Author: admin

ರಾಮನಗರ: ಕಲ್ಯಾಣ ಮಂಟಪವೊಂದರಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ರಾಮನಗರ ಜಿಲ್ಲಾಧಿಕಾರಿ ಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು, ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ರಾಮನಗರ ಡಿಸಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸದ್ಯ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ರಮ ನಡೆಯುತ್ತಿದೆ. ನಿಯಮಗಳ ಪ್ರಕಾರ, ಬಿಎಲ್‌ಒಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪರಿಶೀಲನೆ ನಡೆಸಬೇಕು ಹಾಗೂ ನಿಗದಿತ ಅರ್ಜಿಗಳನ್ನು ವಿತರಿಸಬೇಕು. ಆದರೆ ರಾಮನಗರ ನಗರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 23ರ ಟಿಪ್ಪು ನಗರ ಕಲ್ಯಾಣ ಮಂಟಪವೊಂದರಲ್ಲಿ ಬಿಎಲ್‌ಒಗಳು ಮನೆ ಮನೆಗೆ ಹೋಗುವ ಬದಲು, ಜನರನ್ನು ಒಂದೇ ಕಡೆ ಸೇರಿಸಿ ‘ಎಸ್‌ಐಆರ್ ಕ್ಯಾಂಪ್’ ನಡೆಸುತ್ತಿದ್ದಾರೆ…

Read More

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಯುವಕರ ಪುಂಡಾಟಿಕೆ ಹಾಗೂ ರೌಡಿಸಂ ದಿನದಿಂದ ದಿನಕ್ಕೆ ಮಿತಿಮೀರುತ್ತಿರುವುದಕ್ಕೆ ಮತ್ತೊಂದು ಆಘಾತಕಾರಿ ಸಾಕ್ಷಿ ಸಿಕ್ಕಿದೆ. ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಐಷಾರಾಮಿ ಕಾರಿನಲ್ಲಿ ಬಂದ ಮಂಡ್ಯದ ಪ್ರಭಾವಿ ಉದ್ಯಮಿಯೊಬ್ಬರ ಪುತ್ರ ಮತ್ತು ಆತನ ಗ್ಯಾಂಗ್, ಲಾರಿ ಚಾಲಕನ ಮೇಲೆ ಗನ್‌ನಿಂದ ಗುಂಡು ಹಾರಿಸಿ ದರೋಡೆಗೆ ಯತ್ನಿಸಿರುವುದು ದೃಢಪಟ್ಟಿದೆ. ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಭೀಕರ ಕೃತ್ಯ ನಡೆದಿದ್ದು, ತಡರಾತ್ರಿ ಪೊಲೀಸರು ಉದ್ಯಮಿ ಪುತ್ರನನ್ನು ವಶಕ್ಕೆ ಪಡೆದು ಡಿವೈಎಸ್‌ಪಿ (DySP) ಕಚೇರಿಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಲಾರಿ ನಿಲ್ಲಿಸದಿದ್ದಕ್ಕೆ ಗುಂಡಿನ ದಾಳಿ! ಮೈಸೂರು ಮೂಲದ ಚಾಲಕ ಶಂಕರ್ ಎಂಬುವವರು ಬೆಂಗಳೂರಿನಿಂದ ಔಷಧಗಳನ್ನು ತುಂಬಿಕೊಂಡು ಒಂಟಿಯಾಗಿ ಕಂಟೇನರ್ ಲಾರಿಯಲ್ಲಿ ಮಂಡ್ಯದ ಕಡೆಗೆ ಬರುತ್ತಿದ್ದರು. ಮುಂಜಾನೆ 4 ಗಂಟೆ ಸುಮಾರಿಗೆ ಹಳೇ ಹೆದ್ದಾರಿಯಲ್ಲಿ ಕಂಟೇನರ್ ಅನ್ನು ಅಡ್ಡಗಟ್ಟಲು ಉದ್ಯಮಿ ಪುತ್ರ ಹಾಗೂ ಆತನ ಗ್ಯಾಂಗ್ ಪ್ರಯತ್ನಿಸಿದೆ. ಆದರೆ, ಒಂಟಿಯಾಗಿದ್ದ ಚಾಲಕ ಶಂಕರ್ ಭಯದಿಂದ ಲಾರಿಯನ್ನು ನಿಲ್ಲಿಸದೇ ಮುನ್ನಡೆಸಿದ್ದಾರೆ. ಇದರಿಂದ…

