Author: admin

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೂಕ್ಷ್ಮತೆ ಹೊಂದಿರುವ ಹಾಗೂ ಆಕ್ಷೇಪಾರ್ಹ ಎಂದು ಪರಿಗಣಿಸಲಾದ ಕಾಮೆಂಟ್‌ವೊಂದನ್ನು ಪ್ರಕಟಿಸಿದ ಆರೋಪದ ಮೇಲೆ ಬೆಂಗಳೂರಿನ ವ್ಯಕ್ತಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, “ಸನಾತನಿ ಸಿಂಹ” ಎಂಬ ಫೇಸ್‌ಬುಕ್ ಪುಟದ ಮೂಲಕ ಆರೋಪಿಯು ವಿವಾದಾತ್ಮಕ ಕಾಮೆಂಟ್ ಪ್ರಕಟಿಸಿದ್ದಾನೆ. ಈ ಪೋಸ್ಟ್ ಕೋಮು ಉದ್ವಿಗ್ನತೆ ಉಂಟುಮಾಡುವ ಸಾಧ್ಯತೆಯಿದೆ ಎಂದು ಪರಿಗಣಿಸಿ, ಅದರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸೂಚನೆ ನೀಡಲಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಆಧಾರದ ಮೇಲೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 18, 2025ರಂದು ಅಪರಾಧ ಸಂಖ್ಯೆ 131/2025 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 353(2) ಪ್ರಕಾರ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು. ತನಿಖೆಯನ್ನು ಮುಂದುವರಿಸಿದ ಪೊಲೀಸರು, ಜೂನ್ 27, 2026ರಂದು ಬೆಂಗಳೂರಿನ ವಿದ್ಯಾಮಾನ್ಯ ನಗರದ ನಿವಾಸಿ ಆನಂದ್ ಎ ಎಂಬಾತನನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಕಾನೂನು ಪ್ರಕ್ರಿಯೆಯಂತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪೊಲೀಸರ ತನಿಖೆಯಲ್ಲಿ, ಆರೋಪಿಯ ವಿರುದ್ಧ…

Read More

ಮಂಗಳೂರು: ಪುರಭವನದ ಸಮೀಪದ ಫುಟ್‌ಪಾತ್‌ನಲ್ಲಿ ಬೀದಿಬದಿ ವ್ಯಾಪಾರ ನಡೆಸುತ್ತಿದ್ದವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆಯ ವೇಳೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸ್ಥಳದಲ್ಲೇ ಇದ್ದು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು. ಕಾರ್ಯಾಚರಣೆ ಆರಂಭಕ್ಕೂ ಮುನ್ನ ವ್ಯಾಪಾರಿಗಳೊಂದಿಗೆ ಮಾತನಾಡಿದ ಆಯುಕ್ತರು, “ಈ ಸ್ಥಳದಲ್ಲಿ ಕಾನೂನು ಹಾಗೂ ನಿಯಮಗಳ ಪ್ರಕಾರ ವ್ಯಾಪಾರ ನಡೆಸಲು ಅವಕಾಶವಿಲ್ಲ” ಎಂದು ತಿಳಿಸಿ, ತೆರವುಗೊಳಿಸುವಂತೆ ಸೂಚಿಸಿದರು. ಆದರೆ ಹಲವು ವರ್ಷಗಳಿಂದ ಇಲ್ಲೇ ಜೀವನೋಪಾಯ ನಡೆಸುತ್ತಿರುವುದಾಗಿ ಹೇಳಿದ ವ್ಯಾಪಾರಿಗಳು, ತಮ್ಮ ಸಂಕಷ್ಟವನ್ನು ವಿವರಿಸಿ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. “ನಾವು ಕಳೆದ ನಲವತ್ತು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಪ್ರಾಮಾಣಿಕವಾಗಿ ದುಡಿದು ಜೀವನ ಸಾಗಿಸುತ್ತಿದ್ದೇವೆ. ನಮಗೆ ಪರ್ಯಾಯ ಸ್ಥಳ ಒದಗಿಸಿ,” ಎಂದು ವ್ಯಾಪಾರಿಗಳು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, “ಬದಲಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು. ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವ್ಯಾಪಾರಿಗಳು, “ಹಾಗೆ ಹೇಳಬೇಡಿ…

