Author: admin
ಬಿಹಾರ: ಬಾಲಿವುಡ್‌ನ ಖ್ಯಾತ ನಟ ಪಂಕಜ್ ತ್ರಿಪಾಠಿ ಅವರ ಅಣ್ಣ ಬಿಜೇಂದ್ರ ನಾಥ್ ತಿವಾರಿ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಗಲು ಹೊತ್ತಿನಲ್ಲೇ ಕೊಡಲಿಯಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆ ಬಿಹಾರದ ಮಾಧೋಪುರದ ಬೆಲ್ಸಂದ್ ಗ್ರಾಮದಲ್ಲಿ ನಡೆದಿದ್ದು, ಸದ್ಯ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭೂವಿವಾದದ ಹಿನ್ನೆಲೆಯಲ್ಲಿ ಬಿಜೇಂದ್ರ ನಾಥ್ ತಿವಾರಿ ಅವರ ಮೇಲೆ ಈ ದಾಳಿ ನಡೆದಿರಬಹುದು ಎಂದು ಹೇಳಲಾಗಿದೆ. ಹಲ್ಲೆಯ ತಕ್ಷಣವೇ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪ್ರಾಥಮಿಕ ಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದರಿಂದ, ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಅವರನ್ನು ಪಾಟ್ನಾದ ದೊಡ್ಡ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರು: ಕುಣಿಗಲ್‌ನಲ್ಲಿ ಮನೆ ಬೀಗ ಮುರಿದು ಕಳ್ಳತನ ಪ್ರಕರಣ ಸಂಬಂಧ ಬೆಂಗಳೂರಿನ ಖತರ್ನಾಕ್ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ಅನಿತಾ ಬಂಧಿತ ದಂಪತಿಗಳು. ಮೇ 29 ರಂದು ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ರಿಜ್ವಾನ್ ಎಂಬುವರ ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದರು. ನಿವೇಶನ ಖರೀದಿಗಾಗಿ ಮನೆಯಲ್ಲಿಟ್ಟಿದ್ದ ಬರೋಬ್ಬರಿ 25 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣವನ್ನ ದಂಪತಿ ದೋಚಿತ್ತು. ಬೆನ್ನಲ್ಲೇ ಮನೆಯ ಮಾಲೀಕ ರಿಜ್ವಾನ್, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬೆಂಗಳೂರಿನ ರಾಮಚಂದ್ರಾಪುರದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ದಂಪತಿಯಿಂದ 31 ಗ್ರಾಂ ಬಂಗಾರದ ಆಭರಣ, ಒಂದು ಬೈಕ್ ವಶಕ್ಕೆ ಪಡಿದಿದ್ದಾರೆ. ಆರೋಪಿಗಳನ್ನ ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸ್ತಿದ್ದಾರೆ. ಈ ವೇಳೆ ಕೆಲವು ಸ್ಫೋಟಕ ಸತ್ಯ ಹೊರಬಿದ್ದಿದೆ. ಬಂಧಿತ ದಂಪತಿ ವಿರುದ್ಧ ಸುಮಾರು 35 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಅನಿತಾಳ ಪತಿ ಮಂಜುನಾಥ್ ಮನೆಗಳ್ಳತನ…
ಮಂಡ್ಯ : ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು ಸಂಜೆ 5 ಗಂಟೆಗೆ ಘಟನೆ ನಡೆದಿದೆ. ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು. ಮೃತರು ಚನ್ನಪಟ್ಟಣ ಮೂಲದವರು. ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ ಐವರ ಮೃತದೇಹವನ್ನ ಹೊರತೆಗೆದಿರುವ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಹೊರತೆಗೆದಿದ್ದಾರೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರವು ಆಡಳಿತ ಸುಧಾರಣೆ ಮತ್ತು ಜಿಲ್ಲಾ ಮಟ್ಟದ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದ್ದು, ಸಂಪುಟದ ಪ್ರಮುಖ 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಹಿರಿಯ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹೊಣೆ ನೀಡಲಾಗಿದ್ದರೆ, ಸಚಿವ ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲೆಯ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಹೊಣೆ ವಹಿಸಲಾಗಿದೆ. ರಾಜಧಾನಿಯ ಆಡಳಿತದ ದೃಷ್ಟಿಯಿಂದ ಅತ್ಯಂತ ಕೌತುಕ ಮೂಡಿಸಿದ್ದ ಬೆಂಗಳೂರು ನಗರ…
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಯುವತಿಯೊಬ್ಬಳು ಪ್ರಿಯಕರನ ಜೊತೆ ಓಡಿ ಹೋಗಿರುವುದಕ್ಕೆ ಯುವತಿಯ ತಂದೆ ಆಕೆಯ ಸ್ನೇಹಿತನಿಗೆ ಬೈದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತನನ್ನ ಚಂದನ್ (20) ಎಂದು ಗುರುತಿಸಲಾಗಿದೆ. ಕುಡ್ಲೂರು ಗ್ರಾಮದ 18 ವರ್ಷದ ಯುವತಿಯೊಬ್ಬಳು ಪತ್ರ ಬರೆದಿಟ್ಟು ತನ್ನ ಪ್ರಿಯಕರನ ಜೊತೆ ಜೂ.14 ರಂದು ಹೋಗಿದ್ದಳು. ಈ ಬಗ್ಗೆ ಯುವತಿಯ ತಂದೆ ಆಕೆಯ ಸ್ನೇಹಿತ ಚಂದನ್‌ಗೆ ಆಕೆ ಹೋಗಲು ನೀನೇ ಕಾರಣ, ಎಲ್ಲಿದ್ದಾಳೆ ಅಂತ ಗೊತ್ತು ಹೇಳು ಎಂದು ಗಲಾಟೆ ಮಾಡಿದ್ದರು. ನಾಪತ್ತೆ ಪ್ರಕರಣ ದಾಖಲಾದ ಬೆನ್ನಲ್ಲೇ ಮೊಬೈಲ್ ಕಾಲ್ ಲೀಸ್ಟ್ ಆಧಾರದ ಮೇಲೆ ಕಡೂರು ತಾಲೂಕಿನ ಬೀರೂರು ಪೊಲೀಸರು ಚಂದನ್‌ನನ್ನ ಕರೆಸಿ ವಿಚಾರಣೆ ಮಾಡಿ ಕಳುಹಿಸಿದ್ದರು. ಆದರೆ, ಜೂ.21ರ ಸಂಜೆ ವಿಚಾರಣೆ ಮುಗಿಸಿಕೊಂಡು ಮನೆಗೆ ಹೋದ ಚಂದನ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಯುವ ಮುನ್ನ ತನ್ನ ತಾಯಿಗೆ ಯುವಕ ಮೆಸೇಜ್ ಮಾಡಿ, ಆ ಹುಡುಗಿ ಎಲ್ಲಿದ್ದಾಳೆ ಗೊತ್ತಿಲ್ಲ. ಆಕೆ ಹೋಗಿರೋದಕ್ಕೆ ಕಾರಣ ನಾನಲ್ಲ.…
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ವಿಶೇಷ ವಿಮಾನದ ಮೂಲಕ ಆಗಮಿಸಿದರು. ನಗರದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಷನ್ ಆಯೋಜಿಸಿರುವ “An Evening with Shah Rukh Khan” ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಈ ಕಾರ್ಯಕ್ರಮವು ನಗರದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದ್ದು, ರೋಹನ್ ಕಾರ್ಪೊರೇಷನ್‌ನ ಹೊಸ ವಸತಿ ಯೋಜನೆ Rohan Marina One ಅನಾವರಣವೂ ಇದೇ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಆಹ್ವಾನಿತ ಅತಿಥಿಗಳು ಹಾಗೂ ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.
