Author: admin
ಗುರುಗ್ರಾಮ: ಮದುವೆಯಾಗಿ ಕೇವಲ ಮೂರೇ ತಿಂಗಳಾಗಿದ್ದ ನವವಿವಾಹಿತೆಯನ್ನು ಪತಿ ಹಾಗೂ ಆತನ ಪ್ರೇಯಸಿ ಸೇರಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಮಾನೇಸರ್‌ನಲ್ಲಿ ನಡೆದಿದೆ. ಮೂರು ವರ್ಷಗಳ ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪತಿ ಹಾಗೂ ಆತನ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೆಳತಿಯ ಮನೆಗೆ ಪತ್ನಿಯನ್ನು ಕರೆಸಿ ಅಲ್ಲೇ ಇಬ್ಬರು ಸೇರಿ ಆಕೆಯನ್ನು ಹತ್ಯೆಗೈದಿದ್ದರು. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಕಳೆದ ಫೆಬ್ರವರಿಯಲ್ಲಿ ಮಾನೇಸರ್ ನಿವಾಸಿ ಅಂಕಿತ್ (25) ಎಂಬಾತನೊಂದಿಗೆ 22 ವರ್ಷದ ಯುವತಿಯ ಮದುವೆಯಾಗಿತ್ತು. ಆದರೆ, ಮೇ 21 ರಂದು ಆಕೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ. ಅತ್ತೆ ಮನೆಯವರಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಸಿಗದಿದ್ದಾಗ, ಗಾಬರಿಗೊಂಡ ಯುವತಿಯ ತಾಯಿ ಮೇ 22 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಮೇ 22 ರಂದೇ ಮಾನೇಸರ್‌ನ ಬಾಡಿಗೆ ಕೋಣೆಯೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಆಕೆಯನ್ನು ಗುಂಡಿಕ್ಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.…
ಮಂಡ್ಯ,: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿದ್ದ ಹಗರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಕಚೇರಿಯ ರಹಸ್ಯ ಯೂಸರ್ ಐಡಿ ಮತ್ತು ಪಾಸ್‌ವರ್ಡ್‌ಗಳನ್ನು ಖಾಸಗಿ ವ್ಯಕ್ತಿಗೆ ನೀಡಿ, ಆತನ ಮೂಲಕ ಅಕ್ರಮ ಎಸಗುತ್ತಿದ್ದ 8 ಮಂದಿ ಸರ್ಕಾರಿ ಸಿಬ್ಬಂದಿ ಹಾಗೂ ಒಬ್ಬ ಖಾಸಗಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದಿಢೀರ್ ಬಂಧನದಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ಸರ್ಕಾರಿ ಕಚೇರಿಯ ಕಾರ್ಯಕಲಾಪಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಮುಖ್ಯ ಎಡಿಎಲ್‌ಆರ್ ಅಧಿಕಾರಿ ಮೊಹಮ್ಮದ್ ಹುಸೇನ್ ಅವರು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಚೇರಿಯಿಂದ ಪರಾರಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ. ಸರ್ವೆ ಮೇಲ್ವಿಚಾರಕ ಯೋಗರಾಜ್, ಭೂಮಾಪಕರಾದ ಅರವಿಂದ್, ಜಯಬೋರೇಗೌಡ, ದಯಾನಂದ್, ಮಧು, ರಮೇಶ್, ಹರೀಶ್, ನೇಹಾ ಸಾರಿಕಾ ಮಲ್ಲಿ ಸಿ. ಮತ್ತು ಖಾಸಗಿ ವ್ಯಕ್ತಿ ನಿತಿನ್ ಪ್ರೇಮಾನಂದ ಮಹಾಲೆ ಬಂಧಿತ ಆರೋಪಿಗಳಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಅಧಿಕಾರಿಗಳು ಶಾಮೀಲಾಗಿ ಸುಮಾರು 200 ಎಕರೆ ಸರ್ಕಾರಿ ಭೂಮಿಯನ್ನು ನಕಲಿ…