Read More

ಬೆಂಗಳೂರು:ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಸ್ಥಿತರಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾದಕದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವುದು ರಾಜ್ಯ ಸರ್ಕಾರದ ಪ್ರಮುಖ ಹಾಗೂ ಆದ್ಯತೆಯ ಗುರಿಯಾಗಿದೆ ಎಂದು ಸ್ಪಷ್ಟಪಡಿಸಿದರು. ಯುವ ಸಮುದಾಯವನ್ನು ಅಪಾಯಕರವಾದ ಮಾದಕದ್ರವ್ಯಗಳಿಂದ ದೂರವಿಟ್ಟು, ಆರೋಗ್ಯಕರ ಹಾಗೂ ಶಿಸ್ತುಬದ್ಧ ಸಮಾಜವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರವು ನಿರಂತರವಾಗಿ ವಿವಿಧ ಕಠಿಣ ಹಾಗೂ ಪರಿಣಾಮಕಾರಿ ಕ್ರಮಗಳು, ಜಾಗೃತಿ ಕಾರ್ಯಕ್ರಮಗಳು ಮತ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು. ಇಂತಹ ಮಹತ್ವದ ದಿನದ ಸಂದರ್ಭದಲ್ಲಿ ನೀವು ಎಲ್ಲರೂ ಸೇರಿಕೊಂಡು ಈ ರೀತಿಯ ಜಾಗೃತಿ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಿರುವುದು ಅತ್ಯಂತ ಸ್ವಾಗತಾರ್ಹವಾದ ಹೆಜ್ಜೆಯಾಗಿದೆ ಎಂದು ಅವರು ಶ್ಲಾಘಿಸಿದರು. ಸಮಾಜದಲ್ಲಿ ಮಾದಕದ್ರವ್ಯ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು…

Read More

ಬೆಂಗಳೂರು: ರಾಮ ಮಂದಿರ ದೇಣಿಗೆಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಲೂಟಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣದ ವಿವಿಧ ಆಯಾಮಗಳನ್ನು ಪರಿಶೀಲಿಸುತ್ತಿರುವ ಎಸ್‌ಐಟಿ, ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ದೇಣಿಗೆ ನಿರ್ವಹಣೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಎರಡು ಹಂತಗಳಲ್ಲಿ ತನಿಖೆ ನಡೆಸುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದ ಹಲವು ಗಂಭೀರ ಅಂಶಗಳು ಬೆಳಕಿಗೆ ಬಂದಿವೆ. ನಿಯಂತ್ರಣ ಕೊಠಡಿ, ಎಣಿಕೆ ಕೊಠಡಿ ಹಾಗೂ ಸಿಸಿಟಿವಿ ಮೇಲ್ವಿಚಾರಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿ ಸೇರಿದಂತೆ ಸುಮಾರು 40 ಮಂದಿಯ ಪಾತ್ರವನ್ನು ಎಸ್‌ಐಟಿ ಪರಿಶೀಲಿಸುತ್ತಿದೆ. ಭದ್ರತಾ ವ್ಯವಸ್ಥೆಯಲ್ಲಿ ವಿವಿಧ ಹಂತಗಳಲ್ಲಿ ಲೋಪಗಳಾಗಿರುವ ಸಾಧ್ಯತೆ ಇರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಪ್ರತಿಯೊಬ್ಬರ ಜವಾಬ್ದಾರಿಯನ್ನು ಪ್ರತ್ಯೇಕವಾಗಿ ಪರಿಶೀಲಿಸಲಾಗುತ್ತಿದೆ. ತನಿಖೆಯ ವೇಳೆ ನಿಯಂತ್ರಣ ಕೊಠಡಿಯ ಉಸ್ತುವಾರಿ ಅಧಿಕಾರಿಗಳು, ಅಲ್ಲಿನ ಸಿಬ್ಬಂದಿ, ಎಣಿಕೆ ಕೇಂದ್ರದ ಹೊರಭಾಗದಲ್ಲಿ ನಿಯೋಜನೆಗೊಂಡಿದ್ದ ಖಾಸಗಿ ಭದ್ರತಾ ಸಿಬ್ಬಂದಿ, ಪೊಲೀಸ್ ಹಾಗೂ ಪಿಎಸಿ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯ ಮೇಲೂ ಎಸ್‌ಐಟಿ ವಿಶೇಷ ಗಮನ ಹರಿಸಿದೆ.…