ಬೆಂಗಳೂರು,: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಬಳಿಕ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಅವರನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಶ್ರೀಮಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ಗಳಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಯವಾದ ಸ್ನೇಹಿತರ ಬಳಿ ತಾನು ತೀವ್ರ ಕಷ್ಟದಲ್ಲಿದ್ದೇನೆ ಎಂದು ನಂಬಿಸುತ್ತಿದ್ದ ನಟಿ ವನಿತಾ, ‘ನನ್ನ ಚಿನ್ನದ ಆಭರಣಗಳನ್ನು ಅಡವಿಟ್ಟಿದ್ದೇನೆ, ಅದನ್ನು ಬಿಡಿಸಿಕೊಳ್ಳಲು ತುರ್ತಾಗಿ ಹಣ ಬೇಕಾಗಿದೆ. ಎರಡರಿಂದ ಮೂರು ದಿನಗಳಲ್ಲಿ ಸಾಲದ ಹಣವನ್ನು ವಾಪಸ್ ನೀಡುತ್ತೇನೆ’ ಎಂದು ನಂಬಿಸಿ ಹಣ ಪಡೆಯುತ್ತಿದ್ದಳು. ಅತ್ಯಂತ ಚಾಲಾಕಿಯಾಗಿದ್ದ ಈಕೆ, ಸಿಸಿಟಿವಿ ಕ್ಯಾಮೆರಾಗಳು ಇಲ್ಲದ ಜಾಗಗಳನ್ನು ಹುಡುಕಿ ಅಲ್ಲಿಗೆ ಹಣ ನೀಡುವವರನ್ನು ಕರೆಸಿಕೊಂಡು ನಗದು ಪಡೆದು ಪರಾರಿಯಾಗುತ್ತಿದ್ದಳು ಎಂದು ಆರೋಪಿಸಲಾಗಿದೆ.…
ಕೊಯಮತ್ತೂರು: ಸಮಾಧಿ ಅಗೆದು ಹೆಣದ ಮೇಲಿದ್ದ ಚಿನ್ನದ ಸರವನ್ನು ಕಳ್ಳರು ದೋಚಿರುವ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮೀನು ಮಾರಾಟಗಾರರೊಬ್ಬರು ನಿಧನರಾಗಿದ್ದ ವೇಳೆ ಅವರ ಕೊರಳಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ತೆಗೆಯುವುದು ಬೇಡವೆಂದು ಕುಟುಂಬದವರು ಶವದ ಜತೆ ಮಣ್ಣು ಮಾಡಿದ್ದರು. ಈ ಮಾಹಿತಿ ತಿಳಿದಿದ್ದ ಕಳ್ಳರು ರಾತ್ರಿ ಸಮಾಧಿಯನ್ನು ಅಗೆದು ಚಿನ್ನದ ಸರವನ್ನು ದೋಚಿ ಪರಾರಿಯಾಗಿದ್ದಾರೆ. ಮೃತರ ಮಗ ಮತ್ತು ಸಂಬಂಧಿಕರು ಜೂನ್ 22ರಂದು 16 ನೇ ದಿನದ ಪುಣ್ಯತಿಥಿ ಕಾರ್ಯಗಳನ್ನು ಮಾಡಲು ಸಮಾಧಿ ಜಾಗಕ್ಕೆ ಹೋಗಿದ್ದರು. ಈ ವೇಳೆ ಸಮಾಧಿಯ ಸುತ್ತಲಿನ ಮಣ್ಣು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು, ಹೊಸದಾಗಿ ಅಗೆದಂತೆ ಕಾಣಿಸಿದೆ. ಇದರಿಂದ ಅನುಮಾನಗೊಂಡು ತನಿಖೆ ನಡೆಸಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕುಟುಂಬಸ್ಥರು ಸ್ಮಶಾನದ ಉಸ್ತುವಾರಿ ನೋಡಿಕೊಳ್ಳುವನನ್ನು ತೀವ್ರವಾಗಿ ಪ್ರಶ್ನಿಸಿದಾಗ ಸತ್ಯ ಹೊರಬಿದ್ದಿದೆ. ತಡರಾತ್ರಿ ಇಬ್ಬರು ಸ್ಥಳೀಯ ವ್ಯಕ್ತಿಗಳು ಸ್ಮಶಾನಕ್ಕೆ ಅಕ್ರಮವಾಗಿ ನುಗ್ಗಿ, ಮೃತರ ಸಮಾಧಿಯನ್ನು ಅಗೆದು ಶವದ ಮೇಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಓಡಿಹೋಗಿರುವುದಾಗಿ ಆತ…
