Author: admin
ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜುಲೈ 2, 2026ರಂದು ಸಂಜೆ ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು. ಈ ವೇಳೆ ಪೊಲೀಸ್ ವಾಹನವನ್ನು ಕಂಡ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳು, ಅಕ್ರಮ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳ, ಮಣ್ಣು ಸಾಗಣೆ ಲಾರಿಗಳ ತೂಕ ಪರಿಶೀಲನೆಗಾಗಿ ನಿರ್ಮಿಸಿದ್ದ ವೇ ಬ್ರಿಡ್ಜ್ ಹಾಗೂ ಕಟ್ಟಡವೂ ಪತ್ತೆಯಾಗಿದೆ. ಪೊಲೀಸರು ಸ್ಥಳದಲ್ಲಿದ್ದ ಯಂತ್ರೋಪಕರಣಗಳು ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಮುಳಿಗದ್ದೆ ಝಕಾರಿಯಾ ಹಾಗೂ…
ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 104/2025ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ-2008ರ 66(C), 66(D)ಹಾಗೂ **ಭಾರತೀಯ ನ್ಯಾಯ ಸಂಹಿತೆ (BNS)**ಯ 126(2), 308(6), 318(4), 319(2) ಮತ್ತು 3(5) ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು 2026ರ ಜುಲೈ 3ರಂದು ಜಿಲ್ಲಾ ಸೈಬರ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರ ವಿಚಾರಣೆಯಲ್ಲಿ, ಜುಬೈರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 180/2022 ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು…
ಉಡುಪಿ: ಮಲ್ಪೆಯ ಉದ್ಯಮಿ ಸಂದೀಪ್ ಸಾಲ್ಯಾನ್ ಸಾವಿನ ಪ್ರಕರಣದ ಪ್ರಮುಖ ಆರೋಪಿ ಮಹಿಳೆಯನ್ನು ಕ್ಯಾಲಂಗಟ್ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಿಳೆ ಮೂಲತಃ ಮಂಗಳೂರು ನಿವಾಸಿ ಅಕ್ಷತಾ ಎಂದು ಗುರುತಿಸಲಾಗಿದೆ. ಆಕೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಸಂದೀಪ್ ಸಾವಿನ ಪ್ರಕರಣ ಈಗ ಕೊಲೆ ಎಂದು ಪೊಲೀಸರು ಸಾಬೀತು ಪಡಿಸಿದ್ದಾರೆ. ಮಹಿಳೆ ರೆಸಾರ್ಟ್ ನಲ್ಲಿ ಕಟ್ಟರ್ ಕೇಳಿ ಸಂದೀಪ್ ಬಳಿ ಇದ್ದ ಚಿನ್ನ ಹಾಗೂ ಹಣವನ್ನು ದೋಚಿಕೊಂಡು ಹೋಗಿದ್ದಳು. ಇದರಿಂದ ಅನುಮಾನಗೊಂಡ ಪೊಲೀಸರು ಈ ಆರೋಪಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಆರೋಪಿ ಮಹಿಳೆಯನ್ನು ಬಂದಿಸಿ ಈಗ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆಯಲ್ಲಿ ಸಂದೀಪ್ ಕೊಲೆಯ ಸತ್ಯಾಂಶ ತಿಳಿದುಬರಬೇಕಿದೆ.
