Author: admin
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸುಲ್ಕೇರಿ ಗ್ರಾಮದ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅತ್ಯಂತ ವೇಗವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಭೀಕರತೆಗೆ ಕಾಂಕ್ರೀಟ್‌ನ ವಿದ್ಯುತ್ ಕಂಬವು ತಳಭಾಗದಿಂದಲೇ ಮುರಿದು ಕಾರಿನ ಮುಂಭಾಗದ ಮೇಲೆಯೇ ಬಿದ್ದಿದೆ. ಪರಿಣಾಮವಾಗಿ ಕಾರಿನ ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗದ ಸ್ಥಿತಿಯನ್ನು ನೋಡಿದರೆ ಒಳಗಿದ್ದವರು ಬದುಕುಳಿದಿದ್ದೇ ದೊಡ್ಡ ಪವಾಡ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದುಬಿದ್ದಿದ್ದರಿಂದ ಹೈ-ವೋಲ್ಟೇಜ್ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆ ಬಿದ್ದಿದ್ದವು. ಇದರಿಂದಾಗಿ ಇಡೀ ಭಾಗದಲ್ಲಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ (MESCOM) ಸಿಬ್ಬಂದಿ ಕಾರಿನ ಮೇಲೆ…
ನವದೆಹಲಿ: ಮಧ್ಯಪ್ರದೇಶದ ಅಶೋಕನಗರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಗುಂಡೇಟು ಹಾಗೂ ಸುಟ್ಟ ಗಾಯಗಳೊಂದಿಗೆ ದಂಪತಿಯ ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ರಿತಿಕ್ ಸೋನಿ ಮತ್ತು ಮುಸ್ಕಾನ್ ಎಂದು ಗುರುತಿಸಲಾಗಿದೆ. ರಿತಿಕ್ ಕಾರಿನ ಚಾಲಕನ ಆಸನದಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಗುಂಡೇಟಿನ ಗಾಯ ಮತ್ತು ಮುಖದ ಮೇಲೆ ಸುಟ್ಟ ಗುರುತುಗಳಿದ್ದವು. ಮುಸ್ಕಾನ್ ಪಕ್ಕದ ಆಸನದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಇಬ್ಬರೂ ಅಶೋಕನಗರದ ನಿವಾಸಿಗಳಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮುಸ್ಕಾನ್ ಬುಧವಾರ ಮಧ್ಯಾಹ್ನ ಜಿಮ್‌ಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದಳು. ಆದರೆ ರಾತ್ರಿ ಮನೆಗೆ ವಾಪಸ್ ಬಾರದೆ ಇದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಲವು ಬಾರಿ ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಂಪರ್ಕ ಸಾಧ್ಯವಾಗದ ಕಾರಣ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಇತ್ತ, ರಿತಿಕ್ ಕುಟುಂಬದವರು ಸುಮಾರು 15 ದಿನಗಳ ಹಿಂದೆ ಇಂದೋರ್‌ನಿಂದ ಅಶೋಕನಗರಕ್ಕೆ ಮರಳಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಗರಾದ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಶೇಷ ಅಭಿಯಾನದ ಭಾಗವಾಗಿ, 2026ರ ಜನವರಿಯಿಂದ ಮೇ ಅವಧಿಯಲ್ಲಿ ಒಟ್ಟು 21,039 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗಿದ್ದು, ನಿಯಮ ಉಲ್ಲಂಘಿಸಿದವರಿಂದ 96,19,500 ರೂಪಾಯಿ ದಂಡವನ್ನು ಸಂಗ್ರಹಿಸಲಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಯು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ಅನೇಕ ಸಾವು-ನೋವುಗಳು ಸಂಭವಿಸುತ್ತಿವೆ. ಈ ಭಾಗದಲ್ಲಿ ಎನ್‌ಎಚ್-66, ಎನ್‌ಎಚ್-75, ಎನ್‌ಎಚ್-169 ಮತ್ತು ಎನ್‌ಎಚ್-73 ನಂತಹ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗುತ್ತಿದ್ದು, ಅಜಾಗರೂಕ ಚಾಲನೆ, ಅತೀ ವೇಗ ಮತ್ತು ಸಂಚಾರ ಸಂಚಾರ ನಿಯಮಗಳ ಉಲ್ಲಂಘನೆಯು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಪೈಕಿ, ವಿವಿಧ ಸಂಚಾರ ಅಪರಾಧಗಳ ಅಡಿಯಲ್ಲಿ 6,853 ಪ್ರಕರಣಗಳನ್ನು ದಾಖಲಿಸಿ, 29,28,200 ರೂಪಾಯಿ ದಂಡ ವಿಧಿಸಲಾಗಿದೆ. ಇದರಲ್ಲಿ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ–ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ಸೆಪ್ಟೆಂಬರ್ 30ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ–ನಗರ–ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಸಂಚರಿಸಬೇಕು. ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು–ಮಾಗುಂಡಿ–ಕಳಸ–ಕುದುರೆಮುಖ–ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ–ಜಯಪುರ–ಬಾಳೆಹೊಳೆ–ಕಳಸ–ಕುದುರೆಮುಖ–ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ದ್ರವ್ಯವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು ಬೆಂಗಳೂರಿನ ಹಲಸೂರು ಲಿಡೋ ಮಾಲ್ ನಿವಾಸಿ ಮೊಹಮ್ಮದ್ ನದೀಮ್ (27), ಉಳ್ಳಾಲದ ಸೋಮೇಶ್ವರ ಉಚ್ಚಿಲ ನಿವಾಸಿ ಉಮರುಲ್ ಫಾರೂಕ್ (30), ಕೆ.ಸಿ.ರೋಡ್ ಕಿನ್ಯಾ ನಿವಾಸಿ ಇಮ್ತಿಯಾಜ್ ಇಸ್ಮಾಯಿಲ್ ಕಿನ್ಯಾ (41) ಮತ್ತು ಕುಂಪಲ ಸುರಕ್ಷಾ ನಗರದ ನಿವಾಸಿ ಧನುಷ್ (29) ಎಂದು ಗುರುತಿಸಲಾಗಿದೆ. ಬೆಂದೂರಿನ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಎಂಡಿಎಂಎ ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೊಹಮ್ಮದ್ ನದೀಮ್, ಉಮರುಲ್ ಫಾರೂಕ್ ಮತ್ತು