Author: admin

ಮೂಡುಬಿದಿರೆ: ಜಾರ್ಖಂಡ್ ಮೂಲದ 48 ವರ್ಷದ ಮಹಿಳೆಯೊಬ್ಬರು ದರೆಗುಡ್ಡೆ ಬಳಿಯ ಕಕ್ಕೆಕಾಡು ಬಳಿಯ ಮನೆಯಿಂದ ಜೂನ್ 9 ರಂದು ನಾಪತ್ತೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಣೆಯಾದ ಮಹಿಳೆಯನ್ನು ಕರ್ಮೇಲಾ ಸೊರೆನ್ (48) ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಆನೆಗುಡ್ಡೆ ಮತ್ತು ದರೆಗುಡ್ಡೆ ನಡುವಿನ ಕಕ್ಕೆಕಾಡು ಎಂಬಲ್ಲಿರುವ ನಿವಾಸದಲ್ಲಿ ಕೆಲಸ ಮಾಡುತ್ತಿದ್ದರು. ದೂರಿನ ಪ್ರಕಾರ, ಅವರು ಜೂನ್ 9 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಯಾರಿಗೂ ತಿಳಿಸದೆ ಮನೆಯಿಂದ ಹೊರಟು ಹೋಗಿದ್ದಾರೆ. ಬಸ್ ಕಂಡಕ್ಟರ್ ನೀಡಿದ ಮಾಹಿತಿಯ ಪ್ರಕಾರ, ಅವರು ಮಧ್ಯಾಹ್ನ 2.45 ರ ಸುಮಾರಿಗೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಇಳಿದರು. ಟಿಕೆಟ್ ಕೇಳಿದಾಗ ಅವರು ಸರಿಯಾಗಿ ಪ್ರತಿಕ್ರಿಯಿಸಲಿಲ್ಲ ಮತ್ತು ಮಾನಸಿಕವಾಗಿ ಅಸ್ವಸ್ಥರಾಗಿರುವಂತೆ ಕಾಣುತ್ತಿದೆ ಎಂದು ಕಂಡಕ್ಟರ್ ಹೇಳಿದ್ದಾರೆ. ಮಧ್ಯಾಹ್ನದ ನಂತರ ಮಹಿಳೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ತಿಳಿದುಬಂದಿದೆ. ಫೋನ್‌ನ ಕೊನೆಯ ಟವರ್ ಲೊಕೇಶನ್ ಮೂಡುಬಿದಿರೆಯ ಪಂಚರತ್ನ…

Read More

ಮಂಗಳೂರು: ನಗರದ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು  ನಡೆದಿದೆ. ಮೃತಪಟ್ಟ ಯುವಕನನ್ನು ಮಂಜೇಶ್ವರದ ಪಾನತ್ತೂರಿನ ನಿವಾಸಿ ಸುಧೀಶ್ ಸಿ.ಕೆ.(26) ಎಂದು ಗುರುತಿಸಲಾಗಿದೆ. ಇವರು ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಿಗ್ಗೆ ಸುಧೀಶ್ ಅವರು ತಮ್ಮ ಮನೆಯಿಂದ ಕೆಲಸದ ನಿಮಿತ್ತ ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಮುಖ್ಯ ಕಾರಣವಾಗಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಸುಧೀಶ್ ಅವರು ಚಲಾಯಿಸುತ್ತಿದ್ದ ಬೈಕ್, ತಮ್ಮ ಮುಂದೆಯೇ ಹೋಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರಾದರೂ, ವಿಪರೀತ ರಕ್ತಸ್ರಾವದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು…

