Author: admin

ಉಡುಪಿ: ಗೋವಾದ ಕ್ಯಾಲಂಗುಟ್ ಬೀಚ್ ಸಮೀಪದ ಲಾಡ್ಜ್‌ವೊಂದರಲ್ಲಿ ಮಲ್ಪೆ ಮೂಲದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಂದೀಪ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸಂದೀಪ್ ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಜೂನ್ 30ರ ಸಂಜೆ ಅವರು ತಂಗಿದ್ದ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಂತೆ, ಇದು ಹೃದಯಾಘಾತದಿಂದ ಸಂಭವಿಸಿದ ಸಾವೋ ಅಥವಾ ಬೇರೆ ಯಾವುದೇ ಕಾರಣವಿದೆಯೋ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದ್ದು, ಈ ಕುರಿತು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ವೇಳೆ ಸಂದೀಪ್ ಅವರೊಂದಿಗೆ ಯುವತಿಯೊಬ್ಬರು ಇದ್ದರು ಎನ್ನಲಾಗಿದ್ದು, ಅವರ ಸಾವಿನ ಬಳಿಕ ಆಕೆ ಸ್ಥಳದಿಂದ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಅಧಿಕೃತ ಪೊಲೀಸ್ ದೃಢೀಕರಣ ಇನ್ನಷ್ಟೇ ದೊರೆಯಬೇಕಿದೆ. ಸಂದೀಪ್ ಸಾಲ್ಯಾನ್ ಅವರು ಕೆಲವು ವರ್ಷಗಳ ಹಿಂದೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಕೆಲಸ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಮಲ್ಪೆ ಬೀಚ್‌ನಲ್ಲಿ…

Read More

ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು, ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅನಾಮಿಕ ಚೌರಾಸಿ(8) , ಪರಿ(3) ಶಾಂತ, (46 ) ಮೃತಪಟ್ಟವರು . ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು ಅಲ್ಕಾ (14) ಅನುಷಾ( 11), ಬಾಲಕೃಷ್ಣ( 48) ಎಂದು ಗುರುತಿಸಲಾಗಿದೆ. ಗರೋಡಿಯ ಮಾರಿಯಲ್ ಹೌಸ್‌ನಲ್ಲಿ ಬೆಳಿಗ್ಗೆ 4.45 ರಿಂದ 5.00 ರ ನಡುವೆ ಈ ಘಟನೆ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದಿದೆ. ನಾಲ್ಕು ಕುಟುಂಬಗಳು ಕಾಂಪೌಂಡ್ ಗೋಡೆಯ ಕೆಳಗೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು. ಬಿಹಾರ ಮೂಲದ ಲಾಲ್‌ಬಾಬು ಅವರ ಕುಟುಂಬವೂ ಕಳೆದ ಎಂಟು ವರ್ಷಗಳಿಂದ ತಮ್ಮ ಪತ್ನಿ ಮತ್ತು ಅವರ ನಾಲ್ವರು ಹೆಣ್ಣುಮಕ್ಕಳಾದ ಅಲ್ಕಾ (14), ಅನುಷಾ (11), ಅನಾಮಿಕಾ ಚೌರಾಸಿಯಾ (8), ಮತ್ತು ಪರಿ (4) ಅವರೊಂದಿಗೆ ಆ…

Read More

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಅಧಿಕೃತ ಚಾಲನೆ ದೊರೆಯಿತು. ಇದರ ಅಂಗವಾಗಿ ಜಿಲ್ಲೆಯಾದ್ಯಂತ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭಿಸಿದರು. ಜಿಲ್ಲೆಯ 1,876 ಮತಗಟ್ಟೆಗಳಲ್ಲಿ ನಿಯೋಜಿತವಾಗಿರುವ ಬಿಎಲ್‌ಒಗಳು ಪ್ರತಿಯೊಬ್ಬ ಮತದಾರರ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳನ್ನು ಹಸ್ತಾಂತರಿಸುತ್ತಿದ್ದಾರೆ. ಮತದಾರರ ವಿವರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಮುಂದಿನ ಹಂತದಲ್ಲಿ ಭರ್ತಿ ಮಾಡಿದ ನಮೂನೆಗಳನ್ನು ಅಧಿಕಾರಿಗಳು ಸಂಗ್ರಹಿಸಲಿದ್ದಾರೆ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಮಂಗಳೂರು ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರಿಗೆ ಸ್ವತಃ ಗಣತಿ ನಮೂನೆಗಳನ್ನು ವಿತರಿಸಿದರು. ಅಲ್ಲದೆ, ಎಸ್‌ಐಆರ್ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು. ಜಿಲ್ಲೆಯ ಹಲವು ಭಾಗಗಳಲ್ಲಿ ಹಿರಿಯ ಅಧಿಕಾರಿಗಳೂ ಮನೆ ಮನೆಗೆ…

