Author: admin

ಬೆಂಗಳೂರು: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ದೇವರ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ತಲಘಟ್ಟಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆಸಿದ್ದರು. ಇತ್ತೀಚೆಗೆ ದೇವಸ್ಥಾನಗಳಿಂದ ಒಟ್ಟು ನಾಲ್ಕು ಬೆಲೆಬಾಳುವ ವಿಗ್ರಹಗಳನ್ನು ಕದ್ದು ಎಸ್ಕೇಪ್ ಆಗಿದ್ದರು. ಆರೋಪಿಗಳು ಗಣೇಶ, ಆಂಜನೇಯ ಹಾಗೂ ಲಕ್ಷ್ಮೀ ನಾಗರ ವಿಗ್ರಹಗಳನ್ನು ಕಳ್ಳತನ ಮಾಡಿದ್ದರು ಎಂದು ತಿಳಿದುಬಂದಿದೆ. ಕೇವಲ ದೇವಸ್ಥಾನಗಳಲ್ಲಷ್ಟೇ ಅಲ್ಲದೆ, ನಿರ್ಮಾಣ ಹಂತದಲ್ಲಿದ್ದ ಕಟ್ಟಡಗಳಿಗೂ ನುಗ್ಗಿ ದುಬಾರಿ ಯಂತ್ರೋಪಕರಣಗಳನ್ನು ಕಳವು ಮಾಡುತ್ತಿದ್ದರು. ಈ ಸಂಬಂಧ ತಲಘಟ್ಟಪುರ ಮತ್ತು ಬನ್ನೇರುಘಟ್ಟ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸಿದ ತಲಘಟ್ಟಪುರ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ ನಾಲ್ಕೂ ದೇವರ ವಿಗ್ರಹಗಳು ಹಾಗೂ ನಿರ್ಮಾಣ ಹಂತದ ಕಟ್ಟಡಗಳಿಂದ ಕದ್ದಿದ್ದ ಇತರ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಮಂಗಳೂರು : ಫೇಸ್‌ಬುಕ್‌ನಲ್ಲಿ ಬಂದ ಆಕರ್ಷಕ ಜಾಹೀರಾತೊಂದನ್ನು ನಂಬಿ ಆನ್‌ಲೈನ್ ಮೂಲಕ ಸೀನಿಯರ್ ಸಿಟಿಜನ್ ಕಾರ್ಡ್‌ಗೆ  ಅರ್ಜಿ ಸಲ್ಲಿಸಲು ಮುಂದಾದ 68 ವರ್ಷದ ಹಿರಿಯ ನಾಗರಿಕರೊಬ್ಬರಿಗೆ ಸೈಬರ್ ವಂಚಕರು 1 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ದೂರುದಾರರಾದ 68 ವರ್ಷದ ಕೃಷಿಕರೊಬ್ಬರು ಕಳೆದ ಅಕ್ಟೋಬರ್ 4 ರಂದು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಸುಲಭವಾಗಿ ಸೀನಿಯರ್ ಸಿಟಿಜನ್ ಕಾರ್ಡ್ ಪಡೆದುಕೊಳ್ಳಬಹುದು ಎಂಬ ಜಾಹೀರಾತನ್ನು ಕಂಡಿದ್ದರು. ನಂತರ ಅಕ್ಟೋಬರ್ 6 ರಂದು ಪುನಃ ಅದೇ ಜಾಹೀರಾತನ್ನು ನೋಡಿ ಅದರ ಮೇಲೆ ಕ್ಲಿಕ್ ಮಾಡಿದ್ದಾರೆ. ಅಂದೇ ಮಧ್ಯಾಹ್ನ 1:30 ರ ಸುಮಾರಿಗೆ 7207717431 ಮೊಬೈಲ್ ನಂಬರ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಮಾಡಿ, ತಾನು ಸೀನಿಯರ್ ಸಿಟಿಜನ್ ಕಾರ್ಡ್ ದಾಖಲೆಗಳನ್ನು ವೆರಿಫಿಕೇಶನ್ ಮಾಡಲು ಕರೆ ಮಾಡಿರುವುದಾಗಿ ನಂಬಿಸಿದ್ದಾನೆ. ವಂಚಕನ ಮಾತುಗಳನ್ನು ನಂಬಿದ ಹಿರಿಯ ನಾಗರಿಕರು ಆತನಿಗೆ ತಮ್ಮ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ  ಡೆಬಿಟ್ ಕಾರ್ಡ್ ನಂಬರ್…