Read More

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ನ್ಯಾಯಾಲಯದ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಸಮಗ್ರ ಶೋಧ ಕಾರ್ಯಾಚರಣೆ ನಡೆಸಲಾಯಿತು. ಪರಿಶೀಲನೆಯ ಬಳಿಕ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಕಾರಣ ಇದೊಂದು ಹುಸಿ ಬೆದರಿಕೆ ಎಂಬುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಪೊಲೀಸರ ಮಾಹಿತಿ ಪ್ರಕಾರ, ಜೂನ್ 26ರಂದು ರಾತ್ರಿ 8.53ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ವಿಳಾಸಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಆದರೆ ನ್ಯಾಯಾಲಯದ ಸಿಬ್ಬಂದಿ ಜೂನ್ 27ರಂದು ಬೆಳಿಗ್ಗೆ ಇಮೇಲ್ ಪರಿಶೀಲಿಸಿದ ವೇಳೆ ಈ ಸಂದೇಶ ಬೆಳಕಿಗೆ ಬಂದಿದ್ದು, ಕೂಡಲೇ ಉಡುಪಿ ನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದೊಂದಿಗೆ ನ್ಯಾಯಾಲಯದ ಎಲ್ಲಾ ಕೊಠಡಿಗಳು, ಆಡಳಿತ ಕಚೇರಿಗಳು, ಶೌಚಾಲಯಗಳು ಹಾಗೂ ನ್ಯಾಯಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೂಕ್ಷ್ಮ ತಪಾಸಣೆ…

Read More

ತುಮಕೂರು: ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಈಗ ಭಯಾನಕ ತಿರುವು ಪಡೆದುಕೊಂಡಿದೆ. ಜೂನ್ 27ರಂದು ನಡೆದ ಈ ಘಟನೆ ಸಂಬಂಧ ಪೊಲೀಸರ ತನಿಖೆಯಲ್ಲಿ ಒಂದೊಂದಾಗಿ ಆಘಾತಕಾರಿ ಅಂಶಗಳು ಬಹಿರಂಗವಾಗುತ್ತಿವೆ. ಜಗಳದ ಬಳಿಕ ಚಾಕು ದಾಳಿ, ಬಳಿಕ ಕಾರು ಸ್ಫೋಟ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ನಾಗೇಂದ್ರ ಬೆಂಗಳೂರಿನಿಂದ ಯುವತಿ ರಮ್ಯಾಳನ್ನು ಕಾರಿನಲ್ಲಿ ಕರೆತಂದಿದ್ದನು. ಮಾರ್ಗಮಧ್ಯೆ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಆ ಸಂದರ್ಭದಲ್ಲಿ ನಾಗೇಂದ್ರ ಯುವತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಾಯಗೊಂಡ ರಮ್ಯಾ ತಕ್ಷಣ ಕಾರಿನಿಂದ ಇಳಿದಿದ್ದು, ಚಾಲಕ ಸಹಾಯಕ್ಕೆ ಮುಂದಾಗಿದ್ದಾಗ ನಾಗೇಂದ್ರ ಕಾರಿನೊಳಗೆ ತನ್ನನ್ನು ಲಾಕ್ ಮಾಡಿಕೊಂಡು ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಜೀವಂತ ಬಾಂಬ್ ಪತ್ತೆ; ನಿಷ್ಕ್ರಿಯಗೊಳಿಸಿದ ಪೊಲೀಸರು ಘಟನೆ ಬಳಿಕ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರಿಗೆ ಮತ್ತೊಂದು ಜೀವಂತ ಬಾಂಬ್ ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ನಿಷ್ಕ್ರಿಯಗೊಳಿಸಲಾಗಿದೆ. ನಂತರ…