ಮಂಗಳೂರು: ಕಂಟೈನರ್ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಉಡುಪಿ ರಸ್ತೆಯ ಕೂಳೂರು ವಿ.ಅರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ನಡೆದಿದೆ. ಸದಾನಂದ ಶೆಟ್ಟಿಗಾರ್(46) ಮೃತ ಸ್ಕೂಟರ್ ಸವಾರ. ಮೃತರು ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಚಾಲಕ ಮಹಮ್ಮದ್ ಅಜರುದ್ದೀನ್ ಚಲಾಯಿಸುತ್ತಿದ್ದ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಇನ್ನು ಚಾಲಕ ಮಹಮ್ಮದ್ ಅಜರುದ್ದೀನ್ ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಲಾರಿ ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಪಡಿಸಿದ್ದಾರೆ. ಘಟನೆ ವೇಳೆ ಲಾರಿ ಸವಾರನ ಮೇಲೆ ಚಲಿಸಿ ಸ್ಕೂಟರ್ ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ನಗರದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ಮುಂಜಾನೆ ಮಹಾರಾಷ್ಟ್ರದ ಕುಟುಂಬವೊಂದನ್ನು ತಡೆದು, ತಲವಾರು ತೋರಿಸಿ ಬೆದರಿಸಿ, ಚಿನ್ನಾಭರಣ ದೋಚಿ ಹೆಂಡತಿ-ಮಗನನ್ನು ಅಪಹರಿಸಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಇಂಟರ್‌ಸ್ಟೇಟ್ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ನಿಮಿಲ್ ಆರ್.ಕೆ (37) ಹಾಗೂ ದರೋಡೆಕೋರರಿಗೆ ಆಶ್ರಯ ಮತ್ತು ವಾಹನ ನೀಡಿ ಕೃತ್ಯಕ್ಕೆ ಸಹಕರಿಸಿದ ಕೊಡಗು ಜಿಲ್ಲೆಯ ಇರ್ಷಾದ್ (40) ಮತ್ತು ಮುಸ್ತಾಫ (49) ಬಂಧಿತ ಆರೋಪಿಗಳು. ಮಹಾರಾಷ್ಟ್ರ ಮೂಲದ ವಿಕಾಸ್ ಸುಬ್ಬರಾವ್ ಧನವಡೆ (44) ಅವರು ಜೂನ್ 29ರಂದು ನಸುಕಿನ 2:45ರ ಸುಮಾರಿಗೆ ತಮ್ಮ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಹೆದ್ದಾರಿ ಮೂಲಕ ಕೇರಳದ ಪಯ್ಯನ್ನೂರಿಗೆ ತೆರಳುತ್ತಿದ್ದರು. ಈ ವೇಳೆ ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6 ರಿಂದ 7 ಜನ ಮುಸುಕುಧಾರಿ ದರೋಡೆಕೋರರು ವಿಕಾಸ್ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ತಲವಾರಿನಿಂದ ಹಲ್ಲೆ ನಡೆಸಿ ವಿಕಾಸ್ ಅವರನ್ನು…
ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ‘ಕಂಬಳ’ ಆಯೋಜಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾದಲ್ಲಿ ಕಂಬಳ ನಡೆಸುವ ನಿರ್ಧಾರದ ಕುರಿತು ಸರ್ಕಾರ ತಕ್ಷಣವೇ ಮರುಚಿಂತನೆ ನಡೆಸಬೇಕು ಎಂದು ಅವರು ಮಹತ್ವದ ಸಲಹೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಸಂಸದ ಯದುವೀರ್, ಕಂಬಳದ ಸಾಂಪ್ರದಾಯಿಕ ಮತ್ತು ಧಾರ್ಮಿಕ ಹಿನ್ನೆಲೆಯನ್ನು ಉಳಿಸಿಕೊಳ್ಳುವ ಅಗತ್ಯತೆಯನ್ನು ಪ್ರತಿಪಾದಿಸಿದ್ದಾರೆ. ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳವನ್ನು ಅಳವಡಿಸಿಕೊಳ್ಳುವ ಕುರಿತು ನಡೆಯುತ್ತಿರುವ ಚರ್ಚೆಗಳು ಅತ್ಯಂತ ಆಳವಾದ ಮರುಚಿಂತನೆಯನ್ನು ಬೇಡುತ್ತವೆ. ಕಂಬಳವು ಕರಾವಳಿ ಕರ್ನಾಟಕದ ಮಣ್ಣು, ಸಂಸ್ಕೃತಿ ಮತ್ತು ಜನಜೀವನದೊಂದಿಗೆ ಹಾಸುಹೊಕ್ಕಾಗಿರುವ ಶತಮಾನಗಳ ಇತಿಹಾಸವಿರುವ ಅತ್ಯಂತ ಪವಿತ್ರವಾದ ಪರಂಪರೆ. ಇದು ತನ್ನದೇ ಆದ ಆಳವಾದ ಸಾಂಪ್ರದಾಯಿಕ ಮತ್ತು ಧಾರ್ಮಿಕ ಮೌಲ್ಯವನ್ನು ಹೊಂದಿದ್ದು, ಇದನ್ನು ಕೇವಲ…
ಬೆಂಗಳೂರು: ಮೌಲ್ವಿಗಳನ್ನು ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು: ಭಾರೀ ಮಳೆಗೆ ಮನೆಯಂಗಳದಲ್ಲಿದ್ದ ಮರ ನೆಲಕ್ಕುರುಳಿದ ಘಟನೆ, ಬೆಂಗಳೂರಿನ ಹಿರಿಯ ಉದ್ಯಮಿ ಎನ್.ಜಿ. ಕೇಸರಿ ಅವರ ಪಾಲಿಗೆ ಅದೃಷ್ಟದ ಬಾಗಿಲನ್ನೇ ತೆರೆದಿದೆ. ಸುಮಾರು 40 ವರ್ಷಗಳ ಕಾಲ ಸಂರಕ್ಷಿಸಿ ಬೆಳೆಸಿದ್ದ ಶ್ರೀಗಂಧದ ಮರವನ್ನು ಕಾನೂನುಬದ್ಧವಾಗಿ ಮಾರಾಟ ಮಾಡುವ ಮೂಲಕ ಅವರು ತೆರಿಗೆ ಹಾಗೂ ಇತರ ವೆಚ್ಚಗಳನ್ನು ಕಳೆದ ಬಳಿಕ ಸುಮಾರು ರೂ.28 ಲಕ್ಷ ನಿವ್ವಳ ಆದಾಯ ಗಳಿಸಿದ್ದಾರೆ. ಜೊತೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯಿಂದ ಪ್ರತಿಷ್ಠಿತ ‘ಶ್ರೀಗಂಧ ಶಿರೋಮಣಿ’ ಗೌರವಕ್ಕೂ ಭಾಜನರಾಗಿದ್ದಾರೆ. ಸುಮಾರು ನಾಲ್ಕು ದಶಕಗಳ ಹಿಂದೆ ಮನೆಯಂಗಳದಲ್ಲಿ ಸಹಜವಾಗಿ ಮೊಳಕೆಯೊಡೆದ ಪುಟ್ಟ ಗಿಡವನ್ನು ಸಾಮಾನ್ಯ ಗಿಡದಂತೆ ಬೆಳೆಸಿದ ಕೇಸರಿ ಅವರಿಗೆ, ಬಳಿಕ ಅದು ಅಮೂಲ್ಯ ಶ್ರೀಗಂಧದ ಮರ ಎಂಬುದು ತಿಳಿಯಿತು. ಮರ ಬೆಳೆದಂತೆ ಅದರ ಮೇಲೆ ಕಳ್ಳರ ಕಣ್ಣೂ ಬಿದ್ದಿದ್ದು, ಹಲವು ಬಾರಿ ಕಳ್ಳತನದ ಯತ್ನಗಳು ನಡೆದಿದ್ದವು. ಇದರಿಂದ ಎಚ್ಚೆತ್ತ ಅವರು ಮರದ ಸುತ್ತ ಕಬ್ಬಿಣದ ಬೇಲಿ ನಿರ್ಮಿಸಿ ವರ್ಷಗಳ ಕಾಲ ಸುರಕ್ಷಿತವಾಗಿ ಕಾಪಾಡಿಕೊಂಡು…
ಬ್ಯಾಂಕಾಕ್: ಈಶಾನ್ಯ ಥೈಲ್ಯಾಂಡ್‌ನ ಮುಕ್ದಹಾನ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರ ಹಾಗೂ ಮನಕಲಕುವ ಅಪಘಾತವೊಂದು ಸಂಭವಿಸಿದೆ. ಹೆತ್ತವರ ಅನುಮತಿಯಿಲ್ಲದೆ 11 ವರ್ಷದ ಬಾಲಕನೊಬ್ಬ ವಾಹನ ಚಲಾಯಿಸಿಕೊಂಡು , ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದೆ. ಈ ಘೋರ ಅಪಘಾತದಲ್ಲಿ ಒಂಬತ್ತು ಬೌದ್ಧ ಸನ್ಯಾಸಿಗಳು ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ‘ಬುದ್ಧೋ ಬುದ್ಧೋ’ ಎನ್ನುತ್ತಿದ್ದಾಗಲೇ ಅಪ್ಪಳಿಸಿತು ಸಾವು ಸುಮಾರು 35 ಸನ್ಯಾಸಿಗಳು ಮತ್ತು ಐದು ಜನ ಸಾಮಾನ್ಯ ಅನುಯಾಯಿಗಳ ಗುಂಪು ಮುಕ್ದಹಾನ್ ಪ್ರಾಂತ್ಯದ ರಸ್ತೆಯ ಮೂಲಕ ತೀರ್ಥಯಾತ್ರೆಗಾಗಿ ನಡೆದುಕೊಂಡು ಹೋಗುತ್ತಿತ್ತು. ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಬದುಕುಳಿದ ಫ್ರಾ ಸೋಂಪಾಂಗ್ ಎಂಬ ಸನ್ಯಾಸಿ ಘಟನೆ ಬಗ್ಗೆ ಮಾತನಾಡಿ, ನಾವೆಲ್ಲರೂ ‘ಬುದ್ಧೋ, ಬುದ್ಧೋ’ ಎಂದು ಧ್ಯಾನ ಮಂತ್ರ ಜಪಿಸುತ್ತಾ ಸಾಗುತ್ತಿದ್ದೆವು. ಈ ವೇಳೆ ಬಾಲಕನೊಬ್ಬ ಓಡಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಇದ್ದಕ್ಕಿದ್ದಂತೆ ವೇಗದಲ್ಲಿ ನಮ್ಮ ಸಾಲಿಗೆ ಡಿಕ್ಕಿ ಹೊಡೆಯಿತು. ಮೊದಲ ಒಂಬತ್ತು ಸನ್ಯಾಸಿಗಳು ಬದುಕುಳಿದರು, ಆದರೆ ಉಳಿದವರು ಕಾರು ಡಿಕ್ಕಿಯ ರಭಸಕ್ಕೆ ಗಾಳಿಯಲ್ಲಿ ಹಾರಿ…
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಮೂಲತಃ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಕೋಳಕೇರಿ ನಿವಾಸಿಯಾಗಿದ್ದು, ಪ್ರಸ್ತುತ ಉರ್ವದಲ್ಲಿ ವಾಸವಾಗಿರುವ ತಿಲಕ್‌ರಾಜ್ ಎಂದು ಗುರುತಿಸಲಾಗಿದೆ. ಜುಲೈ 2ರಂದು ಮುಂಜಾನೆ ಸುಮಾರು 4.20ರ ವೇಳೆಗೆ ಆರೋಪಿ ಕಾರಾಗೃಹದ ಒಳಭಾಗದಲ್ಲಿರುವ ಅಡುಗೆಮನೆ ಪ್ರದೇಶದತ್ತ ಅನುಮಾನಾಸ್ಪದ ಪಾರ್ಸೆಲ್‌ನ್ನು ಎಸೆದಿದ್ದಾನೆ. ಈ ಕೃತ್ಯವನ್ನು ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎಫ್ ಆರ್‌ಪಿಸಿ ಕಿರಣ್ ಗಮನಿಸಿದ್ದು, ತಕ್ಷಣವೇ ಎಎಸ್‌ಐ ಕಿರಣ್ ಅಂಬಿಗ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸಿಬ್ಬಂದಿ ಸುಮಾರು 500 ಮೀಟರ್ ದೂರ ಆರೋಪಿಯನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದಿದ್ದಾರೆ. ನಂತರ ಉಸ್ತುವಾರಿ ಅಧಿಕಾರಿ ಪೊಲೀಸ್ ನಿರೀಕ್ಷಕ ಸುಭಾಷ್ ಅವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಯ ಪ್ರಕಾರ, ಮೂಡುಶೆಡ್ಡೆ ನಿವಾಸಿ ಕಿರಣ್ ಎಂಬಾತ ಆರೋಪಿಗೆ ಗಾಂಜಾ, ಲೈಟರ್ ಹಾಗೂ ಗಾಂಜಾ ಸೇವನೆಗೆ ಬಳಸುವ…