Read More

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 12) ಪ್ರಮುಖ ರಾಜ್ಯಪಾಲರ ಹುದ್ದೆಗಳ ಮರುಹಂಚಿಕೆಯ ಭಾಗವಾಗಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಪ್ರಸ್ತುತ ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದ್ದು, ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಇನ್ನು  ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಸುಧಾ ಯಾದವ್ ಅವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರು ಎನಿಸಿಕೊಂಡಿದ್ದಾರೆ. ಈ ಹಿಂದೆ 1999ರಿಂದ 2002ರವರೆಗೆ ವಿ.ಎಸ್ ರಮಾದೇವಿ ಅವರು ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು. ಒಟ್ಟು 6 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೂ ಕೇರಳದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಇನ್ನು ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ…

Read More

ಮುಂಬೈ: ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ದೃಢಪಡಿಸಿದೆ. ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ. ಅಕ್ಟೋಬರ್ 8ರಂದು ಗೋವಾದ ತಮ್ಮ ನಿವಾಸದಲ್ಲಿ ಮುಂಜಾನೆ 5:10ರ ಸುಮಾರಿಗೆ ನಾನಾ ಪಾಟೇಕರ್ ಸಾವನ್ನಪ್ಪಿದ್ದರು. ಪಣಜಿ ಪೊಲೀಸರು ಅಸಹಜ ಸಾವು ಅಂತ ಕೇಸ್ ದಾಖಲಿಸಿಕೊಂಡಿದ್ದರು. ಇದೀಗ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೃದಯದ ಎಡ ಮುಖ್ಯ ಕೊರೊನರಿ ಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ತೀವ್ರ ಹೃದಯ ಸ್ನಾಯುವಿನ ಸಾವು ಸಂಭವಿಸಿದೆ ಎಂದು ಉಲ್ಲೇಖಿಸಿದೆ. ಅಪಧಮನಿಗಳಲ್ಲಿ ಕೊಬ್ಬಿನ ಪದಾರ್ಥಗಳು ಶೇಖರಣೆಯಾಗಿ ರಕ್ತನಾಳ ಕಿರಿದಾಗುವ ಅಥವಾ ಮುಚ್ಚಿಹೋಗುವ ಕಾಯಿಲೆಯ ಹಿನ್ನೆಲೆಯಲ್ಲಿ ಈ ಸ್ಥಿತಿ ಉಂಟಾಗಿದೆ. ಇದನ್ನು ಸಹಜ ಸಾವಿನ ಕಾರಣವೆಂದು ವರದಿಯಲ್ಲಿ ದಾಖಲಿಸಲಾಗಿದೆ

Read More

ಕುಂದಾಪುರ : ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಕುಂದಾಪುರ ನಗರದ ಭಂಡಾರ್‌ಕಾರ್ಸ್ ರಸ್ತೆ ನಿವಾಸಿ ಅಜಿತ್ ಪೌಲ್ ಲೂಯಿಸ್ (55) ಮೃತಪಟ್ಟ ದುರ್ದೈವಿ. ಮೃತ ಅಜಿತ್ ಪೌಲ್ ಲೂಯಿಸ್ ಅವರು ನವದೆಹಲಿಯ ಖಾಸಗಿ ಕಂಪೆನಿಯೊಂದರಲ್ಲಿ ಜನರಲ್ ಮ್ಯಾನೇಜರ್ (GM) ಆಗಿ ಉದ್ಯೋಗದಲ್ಲಿದ್ದರು. ಕೆಲಸದ ನಿಮಿತ್ತ ದೆಹಲಿಯಲ್ಲಿದ್ದ ಅವರು ಇತ್ತೀಚೆಗೆ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ 8-10 ದಿನಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಸೋಮವಾರದಂದು ಮುಳ್ಳಿಕಟ್ಟೆ ಸಮೀಪದ ಶಿಕ್ಷಣ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ತಮ್ಮ ಪುತ್ರಿಯ ಶೈಕ್ಷಣಿಕ ಪ್ರಗತಿಯನ್ನು  ವಿಚಾರಿಸಲು ಶಾಲೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಜಿತ್ ಅವರನ್ನು ತಕ್ಷಣವೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ತೀವ್ರ ರಕ್ತಸ್ರಾವ…

Read More

ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ನಗರದ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜು ಕೊನೆಗೂ ಮಣಿದಿದೆ. ಪರೀಕ್ಷೆಯನ್ನು ಮುಂದೂಡಲು ಕಾಲೇಜು ತೀರ್ಮಾನಿಸಿದೆ. ಮಂಗಳೂರಿನ ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿತ್ತು.ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನೇ ನೀಡದೆ ಪರೀಕ್ಷೆ ನಡೆಸಲು ಮುಂದಾಗಿದ್ದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಕಾಲೇಜಿನ ನಡೆಯನ್ನು ಖಂಡಿಸಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ಸಾಥ್ ನೀಡಿತ್ತು. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಮಾಧ್ಯಮಗಳಿಗೆ ಕಾಲೇಜಿನ ಪರೀಕ್ಷಾ ಅಧಿಕಾರಿ ಶುಭಾರೇಖಾ ಪ್ರತಿಕ್ರಿಯಿಸಿ, ಈ ಕಾಲೇಜಿಗೆ ನೂರು ವರ್ಷಗಳ ಇತಿಹಾಸವಿದೆ. ಪ್ರತಿವರ್ಷ ಅಕ್ಟೋಬರ್‌ನಲ್ಲೇ ಪರೀಕ್ಷೆ ಇದೆ. ಈ ವರ್ಷವೂ ತಿಂಗಳ ಮುಂಚೆಯೇ ಪರೀಕ್ಷೆ ಇರುವ…

Read More

ಚಿತ್ರದುರ್ಗ: ಭರ್ಜರಿ ಕಾರ್ಯಾಚರಣೆ ನಡೆಸಿರುವ ಚಿತ್ರದುರ್ಗ ಪೊಲೀಸರು, ಅಂತಾರಾಜ್ಯ ಕಳ್ಳಿಯರ ತಂಡವನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಂದ 6.3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪದ ಮೇಲೆ ಆಂಧ್ರಪ್ರದೇಶದ ಇಬ್ಬರು ಮಹಿಳೆಯರನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ತಾಲ್ಲೂಕಿನ ನಿವಾಸಿಗಳಾದ ಶಾಂತಿ ಮತ್ತು ನೀಲವೇಣಿ ಎಂದು ಗುರುತಿಸಲಾಗಿದೆ. ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳ್ಳತನ ಪೊಲೀಸರ ಪ್ರಕಾರ, ರಾಯಚೂರು ಜಿಲ್ಲೆಯ ಸಿಂಧನೂರು ನಿವಾಸಿ ಲಕ್ಷ್ಮಿ ಅವರು ಸಂಬಂಧಿಕರ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಳ್ಳಲು ಜುಲೈ 6ರಂದು ಚಳ್ಳಕೆರೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆರೋಪಿಗಳು ಅವರ ಗಮನವನ್ನು ಬೇರೆಡೆ ಸೆಳೆದು, ಬ್ಯಾಗ್‌ನಲ್ಲಿದ್ದ ಹರಳುಗಳನ್ನು ಹೊಂದಿದ 35 ಗ್ರಾಂ ತೂಕದ ಚಿನ್ನದ ಸರ, ಪೆಂಡೆಂಟ್ ಹಾಗೂ ಮೂರು ಗ್ರಾಂ ತೂಕದ ಒಂದು ಜೋಡಿ ಚಿನ್ನದ ಗುಂಡಿನಾಕಾರದ ಕಿವಿಯೋಲೆಗಳನ್ನು ಕದ್ದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ…

Read More

ಚಿಕ್ಕಮಗಳೂರು: ದೆವ್ವ ಹಾಗೂ ಭೂತ ಬಿಡಿಸುವ ನೆಪದಲ್ಲಿ ಮಹಿಳೆಯ ಮೂಢನಂಬಿಕೆಯನ್ನು ಬಳಸಿಕೊಂಡು ನಿರಂತರವಾಗಿ ಅತ್ಯಾಚಾರ ಎಸಗಿದ್ದ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ. ಹಾಸನ ಮೂಲದ ಸಂತ್ರಸ್ತ ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸತತ ಶೋಧದ ನಂತರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಈ ಸಂಬಂಧ ಸಂತ್ರಸ್ತೆ ಕೊಪ್ಪ ಹಾಗೂ ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸತೀಶ್ ಪಾತ್ರಿ ಪರಾರಿಯಾಗಿದ್ದನು. ಪ್ರಸ್ತುತ ಆರೋಪಿಯ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆಯಡಿ ಹಾಗೂ ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ (IPC/BNS) ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಕೋಳಿ ರಕ್ತ…

Read More

ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸೋನಾಲಿ (30) ಎಂದು ಗುರುತಿಸಲಾಗಿದ್ದು, ಈಕೆಯನ್ನು ಆಕೆಯ ಪತಿ ಶಿವಲಿಂಗಪ್ಪ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ , ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್  ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನೇ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿನ ನಡೆಯನ್ನು ಖಂಡಿಸಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಾಥ್ ನೀಡಿದೆ. ಕಾಲೇಜು ಆಡಳಿತ ಮಂಡಳಿಯ ಈ ಕ್ರಮದಿಂದಾಗಿ ದಸರಾ ಆಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿರುವ ನೂರಾರು ವಿದ್ಯಾರ್ಥಿಗಳು, ಪರೀಕ್ಷೆಯನ್ನು ಬಹಿಷ್ಕರಿಸಿ ಕಾಲೇಜು ಮುಂಭಾಗ ಧರಣಿ ಕುಳಿತಿದ್ದಾರೆ. ಪರೀಕ್ಷೆಯನ್ನು ಮುಂದೂಡುವಂತೆ…

Read More