Author: admin

ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ ಎಂದು ಕಟುವಾಗಿ ನುಡಿದಿರುವ ಹೈಕೋರ್ಟ್,ಯುಕೆಜಿ ವಿದ್ಯಾರ್ಥಿನಿಗೆ ಕೋಲಿ ನಿಂದ ಹೊಡೆದ ಪ್ರಕರಣದಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರ ಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಮಗುವಿಗೆ ಹೊಡೆದ ಪ್ರಕರಣ ಸಂಬಂಧ ಮಂಗಳೂರಿನಲ್ಲಿರುವ 2ನೇ ಜೆಎಂಎಫ್‌ಸಿ ಕೋರ್ಟ್ ವಿಚಾರಣಾ ಪ್ರಕ್ರಿಯೆ ರದ್ದು ಪಡಿಸಬೇಕು ಎಂದು ಕೋರಿ ಸುರತ್ಕಲ್ ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆಯೇ ಅರ್ಜಿ ದಾರ ಪರ ವಕೀಲರನ್ನುದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಉದ್ದೇಶಿಸಿ ಶಿಕ್ಷಕಿ ಯಾಕೆ ಮಗುವನ್ನು ಹೊಡೆದರು ಎಂದು ಪ್ರಶ್ನಿಸಿತು. ಅರ್ಜಿದಾರ ಪರ ವಕೀಲರು, ನಾವಲ್ಲ ಎಂದು ಹೇಳುತ್ತಿದ್ದಂತೆಯೇ ಕೋಪಗೊಂಡ ನ್ಯಾಯಪೀಠ, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ. ಇಂಥ ನಡೆ ನ್ಯಾಯಾಲಯ ಸಹಿಸಲ್ಲ ಎಂದು ಕಟುವಾಗಿ ನುಡಿಯಿತು.

Read More

ಬೆಂಗಳೂರು: ನಗರದ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನ ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು ಮೃತದೇಹವನ್ನ ಹೊರಗೆ ತೆಗೆದಿದ್ದಾರೆ. ಮೇಲ್ನೋಟಕ್ಕೆ, ಪ್ರೀತಿ ವಿಚಾರಕ್ಕೆ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ ಸಾಕಾಗಿದೆʼ ಅಂತ ಗೆಳೆಯನಿಗೆ ಮೆಸೇಜ್‌ ಮಾಡಿದ್ದಾಳೆ. ಬಳಿಕ ಫೋನ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದಾಳೆ. ಸೋಮವಾರ (ಜು.6) ರಂದು ಸ್ಯಾಂಕಿ ಕೆರೆ ಬಳಿ ಬಂದಿದ್ದ ತೇಜು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇಂದು ಬೆಳಗಿನ ಜಾವ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಕೊಲ್ಲೂರು : ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80,000 ನಗದು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಕೊಲ್ಲೂರು ಪೊಲೀಸರು ಯಶಸ್ವಿಯಾಗಿದ್ದಾರೆ. ದೂರು ದಾಖಲಾದ ಕೇವಲ 24 ಗಂಟೆಗಳ ಅವಧಿಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಭದ್ರಾವತಿ ಮೂಲದ ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿ ಕಂಬಿ ಎಣಿಸುವಂತೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಗಳಾದ ನೇತ್ರಾವತಿ (33), ಶಾರದಾ (50) ಹಾಗೂ ದುರ್ಗಮ್ಮ (44) ಬಂಧಿತ ಪ್ರಮುಖ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜೋಶ್ ಹಾಗೂ ಅವರ ಪತ್ನಿ ನಿಮಿಶಾ ಎಂಬ ಭಕ್ತರು ಜುಲೈ 5ರಂದು ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇವರ ದರ್ಶನಕ್ಕಾಗಿ ಆಗಮಿಸಿದ್ದರು. ದೇವಸ್ಥಾನದ ಗರ್ಭಗುಡಿಯೊಳಗೆ ದೇವರ ದರ್ಶನ ಮುಗಿಸಿ ಹೊರಾಂಗಣಕ್ಕೆ ಬಂದು ನೋಡಿದಾಗ, ನಿಮಿಶಾ ಅವರ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಪರಿಶೀಲಿಸಿದಾಗ ಬ್ಯಾಗ್‌ನಲ್ಲಿದ್ದ ಬರೋಬ್ಬರಿ ₹80,000 ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಬೆಳಕಿಗೆ ಬಂದಿದೆ.…