ಕೊಲ್ಲಂ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಸ್ಥಳೀಯರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಡುವತ್ತೂರಿನ ನೀಲೇಶ್ವರಂನ ಮುಕ್ಕೋಣಿಮುಕ್ಕು ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 7.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಲಾರಿಯಲ್ಲಿದ್ದ ಭಾರಿ ಪ್ರಮಾಣದ ಮರಳು ಬಸ್ ನಿಲ್ದಾಣದ ಮೇಲೆ ಉರುಳಿ ಬಿದ್ದಿದ್ದರಿಂದ, ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಮರಳಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿದ್ದರು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಅಪಘಾತದಲ್ಲಿ ಇಬ್ಬರು ಹಿರಿಯ ನಾಗರಿಕರು ಮತ್ತು ಒಂದು ಮಗು ಸಾವನ್ನಪ್ಪಿದ್ದಾರೆ. ಮೃತ ಮೂವರನ್ನು ಹರಿಲಾಲ್ (52), ಪಾರ್ಥಿಪ್ (15) ಮತ್ತು ಅಜಯ ಕುಮಾರ್ (45) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೊಟ್ಟಾರಕ್ಕರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಗಾಯಗಳು ಗಂಭೀರವಾಗಿಲ್ಲ. ಕೊಟ್ಟಾರಕ್ಕರ ಅಗ್ನಿಶಾಮಕ ದಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿಯು ಮುಕ್ಕೋಣಿಮುಕ್ಕು ಜಂಕ್ಷನ್‌ನಲ್ಲಿ ಬೈಕೊಂದನ್ನು ಹಿಂದಿಕ್ಕಲು (Overtake) ಯತ್ನಿಸಿದೆ. ಈ…
ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ ಸಮುದ್ರದಲ್ಲಿ ಮೀನು ಲಭ್ಯತೆ ತೀವ್ರವಾಗಿ ಕುಸಿದಿದೆ. ಮಳೆಗಾಲದಲ್ಲಿ ಹಳ್ಳಿಗಾಡಿನ ಮೀನುಗಾರಿಕೆಯನ್ನು ಅವಲಂಬಿಸಿರುವ ಸಾವಿರಾರು ಸಾಂಪ್ರದಾಯಿಕ ಮೀನುಗಾರರು ಆದಾಯದ ಕೊರತೆಯಿಂದಾಗಿ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಜೂನ್ 1 ರಿಂದ ಜಾರಿಗೆ ಬರುವ 61 ದಿನಗಳ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳ ಮೇಲಿನ ನಿಷೇಧ ಇರುವುದರಿಂದ , ಈ ಅವಧಿಯು ಸಾಮಾನ್ಯವಾಗಿ ಸಾಂಪ್ರದಾಯಿಕ ಮೀನುಗಾರರಿಕೆಯೇ ಜೀವನೋಪಾಯದ ನ ಮೂಲವಾಗಿದೆ. ಆದರೆ , ಈ ವರ್ಷ ಸಮುದ್ರವು ಮೀನುಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದೆ.ನಾಡ ದೋಣಿಗಳಿಗೆ ಮೀನು ಸಿಗಬೇಕಾದರೆ ಭಾರೀ ಮಳೆ ಸುರಿದು ತೂಫಾನ್ ಎದ್ದು ಸಮುದ್ರ ತಲ್ಲಣಗೊಳ್ಳಬೇಕು. ಅಗಷ್ಟೇ ತಳದಲ್ಲಿರುವ ಮೀನುಗಳು ಮೇಲಕ್ಕೆ ಬರುತ್ತವೆ. ಜತೆಗೆ ಘಟ್ಟಪ್ರದೇಶದ ಧಾರಾಕಾರ ಮಳೆಯ ಸಿಹಿನೀರು ಕಡಲು ಸೇರಿದಾಗ ಉಂಟಾಗುವ ಮಿಶ್ರಣವನ್ನು ಹುಡುಕಿಕೊಂಡು ಬಂಗುಡೆ, ಬೂತಾಯಿ ಸಹಿತ ಸಣ್ಣ ಮೀನುಗಳು ದಡಕ್ಕೆ ಬರುತ್ತದೆ. ಆದರೆ ಈ ವರ್ಷ ಮಳೆಯೂ ಇಲ್ಲದೆ ತೂಫಾನ್ ಕೂಡ ಏಳದೆ ಮೀನುಗಳು ಆಳಸಮುದ್ರ ಸೇರಿಕೊಂಡಿವೆ ಎಂದು ಮೀನುಗಾರರ…



