Author: admin

ಮಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಹಲವು ನ್ಯಾಯಾಲಯಗಳ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಸ್ಥಳಗಳಲ್ಲಿ ವ್ಯಾಪಕ ತಪಾಸಣೆ ನಡೆಸಿದರು. ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ಇದು ಮೂರನೇ ಬಾರಿ ಇಂತಹ ಬೆದರಿಕೆ ಸಂದೇಶ ಸ್ವೀಕರಿಸಿರುವ ಘಟನೆ ಎನ್ನಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಹಿಂದಿನ ಎರಡು ಇಮೇಲ್‌ಗಳನ್ನು ಒಂದೇ ಇಮೇಲ್ ವಿಳಾಸದಿಂದ ಕಳುಹಿಸಲಾಗಿದ್ದರೆ, ಈ ಬಾರಿ ಬೇರೆ ಇಮೇಲ್ ಖಾತೆಯಿಂದ ಸಂದೇಶ ರವಾನೆಯಾಗಿದೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಶ್ವಾನದಳದ ಸಹಾಯದಿಂದ ನ್ಯಾಯಾಲಯದ ಆವರಣದಲ್ಲಿ ಸಮಗ್ರ ಪರಿಶೀಲನೆ ನಡೆಸಿದರು. ಇತ್ತ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ತಲುಪಿತ್ತು. ಎಚ್ಚೆತ್ತ ಭದ್ರತಾ ಸಿಬ್ಬಂದಿ ಹಾಗೂ…

Read More

ತಿರುವನಂತಪುರಂ: ಅಪ್ರಾಪ್ತ ಬಾಲಕಿಯರು ಹಾಗೂ ಯುವ ಮಹಿಳಾ ಕ್ರಿಕೆಟಿಗರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೇರಳ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ಮಾಜಿ ಕೋಚ್ ಎಂ. ಮನು (40) ಅವರಿಗೆ ತಿರುವನಂತಪುರಂ ತ್ವರಿತಗತಿ ವಿಶೇಷ ನ್ಯಾಯಾಲಯ ಭಾರೀ ಶಿಕ್ಷೆ ವಿಧಿಸಿದೆ. ಆರು ಪೋಕ್ಸೊ ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ತೀರ್ಪು ಪ್ರಕಟವಾಗಿದ್ದು, ಇತ್ತೀಚಿನ ತೀರ್ಪಿನಲ್ಲಿ 99 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಇದರಿಂದ ಒಟ್ಟು ಶಿಕ್ಷೆಯ ಅವಧಿ 127 ವರ್ಷಗಳಿಗೆ ಏರಿಕೆಯಾಗಿದೆ. ಉಳಿದಿರುವ ಎರಡು ಪ್ರಕರಣಗಳ ತೀರ್ಪು ಇನ್ನಷ್ಟೇ ಪ್ರಕಟವಾಗಬೇಕಿರುವುದರಿಂದ ಶಿಕ್ಷೆಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ನ್ಯಾಯಾಲಯದ ಮುಂದೆ ಮಂಡಿಸಲಾದ ಪ್ರಾಸಿಕ್ಯೂಷನ್ ವಿವರಗಳ ಪ್ರಕಾರ, ಮೂರನೇ ಪ್ರಕರಣದ ಸಂತ್ರಸ್ತೆ 2018ರಲ್ಲಿ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ತಿರುವನಂತಪುರಂನ ಪ್ರಮುಖ ಕ್ರಿಕೆಟ್ ತರಬೇತಿ ಕೇಂದ್ರಕ್ಕೆ ಸೇರಿದ್ದಳು. ಆರಂಭದಲ್ಲಿ ತರಬೇತಿಯ ಹೆಸರಿನಲ್ಲಿ ಆಕೆಯ ವಿಶ್ವಾಸ ಗಳಿಸಿದ್ದ ಆರೋಪಿ, ನಂತರ ವಿಶೇಷ ಕೋಚಿಂಗ್ ನೀಡುವುದಾಗಿ ಹೇಳಿ ಜಿಮ್ನಾಷಿಯಂ, ಅಭ್ಯಾಸ…