Read More

ಬ್ರಹ್ಮಾವರ: ನಿನ್ನೆ ರಾತ್ರಿಯಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಿದ್ದು, ವ್ಯಾಪಕ ಹಾನಿ ಸಂಭವಿಸಿದ್ದು, 15 ಮನೆಗಳು ಹಾನಿಗೊಳಗಾಗಿದ್ದು, ಹಲವಾರು ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಈ ಮಧ್ಯೆ ಹಳೆಯ ಶಾಲಾ ಕಟ್ಟಡದ ಛಾವಣಿಯ ಹೆಂಚುಗಳು ಬಿದ್ದು ಶಾಲಾ ಬಾಲಕಿಯೊಬ್ಬಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಾರಂಬಳ್ಳಿ ಗ್ರಾಮದ ಬ್ರಹ್ಮಾವರ ಬೋರ್ಡ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಬಲವಾದ ಗಾಳಿ ಬೀಸಿದಾಗ, ಹಳೆಯ ಶಾಲಾ ಕಟ್ಟಡದ ಛಾವಣಿಯ ಹೆಂಚುಗಳು ಉರುಳಿಬಿದ್ದು, ವಿದ್ಯಾರ್ಥಿಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿನಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದ್ದು, ಅನೇಕ ಸ್ಥಳಗಳಲ್ಲಿ ಮರಗಳು ಉರುಳಿಬಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲವು ದಿನಗಳಿಂದ ನೈರುತ್ಯ ಮಾನ್ಸೂನ್ ದುರ್ಬಲವಾಗಿದ್ದರೂ, ದಿಡೀರ್‌ ಬಲವಾದ ಗಾಳಿ ಮತ್ತು ಭಾರೀ…

Read More

ಬೆಳ್ತಂಗಡಿ: ವಾರಂಟ್ ಬಂಧನ ಪ್ರಕರಣದಲ್ಲಿ ಗಂಭೀರ ಕಾರ್ಯವಿಧಾನದ ಲೋಪಗಳ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ನಿಯೋಜಿಸಲಾದ ಹೆಡ್ ಕಾನ್‌ಸ್ಟೆಬಲ್ ಹೆಚ್‌ಸಿ 404 ಮಾಲತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ವಾರಂಟ್ ಆರೋಪಿಯನ್ನು ಬಂಧಿಸಿದ್ದರು ಆದರೆ ಕಾನೂನಿನ ಪ್ರಕಾರ ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಆರೋಪಿ ವಿರುದ್ದ ಜಾರಿಯಾಗಿರುವ ವಾರೆಂಟನ್ನು ರಿ-ಕಾಲ್ ಮಾಡಿಸಿಕೊಳ್ಳಲು ಸಹಕರಿಸಿರುವುದು ಕಂಡುಬಂದಿದ್ದು ಪ್ರಕರಣದ ವಿಚಾರಣೆಯ ಸಮಯದಲ್ಲಿ ಆಪಾದಿತ ಅಕ್ರಮಗಳು ಬೆಳಕಿಗೆ ಬಂದಿದ್ದು, ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯ ಲೋಪವನ್ನು ಸೂಚಿಸುವ ಪ್ರಾಥಮಿಕ ಸಂಶೋಧನೆಗಳ ನಂತರ, ಪೊಲೀಸ್ ಇಲಾಖೆ ಶಿಸ್ತು ಕ್ರಮವನ್ನು ಪ್ರಾರಂಭಿಸಿ, ವಿವರವಾದ ವಿಚಾರಣೆಯವರೆಗೆ ಹೆಡ್ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಿದೆ.