Read More

ಮಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದಾಗಿ ಪಾರ್ಕಿಂಗ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಅನಧಿಕೃತವಾಗಿ ವಿವಿಧೆಡೆ ಪಾರ್ಕಿಂಗ್ ಮಾಡಿದ ಪ್ರಕರಣಗಳಿಗೆ ವಾಹನಗಳ ಮಾಲೀಕರಿಗೆ ಕಳೆದ ಐದು ತಿಂಗಳ ಅವಧಿಯಲ್ಲಿ 12.4 ಲಕ್ಷ ರೂ. ದಂಡ ವಿಧಿಸಲಾಗಿದೆ. ಸಂಚಾರ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2025ರಲ್ಲಿ ನಗರದಲ್ಲಿ ಒಟ್ಟು 8,885 ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು 47.2 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. 2026ರಲ್ಲಿ ಇದುವರೆಗೆ 2,294 ಪ್ರಕರಣಗಳು ದಾಖಲಾಗಿವೆ. ಇವುಗಳಿಂದ ಸಂಗ್ರಹವಾದ ದಂಡದ ಮೊತ್ತವೂ ಹೆಚ್ಚಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಅಗಲಗೊಂಡಿರುವ ಕೆಲವು ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ಅವಕಾಶ ಕೊಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ರಸ್ತೆಗಳು ಕಿರಿದಾಗಿದ್ದು ವಾಹನ ನಿಲ್ಲಿಸಿದರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆಯಾಗುತ್ತಿದೆ. ಕೆಲವು ಸಭಾಂಗಣಗಳಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಾಗ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ.…

Read More

ಮಂಗಳೂರು : ಚಲಿಸುತ್ತಿದ್ದ ಖಾಸಗಿ ಸರ್ವಿಸ್ ಬಸ್‌ನ ಚಾಲಕನಿಗೆ ಲೋ ಬಿಪಿಯಿಂದಾಗಿ ಸ್ಟೇರಿಂಗ್ ಮೇಲೆಯೇ ಕುಸಿದುಬಿದ್ದ ಪರಿಣಾಮ, ನಿಯಂತ್ರಣ ತಪ್ಪಿದ ಬಸ್ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು ಏರಿ ನಿಂತ ಘಟನೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ಮಂಗಳವಾರ ಬೆಳಿಗ್ಗೆ ನಡೆದಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅನಾಹುತವಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಡಿಪುವಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಸರ್ವಿಸ್ ಬಸ್ ಬೆಳಿಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆ ಮುಂಭಾಗಕ್ಕೆ ತಲುಪಿದಾಗ ಈ ಘಟನೆ ಸಂಭವಿಸಿದೆ. ಬಸ್ ಚಾಲಕ ಜನಾರ್ಧನ್ ಅವರಿಗೆ ಬಸ್ ಚಲಾಯಿಸುತ್ತಿದ್ದಾಗಲೇ ಇದ್ದಕ್ಕಿದ್ದಂತೆ ತೀವ್ರ ನಿಶ್ಯಕ್ತಿ ಹಾಗೂ ಬಿಪಿ ಲೋ ಆಗಿದೆ. ಪರಿಣಾಮ ಅವರು ಸ್ಟೇರಿಂಗ್ ಮೇಲೆಯೇ ಪ್ರಜ್ಞೆ ತಪ್ಪಿದಂತೆ ಕುಸಿದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ನುಗ್ಗಿ ನಿಂತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಅಪಘಾತದ ಬೆನ್ನಲ್ಲೇ ಬಿಪಿ ಲೋ ಆಗಿ ಗಂಭೀರ ಸ್ಥಿತಿಯಲ್ಲಿದ್ದ…