Read More

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಪ್ರದೇಶದಲ್ಲಿ ಜೂನ್ 26 ಹಾಗೂ 27ರ ಮುಂಜಾನೆ ಅವಧಿಯಲ್ಲಿ ನಡೆದಿದ್ದ ಎರಡು ಸರಣಿ ಚಿನ್ನದ ಸರ ಕಳವು ಪ್ರಕರಣಗಳನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ವಿಶೇಷ ಪೊಲೀಸ್ ತಂಡ ಕುಖ್ಯಾತ ಆರೋಪಿಯನ್ನು ಬಂಧಿಸುವುದರ ಜೊತೆಗೆ, ಕಳವಾಗಿದ್ದ ಸಂಪೂರ್ಣ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಬ್ದುಲ್ ಜಾಫರ್ (28) ಎಂದು ಗುರುತಿಸಲಾಗಿದೆ. ಜೂನ್ 29ರಂದು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಜಂಕ್ಷನ್ ಸಮೀಪ ಕಳವು ಮಾಡಿದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸುರತ್ಕಲ್ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಬಂಧಿಸಿತು. ಮೊದಲ ಘಟನೆ (ಜೂನ್ 26): ಜೂನ್ 26ರ ಮುಂಜಾನೆ ಚೊಕ್ಕಬೆಟ್ಟು ಅಜಾದ್ ನಗರದ 2ನೇ ಬ್ಲಾಕ್‌ನಲ್ಲಿರುವ ತಮ್ಮ ಮನೆಯಲ್ಲಿ ಶ್ರೀಮತಿ ಜಾಹೀದ್ ಮಲಗಿದ್ದ ವೇಳೆ, ಮನೆಯ ಕಿಟಕಿಯ ಮೂಲಕ ಕೈ ಹಾಕಿದ ಆರೋಪಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಳ್ಳಲು…

Read More

ಸುಳ್ಯ:ಸುಳ್ಯದ ಸರಕಾರಿ ಆಸ್ಪತ್ರೆಯ ಪಕ್ಕದ ರಿಕ್ಷಾ ನಿಲ್ದಾಣದ ಎದುರಿನಿಂದ ಜೂನಿಯರ್ ಕಾಲೇಜಿಗೆ ತೆರಳುವ ಸಂಪರ್ಕ ರಸ್ತೆಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸದೆ ಕಾಂಕ್ರೀಟ್ ರಸ್ತೆ ನಿರ್ಮಿಸಿರುವ ಘಟನೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ರಸ್ತೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ನಿರ್ಮಾಣದ ವೇಳೆ ವಿದ್ಯುತ್ ಕಂಬವನ್ನು ಮಧ್ಯದಲ್ಲೇ ಉಳಿಸಿಕೊಂಡು ಅದರ ಸುತ್ತಲೂ ಕಾಂಕ್ರೀಟ್ ಹಾಕಲಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವುದರ ಜೊತೆಗೆ ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರಿಂದಲೂ ಈ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಸ್ಥಳ ಪರಿಶೀಲನೆ ವೇಳೆ ರಸ್ತೆ ಮತ್ತು ಮೆಸ್ಕಾಂ ಅಧಿಕಾರಿಗಳನ್ನು ಕರೆಸಿಕೊಂಡ ಶಾಸಕಿ, ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ರಸ್ತೆ ನಿರ್ಮಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ಇಂತಹ ರೀತಿಯಲ್ಲಿ ಕಂಬಗಳನ್ನು ಉಳಿಸಿಕೊಂಡು ರಸ್ತೆ ನಿರ್ಮಿಸಿರುವುದು ಅಪಾಯಕಾರಿ ಹಾಗೂ ಅವೈಜ್ಞಾನಿಕ ಕ್ರಮವಾಗಿದೆ. ಮೆಸ್ಕಾಂ ಮತ್ತು ಗುತ್ತಿಗೆದಾರರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ, ರಸ್ತೆಯ…

Read More

ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು 29.06.2026ರಂದು ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯರಾದ ಶ್ರೀ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭಾಶಯಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ ಯುಪಿಎ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ಶ್ರೀಮತಿ ರಾಧಾ ಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾರಂಭದ ಗೌರವವನ್ನು ಹೆಚ್ಚಿಸಿದರು.

Read More

ಚಿಕ್ಕಬಳ್ಳಾಪುರ: ನಂದಿಬೆಟ್ಟದ ಸಮೀಪದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಂದಿಗೆ ಹೋಮ್‌ಸ್ಟೇಯಲ್ಲಿ ತಂಗಿದ್ದ ಕೇರಳ ಮೂಲದ ಸಂಜಿತ್ ಅಲಿ ಎಂಬಾತ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯುವತಿಯ ಸಾವಿನ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಾಹಿತಿಯಂತೆ, ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ ಮತ್ತು ಕ್ಯಾಬ್ ಚಾಲಕರಾಗಿರುವ ಸಂಜಿತ್ ಅಲಿ ಕಳೆದ ಶನಿವಾರ ಮುದ್ದೇನಹಳ್ಳಿ ಸಮೀಪದ ಹೋಮ್‌ಸ್ಟೇಗೆ ಬಂದಿದ್ದರು. ಭಾನುವಾರ ಚೆಕ್‌ಔಟ್ ಸಮಯ ಕಳೆದರೂ ಕೊಠಡಿಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಯುವತಿ ಮೃತಪಟ್ಟಿರುವುದು ಪತ್ತೆಯಾಗಿದೆ. ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಸ್ಥಳದಲ್ಲಿ ಕೆಲವು ಮಾತ್ರೆಗಳೂ ಪತ್ತೆಯಾಗಿವೆ. ವಿಷ ಸೇವಿಸಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಕೊಠಡಿಯಿಂದ ಡೈರಿಯೊಂದನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ದಾಖಲಿಸಿರುವ ಮಾಹಿತಿಯನ್ನು ತನಿಖೆಯ ಭಾಗವಾಗಿ ಪರಿಶೀಲಿಸಲಾಗುತ್ತಿದೆ.…