Read More

ರಸ್ತೆಯಲ್ಲಿ ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ನೆರವಾಗುವುದು, ಚಾಲಕನ ಜೀವ ಉಳಿಸುವುದು ನಾಗರಿಕ ಸಮಾಜದ ಮೊದಲ ಕರ್ತವ್ಯ. ಆದರೆ, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ನಮ್ಮ ಸಮಾಜದ ನಾಗರಿಕ ಪ್ರಜ್ಞೆ ಮತ್ತು ಸಹಾನುಭೂತಿಯನ್ನು ಅಣಕಿಸುವಂತಿದೆ. ಅಪಘಾತಕ್ಕೀಡಾಗಿ ಪಲ್ಟಿಯಾದ ಟ್ರಕ್‌ನಿಂದ ಮಾವಿನ ಹಣ್ಣುಗಳನ್ನು ಕದಿಯಲು ಜನರು ಮುಗಿಬಿದ್ದಿರುವ ದೃಶ್ಯ ಆನ್‌ಲೈನ್‌ನಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್​ ವಿಡಿಯೋದಲ್ಲೇನಿದೆ? ವೈರಲ್ ಆಗಿರುವ ವಿಡಿಯೋದಲ್ಲಿ, ಹೆದ್ದಾರಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಸಾಗಿಸುತ್ತಿದ್ದ ದೊಡ್ಡ ಟ್ರಕ್​ವೊಂದು ಪಲ್ಟಿಯಾಗಿರುವುದನ್ನು ಕಾಣಬಹುದು. ಆದಾಗ್ಯೂ, ಅಪಘಾತದ ತೀವ್ರತೆಗೆ ಟ್ರಕ್‌ನಲ್ಲಿದ್ದ ನೂರಾರು ಕೆಜಿ ತೂಕದ ಮಾವಿನ ಹಣ್ಣುಗಳು ರಸ್ತೆಯುದ್ದಕ್ಕೂ ಬಿದ್ದಿವೆ. ಈ ಸಮಯದಲ್ಲಿ ಚಾಲಕನಿಗೆ ಸಹಾಯ ಮಾಡಬೇಕಿದ್ದ ಸ್ಥಳೀಯರು ಮಾನವೀಯತೆಯನ್ನು ಮರೆತು ಮಾವಿನ ಹಣ್ಣನ್ನು ತೆಗೆದುಕೊಂಡು ಹೋಗಲು ಸಜ್ಜಾಗಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಚೀಲ, ಸೀರೆಗಳಲ್ಲಿ ಮಾವಿನ ಹಣ್ಣುಗಳ ಲೂಟಿ ಅಪಘಾತದ ಸ್ಥಳದಲ್ಲಿದ್ದ ಜನರು ತಮಗೆ ಬೇಕಾದಷ್ಟು ಮಾವಿನ ಹಣ್ಣನ್ನು ದೊಡ್ಡ ಪ್ಲಾಸ್ಟಿಕ್ ಚೀಲಗಳು, ಗೋಣಿ ಚೀಲಗಳನ್ನು ತಂದು ಹಣ್ಣುಗಳನ್ನು…

Read More

ಕೊಲಂಬೊ: ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ಶ್ರೀಲಂಕಾದ ಕೊಲಂಬೊದ ನೆಗೊಂಬೊ ಜೈಲಿನಲ್ಲಿ ನಡೆದಿದೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ನಡುವೆ ಭಾನುವಾರವೇ ಈ ಗಲಾಟೆ ಆರಂಭವಾಗಿತ್ತು. ಕೈದಿಗಳ ನಡುವಿನ ಈ ಘರ್ಷಣೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಜೈಲಿನ ಆವರಣವನ್ನು ಪರಿಶೀಲಿಸುತ್ತಿದ್ದು, ಮೃತಪಟ್ಟವರು ಮತ್ತು ಗಾಯಗೊಂಡವರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಜೈಲಿನ ಮುಖ್ಯ ದ್ವಾರದ ಹೊರಗೆ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಗಾಯಗೊಂಡ ಕೈದಿಗಳನ್ನು ಪೊಲೀಸ್ ಬಸ್‌ಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