Read More

ಬ್ರಹ್ಮಾವರ : ಸ್ಥಳೀಯ ಬಸ್ ನಿಲ್ದಾಣದಿಂದ ಅಪ್ರಾಪ್ತ ಬಾಲಕನೋರ್ವನನ್ನು ಅಪಹರಿಸಿ, ಕೇರಳದ ತಲಪಾಡಿ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಯೊಂದರಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ, ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ್ದ ಭೀಕರ ಪ್ರಕರಣವನ್ನು ಬ್ರಹ್ಮಾವರ ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ ಇಬ್ಬರು ಪ್ರಮುಖ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, ಮತ್ತೊಬ್ಬ ಬಾಲಾಪರಾಧಿಯನ್ನು ವಶಕ್ಕೆ ಪಡೆಯಲಾಗಿದೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಸಾಲಿಕೇರಿ ನಿವಾಸಿ ವಿಖ್ಯಾತ್ ಆಚಾರ್ಯ (19) ಹಾಗೂ ಮಟಪಾಡಿ ಗ್ರಾಮದ ನಿವಾಸಿ ಸುಚಿತ್ ನಾಯಕ್ (20) ಬಂಧಿತ ಆರೋಪಿಗಳಾಗಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂರನೇ ಆರೋಪಿಯು ಅಪ್ರಾಪ್ತನಾಗಿದ್ದರಿಂದ ಆತನನ್ನು ಬಾಲ ನ್ಯಾಯಮಂಡಳಿ (JJB) ಮುಂದೆ ಹಾಜರುಪಡಿಸಲಾಗಿದೆ. ಜೂನ್ 1ರಂದು ಬೆಳಿಗ್ಗೆ 8:30ರ ಸುಮಾರಿಗೆ ಬ್ರಹ್ಮಾವರ ಬಸ್ ನಿಲ್ದಾಣದಲ್ಲಿದ್ದ ದಲಿತ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕನನ್ನು ಆರೋಪಿಗಳು ಬಲವಂತವಾಗಿ ಅಪಹರಿಸಿಕೊಂಡು ಕೇರಳ ರಾಜ್ಯದ ತಲಪಾಡಿ ಕುಂಜತ್ತೂರು ಪದವು ಎಂಬಲ್ಲಿನ ವುಡ್ ಕಂಪೆನಿಗೆ ಕರೆದುಕೊಂಡು ಹೋಗಿ ಕೆಲಸಕ್ಕೆ ಸೇರಿಸಿದ್ದರು. ತನಗೆ ಈ ಕೆಲಸ ಬೇಡ, ಮನೆಗೆ ಹೋಗುತ್ತೇನೆ…

Read More

ಶಿರ್ವ: ಪೆಟ್ರೋಲ್ ಬಂಕ್ ಒಂದರಲ್ಲಿ ಫೋರ್ಡ್ ಇಕೋಸ್ಪೋರ್ಟ್ ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ಹಾಕಿಸಿಕೊಂಡು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಂತೆ ನಟಿಸಿ ಹಣ ಪಾವತಿಸದೆ ವಂಚಿಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶಿರ್ವ ಕೋಟೆಕಾರ್ ನಿವಾಸಿ ಮಹಮ್ಮದ್ ರಿಯಾಜ್ (26), ಶಿರ್ವ ಭೂತಬೆಟ್ಟು ನಿವಾಸಿ ಮಹಮ್ಮದ್ ಅಫ್ರಾಜ್ (23) ಮತ್ತು ಉಡುಪಿ ಅಂಬಾಗಿಲಿನ ಆಶಿಲ್ (21) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 27ರಂದು ರಾತ್ರಿ 9:10ರ ಸುಮಾರಿಗೆ ಕಾರ್ಕಳ ತಾಲೂಕು ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಪೆಟ್ರೋಲ್ ಬಂಕ್‌ಗೆ ಆರೋಪಿಗಳು ಕಾರಿನಲ್ಲಿ ಬಂದಿದ್ದರು. ಬಂಕ್‌ನಲ್ಲಿದ್ದ ಸಿಬ್ಬಂದಿ ಶಶಾಂಕ್ ಅವರಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯು ಫುಲ್ ಟ್ಯಾಂಕ್ ಡೀಸೆಲ್ ತುಂಬಿಸುವಂತೆ ತಿಳಿಸಿದ್ದಾನೆ. ಶಶಾಂಕ್ ಅವರು ₹4,711 ಮೌಲ್ಯದ ಡೀಸೆಲ್ ತುಂಬಿಸಿ ಹಣ ಪಾವತಿಸಲು ಕ್ಯೂಆರ್ ಕೋಡ್ ನೀಡಿದ್ದಾರೆ. ಈ…