Read More

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರ ಕಾರ್ಯಾಚರಣೆಯಲ್ಲಿ ಭಾರಿ ವಾಹನ ನೋಂದಣಿ ಮತ್ತು ತೆರಿಗೆ ವಂಚನೆಗೆ ಸಂಬಂಧಿಸಿದ ದೊಡ್ಡ ಜಾಲವೊಂದು ಪತ್ತೆಯಾಗಿದ್ದು, ಒಂದೇ ನೋಂದಣಿ ಸಂಖ್ಯೆಯನ್ನು ಎರಡು ಮಿನಿಬಸ್‌ಗಳಿಗೆ ಬಳಸುತ್ತಿದ್ದ ಅಕ್ರಮ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಒಟ್ಟು 12 ಮಿನಿಬಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಸರ್ಕಾರಕ್ಕೆ ಪಾವತಿಸಬೇಕಾದ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕಗಳನ್ನು ತಪ್ಪಿಸಲು ನಕಲಿ ನಂಬರ್ ಪ್ಲೇಟ್‌ಗಳ ಮೂಲಕ ಈ ವಂಚನೆ ನಡೆಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಎಲೆಕ್ಟ್ರಾನಿಕ್ಸ್ ಸಿಟಿಯ ಸುಭಾಷ್‌ನಗರ ನಿವಾಸಿ ಸೈಯದ್ ನಜೀರ್ (40) ಹಾಗೂ ತಮಿಳುನಾಡು ಮೂಲದ, ಆನೇಕಲ್‌ನಲ್ಲಿ ನೆಲೆಸಿರುವ ಸಾರಿಗೆ ಆಪರೇಟರ್ ನಾಗರಾಜ್ (52) ಎಂದು ಗುರುತಿಸಲಾಗಿದೆ. ಗಸ್ತು ವೇಳೆ ಸಿಕ್ಕ ಸುಳಿವು ಜೂನ್ 23ರಂದು ಮಣಿಪಾಲ್ ಕೌಂಟಿ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ಕೇದಾರಲಿಂಗ ತಾಂಬೆ ಮತ್ತು ಕಾನ್‌ಸ್ಟೆಬಲ್ ಕೇಶವಮೂರ್ತಿ ಅವರಿಗೆ ಅನುಮಾನಾಸ್ಪದ ಘಟನೆ ಗಮನಕ್ಕೆ ಬಂದಿದೆ. KA-51-B-5959 ನಂಬರ್ ಹೊಂದಿದ್ದ ಮಿನಿಬಸ್ ಒಂದು ವೇಗವಾಗಿ…

Read More

ಮಂಗಳೂರು: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ, ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದು, ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಾಟೆಕಲ್ ಜಂಕ್ಷನ್ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಕುವೆಂಪುನಗರ ನಿವಾಸಿ, ಇನ್ಫೋಸಿಸ್ ಉದ್ಯೋಗಿಯಾಗಿದ್ದ ಪ್ರಜ್ವಲ್ ಅರ್ನಾಲ್ಡ್ (31) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಅವರು ತಮ್ಮ ಸಹೋದ್ಯೋಗಿ ಅಕ್ಷತಾ ಅವರೊಂದಿಗೆ ಸ್ಕೂಟರ್‌ನಲ್ಲಿ ಕಂಬಳದ ಪದವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾಲೇಜು ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಉರುಳಿದ್ದು, ಸ್ಕೂಟರ್ ಬಸ್ಸಿನ ಅಡಿಯಲ್ಲಿ ಸಿಲುಕಿಕೊಂಡಿದೆ. ಅಪಘಾತದ ತೀವ್ರತೆಯಿಂದ ಪ್ರಜ್ವಲ್ ಹಾಗೂ ಅಕ್ಷತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಕ್ರೇನ್ ಸಹಾಯದಿಂದ ಬಸ್ಸನ್ನು ಮೇಲಕ್ಕೆತ್ತಿ ಸ್ಕೂಟರ್‌ನಡಿ ಸಿಲುಕಿದ್ದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪ್ರಜ್ವಲ್ ಅವರು…

Read More

ಮಂಗಳೂರು: ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹಾಗೂ ಓದುವ ಅಭಿರುಚಿ ಬೆಳೆಸುವ ಉದ್ದೇಶದಿಂದ ಮಂಗಳೂರಿನ ಮಣ್ಣಗುಡ್ಡೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ನಡೆಯಿತು. ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರಂದು ಶನಿವಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲು ನಿರಂತರ ಓದುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಅಮೃತ ಪ್ರಕಾಶ…

Read More

ಉಪ್ಪಿನಂಗಡಿ:16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಕ್ರ 09/2005, ಕಲಂ 457, 380 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ತಮಿಳುನಾಡಿನ ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದನು. ಬಳಿಕ ಆತ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಕ್ರಮ ಕೈಗೊಂಡಿದ್ದರು. ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗಳಾದ ಎಚ್‌ಸಿ 826 ಹಾಗೂ ಎಚ್‌ಸಿ 331 ಅವರು ಕೃಷ್ಣ ನಗರ ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More