Read More

ಲಖನೌ: ಅಲಿಗಂಜ್ ಪ್ರದೇಶದ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 15 ಮಂದಿ ಮೃತಪಟ್ಟಿದ್ದಾರೆ. ಈ ಭೀಕರ ದುರಂತವು ಇದೇ ವರ್ಷದ ನವೆಂಬರ್ ತಿಂಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧತೆ ನಡೆಸಿದ್ದ ಯುವ ಜೋಡಿಯೊಂದರ ಸುಂದರ ಕನಸುಗಳನ್ನು ಸುಟ್ಟು ಭಸ್ಮ ಮಾಡಿದೆ. ಮೃತರ ಪೈಕಿ 30 ವರ್ಷದ ಅನಾಮಿಕಾ ಸಾಮಂತ್ ಮತ್ತು 27 ವರ್ಷದ ನೀಲೇಶ್ ಕುಮಾರ್ ಇಬ್ಬರೂ ಸಹ ಸೇರಿದ್ದು, ಇವರು ವಾಣಿಜ್ಯ ಕಟ್ಟಡದ ಎರಡನೇ ಮಹಡಿಯಲ್ಲಿದ್ದ ಕಚೇರಿಯಲ್ಲಿ ಸಿಲುಕಿ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಬ್ಬರೂ 3ಡಿ ಆರ್ಟ್ ನಿರ್ಮಾಣ ಹಾಗೂ ಗೇಮ್ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿರುವ ‘ಹೆಡ್ ಹಾಪರ್ ಸ್ಟುಡಿಯೋಸ್’ ಸಂಸ್ಥೆಯಲ್ಲಿ ಅನಿಮೇಷನ್ ಕಲಾವಿದರಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಮೂರು ವರ್ಷಗಳ ಹಿಂದೆ ಕಚೇರಿಯಲ್ಲಿಯೇ ಅನಾಮಿಕಾ ಮತ್ತು ನೀಲೇಶ್ ಅವರ ಪರಿಚಯವಾಗಿತ್ತು. ಆರಂಭದಲ್ಲಿ ವೃತ್ತಿಪರ ಸ್ನೇಹವಾಗಿದ್ದ ಇವರ ಸಂಬಂಧ ಕ್ರಮೇಣ ಆತ್ಮೀಯತೆಯಾಗಿ ಬೆಳೆದು, ಬಳಿಕ ಪರಸ್ಪರ ಪ್ರೀತಿಸುತ್ತಿದ್ದರು. ಉಭಯ ಕುಟುಂಬಗಳ ಒಪ್ಪಿಗೆಯೊಂದಿಗೆ ಇತ್ತೀಚೆಗಷ್ಟೇ ಅವರ…

Read More

ಮಂಗಳೂರು  : ಒಎಲ್‌ಎಕ್ಸ್ (OLX) ಆನ್‌ಲೈನ್ ಮಾರುಕಟ್ಟೆಯಲ್ಲಿ ಐಷಾರಾಮಿ ‘ಕಾಂಟಿನೆಂಟಲ್ ಜಿಟಿ 650’ ಮೋಟಾರು ಸೈಕಲ್ ಮಾರಾಟಕ್ಕಿದೆ ಎಂದು ನಕಲಿ ಜಾಹೀರಾತು ನೀಡಿ, ತಂದೆ-ಮಗನಿಗೆ ಬರೋಬ್ಬರಿ ₹5,58,710 ಹಣ ವಂಚಿಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ವಂಚಕನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ದೂರುದಾರರು ತಮ್ಮ ಮಗ ಬೈಕ್ ಕೊಡಿಸುವಂತೆ ಕೇಳಿದ ಕಾರಣಕ್ಕಾಗಿ OLX ನಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ರಾಯಲ್ ಎನ್‌ಫೀಲ್ಡ್ ಸಂಸ್ಥೆಯ ಕಾಂಟಿನೆಂಟಲ್ ಜಿಟಿ 650 ಬೈಕ್ ಮಾರಾಟಕ್ಕಿರುವ ಮಾಹಿತಿ ಲಭ್ಯವಾಗಿತ್ತು. ಬೈಕ್ ಮಾರಾಟಗಾರ ತನ್ನನ್ನು ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ‘ಉಸ್ಮಾನ್ ಆಟೋ ಕನ್ಸಲ್ಟೆಂಟ್ಸ್’ ಏಜೆನ್ಸಿಯ ಸೈಯದ್ ತೌಸಿಫ್ ಪಾಷಾ ಎಂದು ಪರಿಚಯಿಸಿಕೊಂಡಿದ್ದನು. ಆರಂಭದಲ್ಲಿ ರಿಜಿಸ್ಟ್ರೇಷನ್ ಮೊತ್ತವಾಗಿ ₹5,000 ಹಾಗೂ ಕಮಿಷನ್ ಆಗಿ ₹10,000 ನೀಡಬೇಕು ಎಂದು ನಂಬಿಸಿದ್ದನು. ಇದನ್ನು ನಂಬಿದ ತಂದೆ-ಮಗ ಬೈಕ್ ಖರೀದಿಗೆ ಒಪ್ಪಿದಾಗ, ಆರೋಪಿಯು ₹57,000 ಮುಂಗಡ ಹಣ ಕೇಳಿದ್ದಾನೆ. ಅದರಂತೆ…