Read More

ವಿಟ್ಲ: ವಿಟ್ಲ ಹೊರವಲಯದ ಪಡೀಬಾಗಿಲು ಸಮೀಪ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಪಘಾತವೊಂದರಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬೃಹತ್ ಮರವೊಂದು ಹಾಗೂ ವಿದ್ಯುತ್ ಕಂಬ ಉರುಳಿಬಿದ್ದಿದೆ. ಘಟನೆಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಹಾನಿಗೊಳಗಾದರೂ, ಅದರಲ್ಲಿದ್ದ ದಂಪತಿ ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ. ಮಾಹಿತಿಯಂತೆ, ಕುದ್ದುಪದವು ಕಡೆಯಿಂದ ವಿಟ್ಲದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಪಡೀಬಾಗಿಲು ತಲುಪುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಉರುಳಿದೆ. ಮರ ಮೊದಲು ವಿದ್ಯುತ್ ತಂತಿ ಹಾಗೂ ಕಂಬದ ಮೇಲೆ ಬಿದ್ದ ಪರಿಣಾಮ, ಭಾರವನ್ನು ತಡೆಯಲಾಗದೆ ವಿದ್ಯುತ್ ಕಂಬವೂ ಕಿತ್ತು ಕಾರಿನ ಮುಂಭಾಗದ ಮೇಲೆ ಬಿದ್ದಿದೆ. ಇದರಿಂದ ಕಾರಿನ ಬಾನೆಟ್ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ. ಅಪಘಾತದ ಬಳಿಕ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಮರ ಹಾಗೂ ವಿದ್ಯುತ್ ಕಂಬ ರಸ್ತೆ ಮಧ್ಯೆ ಬಿದ್ದಿದ್ದರಿಂದ ಎರಡೂ ದಿಕ್ಕುಗಳಲ್ಲಿ ವಾಹನಗಳ ಉದ್ದ ಸಾಲು ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ…