ಇಮ್ತಿಯಾಜ್ ಇಸ್ಮಾಯಿಲ್ ಕಿನ್ಯಾ ಅವರನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ 35.53 ಗ್ರಾಂ ಎಂಡಿಎಂಎ ಮತ್ತು 7,030 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ಕದ್ರಿ ಪೊಲೀಸರಿಗೆ ಒಪ್ಪಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ…
ವಾಷಿಂಗ್ಟನ್: ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ದಿವಂಗತ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಕುರಿತಾದ ಅಮೆರಿಕದ ಸಂಸತ್ತಿನ ಸಮಿತಿಯ (ಯುಎಸ್ ಹೌಸ್ ಓವರ್‌ಸೈಟ್ ಕಮಿಟಿ) ತನಿಖೆಯ ವೇಳೆ ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ತಮಗೆ ಇದ್ದ ಕೆಲವು ವಿವಾಹೇತರ ಸಂಬಂಧಗಳ ಬಗ್ಗೆ ಎಪ್ಸ್ಟೀನ್‌ಗೆ ತಿಳಿದಿತ್ತು ಮತ್ತು ಆ ಮಾಹಿತಿಯನ್ನು ಬಳಸಿಕೊಂಡು ತನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ಅವನು ಯೋಜಿಸಿದ್ದಿರಬಹುದು ಎಂದು ಬಿಲ್ ಗೇಟ್ಸ್ ಒಪ್ಪಿಕೊಂಡಿದ್ದಾರೆ. ಜೂನ್ 10 ರಂದು ನಡೆದ ಮುಚ್ಚಿದ ಬಾಗಿಲಿನ ವಿಚಾರಣೆಯ ಈ ಸಾಕ್ಷ್ಯದ ಪ್ರತಿಗಳು ಮಂಗಳವಾರ ಸಾರ್ವಜನಿಕವಾಗಿ ಬಿಡುಗಡೆಯಾಗಿವೆ. ವಿಚಾರಣೆಯ ಸಂದರ್ಭದಲ್ಲಿ ಬಿಲ್ ಗೇಟ್ಸ್ ಅವರು ರಷ್ಯಾದ ಬ್ರಿಡ್ಜ್ ಆಟಗಾರ್ತಿ ಮಿಲಾ ಆಂಟೊನೊವಾ, ಪರಮಾಣು ಭೌತವಿಜ್ಞಾನಿ ಕರಿಮಾ ನಿಗ್ಮತುಲಿನಾ ಮತ್ತು ವೈದ್ಯಕೀಯ ಉದ್ಯಮಿ ಅಲೈಸ್ ಜೇಕಬ್ಸ್ ನೆಸ್ಸೆಲ್ರೋಡ್ ಸೇರಿದಂತೆ ಮೂವರು ಮಹಿಳೆಯರೊಂದಿಗೆ ತಮಗೆ ಇದ್ದ ವಿವಾಹೇತರ ಸಂಬಂಧಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧಗಳಿಗೂ ಎಪ್ಸ್ಟೀನ್ ಜೊತೆಗಿನ ತಮ್ಮ ವ್ಯವಹಾರಗಳಿಗೂ ಯಾವುದೇ ಸಂಬಂಧವಿರಲಿಲ್ಲ, ಆದರೆ ಇವು ತಮ್ಮ ಕುಟುಂಬಕ್ಕೆ ತೀವ್ರ…
ಕಾರಕಾಸ್: ವೆನೆಜುವೆಲಾದಲ್ಲಿ ಬೆನ್ನುಬೆನ್ನಿಗೆ ಸಂಭವಿಸಿದ ಪ್ರಬಲ ಅವಳಿ ಭೂಕಂಪಗಳು ದೇಶದ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿ ಮಾರ್ಪಟ್ಟಿದ್ದು, ಕನಿಷ್ಠ 164 ಜನರು ಸಾವನ್ನಪ್ಪಿದ್ದಾರೆ ಮತ್ತು 971 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕುಸಿದು ಬಿದ್ದಿರುವ ನೂರಾರು ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಬದುಕುಳಿದವರಿಗಾಗಿ ರಕ್ಷಣಾ ತಂಡಗಳು ತಡರಾತ್ರಿಯವರೆಗೂ ತೀವ್ರ ಹುಡುಕಾಟ ನಡೆಸುತ್ತಿವೆ. ಕರಾವಳಿ ರಾಜ್ಯವಾದ ಲಾ ಗುವೈರಾ ಭೂಕಂಪದಿಂದ ಅತ್ಯಂತ ಭೀಕರವಾಗಿ ತತ್ತರಿಸಿದ್ದು, ಅದನ್ನು “ವಿಪತ್ತು ವಲಯ” ಎಂದು ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಘೋಷಿಸಿದ್ದಾರೆ. ಇಲ್ಲಿ ವ್ಯಾಪಕ ಪ್ರಮಾಣದಲ್ಲಿ ಬಹುಮಹಡಿ ಕಟ್ಟಡಗಳು ನೆಲಸಮಗೊಂಡಿವೆ. ಲಾ ಗುವೈರಾದಲ್ಲಿ ಕುಸಿದ ಕಟ್ಟಡದ ಅವಶೇಷಗಳಡಿಯಿಂದ ಮೂರು ಮಕ್ಕಳನ್ನು ಜೀವಂತವಾಗಿ ರಕ್ಷಿಸುತ್ತಿರುವ ರೋಮಾಂಚಕ ದೃಶ್ಯಗಳನ್ನು ಅಲ್ಲಿನ ಸರ್ಕಾರಿ ದೂರದರ್ಶನ ಪ್ರಸಾರ ಮಾಡಿದೆ. ಧೂಳಿನಿಂದ ಆವೃತವಾಗಿದ್ದರೂ ಯಾವುದೇ ಗಾಯಗಳಿಲ್ಲದೆ ಪಾರಾದ ಈ ಮಕ್ಕಳು, ವಿಪತ್ತಿನ ನಡುವೆಯೂ ಆಶಾಕಿರಣದಂತೆ ಮೂಡಿಬಂದಿದ್ದಾರೆ. ದುರಂತ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ದೇಶದ ವಿವಿಧ ಭಾಗಗಳಿಂದ ಹೆಚ್ಚುವರಿ ತುರ್ತು ರಕ್ಷಣಾ…
ಢಾಕಾ : ಬಾಂಗ್ಲಾದೇಶದ ನಾಗರಿಕರಿಗೆ ಪ್ರವಾಸಿ ವೀಸಾ ವಿತರಣೆ ಪುನರಾರಂಭಿಸುವುದಾಗಿ ಭಾರತ ಸರ್ಕಾರ ಪ್ರಕಟಿಸಿದೆ. 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ದಂಗೆ ಹಾಗೂ ಭಾರತೀಯ ರಾಯಭಾರ ಕಚೇರಿಗಳ ಮೇಲಿನ ದಾಳಿಯ ಬಳಿಕ, ಸುರಕ್ಷತೆಯ ದೃಷ್ಟಿಯಿಂದ ಕಳೆದ ಸುಮಾರು 2 ವರ್ಷಗಳಿಂದ ಪ್ರವಾಸಿ ವೀಸಾ ಸೇವೆಗಳನ್ನ ಸ್ಥಗಿತಗೊಳಿಸಲಾಗಿತ್ತು. ಇದೀಗ ಭಾರತ ಮತ್ತು ಬಾಂಗ್ಲಾದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹಾಗೂ ಜನರ ನಡುವಿನ ಸಂಪರ್ಕ ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಜೂನ್ 28 ರಿಂದ ಪ್ರವಾಸಿ ವೀಸಾಗಳನ್ನ ಪುನರಾರಂಭಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಢಾಕಾದ ಜಮುನಾ ಪ್ಯೂಚರ್ ಪಾರ್ಕ್ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ ಭಾರತದ ನೂತನ ಹೈಕಮಿಷನರ್ ದಿನೇಶ್ ತ್ರಿವೇದಿ ಅವರು, “ಬಾಂಗ್ಲಾದೇಶದ ನಾಗರಿಕರಿಗೆ ಜೂನ್ 28ರ ಭಾನುವಾರದಿಂದ ಸಾಮಾನ್ಯ ಪ್ರವಾಸಿ ವೀಸಾ ಸೇವೆಗಳು ಲಭ್ಯವಾಗಲಿವೆ. ಇದನ್ನು ಘೋಷಿಸಲು ನನಗೆ ಅತ್ಯಂತ ಸಂತೋಷವಾಗುತ್ತಿದೆ. ಇದು ಉಭಯ ಸಾರ್ವಭೌಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ. ಇದರೊಂದಿಗೆ ತುರ್ತು ವೀಸಾ ಹಾಗೂ ವೈದ್ಯಕೀಯ ವೀಸಾಗಳ ಸೇವೆಯನ್ನೂ…