Read More

ಮಂಗಳೂರು: ಕಂಕನಾಡಿ ನಾಗುರಿ ಪ್ರದೇಶದಲ್ಲಿ ಕಂಪೌಂಡ್ ವಾಲ್ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಇಬ್ಬರು ಪುಟ್ಟ ಮಕ್ಕಳಿಗೆ ಗುರುವಾರ ನಂದಿಗುಡ್ಡೆ ರುದ್ರಭೂಮಿಯಲ್ಲಿ ಕಣ್ಣೀರಿನ ವಿದಾಯ ಹೇಳಲಾಯಿತು. ಕುಟುಂಬಸ್ಥರ ಆಕ್ರಂದನ, ಬಂಧು-ಬಳಗ ಹಾಗೂ ಸ್ಥಳೀಯರ ದುಃಖದ ನಡುವೆ ಅಂತ್ಯಕ್ರಿಯೆ ನೆರವೇರಿತು. ದುರಂತದಲ್ಲಿ ಮೃತಪಟ್ಟ 8 ವರ್ಷದ ಅನಾಮಿಕ ಚೌರಾಸಿಯ ಹಾಗೂ 4 ವರ್ಷದ ಪರಿ (ತನು) ಅವರ ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರಕ್ಕೂ ಮುನ್ನ ನಾಗುರಿಯಲ್ಲಿರುವ ನಿವಾಸಕ್ಕೆ ತರಲಾಗಿತ್ತು. ಸಾರ್ವಜನಿಕರು ಮತ್ತು ಸ್ಥಳೀಯ ನಿವಾಸಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೂರಾರು ಮಂದಿ ಆಗಮಿಸಿ ಮಕ್ಕಳಿಗೆ ಅಂತಿಮ ನಮನ ಸಲ್ಲಿಸಿದರು. ಇನ್ನೇನು ಕೆಲವೇ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಆಟವಾಡುತ್ತಿದ್ದ ಪುಟ್ಟ ಕಂದಮ್ಮಗಳನ್ನು ಜೀವವಿಲ್ಲದ ಸ್ಥಿತಿಯಲ್ಲಿ ಕಂಡು ಸ್ಥಳೀಯರು ಭಾವುಕರಾದರು. ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ರೋಧನ ಇಡೀ ವಾತಾವರಣವನ್ನು ಮೌನದಲ್ಲಿ ಮುಳುಗಿಸಿತು. ಮೃತ ಮಕ್ಕಳ ಮನೆ ಸಮೀಪದಲ್ಲೇ ಇರುವ ಕಂಕನಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೂ ಸ್ಥಳಕ್ಕೆ ಭೇಟಿ ನೀಡಿ ಅಂತಿಮ ದರ್ಶನ…

Read More

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿನ ಪಾದಚಾರಿ ಸಂಚಾರವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದ ಸುಮಾರು 1,500 ಕಿಲೋಮೀಟರ್ ಉದ್ದದ ಪ್ರಮುಖ, ಉಪ-ಪ್ರಮುಖ ಹಾಗೂ ಮುಖ್ಯ ರಸ್ತೆಗಳನ್ನು ‘ನಾನ್-ವೆಂಡಿಂಗ್ ಝೋನ್’ (Non-Vending Zone) ಎಂದು ಘೋಷಿಸಲು ಯೋಜನೆ ರೂಪಿಸಲಾಗಿದೆ. ಉಳಿದ ರಸ್ತೆಗಳಲ್ಲಿ ಪಾದಚಾರಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡಲಾಗುತ್ತದೆ. ಈ ಕುರಿತು ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬುಧವಾರದಿಂದ ನಗರದ ಐದು ನಗರ ನಿಗಮಗಳ ವ್ಯಾಪ್ತಿಯಲ್ಲಿ ಆರಂಭವಾಗಲಿರುವ ‘ಸೇಫ್ ಫುಟ್‌ಪಾತ್ ಕ್ಯಾಂಪೇನ್’ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಕಾಯ್ದೆ-2014 ಅನ್ವಯ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಸುಮಾರು 15…