Read More

ಬಂಟ್ವಾಳ,: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೇ ಘಟನೆಗೆ ಸಂಬಂಧಿಸಿ ಮಹಿಳೆಯು ಕೂಡ ಬಸ್ ಚಾಲಕನ ವಿರುದ್ಧ ಪ್ರತಿದೂರು ನೀಡಿದ್ದಾರೆ. ಕಡೂರಿನಿಂದ ಉಜಿರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಂಟ್ವಾಳ ಬೈಪಾಸ್ ಪ್ರದೇಶ ತಲುಪಿದ ವೇಳೆ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಬಸ್ ಚಾಲಕ ವಸಂತ್ ಕುಮಾರ್ ಅವರು ನೀಡಿದ ದೂರಿನ ಪ್ರಕಾರ, ಬಿ.ಸಿ.ರೋಡ್ ಸಮೀಪ ಬಸ್ ನಿಲ್ಲಿಸಿದ್ದ ಸಂದರ್ಭದಲ್ಲಿ ಕಾರೊಂದನ್ನು ಬಸ್‌ಗೆ ಅಡ್ಡವಾಗಿ ನಿಲ್ಲಿಸಿ ಮಹಿಳೆಯೊಬ್ಬರು ತಮ್ಮೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇನ್ನೊಂದೆಡೆ, ಮಹಿಳೆಯು ನೀಡಿದ ಪ್ರತಿದೂರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬಸ್ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಆರೋಪಿಸಿದ್ದಾರೆ. ಎರಡೂ ದೂರುಗಳನ್ನು ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ನಗರದಲ್ಲಿ ಭಾನುವಾರ ದಿನವಿಡೀ ಸುರಿದ ಭಾರಿ ಮಳೆಯ ಪರಿಣಾಮವಾಗಿ ಬೆಂದೂರಿನ ಖಾಸಗಿ ಶಾಲೆಯೊಂದರ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ತಡರಾತ್ರಿ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಆದರೆ ಘಟನೆ ಮಧ್ಯರಾತ್ರಿ ಸಂಭವಿಸಿದ್ದರಿಂದ ಯಾವುದೇ ವಾಹನ ಅಥವಾ ಜನರು ಇಲ್ಲದ ಕಾರಣ ಪ್ರಾಣಾಪಾಯ ಹಾಗೂ ಆಸ್ತಿಪಾಸ್ತಿ ಹಾನಿ ತಪ್ಪಿದೆ. ಮಾಹಿತಿಯ ಪ್ರಕಾರ, ಸೋಮವಾರ ಬೆಳಗಿನ ಜಾವ ಸುಮಾರು 2 ಗಂಟೆಯ ವೇಳೆಗೆ ಮಣ್ಣು ಸಡಿಲಗೊಂಡ ಪರಿಣಾಮ ಮರವು ಬೇರುಸಹಿತ ಕಿತ್ತು ಬಿದ್ದು ಶಾಲೆಯ ಮುಂಭಾಗದ ರಸ್ತೆಯನ್ನು ಸಂಪೂರ್ಣವಾಗಿ ಆವರಿಸಿತು. ಕಳೆದ ಒಂದು ದಿನದಿಂದ ಸುರಿದ ನಿರಂತರ ಮಳೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಪಾಂಡೇಶ್ವರ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದರು. ಕತ್ತಲೆಯ ನಡುವೆಯೂ ಆಧುನಿಕ ಯಂತ್ರೋಪಕರಣಗಳ ನೆರವಿನಿಂದ ಮರವನ್ನು ತುಂಡುಗಳಾಗಿ ಕತ್ತರಿಸಿ ರಸ್ತೆಯಿಂದ ತೆರವುಗೊಳಿಸಲಾಯಿತು. ಇದರಿಂದ ಬೆಳಗಿನ ವೇಳೆಗೆ ಶಾಲಾ ವಾಹನಗಳು ಹಾಗೂ ಸಾರ್ವಜನಿಕ ಸಂಚಾರಕ್ಕೆ ಯಾವುದೇ…

Read More

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ಸೋಮವಾರ ಬೆಳಗ್ಗಿನ ಜಾವ ಕೇರಳ ಮೂಲದ ಪ್ರಮುಖ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿದ 7-8 ಮಂದಿ ದರೋಡೆಕೋರರ ತಂಡ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕೇರಳದ ಪಯ್ಯನ್ನೂರು ನಿವಾಸಿ, ಉದ್ಯಮಿ ವಿಕಾಸ್ ಎಂಬುವರು ಪತ್ನಿ ಮತ್ತು ಮಗನೊಂದಿಗೆ ಮುಂಬೈನಲ್ಲಿ ನಡೆದಿದ್ದ ಸ್ನೇಹಿತನೊಬ್ಬನ ಮದುವೆ ಸಮಾರಂಭ ಮುಗಿಸಿಕೊಂಡು ಸ್ವಗ್ರಾಮಕ್ಕೆ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಈ ಕೃತ್ಯ ನಡೆದಿದೆ. ಸೋಮವಾರ ಬೆಳಗ್ಗಿನ ಜಾವ ಸುಮಾರು 2:30ರ ಸುಮಾರಿಗೆ ಉದ್ಯಮಿ ವಿಕಾಸ್ ಅವರ ಕಾರು ಬೈಕಂಪಾಡಿಯ ದ್ವಾರ ಹೋಟೆಲ್ ಸಮೀಪ ತಲುಪುತ್ತಿದ್ದಂತೆ, ಮೂರು ಕಾರುಗಳಲ್ಲಿ ಹೊಂಚು ಹಾಕಿ ಬಂದಿದ್ದ ಸುಮಾರು 7 ರಿಂದ 8 ಮಂದಿ ದರೋಡೆಕೋರರು ವಿಕಾಸ್ ಅವರ ಕಾರನ್ನು ಬಲವಂತವಾಗಿ ರಸ್ತೆ ಮಧ್ಯೆಯೇ ತಡೆದು ನಿಲ್ಲಿಸಿದ್ದಾರೆ. ತಕ್ಷಣವೇ ಕಾರಿನ ಬಳಿ ಬಂದ ದರೋಡೆಕೋರರು ವಿಕಾಸ್ ಅವರನ್ನು ಬಲತ್ಕಾರವಾಗಿ ಕೆಳಕ್ಕೆ ಇಳಿಸಿ, ಕಾರಿನಲ್ಲಿದ್ದ ಅವರ ಪತ್ನಿ ಹಾಗೂ ಮಗನನ್ನು ಅದೇ ಕಾರಿನ…

Read More