Read More

ಯಾದಗಿರಿ: ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಣಕಾಸು ಅಕ್ರಮ ಪ್ರಕರಣದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಬಸನಗೌಡ ವೆಂಕಟರೆಡ್ಡಿ ಮಾಲಿ ಪಾಟೀಲ (64) ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ₹10 ಕೋಟಿಗೂ ಅಧಿಕ ಹಣ ದುರ್ಬಳಕೆ ಆರೋಪ ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್‌ನಲ್ಲಿ ಸಾಲ ವಿತರಣೆಗೆ ಸಂಬಂಧಿಸಿದಂತೆ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದ್ದು, ಬ್ಯಾಂಕಿನ ಕೆಲವು ಸಿಬ್ಬಂದಿ ವಿರುದ್ಧ ಈಗಾಗಲೇ ಪೊಲೀಸ್ ದೂರು ಸಲ್ಲಿಸಲಾಗಿತ್ತು. ಬ್ಯಾಂಕ್‌ನಲ್ಲಿ ಸುಮಾರು 267 ಮಂದಿ ಠೇವಣಿದಾರರಿದ್ದು, ಒಟ್ಟಾರೆ ₹10 ಕೋಟಿಗೂ ಅಧಿಕ ಮೊತ್ತವನ್ನು ಠೇವಣಿಯಾಗಿ ಇಟ್ಟಿದ್ದರು ಎಂದು ತಿಳಿದುಬಂದಿದೆ. ಠೇವಣಿದಾರರ ಪ್ರತಿಭಟನೆ ನಡುವೆ ದುರ್ಘಟನೆ ತಮ್ಮ ಠೇವಣಿ ಹಣವನ್ನು ಹಿಂತಿರುಗಿಸುವಂತೆ…

Read More

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಿಲ್ಲಾ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಹಾಗೂ ತನಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಆರೋಪಿಯು ಹೈಕೋರ್ಟ್ ಮೊರೆ ಹೋಗಿದ್ದನು. ಹೈಕೋರ್ಟ್‌ನಲ್ಲಿ ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪರವಾಗಿ ಹಿರಿಯ ನ್ಯಾಯವಾದಿ ರಾಘವೇಂದ್ರ ಮುತ್ತಗಿ ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು. ಆರೋಪಿ ಮಾಡಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಆತನಿಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ…

Read More

ಉಡುಪಿ: ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ 4,711 ರೂ. ಮೌಲ್ಯದ ಡೀಸೆಲ್‌ ಹಾಕಿಸಿಕೊಂಡು ಹಣ ಕೊಡದೆ ಅಪರಿಚಿತ ವ್ಯಕ್ತಿಗಳು ವಾಹನ ಚಲಾಯಿಸಿಕೊಂಡು ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಕುರ್ಕಲ್ ಗ್ರಾಮದಲ್ಲಿರುವ ಇಂಡಿಯನ್ ಆಯಿಲ್ ಇಂಧನ ಕೇಂದ್ರದಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುರ್ಕಲ್ ಇಂಧನ ತುಂಬುವ ಕೇಂದ್ರದ ವ್ಯವಸ್ಥಾಪಕ ಆಶಿಶ್ ಕರ್ಕಡ ಅವರು ಸಲ್ಲಿಸಿದ ದೂರಿನ ಪ್ರಕಾರ, ಜೂನ್ 27 ರಂದು ರಾತ್ರಿ 9.20 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರು ಬಂಕ್‌ಗೆ ಬಂದು ಫುಲ್‌ ಟ್ಯಾಂಕ್ ಡೀಸೆಲ್ ಹಾಕುವಂತೆ ಹೇಳಿದ್ದಾರೆ. ಇಂಧನ ತುಂಬಿದ ನಂತರ ಬಿಲ್ ಕೊಡುವಂತೆ ಸಿಬ್ಬಂದಿಯನ್ನು ಕೇಳಿದ್ದಾರೆ. ಆದರೆ ಬಿಲ್ ಸಿದ್ಧಪಡಿಸುವ ವೇಳೆ ವಾಹನ ಸವಾರರು ಹಣ ಪಾವತಿಸದೇ ಬಂಕ್‌ನಿಂದ ವೇಗವಾಗಿ ಪರಾರಿಯಾಗಿದ್ದಾರೆ .  ಅವರು 4,711.09 ರೂ ನಷ್ಟು  ಇಂಧನವನ್ನು ವಾಹನಕ್ಕೆ ಹಾಕಿಸಿಕೊಂಡಿದ್ದರು ಎನ್ನಲಾಗಿದೆ. ಇಂಧನ ಬಂಕ್ ಸಿಬ್ಬಂದಿಯ ಪ್ರಕಾರ , ವಾಹನದೊಳಗೆ ಮೂವರು ಯುವಕರು…

Read More

ನವದೆಹಲಿ: ಜುಲೈ 1ರಿಂದ ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ತೈಲ ಮಾರುಕಟ್ಟೆ ಕಂಪನಿಗಳು ತೀರ್ಮಾನಿಸಿರುವುದಾಗಿ ವರದಿಗಳು ತಿಳಿಸಿವೆ. ಹೊಸ ದರ ಪರಿಷ್ಕರಣೆ ಜಾರಿಗೆ ಬಂದರೆ, ವ್ಯಾಪಾರ ಹಾಗೂ ಕೈಗಾರಿಕಾ ವಲಯದ ಬಳಕೆದಾರರ ಮೇಲಿನ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, 19 ಕೆಜಿ ಹಾಗೂ 14.2 ಕೆಜಿ ಸಾಮರ್ಥ್ಯದ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ತಲಾ ₹30ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದೇ ವೇಳೆ, 40 ಕೆಜಿ ಸಾಮರ್ಥ್ಯದ ಕೈಗಾರಿಕಾ ಬಳಕೆಯ ಸಿಲಿಂಡರ್‌ಗೆ ₹1,300ರಷ್ಟು ದರ ಹೆಚ್ಚಳ ಅನ್ವಯವಾಗುವ ಸಾಧ್ಯತೆಯಿದೆ. ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ಇಂಧನಗಳ ಬೆಲೆ ಏರಿಕೆಯಿಂದ ಸಾರ್ವಜನಿಕರು ಈಗಾಗಲೇ ಹೆಚ್ಚುವರಿ ಖರ್ಚಿನ ಒತ್ತಡ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ, ವಾಣಿಜ್ಯ ಗ್ಯಾಸ್ ಸಿಲಿಂಡರ್ ದರದಲ್ಲಿನ ಹೊಸ ಹೆಚ್ಚಳವು ಹೋಟೆಲ್, ಉಪಹಾರ ಗೃಹ, ಸಣ್ಣ ಉದ್ಯಮಗಳು ಹಾಗೂ ಇತರೆ ವಾಣಿಜ್ಯ ಬಳಕೆದಾರರಿಗೆ ಮತ್ತೊಂದು ಹೊರೆ ಆಗುವ ಸಾಧ್ಯತೆ ಇದೆ. ಗಮನಾರ್ಹವಾಗಿ,…