Read More

ತುಮಕೂರು: ಎಲ್‌ಐಸಿ ಪಾಲಿಸಿಯಿಂದ ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು  ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ. ದುಡ್ಡು ಅಂದರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಅಂಥ ದುಡ್ಡಿಗಾಗಿ ಎಂಥ ಹೇಯ ಕೃತ್ಯ ಮಾಡಲು ಜನ ಹಿಂದೂ ಮುಂದೂ ನೋಡಲ್ಲ. ಇಲ್ಲೊಬ್ಬ ಅಣ್ಣ, ತಮ್ಮನ ಹೆಸರಲ್ಲಿ ಇರುವ ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು ಸ್ವಂತ ತಮ್ಮನನ್ನೇ ಕೊಲೆ ಮಾಡಿ ಬೈಕ್ ಅಪಘಾತ ಎಂದು ಕಥೆ ಕಟ್ಟಿದ್ದಾನೆ. ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದೊಂದು ಘಟನೆ ನಡೆದಿದೆ. 35 ವರ್ಷದ ರಮೇಶ್‌ನನ್ನು ಅಣ್ಣ ಹನುಮಂತರಾಜು ಕೊಲೆ ಮಾಡಿ ನಾಟಕವಾಡಿದ್ದಾನೆ. ಮೃತ ರಮೇಶ್ ಮೂಲತಃ ಆಂಧ್ರಪ್ರದೇಶದವನು. ಕಳೆದ 6 ವರ್ಷದಿಂದ ಬೆಂಗಳೂರಿನಲ್ಲಿ ಎಳನೀರು ವ್ಯಾಪಾರ ಮತ್ತು ಮಂಡ್ಯದಲ್ಲಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದ. ಹೆಂಡತಿಯಿಂದ ದೂರವಾಗಿ ಮಾಟಮಂತ್ರ…

Read More

ಹಿರಿಯಡ್ಕ : ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ಅಪರಿಚಿತರು ಸಾಮಾಜಿಕ ಜಾಲತಾಣ ಅಥವಾ ಸಂದೇಶದ ಮೂಲಕ ಸಂಪರ್ಕಿಸಿ, ‘Stake JP’ ಎಂಬ ವೆಬ್‌ಸೈಟ್ ಬಗ್ಗೆ ಮಾಹಿತಿ ನೀಡಿದ್ದರು. ಈ ವೆಬ್‌ಸೈಟ್‌ನಲ್ಲಿ ಹಣವನ್ನು ಡಿಪಾಸಿಟ್ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂದು ನಂಬಿಕೆ ಬರುವಂತೆ ಮಾತನಾಡಿದ್ದರು ವಂಚಕರ ಮಾತನ್ನು ನಂಬಿದ ಮಹಿಳೆ ಅವರು, ಹಂತ ಹಂತವಾಗಿ ಒಟ್ಟು ₹4,02,000 ಹಣವನ್ನು ಡಿಪಾಸಿಟ್ ಮಾಡಿದ್ದಾರೆ. ಆರಂಭದಲ್ಲಿ ವಂಚಕರು ನಂಬಿಕೆ ಹುಟ್ಟಿಸಲು ಅಲ್ಪಸ್ವಲ್ಪ ಹಣವನ್ನು ವಾಪಸ್ ನೀಡಿದ್ದಾರೆ. ಆದರೆ, ಹೆಚ್ಚಿನ ಹಣವನ್ನು ಜಮೆ ಮಾಡಿದ ಬಳಿಕ, ಯಾವುದೇ ಲಾಭ ನೀಡದೆ ಅಥವಾ ಜಮೆ ಮಾಡಿದ ಹಣವನ್ನು ಮರಳಿಸದೆ ಸತಾಯಿಸಿದ್ದಾರೆ. ಒಟ್ಟಾರೆಯಾಗಿ ಶೀಲಾವತಿ ಅವರು ₹3,50,000 ಹಣವನ್ನು ಕಳೆದುಕೊಂಡು ವಂಚನೆಗೆ ಒಳಗಾಗಿದ್ದಾರೆ. ಈ ಕುರಿತು…