Read More

ಬೆಂಗಳೂರು : ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಐಟಿ ಕಂಪನಿಯೊಂದರ ಆವರಣದಲ್ಲಿರುವ ಮಕ್ಕಳ ಆರೈಕೆ ಕೇಂದ್ರದಲ್ಲಿ (ಡೇಕೇರ್) ಎರಡರಿಂದ ಮೂರು ವರ್ಷದ ಪುಟ್ಟ ಮಕ್ಕಳ ಮೇಲೆ ನಡೆದಿರುವ ಭೀಕರ ಮತ್ತು ಅಮಾನವೀಯ ದೌರ್ಜನ್ಯದ ಪ್ರಕರಣ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಮಕ್ಕಳನ್ನು ಮುಂಭಾಗದಿಂದ ಲೋಡ್ ಮಾಡುವ ವಾಷಿಂಗ್ ಮೆಷಿನ್‌ನ ಡ್ರಮ್ ಒಳಗೆ ಕೂರಿಸುವುದು, ಬಾಯಿಗೆ ಟಾಯ್ಲೆಟ್ ಜೆಟ್ ಸ್ಪ್ರೇ ಮೂಲಕ ಬಲವಂತವಾಗಿ ನೀರು ಹೊಡೆಯುವುದು ಹಾಗೂ ಬಾತ್‌ರೂಮ್‌ಗಳಲ್ಲಿ ಕೂಡಿ ಹಾಕಿ ಬೀಗ ಹಾಕುವ ಕ್ರೂರ ಶಿಕ್ಷೆ ಇಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೆಚ್‌ಎಎಲ್ (HAL) ಕ್ಯಾಂಪಸ್‌ನಲ್ಲಿರುವ ‘ಕ್ಯಾಪ್‌ಜೆಮಿನಿ’ ಐಟಿ ಸಂಸ್ಥೆಯ ಒಳಗಿನ ಡೇಕೇರ್‌ನಲ್ಲಿ ಈ ಘಟನೆ ನಡೆದಿದ್ದು, ದೌರ್ಜನ್ಯ ಎಸಗಿದ ಐದು ಮಂದಿ ಮಹಿಳಾ ಆರೈಕೆದಾರರ (Care-takers) ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪುಟ್ಟ ಮಕ್ಕಳು ಅತ್ತಾಗ ಅವರನ್ನು ಮೌನಗೊಳಿಸಲು ಆರೈಕೆದಾರರು ಇಂತಹ ವಿಕೃತ ಮಾರ್ಗಗಳನ್ನು ಬಳಸುತ್ತಿದ್ದರು ಎನ್ನಲಾಗಿದೆ. ಈ ಅಮಾನವೀಯ ದೌರ್ಜನ್ಯದ ಆಘಾತಕಾರಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್…

Read More

ಬಳ್ಳಾರಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್‌ ಎಂಬಾತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ರವಿಕಿರಣ್ ಗೆ ಮೊದಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. 2025ರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆಗೆ ರವಿಕಿರಣ್ ಗೆ ಪರಿಚಯ ಬೆಳೆದಿತ್ತು. ಬಳಿಕ ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿ ಜೊತೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇನ್ನು ರವಿಕಿರಣ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುವ ವಿಚಾರ ತಿಳಿದು ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೆ ಪೋಷಕರು ಜೊತೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿದ್ಯಾರ್ಥಿನಿಯ ದೂರು ಆಧರಿಸಿ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ರವಿಕಿರಣ್ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳಡಿ…

Read More

ಬೆಂಗಳೂರು: ಗೃಹಜ್ಯೋತಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ. ಹೀಗಾಗಿ ಜುಲೈನಲ್ಲಿ ಮೀಟರ್​​​ ರೀಡಿಂಗ್​​ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ ಮುಂದಾಗಿದೆ. ಈ ಕುರಿತಾಗಿ ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ. ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ…

Read More

ಧಾರವಾಡ: ಬಸ್ ಪ್ರಯಾಣದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂಬದಿಯಿಂದ ಬಂದ ವೇಗದೂತ ಟಿಪ್ಪರ್ ಲಾರಿಯೊಂದು ಭೀಕರವಾಗಿ ಢಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಶೆರೆವಾಡ ಗ್ರಾಮದ ಸಮೀಪ ನಡೆದಿದೆ. ಶಿರೂರು ಗ್ರಾಮದ ನಿವಾಸಿ ಪಕ್ಕಿರಯ್ಯ ಚನ್ನಯ್ಯ ಮುತ್ತಳ್ಳಿಮಠ (18) ಮೃತಪಟ್ಟ ದುರ್ದೈವಿ. ಈತ ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪಕ್ಕಿರಯ್ಯ ಎಂದಿನಂತೆ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರ ಕಡೆಗೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಬಸ್‌ನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಆತ, ಚಲಿಸುವ ಬಸ್‌ನ ಕಿಟಕಿಯಿಂದ ತನ್ನ ತಲೆಯನ್ನು ಹೊರಹಾಕಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಅದೇ ಮಾರ್ಗದಲ್ಲಿ ಹಿಂಬದಿಯಿಂದ ಅತಿ ವೇಗವಾಗಿ ಬಂದ ಭಾರಿ ಗಾತ್ರದ ಟಿಪ್ಪರ್ ಲಾರಿಯೊಂದು, ಬಸ್‌ಗೆ ತೀರಾ ಸಮೀಪವಾಗಿ ಓವರ್‌ಟೇಕ್ ಮಾಡಲು ಮುಂದಾಗಿದೆ. ಈ ವೇಳೆ ಟಿಪ್ಪರ್‌ನ ಪಾರ್ಶ್ವ ಭಾಗವು ಕಿಟಕಿಯಿಂದ ಹೊರಗಿದ್ದ ಯುವಕನ ತಲೆಗೆ ಭೀಕರವಾಗಿ ಅಪ್ಪಳಿಸಿದೆ. ಡಿಕ್ಕಿಯ…

Read More