ಪುತ್ತೂರು: ಕಲ್ಲಿಮಾರ್‌ನಲ್ಲಿ ವಾಸವಿದ್ದ ಜಿಮ್ ಟ್ರೈನರ್ ಸಚಿನ್ ರೈ ಅವರು ಮೃತಪಟ್ಟಿದ್ದು, ಅವರ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ತಾಯಿ ಗುಲಾಬಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ, ಕಳೆದ ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅವರು ಪುತ್ತೂರಿನ ಕಲ್ಲಿಮಾರ್‌ನಲ್ಲಿ ವಾಸವಾಗಿದ್ದರು.ಜುಲೈ 5ರಂದು ಬೆಳಿಗ್ಗೆ ಸಚಿನ್ ರೈ ಅವರು ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ತಾಯಿ ಗುಲಾಬಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ತಮ್ಮ ಮಗನ ಸಾವಿನಲ್ಲಿ ಸಂಶಯವಿದೆ ಎಂದು ಆರೋಪಿಸಿ ಗುಲಾಬಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮುಂಬೈ: ನಗರದ ಮನ್ಖುರ್ದ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ನಾಲ್ಕು ಅಂತಸ್ತಿನ ಚಾಲ್ ಕಟ್ಟಡ ಕುಸಿದು 6 ಮಂದಿ ದುರ್ಮರಣಕ್ಕೀಡಾಗಿದ್ದದಾರೆ. ಮನ್ಖುರ್ದ್ ಪ್ರದೇಶದಲ್ಲಿರೋ ಹನುಮ ಮಂದಿರದ ಹಿಂದಿರುವ ಜನತಾ ನಗರದ ಚಾಲ್ ಸಂಖ್ಯೆ 5 ರಲ್ಲಿ ರಾತ್ರಿ 8.30ರ ಸುಮಾರಿಗೆ ದುರಂತ ಸಂಭವಿಸಿದೆ. ಚಾಲ್ ಅಂದ್ರೆ ಮುಂಬೈ ನಗರದಲ್ಲಿ ಕಂಡುಬರುವ ಒಂದು ವಿಶಿಷ್ಟವಾದ ವಸತಿ ಶೈಲಿಯಾಗಿದೆ. ಅಧಿಕಾರಿಗಳ ಪ್ರಕಾರ, ನೆಲ ಮತ್ತು 3ನೇ ಅಂತಸ್ತಿನ ಕಟ್ಟಡದ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು 6 ಜನ ಮೃತಪಟ್ಟಿದ್ದು, ಶವಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಘಟನೆ ಬಳಿಕ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಕೈಗೊಂಡಿವೆ. ಮುಂಬೈ ಅಗ್ನಿಶಾಮಕ ದಳ (MFB), ಮುಂಬೈ ಪೊಲೀಸರು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ವಾರ್ಡ್ ಕಚೇರಿ ಮತ್ತು 108 ಆಂಬ್ಯುಲೆನ್ಸ್ ಸೇವೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಕುಂದಾಪುರ: ಆಭರಣ ಮಳಿಗೆಯೊಂದರ ಶಟರ್ ಅನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ, ಅಂಗಡಿಯೊಳಗೆ ನುಗ್ಗಿದ ಕಳ್ಳರು