Read More

ಕಿನ್ನಿಗೋಳಿ: ಕಳೆದ 18 ವರ್ಷಗಳಿಂದ ಬೇಕರಿಯಲ್ಲಿ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಮೂಲದ ರಮೇಶ್ ಪೂಜಾರಿ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅವರು ಕಿನ್ನಿಗೋಳಿಯ ಬೇಕರಿಗೆ ಸೇರಿದ ಕೊಠಡಿಯಲ್ಲಿ ವಾಸವಾಗಿದ್ದು, ದೀರ್ಘಕಾಲದಿಂದ ಅದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ ಬೆಳಗ್ಗೆ ರಮೇಶ್ ಅವರು ಎಂದಿನಂತೆ ಕೆಲಸಕ್ಕೆ ಹಾಜರಾಗದಿರುವುದು ಗಮನಕ್ಕೆ ಬಂದಿದ್ದು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿ ಅವರ ಕೊಠಡಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬೇಕರಿ ಆವರಣದ ಬಾವಿಯ ಬಳಿ ಅವರ ಚಪ್ಪಲಿಗಳು ಪತ್ತೆಯಾಗಿವೆ. ಅನುಮಾನಗೊಂಡು ಬಾವಿಯೊಳಗೆ ಪರಿಶೀಲಿಸಿದಾಗ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ. ದೀರ್ಘಕಾಲದಿಂದ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ…

Read More

ಮಂಗಳೂರು: ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಮಂಗಳೂರಿನ ಆಳ ಸಮುದ್ರದಲ್ಲಿ ‘ಐಎಫ್‌ಬಿ ಮಂಜುಮಾತಾ’ ಎಂಬ ಹೆಸರಿನ ದೋಣಿಯಲ್ಲಿ ಆರು ಜನ ಮೀನುಗಾರರು ಎಂದಿನಂತೆ ಮೀನುಗಾರಿಕೆಯಲ್ಲಿ ತೊಡಗಿದ್ದರು. ಆದರೆ, ಇದ್ದಕ್ಕಿದ್ದಂತೆ ಸಮುದ್ರ ಭೀಕರವಾಗಿ ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಒಳಗಡೆ ಭಾರಿ ಪ್ರಮಾಣದಲ್ಲಿ ನೀರು ಒಳನುಗ್ಗಲಾರಂಭಿಸಿದೆ. ನೀರಿನ ಒತ್ತಡ ಹೆಚ್ಚಾಗುತ್ತಿದ್ದಂತೆ ಬೋಟ್ ಸಮುದ್ರದಲ್ಲಿ ಮುಳುಗಲು ಪ್ರಾರಂಭವಾಗಿದೆ. ಮೀನುಗಾರರು ಅಪಾಯದಲ್ಲಿರುವ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ, ತಕ್ಷಣವೇ ಕಡಲ ಕಾವಲು ಪಡೆಯ ಅತ್ಯಾಧುನಿಕ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದರು. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರಿಂದ ದೋಣಿಯ ಹತ್ತಿರ ಹೋಗುವುದು ಸವಾಲಾಗಿತ್ತು. ಈ ಸಂದರ್ಭದಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಅತ್ಯಾಧುನಿಕ ತಂತ್ರಜ್ಞಾನವಾದ ರಿಮೋಟ್-ಆಪರೇಟೆಡ್ ಲೈಫ್‌ಬಾಯ್‌ಗಳನ್ನು ಬಳಸಿದರು.ಅತ್ಯಂತ ಸವಾಲಿನ ಪರಿಸ್ಥಿತಿಗಳ ನಡುವೆಯೂ ಕಡಲ ಶೋಧ ಮತ್ತು ರಕ್ಷಣಾ…

Read More

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಸಮೀಪದ ಅರಣ್ಯ ಪ್ರದೇಶದಲ್ಲಿ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ನಡೆದಿದೆ. ಕೊಲೆಯಾದವರು ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ನಿವಾಸಿ ಸಂಜನಾ (26) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಪತಿ ಭಗವತ್ ಜ್ಞಾನೇಶ್ವರ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪತ್ನಿ ಜೊತೆ ಬೀದರ್‌ನ ಶಿವನಗರದಲ್ಲಿ ವಾಸವಾಗಿದ್ದನೆಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಪತಿ ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಇದನ್ನು ಪ್ರಶ್ನಿಸಿದ ಪತ್ನಿಯನ್ನು ಕಾರಿನಲ್ಲಿ ಹೊನ್ನಿಕೇರಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಕಬ್ಬಿಣದ ರಾಡ್‌ನಿಂದ ತಲೆ ಹಾಗೂ ಕತ್ತಿಗೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಸಂಜನಾಳನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More