸುತ್ತಿದ್ದ ವೇಳೆ, 9 ತಿಂಗಳ ಗರ್ಭಿಣಿಯೊಬ್ಬರಿಗೆ ಪ್ರಯಾಣದ ಮಧ್ಯೆ ಇದ್ದಕ್ಕಿದ್ದಂತೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು. ಮುಂದಿನ ನಿಲ್ದಾಣದವರೆಗೆ ಕಾಯಲು ಸಮಯವಿರಲಿಲ್ಲ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಮೂವರು ವೈದ್ಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಗಾಬರಿಯಾಗಿದ್ದ ತಾಯಿಗೆ ಧೈರ್ಯ ತುಂಬಿ…

Read More

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಆರು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಂಗಳೂರು ಹಾಗೂ ಧರ್ಮಸ್ಥಳ ಪ್ರವಾಸಕ್ಕೆ ಹೊರಟಿದ್ದ ತೂಫಾನ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯೇ ಈ ದುರಂತಕ್ಕೆ ಕಾರಣವಾಗಿದೆ. ಮೃತರೆಲ್ಲರೂ ಹುಬ್ಬಳ್ಳಿ-ಧಾರವಾಡದಲ್ಲಿ ಆನ್‌ಲೈನ್ ಆಹಾರ ಸರಬರಾಜು ಸಂಸ್ಥೆ ‘ಸ್ವಿಗ್ಗಿ’ (Swiggy) ಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಹುಬ್ಬಳ್ಳಿ-ಧಾರವಾಡದ ಈ ಯುವಕರ ತಂಡವು ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ ಹೊರಟಿತ್ತು. ಚಾಲಕ ಸೇರಿದಂತೆ ಒಟ್ಟು 9 ಜನರಿದ್ದ ತೂಫಾನ್ ವಾಹನವು ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ, ಎದುರಿನಿಂದ ಬಂದ ಲಾರಿ ನಡುವೆ ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ತೂಫಾನ್ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಕುಳಿತಿದ್ದವರು ಹೊರಬರಲಾರದ ಸ್ಥಿತಿ ನಿರ್ಮಾಣವಾಗಿತ್ತು. ಅಪಘಾತದಲ್ಲಿ…

Read More

ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು ಹಾಗೂ ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದಲ್ಲದೆ, ಐದು ಕಾರುಗಳು, ಅಂದಾಜು ₹14.50 ಲಕ್ಷ ಮೌಲ್ಯದ ಮೂರು ಮೋಟಾರ್‌ಸೈಕಲ್‌ಗಳು, ಜೂಜಾಟಕ್ಕೆ ಬಳಸುತ್ತಿದ್ದ ಟೇಬಲ್ ಹಾಗೂ ಕುರ್ಚಿಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ನಗದು, ವಾಹನಗಳು, ಮೊಬೈಲ್ ಫೋನ್‌ಗಳು ಮತ್ತು ಇತರ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹17.81 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.…

Read More

ಮಂಗಳೂರು:- ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿ ಸಭೆಯು (ಪಿ.ಸಿ.ಪಿ.ಎನ್.ಡಿ.ಟಿ) ಡಾ.ಅಮೃತಾ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಕ್ಯಾನಿಂಗ್‍ಗೆ ಬಂದ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವರ್ಷದೊಳಗಿನ ಗರ್ಭಿಣಿಯರು ಕಂಡುಬಂದಲ್ಲಿ ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 2026 ರಲ್ಲಿ ಏಪ್ರಿಲ್‍ನಿಂದ ಜೂನ್‍ವರೆಗೆ ಜಿಲ್ಲೆಯಲ್ಲಿ 2911 ಗಂಡು, 2872 ಹೆಣ್ಣು ಜನನವಾಗಿದ್ದು, ಲಿಂಗಾನುಪಾತ 987 ಇದೆ ಎಂದು ಸಭೆಗೆ ತಿಳಿಸಲಾಯಿತು. ಸಭೆಯಲ್ಲಿ ಹೊಸದಾಗಿ ಸ್ಕ್ಯಾನಿಂಗ್ ಉಪಕರಣಗಳನ್ನು ಖರೀದಿಸಿದ ಸಂಸ್ಥೆಗಳ ಅರ್ಜಿಗಳನ್ನು ಪರಿಶೀಲಿಸಲಾಯಿತು. ಸಲಹಾ ಸಮಿತಿಯು ಆಸ್ಪತ್ರೆಗೆ ತಪಾಸಣೆಗೆ ಭೇಟಿ ನೀಡಿದ ಸಂದರ್ಭ ಕಂಡುಬಂದ ನ್ಯೂನತೆಗಳ ಕುರಿತು ಚರ್ಚಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶು ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳು ”ಪ್ರಾಣಿಗಳಿಗೆ ಮಾತ್ರ ಸ್ಕ್ಯಾನ್” ಎಂಬ ಫಲಕವನ್ನು ತಮ್ಮ…

Read More