Read More

ಮುಂಬೈ: ಮುಂಬೈ ನಗರ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ವಕೀಲರಿಗೆ ನ್ಯಾಯಾಲಯಗಳಿಗೆ ತಲುಪಲು ಸಾಧ್ಯವಾಗದಿದ್ದರೆ, ಆ ಪ್ರಕರಣಗಳಲ್ಲಿ ಯಾವುದೇ ಪ್ರತಿಕೂಲ ಆದೇಶಗಳನ್ನು ಹೊರಡಿಸುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಭರವಸೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮುಂಬೈ, ಥಾಣೆ ಮತ್ತು ರಾಯಗಢ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಬಲವಾದ ಗಾಳಿಯೊಂದಿಗೆ ಭಾರೀ ಪ್ರಮಾಣದಿಂದ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮನವಿ ಮಾಡಿದೆ. ಕೋರ್ಟ್​ಗೆ ಬರಲಾಗದಿದ್ದರೆ ತೊಂದರೆಯಿಲ್ಲ: ತೀವ್ರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮತ್ತು ನಗರ ಪ್ರದೇಶಗಳು ಜಲಾವೃತಗೊಳ್ಳಬಹುದು ಮತ್ತು ಹಠಾತ್ ಪ್ರವಾಹ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ, ಮಳೆಯ ಕಾರಣದಿಂದಾಗಿ ಸೋಮವಾರ ವಕೀಲರು ಗೈರುಹಾಜರಾದರೆ, ಅವರ ಗೈರುಹಾಜರಾಗಿದ್ದಾರೆ ಎಂಬ ಕಾರಣಕ್ಕೆ ಯಾವುದೇ ಪ್ರತಿಕೂಲ ಅಥವಾ ವಜಾ ಆದೇಶಗಳನ್ನು ಪಾಸ್ ಮಾಡಲಾಗುವುದಿಲ್ಲ ಎಂದು ಉಸ್ತುವಾರಿ ಮುಖ್ಯ ನ್ಯಾಯಮೂರ್ತಿ ರವೀಂದ್ರ ಗುಗೆ ಅವರು ವಕೀಲರ ಸಂಘಗಳಿಗೆ ಭರವಸೆ ನೀಡಿದ್ದಾರೆ. ಮುಖ್ಯ…

Read More

ಮಂಗಳೂರು: ನಗರದ ಬೈಕಂಪಾಡಿ ಸಮೀಪ ಚಿನ್ನದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿದ ಪ್ರಕರಣದ ತನಿಖೆಯಲ್ಲಿ ಮಂಗಳೂರು ನಗರ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ 14 ಪರಾರಿಯಾಗಿರುವ ಆರೋಪಿಗಳ ಗುರುತನ್ನು ಪತ್ತೆಹಚ್ಚಿರುವ ಪೊಲೀಸರು, ಅವರ ಛಾಯಾಚಿತ್ರಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿ ಬಂಧನಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ದರೋಡೆ ಪ್ರಕರಣದ ಪ್ರಮುಖ ಸಂಚುಕೋರ ಪುದುಚೇರಿ ಮೂಲದ ಶಿಬಿನ್ ಗಂಗಾಧರನ್ ಎಂದು ಶಂಕಿಸಲಾಗಿದೆ. ಉಳಿದ ಆರೋಪಿಗಳು ಹೆಚ್ಚಾಗಿ ಕೇರಳದ ವಿವಿಧ ಜಿಲ್ಲೆಗಳು ಹಾಗೂ ಕೊಡಗು ಭಾಗಕ್ಕೆ ಸೇರಿದವರಾಗಿದ್ದು, ಅವರಿಗಾಗಿ ವಿಶೇಷ ತಂಡಗಳು ಕೇರಳ ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಬಿಡುಗಡೆಗೊಂಡಿರುವ ಆರೋಪಿಗಳ ಪಟ್ಟಿಯಲ್ಲಿ ಶ್ರೀರಾಗ್, ಅತುಲ್, ಮಿಥುನ್‌ಲಾಲ್, ಅಜೀರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್ ಅಂಜರಕಂಡಿ, ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್ ಮತ್ತು ಜಮೀರ್ ಅಲಿಕಾ ಸೇರಿದ್ದಾರೆ. ಆರೋಪಿಗಳು…

Read More

ಬಂಟ್ವಾಳ: ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯ ಬಳಿಕ ಬಸ್ ನಿಲ್ದಾಣದಲ್ಲಿ ರಕ್ತದ ಗುರುತುಗಳು ಕಂಡುಬಂದಿವೆ. ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಬಂಟ್ವಾಳದ ಮೊಂತಿಮಾರ್ ಪಡ್ಪು ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.

Read More