ಬೆಳ್ಳಿ ಮತ್ತು ನಗದನ್ನು ದೋಚಿರುವ ಘಟನೆ ಮರವಂತೆಯ ರಾಷ್ಟ್ರೀಯ ಹೆದ್ದಾರಿ ಸಮೀಪ ಜುಲೈ 4 ರ ರಾತ್ರಿ ಮತ್ತು ಜುಲೈ 5 ರ ಬೆಳಗಿನ ಜಾವದ ನಡುವೆ ನಡೆದಿದೆ. ಮರವಂತೆ ಗ್ರಾಮದ ಮಾರುತಿ ಕಾಂಪ್ಲೆಕ್ಸ್‌ನಲ್ಲಿರುವ ವಿಶ್ವನಾಥ ಪೂಜಾರಿ ಅವರಿಗೆ ಸೇರಿದ ಜ್ಯುವೆಲ್ಲರಿ ಅಂಗಡಿಯಲ್ಲಿ ಈ ಕಳ್ಳತನ ನಡೆದಿದೆ. ಜುಲೈ 4 ರ ಶನಿವಾರ ರಾತ್ರಿ ಸುರಿದ ಭಾರಿ ಮಳೆಯನ್ನು ಕಳ್ಳರು ತಮ್ಮ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಗ್ಯಾಸ್ ಕಟ್ಟರ್ ಬಳಸಿ ಅಂಗಡಿಯ ಶಟರ್ ಕತ್ತರಿಸಿ ಒಳನುಗ್ಗಿದ ಕಳ್ಳರು, ಸುಮಾರು 1.44 ಲಕ್ಷ ರೂ. ಮೌಲ್ಯದ 600 ಗ್ರಾಂ ಬೆಳ್ಳಿ ಮತ್ತು ಅಂಗಡಿಯ ಡ್ರಾಯರ್‌ನಲ್ಲಿದ್ದ 1,000 ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳತನಕ್ಕೂ ಮುನ್ನ ಕಳ್ಳರು ಅಕ್ಕಪಕ್ಕದ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಹಾನಿಗೊಳಿಸಿದ್ದಾರೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ, ಬೈಂದೂರು…
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟವರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಬಿ.ಸಿ. ರೋಡ್ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿಗೆ, ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಒನ್-ವೇ ನಿಯಮವನ್ನು ಉಲ್ಲಂಘಿಸಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಮತ್ತು ಕಾರು ಎರಡೂ ಜಖಂಗೊಂಡಿವೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಅಶೋಕ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಉಡುಪಿ: ತುರ್ತು ಸಂದರ್ಭಗಳಲ್ಲಿ, ವಿಶೇಷವಾಗಿ ‘ಗೋಲ್ಡನ್ ಅವರ್’ನಲ್ಲಿ ರೋಗಿಗಳ ಪ್ರಾಣ ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ತುರ್ತು ಕರೆ ಬಂದ ಬಳಿಕ 15 ನಿಮಿಷದೊಳಗೆ ಅಂಬುಲೆನ್ಸ್ ಸ್ಥಳಕ್ಕೆ ತಲುಪುವಂತೆ ಮಾರ್ಗಸೂಚಿ ರೂಪಿಸಲಾಗುವುದು. ನಿಗದಿತ ಸಮಯದಲ್ಲಿ ತಲುಪದಿದ್ದರೆ ಸಂಬಂಧಿತ ಆಂಬ್ಯುಲೆನ್ಸ್ ಚಾಲಕನಿಗೆ 5,000 ರೂಪಾಯಿ ದಂಡ ವಿಧಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಘೋಷಿಸಿದ್ದಾರೆ. ರಸ್ತೆ ಅಪಘಾತಗಳು, ಹೆರಿಗೆ ಸಂಬಂಧಿತ ತುರ್ತು ಪರಿಸ್ಥಿತಿಗಳು ಮತ್ತು ಹೃದಯಾಘಾತದಂತಹ ಗಂಭೀರ ಸನ್ನಿವೇಶಗಳಲ್ಲಿ ಆಂಬ್ಯುಲೆನ್ಸ್ ತಡವಾಗಿ ಬರುವುದರಿಂದ ಸಂಭವಿಸುತ್ತಿರುವ ಸಾವುಗಳ ಬಗ್ಗೆ ಸಾರ್ವಜನಿಕರಲ್ಲಿ ಕಳವಳ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕ್ಯಾಬಿನೆಟ್‌ನಲ್ಲಿ ಮಾರ್ಗಸೂಚಿ ಅನುಮೋದನೆಗೊಂಡ ಬಳಿಕ, ಮೂರು ತಿಂಗಳೊಳಗೆ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು. ರಾಜ್ಯದ ವಿವಿಧ ಭಾಗಗಳಲ್ಲಿ ಆಂಬ್ಯುಲೆನ್ಸ್ ತಲುಪಲು ಗ್ರಾಮೀಣ ಪ್ರದೇಶಗಳಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಮತ್ತು ನಗರ ಪ್ರದೇಶಗಳಲ್ಲಿ 20 ರಿಂದ 30 ನಿಮಿಷಗಳವರೆಗೆ…
ಮಂಗಳೂರು: ಎನ್‌ಎಂಪಿಟಿ ಬಂದರಿಗೆ ಆಗಮಿಸಿದ್ದ ಬೃಹತ್ ಟ್ರಕ್ ಒಂದು ಪಣಂಬೂರು ಬೀಚ್ ರಸ್ತೆಯಿಂದ ಹೆದ್ದಾರಿಗೆ ನುಗ್ಗುವ ಸಂದರ್ಭದಲ್ಲಿ ಮುಂದಕ್ಕೆ ಚಲಿಸಲಾಗದೆ ಸಿಕ್ಕಿಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ -66ರಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ. ಪಡುಬಿದ್ರೆಯ PRAJ ಇಂಡಸ್ಟ್ರೀಸ್ ಸಂಸ್ಥೆಗೆ ಸೇರಿದ್ದ 144 ಚಕ್ರದ ಬೃಹತ್ ಟ್ರಕ್ ಶನಿವಾರ ರಾತ್ರಿ ರಫ್ತು ಉದ್ದೇಶದ ಸರಕಿನೊಂದಿಗೆ ಪಣಂಬೂರು ಬಂದರಿಗೆ ಆಗಮಿಸಿತ್ತು. ರಾತ್ರಿ 11 ಗಂಟೆಗೆ ಪಡುಬಿದ್ರಿಯಿಂದ ಹೊರಟು ನಸುಕಿನ ನಾಲ್ಕು ಗಂಟೆ ವೇಳೆಗೆ ಪಣಂಬೂರು ತಲುಪಿತ್ತು. ಬಂದರಿನಲ್ಲಿ ಸರಕು ಅನ್ ಲೋಡ್ ಮಾಡಿ ಭಾನುವಾರ ಸಂಜೆ ನಾಲ್ಕು ಗಂಟೆಗೆ ಹೊರಗೆ ಬಂದು ಹೆದ್ದಾರಿಗೆ ನುಗ್ಗಿತ್ತು. ಆದರೆ ಬೀಚ್ ರಸ್ತೆಯಿಂದ ಹೊರಕ್ಕೆ ಬರುವಾಗ ಬದಿಯಲ್ಲಿ ವಾಹನ ಇದ್ದುದರಿಂದ ಟ್ರಕ್ ಮುಂಭಾಗ ಹೆದ್ದಾರಿ ಡಿವೈಡರ್ ಮೇಲೇರಿ ನಿಂತಿತ್ತು. ಹಿಂಭಾಗ ಪೂರ್ತಿಯಾಗಿ ಹೆದ್ದಾರಿಗೆ ಅಡ್ಡಲಾಗಿ ನಿಂತಿದ್ದರಿಂದ ಮಂಗಳೂರಿನಿಂದ ಸುರತ್ಕಲ್ ಕಡೆಗೆ ಹೋಗುವ ರಸ್ತೆ ಪೂರ್ತಿ ಬಂದ್ ಆಗಿತ್ತು. ಇದರಿಂದಾಗಿ ಬೃಹತ್ ಟ್ರಕ್ ಹಿಂದಕ್ಕು…
ಹುಬ್ಬಳ್ಳಿ,: ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ” ಎಂಬ ನಾಣ್ಣುಡಿಯಂತೆ, ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಜಾಲ ದಿನೇದಿನೆ ವಿಸ್ತರಿಸುತ್ತಲೇ ಇದೆ. ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಣ ಡಬಲ್, ಪಾರ್ಟ್-ಟೈಮ್ ಉದ್ಯೋಗದ ಆಮಿಷ ಒಡ್ಡುತ್ತಿದ್ದ ವಂಚಕರು, ಇದೀಗ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಗುರಿಯಾಗಿಸಿಕೊಂಡು ವಂಚನೆಗೆ ಇಳಿದಿದ್ದಾರೆ. ಪ್ರತಿಷ್ಠಿತ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ದೋಚುತ್ತಿರುವ ಗ್ಯಾಂಗ್ ಸಕ್ರಿಯವಾಗಿದ್ದು, ಇದಕ್ಕೆ ತಾಜಾ ಉದಾಹರಣೆಯಾಗಿ ಹುಬ್ಬಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬರೋಬ್ಬರಿ 16 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದಾಳೆ. ಜಾಹೀರಾತು ನಂಬಿ ಲಕ್ಷಾಂತರ ರೂ ಕಳೆದುಕೊಂಡ ವಿದ್ಯಾರ್ಥಿನಿ ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ಸ್ಫೂರ್ತಿ ಎಂಬ ವಿದ್ಯಾರ್ಥಿನಿಯೇ ವಂಚನೆಗೆ ಒಳಗಾದ ದುರ್ದೈವಿ. ಈಕೆ ಇನ್‌ಸ್ಟಾಗ್ರಾಮ್‌ನಲ್ಲಿ ‘ಟ್ರಸ್ಟ್‌ಲೈನ್ ಎಜುಕೇಶನ್’ ಎಂಬ ಐಡಿಯೊಂದರಲ್ಲಿದ್ದ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾಳೆ. ಅದರಲ್ಲಿ ಹೈದರಾಬಾದ್‌ನ ಪ್ರತಿಷ್ಠಿತ ‘ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್’ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ವಂಚಕರು ಜಾಹೀರಾತು ನೀಡಿದ್ದರು. ಇದನ್ನು ನಿಜವೆಂದು ನಂಬಿದ…
ನವದೆಹಲಿ: ಸಾಮಾಜಿಕ ಜಾಲತಾಣ ಸಂಸ್ಥೆ ಮೆಟಾ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇನ್‌ಸ್ಟಾಗ್ರಾಂನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಅಕ್ರಮ ವಿಷಯಗಳನ್ನು ಪ್ರಚಾರ ಮಾಡುವ ಪಾವತಿಸಿದ ಜಾಹೀರಾತುಗಳು ಕಾಣಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮೆಟಾಗೆ ನೋಟಿಸ್ ಜಾರಿ ಮಾಡಿದೆ. ಸಚಿವಾಲಯವು ಇಂತಹ ಎಲ್ಲ ಜಾಹೀರಾತುಗಳು ಹಾಗೂ ಕಾನೂನುಬಾಹಿರ ವಿಷಯಗಳನ್ನು ತಕ್ಷಣವೇ ಇನ್‌ಸ್ಟಾಗ್ರಾಂನಿಂದ ತೆಗೆದುಹಾಕುವಂತೆ ಸೂಚಿಸಿದೆ. ಜೊತೆಗೆ, ಈ ರೀತಿಯ ವಿಷಯಗಳು ವೇದಿಕೆಯಲ್ಲಿ ಹೇಗೆ ಪ್ರಕಟವಾದವು, ಅವುಗಳನ್ನು ತಡೆಯಲು ಸಂಸ್ಥೆ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬ ಕುರಿತು 7 ದಿನಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಮೆಟಾಗೆ ನಿರ್ದೇಶನ ನೀಡಿದೆ. ವರದಿಗಳ ಪ್ರಕಾರ, ಇನ್‌ಸ್ಟಾಗ್ರಾಂನಲ್ಲಿ ಕಾಣಿಸಿಕೊಂಡ ಕೆಲವು ಪಾವತಿಸಿದ ಜಾಹೀರಾತುಗಳು ಬಳಕೆದಾರರನ್ನು ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಅಕ್ರಮ ವಿಷಯಗಳನ್ನು ಹೊಂದಿರುವ ವೆಬ್‌ಸೈಟ್‌ಗಳತ್ತ ಕೊಂಡೊಯ್ಯುತ್ತಿದ್ದವು ಎನ್ನಲಾಗಿದೆ. ಇಂತಹ ವಿಷಯಗಳ ಪ್ರಸಾರಕ್ಕೆ ವೇದಿಕೆಯ ಅಲ್ಗಾರಿದಮ್ ಸಹ ಪರೋಕ್ಷವಾಗಿ ಕಾರಣವಾಗಿರಬಹುದೆಂಬ ಅನುಮಾನವನ್ನೂ ಸರ್ಕಾರ ವ್ಯಕ್ತಪಡಿಸಿದೆ.…