ನವದೆಹಲಿ: ವಿದೇಶ ಪ್ರಯಾಣದ ಕನಸು ಕಾಣುತ್ತಿರುವ ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರವು ಶಾಕ್ ನೀಡಿದೆ. ದೇಶದಲ್ಲಿ ಪಾಸ್‌ಪೋರ್ಟ್ ವಿತರಣಾ ಶುಲ್ಕವನ್ನು ಗಣನೀಯವಾಗಿ ಪರಿಷ್ಕರಿಸಲಾಗಿದ್ದು, ನೂತನ ದರ ಪಟ್ಟಿ ಮುಂಬರುವ ಜುಲೈ 1 ರಿಂದ ಜಾರಿಗೆ ಬರಲಿದೆ. ಹೊಸ ನಿಯಮದ ಪ್ರಕಾರ ಸಾಮಾನ್ಯ ಮತ್ತು ತತ್ಕಾಲ್ (Tatkaal) ಎರಡೂ ವಿಭಾಗಗಳ ಪಾಸ್‌ಪೋರ್ಟ್ ದರಗಳು ದುಬಾರಿಯಾಗಲಿವೆ. ಡಿಜಿಟಲೀಕರಣದ ನವೀಕರಣ, ಸುರಕ್ಷತಾ ತಂತ್ರಜ್ಞಾನಗಳ ಅಳವಡಿಕೆ ಹಾಗೂ ಆಡಳಿತಾತ್ಮಕ ವೆಚ್ಚಗಳ ನಿರ್ವಹಣೆಯ ಕಾರಣ ನೀಡಿ ಶುಲ್ಕವನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜುಲೈ 1 ರಿಂದ ಅನ್ವಯವಾಗುವ ಹೊಸ ಶುಲ್ಕದ ವಿವರಗಳು: ಹೊಸದಾಗಿ ಪಾಸ್‌ಪೋರ್ಟ್ ಪಡೆಯುವ ಮತ್ತು ನವೀಕರಿಸುವ (Renewal) ಗ್ರಾಹಕರು ಇನ್ಮುಂದೆ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಪರಿಷ್ಕೃತ ದರಗಳ ಪಟ್ಟಿ ಈ ಕೆಳಗಿನಂತಿದೆ: ಹೊಸ ಪಾಸ್‌ಪೋರ್ಟ್ (Fresh Passport – 36 ಪುಟಗಳು): ಪ್ರಸ್ತುತ ಇರುವ ಸಾಮಾನ್ಯ ಶುಲ್ಕದ ಬದಲಿಗೆ ಜುಲೈ 1 ರಿಂದ ಹೊಸ ಪಾಸ್‌ಪೋರ್ಟ್‌ಗಾಗಿ ಅರ್ಜಿದಾರರು 2,500 ರೂಪಾಯಿ ಪಾವತಿಸಬೇಕಾಗುತ್ತದೆ. ತತ್ಕಾಲ್ ಪಾಸ್‌ಪೋರ್ಟ್ ಸೇವೆ (Tatkaal Passport): ತುರ್ತಾಗಿ…
ಚೆನ್ನೈ : ಟಿವಿಕೆ ಪಕ್ಷದ ಭರವಸೆಗಳಲ್ಲಿ ಒಂದಾದ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ ನೀಡುವ ಯೋಜನೆಯನ್ನು ಜೂ.22ರಿಂದ ಪೂರ್ವಾನ್ವಯ ಆಗುವಂತೆ ಸೆ.15ರಿಂದ ಜಾರಿಗೆ ತರಲು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸರ್ಕಾರ ನಿರ್ಧರಿಸಿದೆ. ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸಿದ ಮಕ್ಕಳಿಗೆ ಇದು ಅನ್ವಯ ಆಗಲಿದೆ. ತಮಿಳುನಾಡಿನಲ್ಲಿ ಶಾಶ್ವತವಾಗಿ ವಾಸಿಸುತ್ತಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲಾ ಮಕ್ಕಳಿಗೆ ಈ ಯೋಜನೆ ಅನ್ವಯಿಸುತ್ತದೆ. ಮುಖ್ಯಮಂತ್ರಿ ವಿಜಯ್ ಅವರ ಜನ್ಮದಿನವಾದ ಜೂನ್ 22 ರಿಂದ ಪೂರ್ವಾನ್ವಯವಾಗುವಂತೆ ಈ ಯೋಜನೆ ಜಾರಿಗೆ ಬರಲಿದೆ. ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರ ಜನ್ಮದಿನವಾದ ಸೆಪ್ಟೆಂಬರ್ 15 ರಂದು ಈ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಪ್ರಸ್ತುತ ಮಾರುಕಟ್ಟೆ ದರದ ಪ್ರಕಾರ ಸುಮಾರು 13,600 ರೂ. ಮೌಲ್ಯದ 1 ಗ್ರಾಂ ಚಿನ್ನದ ಉಂಗುರವನ್ನು ಶಿಶುಗಳಿಗೆ ನೀಡಲಾಗುತ್ತದೆ. ಈ ಯೋಜನೆಗಾಗಿ ಸರ್ಕಾರವು ವಾರ್ಷಿಕವಾಗಿ 755.83 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ತಮಿಳುನಾಡಿನಲ್ಲಿ ಮಗು ಜನಿಸಿದಾಗ ಮನೆಗೆ ಬರಮಾಡಿಕೊಳ್ಳಲು…