Read More

ಬೆಂಗಳೂರು : ಲಿವ್-ಇನ್ ರಿಲೇಷನ್‌ಶಿಪ್‌ಗೆ ಅಡ್ಡಿಯಾಗಿದ್ದರೆಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ, ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಟೆಕ್ಕಿ ಯುವತಿಯನ್ನು ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಪುದುಚೇರಿ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ವೇತಾ (25) ಎಂದು ಗುರುತಿಸಲಾಗಿದೆ. ಈಕೆಯ ಪ್ರಿಯಕರ, ಕೊಲೆಯ ಮತ್ತೊಬ್ಬ ಆರೋಪಿ ಕೆನತ್ ಪತ್ತೆಗಾಗಿ ಪೊಲೀಸರು ತೀವ್ರ ಜಾಲ ಬೀಸಿದ್ದಾರೆ. ಸೀಗೇಹಳ್ಳಿಯ ಡಾಮಿನಿಕ್ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಹೋಮ್ಸ್’ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ರಾತ್ರಿ ಸೋಮಸುಂದರ್ (52), ಅವರ ಪತ್ನಿ ಮುತ್ತುಲಕ್ಷ್ಮಿ (48) ಮತ್ತು ಕಿರಿಯ ಪುತ್ರಿ ಸುಪ್ರಿಯಾ (19) ಎಂಬುವವರ ಹತ್ಯೆ ನಡೆದಿತ್ತು. ಪೊಲೀಸ್ ಮೂಲಗಳ ಪ್ರಕಾರ, ಶ್ವೇತಾ ಹಾಗೂ ಕೆನತ್ ನ್ಯೂ ಹಾರಿಜನ್ ಕಾಲೇಜಿನಲ್ಲಿ ಒಟ್ಟಿಗೆ ಬಿ.ಟೆಕ್ ಮುಗಿಸಿ, ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಇವರಿಬ್ಬರು ಕಳೆದ ಎರಡು ತಿಂಗಳಿನಿಂದ ಸಾಯಿ ಗ್ರೀನ್ ಅಪಾರ್ಟ್‌ಮೆಂಟ್‌ನಲ್ಲಿ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದರು. ಆರಂಭದಲ್ಲಿ ಈ ವಿಷಯವನ್ನು ಶ್ವೇತಾ…

Read More

ಪುಣೆ: ಕೆಲವು ತಿಂಗಳುಗಳ ಹಿಂದೆ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ‘ಮೇಘಾಲಯ ಹನಿಮೂನ್ ಮರ್ಡರ್’ ಮಾದರಿಯಲ್ಲೇ ಮಹಾರಾಷ್ಟ್ರದ ಪುಣೆಯಲ್ಲಿ ಮತ್ತೊಂದು ಘೋರ ಹತ್ಯೆ ನಡೆದಿದೆ. ₹17 ಕೋಟಿ ವೆಚ್ಚದ ಅದ್ಧೂರಿ ವಿವಾಹ ನಿಶ್ಚಿತವಾಗಿದ್ದ ಕೋಟ್ಯಧಿಪತಿ ಉದ್ಯಮಿಯೊಬ್ಬರ ಮಗನನ್ನು ತನ್ನ ಪ್ರಿಯಕರನೊಂದಿಗೆ ಸೇರಿ 400 ಅಡಿ ಆಳದ ಪ್ರಪಾತಕ್ಕೆ ತಳ್ಳಿ ಕೊಲೆ ಮಾಡಲಾಗಿದ್ದು. ಈ ಪ್ರಕರಣ ಬೆಳಕಿಗೆ ಬರಲು ಕಾರಣವಾಗಿದ್ದು, ಕೊಲೆಗಾತಿಯ ಪ್ರಿಯಕರ ಧರಿಸಿದ್ದ ಹೂಡೀ ಶರ್ಟ್. ಜೂನ್ 18 ರಂದು ಲೋಹಾಗಢ ಕೋಟೆಯ ಬಳಿಯ ಕಂದಕದಲ್ಲಿ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲಾಗಿದ್ದರೂ, ಪೊಲೀಸರ ಚಾಣಾಕ್ಷ ತನಿಖೆಯಿಂದಾಗಿ ಇದು ಪೂರ್ವನಿಯೋಜಿತ ಕೊಲೆ ಎಂಬುದು ಸಾಬೀತಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಭಾವಿ ಪತ್ನಿ ಸಿಯಾ ಗೋಯೆಲ್ (20) ಮತ್ತು ಆಕೆಯ ಪ್ರಿಯಕರ ಚೇತನ್ ಬಾಬುಲಾಲ್ ಚೌಧರಿ (22) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಕೇತನ್ ಅಗರ್ವಾಲ್ ಪುಣೆಯ ಪ್ರಸಿದ್ಧ…

Read More